ಸುಳ್ಯ
kodagu Rains : ಕಡಮಕಲ್ಲು ಎಸ್ಟೇಟ್ ಬಳಿ ರಾಶಿ ಬಿದ್ದ ಪ್ರವಾಹದಲ್ಲಿ ಕೊಚ್ಚಿ ಬಂದ ಮರದ ದಿಮ್ಮಿಗಳು – ಇನ್ನೂ ತೆರವು ಮಾಡದ ಜಿಲ್ಲಾಡಳಿತ | ಅತಂಕದಲ್ಲಿ ಹರಿಹರ, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಸ್ಥರು
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮಕ್ಕೆ ಸೇರಿದ ಕಡಮಕಲ್ಲು ಎಸ್ಟೇಟ್ ನಲ್ಲಿ ನಿನ್ನೆ ತಡ ರಾತ್ರಿ ಸುರಿದ ಮಳೆಗೆ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. 2018 ರಲ್ಲೂ ಇಲ್ಲಿ ದೊಡ್ಡ ಮಟ್ಟದ ಹಾನಿ ಉಂಟಾಗಿತ್ತು. ಈ ಬಾರಿಯ ಅಲ್ಲಿನ ಸ್ಥಿತಿ ಅದಕ್ಕಿಂತಲೂ ಭೀಕರವಾಗಿದೆ ಎನ್ನುತ್ತಾರೆ ಸ್ಥಳೀಯರು . ಖಾಸಗಿ ವ್ಯಕ್ತಿಗೆ ಸೇರಿದ ಎಸ್ಟೇಟ್ ನಲ್ಲಿ ಹಲವಾರು ಕುಟುಂಬಗಳು ವಾಸಿಸುತ್ತಿವೆ. ನಿನ್ನೆ ತಡ ರಾತ್ರಿ ಇದ್ದಕ್ಕಿದಂತೆ ಕೇಳಿಸಿದ ದೊಡ್ಡ ಶಬ್ದಕ್ಕೆ ಈ ಕ್ವಾಟ್ರಸ್ ವಾಸಿಗಳು ಎಚ್ಚರಗೊಂಡಿದ್ದಾರೆ. ಅವರು ಹೊರಗೆ ಬಂದು ನೋಡುವಾಗ ಹಳ್ಳ ಕೊಳ್ಳಗಳು ತುಂಬಿ ಹರಿದಿದ್ದು ಅದರ ಜತೆಗೆ ದೊಡ್ಡ ಗಾತ್ರದ ದಿಮ್ಮಿಗಳು ತೇಲಿ ಬರುತ್ತಿರುವುದು ಕಾಣಿಸಿದೆ. ಇದೀಗ ಈ ಮರದ ದಿಮ್ಮಿಗಳು ಕಡಮಕಲ್ಲು ಎಸ್ಟೇಟ್ ನ ಸೇತುವೆ ಬಳಿ ನಿಂತಿದೆ. ಸರಿ ಸುಮಾರು 40 ಲೋಡ್ ಮರಗಳು ಇಲ್ಲಿ ಬಂದು ಬಂದು ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.
ಈ ರಕ್ಕಸ ಗಾತ್ರದ ಮರದ ದಿಮ್ಮಿಗಳು ಅಲ್ಲಿ ನಿಂತಿರುವುದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಕಡಮಕಲ್ಲು ಎಸ್ಟೇಟ್ ನ ಕೆಲ ಭಾಗದಲ್ಲಿರುವ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಇಂದು ಕೂಡ ನಿನ್ನೆ ಸುರಿದ ಪ್ರಮಾಣದ ಮಳೆ ಸುರಿದರೇ ಆ ಮರದ ದಿಮ್ಮಿಗಳು ಮಳೆ ನೀರಿಗೆ ತೇಲುತ್ತ ಕೆಳ ಮುಖವಾಗಿ ಬರಲು ಆರಂಭಿಸಿದರೇ , ಸುಳ್ಯ ತಾಲೂಕಿನ ಹರಿಹರ, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮದತ್ತ ಬರುತ್ತದೆ. ಎರಡು ವಾರ ಹಿಂದೆ ಈ ಮೂರು ಗ್ರಾಮಗಳಲ್ಲಿ ಸುರಿದ ಮಳೆಗೆ ಈ ಭಾಗದ ರಸ್ತೆ ಸೇತುವೆಗಳು ವ್ಯಾಪಕವಾಗಿ ಹಾನಿಗೀಡಾಗಿದ್ದವು. ಅದನ್ನು ಬಳಿಕ ತಾಲೂಕು ಆಡಳಿತದ ನೆರವಿನಿಂದ ಸ್ಥಳೀಯರು ತಕ್ಕಮಟ್ಟಿಗೆ ದುರಸ್ತಿಗೊಳಿಸಿ ತಾತ್ಕಾಲಿಕವಾಗಿ ಬಳಸಲಾಗುತ್ತಿದೆ.
ಅಪಾರ ಹಾನಿ:
ಈಗ ಮತ್ತೆ ಮೇಲಿನಿಂದ ದಿಮ್ಮಿಗಳು ನೀರಿನ ಜತೆಗೆ ತೇಲಿ ಬಂದರೆ , ಆಗ ಈ ತಾತ್ಕಾಲಿಕ ವ್ಯವಸ್ಥೆ ಮತ್ತೆ ಕುಸಿದು ಬೀಳುವ ಅಪಾಯವಿದೆ. ಹೀಗೊಂದು ವೇಳೆ ಆದರೇ ಆಗ ಈ ಮೂರು ಗ್ರಾಮದ ಜನತೆಗೆ ಭರಿಸಲಾಗದಷ್ಟು ಹಾನಿ ಉಂಟಾಗಬಹುದು , ಪ್ರಾಣ ಹಾನಿಯೂ ಸಂಭವಿಸಬಹುದು. ಮತ್ತೆ ನೀರು ಹರಿಯುವ ವ್ಯವಸ್ಥೆಗೆ ತೊಂದರೆ ಉಂಟಾಗಬಹುದು ಅಥಾವ ಸಂಪೂರ್ಣವಾಗಿ ಸರಿಪಡಿಸಲಾಗದ ಸ್ಥಿತಿಗೂ ತಲುಪಬಹುದು. ಜತೆಗೆ ಸೇತುವೆ ಹಾಗೂ ರಸ್ತೆಗಳಿಗೂ ಅಪಾರ ಹಾನಿ ಉಂಟಾಗಬಹುದು ಎಂಬ ಆತಂಕ ಸ್ಥಳೀಯರದು.
ಹೀಗಾಗಿ ಈ ಮರದ ದಿಮ್ಮಿಗಳನ್ನು ಕೂಡಲೇ ಕೊಡಗು ಜಿಲ್ಲಾಡಳಿತ ತೆರವುಗೊಳಿಸಬೇಕು ಎಂದು ಸ್ಥಳೀಯರು ಅಗ್ರಹಿಸುತ್ತಿದ್ದಾರೆ. ಮಡಿಕೇರಿ ಶಾಶಕ ಅಪ್ಪಚ್ಚು ರಂಜನ್ ಅವರಿಗೂ ಸ್ಥಳೀಯರು ಪೋನ್ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸುಳ್ಯ ತಹಶೀಲ್ದಾರ್ ಅವರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿರುವ ಸ್ಥಳೀಯರು ಅಪಾಯದ ಬಗ್ಗೆ ಮನವರಿಕೆ ಮಾಡಿದ್ದಾರೆ. ಸುಳ್ಯ ತಹಶೀಲ್ದಾರ್ ಕೂಡ ಮಡಿಕೇರಿಯ ಸಹಾಯಕ ಆಯುಕ್ತರನ್ನು ಸಂಪರ್ಕಿಸಿ ಮಾಹಿತಿ ಕೊಟ್ಟಿದ್ದಾರೆ. ಅವರು ಮರ ತೆರವುಗೊಳಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇಷ್ಟಾದರು, ಇಂದು ಸಂಜೆ 7 ಗಂಟೆಯವರೆಗೂ ಮರ ತೆರವು ಕಾರ್ಯ ಆರಂಭಗೊಂಡಿರಲಿಲ್ಲ. ಪರಿಸರದಲ್ಲಿ ಮೋಡ ಮುಸುಕಿದ ವಾತವರಣವಿದೆ. ಯಾವುದೇ ಕ್ಷಣದಲ್ಲೂ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ. ಸ್ಥಳೀಯ ಜನತೆ ಜೀವ ಕೈಯಲ್ಲಿ ಹಿಡಿದು ಜಿಲ್ಲಾಡಳಿತದತ್ತ ನೋಡುತ್ತಿದ್ದಾರೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
Uncategorized18 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized20 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು23 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ22 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ23 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್22 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ22 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
Uncategorized6 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ


















