Connect with us

ದಕ್ಷಿಣ ಕನ್ನಡ

ಬೆಳ್ತಂಗಡಿ: ಎರಡು ಪ್ರತ್ಯೇಕ ಅಕ್ಸಿಡೆಂಟ್ : ಒಂದೇ ಕುಟುಂಬದ 20ರ ಹರೆಯದ ಇಬ್ಬರು ಬೈಕ್ ಸವಾರರು ದುರ್ಮರಣ – ಒಬ್ಬನಿಗೆ ಅಪಘಾತವಾದ ಸುದ್ದಿ ತಿಳಿದು ನೋಡಲು ಬರುತ್ತಿದ್ದಾತನು ಅಪಘಾತಕ್ಕೆ ಬಲಿ

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ, ಆ.29:  ಬೆಳ್ತಂಗಡಿ ತಾಲೂಕಿನಲ್ಲಿ ಇಂದು  (ಆ 29 )  ಬೆಳಿಗ್ಗೆ ಪ್ರತ್ಯೇಕ ಎರಡು ಅಪಘಾತ (Belthangady Accident ) ನಡೆದಿದ್ದು,  ಒಂದೇ ಕುಟುಂಬಕ್ಕೆ ಸೇರಿದ ಇಬ್ಬರು ಸೋದರ ಸಂಬಂದಿಗಳು (blood Relative) ಮೃತಪಟ್ಟ ಘಟನೆ ನಡೆದಿದೆ. ಒಂದು ಅಪಘಾತ ಪುಂಜಾಲಕಟ್ಟೆಯ ಮೇಲಿನಪೇಟೆ ಎಂಬಲ್ಲಿ ನಡೆದರೆ, ಇನ್ನೊಂದು ಅಪಘಾತ ಕುಪ್ಪೆಟ್ಟಿಯ ಹುಣ್ಸೆ ಕಟ್ಟೆ ಪಿಲಿಗೂಡು ಎಂಬಲ್ಲಿ ನಡೆದಿದೆ. ಎರಡು ಅಪಘಾತದಲ್ಲಿ ಬೈಕ್‌ ಸವಾರರಾಗಿದ್ದ 20 ಹರೆಯದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಈ ಇಬ್ಬರು ಸಹೋದರ ಸಂಬಂಧಿಗಳ ಪುತ್ರರು ಎನ್ನಲಾಗಿದ್ದು, ಕುಟುಂಬ ಸದಸ್ಯರ ದು:ಖದ ಕಟ್ಟೆಯೊಡೆದಿದೆ.

Ad Widget

Ad Widget

Ad Widget

Ad Widget

ಮೊದಲ ಅಪಘಾತ

ಪುಂಜಾಲಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಯುವಕ, ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮುಹಮ್ಮದ್ ಶಫೀಕ್(20). ಈತ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷದ  ಬಿಬಿಎ ವಿದ್ಯಾರ್ಥಿ.  ಶಫೀಕ್ ಇಂದು ಬೆಳಗ್ಗೆ ತನ್ನ ಬೈಕಿನಲ್ಲಿ ಕಾಲೇಜಿಗೆ ಹೊರಟಿದ್ದರು.

Ad Widget

Ad Widget alt="Ad Widget"/>

Ad Widget

ಅವರು ಪುಂಜಾಲಕಟ್ಟೆ ಮೇಲಿನಪೇಟೆ ಶಾರದಾ ಮಂಟಪದ ಬಳಿ ತಲುಪಿದಾಗ ಅವರ ಬೈಕ್ ಮತ್ತು ಮಂಡತ್ಯಾರ್ ತರಕಾರಿ ಅಂಗಡಿಯ ಕೆಲಸಗಾರರಿಬ್ಬರು ಸಂಚರಿಸುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ರಸ್ತೆಗೆಸೆಯುಲ್ಪಟ್ಟ ಮುಹಮ್ಮದ್ ಶಫೀಕ್  ಗಂಭೀರ ಗಾಯಗೊಂಡು  ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಇನ್ನೊಂದು ಬೈಕಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯೂ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Ad Widget

Ad Widget <> Ad Widget

Miss Diva Universe 2022 : ತುಳುನಾಡಿನ ಬೆಡಗಿ ದಿವಿತಾ ರೈಗೆ ಪ್ರತಿಷ್ಟಿತ  ʼಲಿವಾ ಮಿಸ್ ದಿವಾ ಯುನಿವರ್ಸ್ʼ ಕಿರೀಟ – ಇಲ್ಲಿದೆ ಆಕೆಯ ಸಂಪೂರ್ಣ ವಿವರ

ಎರಡನೇ ಅಪಘಾತ :

ಬೆಳ್ತಂಗಡಿ ತಾಲೂಕಿನ ಹಾಗೂ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕುಪ್ಪೆಟ್ಟಿಯ ಹುಣ್ಸೆ ಕಟ್ಟೆ ಪಿಲಿಗೂಡು ಎಂಬಲ್ಲಿ ಎರಡನೇ ಅಪಘಾತ ನಡೆದಿದೆ. ತುಂಬೆ ಐಟಿಐ ವಿದ್ಯಾರ್ಥಿ ಹಾಗು ಕಕ್ಕೆ ಪದವು ನಿವಾಸಿ ಮೊಹಮ್ಮದ್‌ ಸಫ್ವಾನ್‌ (20 ) ಮೃತಪಟ್ಟವರು. ಸಂಬಂದಿ ಶಫೀಕ್‌ ಗೆ ಅಪಘಾತವಾಗಿ ಮೃತಪಟ್ಟ ವಿಚಾರ ತಿಳಿದ ಸಫ್ವಾನ್‌ ಅವರನ್ನು ನೋಡಲು ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದಾಗ ಕುಪ್ಪೆಟ್ಟಿ ಬಳಿ ಅಪಘಾತ ಸಂಭವಿಸಿದೆ.

Ad Widget

Ad Widget

ಸಫ್ವಾನ್‌ ಚಲಾಯಿಸುತ್ತಿದ್ದ ಬೈಕ್‌ ಕುಪ್ಪೆಟ್ಟಿಯ ಹುಣ್ಸೆ ಕಟ್ಟೆ ಪಿಲಿಗೂಡು ಎಂಬಲ್ಲಿ ತಲುಪುತ್ತಲೇ ಎದುರಿನಿಂದ ಬಂದ ಟಿಪ್ಪರ್‌ ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ಸಫ್ವಾನ್‌ ಸ್ಥಳದಲ್ಲೆ ಮೃತಪಟ್ಟಿದ್ದಾರೆ . ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿ ಟಿಪ್ಪರ್‌ ಗಾಗಿ ಶೋಧ ನಡೆಸುತ್ತಿದ್ದಾರೆ.

ಟಿಪ್ಪರ್‌ ಢಿಕ್ಕಿ ಹೊಡೆದು ಪರಾರಿಯಾಗಿರುವ ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.  ಇನ್ನು ಮೃತಪಟ್ಟ ಯುವಕರು ಅಣ್ಣ ಮತ್ತು ತಂಗಿಯ ಯುವಕರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ . ಏಕಕಾಲದಲ್ಲಿ ಒಂದೇ ಕುಟುಂಬದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟ ಘಟನೆ ತಿಳಿಯುತ್ತಲೇ ಕುಟುಂಬ ಸದಸ್ಯರ ರೋಧನ ಮುಗಿಲು ಮುಟ್ಟಿದೆ ಎಂದು ತಿಳಿದು ಬಂದಿದೆ.

Flood At Sullia | Big Breaking – ಮಳೆ ಕಡಿಮೆ ಇದ್ದರೂ ಏಕಾಏಕಿ ಉಕ್ಕಿ ಹರಿದ ಪಯಶ್ವಿನಿ ನದಿ – ಕೊಚ್ಚಿ ಬಂದ ಬೃಹತ್ ಮರಗಳು : ಕಲ್ಲುಗುಂಡಿ , ಕೊಲ್ಲಮೊಗ್ರುನಲ್ಲಿ ಮಧ್ಯರಾತ್ರಿ ಜನಜೀವನ ಅಸ್ತವ್ಯಸ್ತ

 

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ

Published

on

Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.

Ad Widget

Ad Widget <> Ad Widget

ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.

ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.

Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯ ಅನಿವಾರ್ಯತೆ ಹೆಚ್ಚಾಗುತ್ತಿದೆ. ಇಂಗ್ಲಿಷ್ ಕೌಶಲ ಎಷ್ಟಿದ್ದರೂ ಕಡಿಮೆಯೇ ಎನ್ನುವ ಸ್ಪರ್ಧಾತ್ಮಕ ಜಗತ್ತು ನಮ್ಮ ಮುಂದಿರುವ ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನ್ನಡ ಸಂಘ ಇರುವುದು ಆಶಾದಾಯಕ. ಇದು ಕೇವಲ ಭಾಷಾ ಚಟುವಟಿಕೆಗಳಿಗೆ ಸೀಮಿತವಾಗದೆ ಹೊಸ ಸಾಧ್ಯತೆಗಳ ವೇದಿಕೆಯಾಗಲಿ ಎಂದು ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

Ad Widget

Ad Widget <> Ad Widget

ಕನ್ನಡ ನಮ್ಮ ಬೇರು, ತಂತ್ರಜ್ಞಾನ ನಮ್ಮ ರೆಕ್ಕೆ, ಜಗತ್ತಿನ ಯಾವುದೇ ತಂತ್ರಜ್ಞಾನವನ್ನು ಕಲಿಯಬಹುದು. ಆದರೆ ನಮ್ಮ ಬೇರುಗಳನ್ನು ಮರೆಯಬಾರದು. ಜಾಗತಿಕವಾಗಿ ಬೆಳೆಯಲು ಇಂಗ್ಲಿಷ್ ಬೇಕಾದರೆ ನಮ್ಮ ನೆಲದೊಂದಿಗೆ ಬೆಸೆಯಲು ಕನ್ನಡ ಬೇಕು ಎಂದರು. ಕೈಯಲ್ಲಿ ಮೊಬೈಲಿದೆ, ತಲೆಯಲ್ಲಿ ತಂತ್ರಜ್ಞಾನವಿದೆ, ಮುಂದೆ ವಿಶಾಲ ಜಗತ್ತಿದೆ ಈ ಮೂರರ ನಡುವೆ ಕನ್ನಡವನ್ನು ಕಳೆದುಕೊಳ್ಳಬೇಡಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ನಾವು ಎಲ್ಲಿ ಹೋದರು, ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ನಮ್ಮತನವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು. ದೇಶ-ಭಾಷೆ, ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಎಲ್ಲರೂ ಒಂದಾಗಿ ಅದರ ಸಾರ್ವಭೌಮತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.

Ad Widget

Ad Widget

ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಾಗ್-ವೈಖರಿ, ಸಮ್‌ವಾದ, ಜಸ್ಟ್ಮಾತು, ಮೇಧಮಂಥನ, ಪಿಕ್ಸೆಲ್‌ಪುಟ, ಭಾವಕುಂಚ ಮತ್ತು ಅನ್ವೇಷಣಾ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ಆದಿತ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಗೀತೆಗಳ ಗಾಯನದಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರೊ.ನವೀನ್.ಸಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಆದಿತ್ಯ ವಂದಿಸಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.

Ad Widget

Ad Widget <> Ad Widget

ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.

ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

Ad Widget

Ad Widget

ಎಸ್‌ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್‌ಐಟಿಕೆ (NITK) ಸುರತ್ಕಲ್‌ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್‌ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್‌ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.

ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.

ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!