ಕ್ರೀಡೆ
Ekalavya Award | ಪುತ್ತೂರಿನ ಪ್ರಶಾಂತ್ ರೈ, ವಿಟ್ಲದ ನಿತಿನ್ ಪೂಜಾರಿ, ಬೆಳ್ತಂಗಡಿಯ ಅಶ್ವಲ್ ರೈ ಗೆ ಶ್ರೇಷ್ಠ ‘ಏಕಲವ್ಯ’ ಪ್ರಶಸ್ತಿ – ಕ್ರೀಡಾರತ್ನಕ್ಕೆ ಭಾಜನರಾದ ಚಾರ್ವಾಕದ ದೀಕ್ಷಾ : ಆಕಸ್ಮಿಕವಾಗಿ ಕ್ರೀಡಾಕ್ಷೇತ್ರಕ್ಕೆ ಧುಮುಕಿ ಮಹಾನ್ ಸಾಧನೆ ಮೆರೆದ ಗ್ರಾಮೀಣ ಪ್ರತಿಭೆಗಳು – ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ 2% ಮೀಸಲಾತಿ ಘೋಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 29 : ಹಾಕಿ ಕ್ರೀಡೆಯ ದಂತಕತೆ, ಸರ್ವಕಾಲಿಕ ಶ್ರೇಷ್ಠ ಹಾಕಿ ಆಟಗಾರ ಮೇಜರ್ ದ್ಯಾನ್ ಚಂದ್ ಅವರ ಜನ್ಮ ದಿನಾಚರಣೆಯಂದು ಆಚರಿಸಲಾಗುವ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ಯಂದು ಕೊಡಮಾಡುವ ಏಕಲವ್ಯ(Ekalavyaa Award) , ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳಿಗೆ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬದಿಂದ ಒಬ್ಬೊಬ್ಬರು ಆಯ್ಕೆಯಾಗಿದ್ದಾರೆ.
15 ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ, 14 ಕ್ರೀಡಾಪಟುಗಳಿಗೆ ಕ್ರೀಡಾರತ್ನ ಪ್ರಶಸ್ತಿ, 5 ಜನರಿಗೆ ಜೀವಮಾನ ಸಾಧನೆ ಪ್ರಶಸ್ತಿ, 10 ಸಂಸ್ಥೆಗಳಿಗೆ ಕ್ರೀಡಾ ಪೋಷಕ ಪ್ರಶಸ್ತಿ ನೀಡಲಾಯಿತು.
ಏಕಲವ್ಯ ಪ್ರಶಸ್ತಿಗೆ ಪುತ್ತೂರು ತಾಲೂಕಿನ ಕಬ್ಬಡ್ಡಿ ಪ್ರತಿಭೆ ಪ್ರಶಾಂತ್ ರೈ, ವಿಟ್ಲದ ನೆಟ್ ಬಾಲ್ ಪ್ರತಿಭೆ ನಿತಿನ್ ಪೂಜಾರಿ, ಬೆಳ್ತಂಗಡಿಯ ವಾಲಿ ಬಾಲ್ ಸಾಧಕ ಅಶ್ವಲ್ ರೈ ಆಯ್ಕೆಯಾದರೆ , ಖೋ ಖೋ ಪ್ರತಿಭೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ದೀಕ್ಷಾ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿದ್ದರೆ.
ಪ್ರತಿಯೊಬ್ಬರ ಪರಿಚಯ ಇಲ್ಲಿದೆ :
ಪ್ರಶಾಂತ್ ರೈ ಕೈಕಾರ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೈಕಾರ ಎಂಬ ಪುಟ್ಟ ಊರಿನಲ್ಲಿ ಜನಿಸಿದ ಪ್ರಶಾಂತ್ ರೈ ಅಪ್ಪಟ್ಟ ಗ್ರಾಮೀಣ ಪ್ರತಿಭೆ, ಪುತ್ತೂರಿನ ಫಿಲೋಮಿನಾ ಕಾಲೇಜ್ ವಿದ್ಯಾರ್ಥಿಯಾಗಿದ್ದ ಪ್ರಶಾಂತ್ ಕಾಲೇಜ್ ದಿನಗಳಲ್ಲಿ ಆಕಸ್ಮಿಕವಾಗಿ ಕಬ್ಬಡ್ಡಿಯತ್ತ ಒಲವು ಬೆಳೆಸಿಕೊಂಡ ಇವರು ತನ್ನ ವೃತ್ತಿ ಜೀವನದ ಮಧ್ಯೆಯೂ ತನ್ನ ಆಟ ಮಸುಕಾಗದಂತೆ ನೋಡಿಕೊಂಡವರು.

ತಾನು ವೃತ್ತಿ ನಿರ್ವಹಿಸುವ ವಿಜಯ ಬ್ಯಾಂಕ್ ತಂಡವನ್ನು ಪ್ರತಿನಿಧಿಸಿ ಅದರ ನಾಯಕನೂ ಆಗಿ ತಂಡಕ್ಕೆ ಹತ್ತು ಹಲವು ಪ್ರಶಸ್ತಿ ತಂದುಕೊಟ್ಟವರು. ಸದ್ಯ ಪಾಟ್ನಾ ಪೈರೆಟ್ಸ್ ನಾಯಕನಾಗಿ ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್ ಆಫ್ ಆಗಿದ್ದಾರೆ. ಕರಾವಳಿಯ ಕಬಡ್ಡಿ ಪ್ರತಿಭೆ ಪ್ರಶಾಂತ್ ರೈ ಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಪ್ರಧಾನವಾಗಿದೆ.
ಅಶ್ವಲ್ ರೈ: ವಾಲಿಬಾಲ್ ಲೋಕದಲ್ಲಿ ಅದ್ಭುತ ಸಾಧನೆ ಮಾಡುತ್ತಿರುವ ಬೆಳ್ತಂಗಡಿಯ ಅಶ್ವಲ್ ರೈ ವಾಲಿಬಾಲ್ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡಿದ್ದೇ ಕುತೂಹಲಕಾರಿ ಸಂಗತಿ. ದ್ವಿತೀಯ ವರ್ಷದ ಪದವಿವರೆಗೂ ಅಶ್ವಲ್ ರೈಗೆ ವಾಲಿಬಾಲ್ ನೋಡಿ ಮಾತ್ರವೇ ಗೊತ್ತಿದ್ದ ಆಟವಾಗಿತ್ತು. ಅಲ್ಲಿಯವರೆಗೂ ಒಮ್ಮೆಯೂ ವಾಲಿಬಾಲ್ ಆಡಿರಲಿಲ್ಲವಂತೆ ಅಶ್ವಲ್. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಾಂಗದ ಸಂದರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಕರು ಅಶ್ವಲ್ ಎತ್ತರವನ್ನು ನೋಡಿ ವಾಲಿಬಾಲ್ ಅಭ್ಯಾಸಕ್ಕೆ ಬರುವಂತೆ ಸಲಹೆಯನ್ನು ನೀಡಿದ್ದರಂತೆ. ಅವರ ಮಾತಿನಂತೆ ವಾಲಿಬಾಲ್ ಅಭ್ಯಾಸ ಆರಂಭಿಸಿದ ಅಶ್ವಲ್ ನಂತರ ನಿರಂತರ ಪರಿಶ್ರಮದಿಂದಾಗಿ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಮಟ್ಟಿಗೆ ಬೆಳೆದಿದ್ದಾರೆ.

ಭಾರತೀಯ ವಾಲಿಬಾಲ್ ತಂಡದ ಪ್ರಮುಖ ಆಟಗಾರನಾಗಿ ಅಶ್ವಲ್ ರೈ ಗುರುತಿಸಿಕೊಂಡಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಏಷ್ಯಾದ ಬೆಸ್ಟ್ ಬ್ಲಾಕರ್ ಎನಿಸಿಕೊಂಡಿರುವ ಇವರು 2021ರಲ್ಲಿ ಜಪಾನ್‌ನ ಟೋಕಿಯೋದಲ್ಲಿ ನಡೆದ ಏಷ್ಯನ್ ಗೇಮ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇದೀಗ ಇವರಿಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಒಲಿದು ಬಂದಿದೆ.
ನಿತಿನ್ ಪೂಜಾರಿ: ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾದ ನಿತಿನ್ ಪೂಜಾರಿ ನೆಟ್ ಬಾಲ್ ರಾಷ್ಟ್ರೀಯ ತಂಡದ ಉಪ ನಾಯಕ. ಇವರು ಬಂಟ್ವಾಳ ತಾಲೂಕಿನ ವಿಟ್ಲದ ಬಾಕಿಲಗುತ್ತು ಕುಟುಂಬದ ಕುಡಿ , ನಿತಿನ್ ಸದ್ಯ ದಿಲ್ಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ.
ಇವರು ಉಪನಾಯಕರಾಗಿದ್ದ ತಂಡವು ಮಲೇಶ್ಯದಲ್ಲಿ ನಡೆದ ಏಶ್ಯನ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇವರು ಕೂಡ ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿ.

ದೀಕ್ಷಾ ಕೆ: ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಪಾತ್ರರಾದ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಕ್ಕುನಡ್ಕ ಮನೆಯ ಕೊರಗಪ್ಪ ಗೌಡ ಎಂಬವರ ಪುತ್ರಿ. ಚಾರ್ವಾಕ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪೂರೈಸಿದ ಆಕೆಗೆ ಅದಾಗಲೇ ಕ್ರೀಡಾ ಕ್ಷೇತ್ರದ ಕಡೆ ಒಲವು ಬೆಳೆದಿತ್ತು. ಅವಳ ಕ್ರೀಡಾ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದು ಮೋಹನ್ ಆಳ್ವರ ಆಳ್ವಾಸ್ ಶಿಕ್ಷಣ ಸಂಸ್ದೆ.
ಭಾರತೀಯ ಖೋಖೋ ತಂಡದಲ್ಲಿ ಸ್ಥಾನ ಪಡೆದು ಮಧ್ಯ ಪ್ರದೇಶದ ಇಂದೋರ್ ನ ಮೈದಾನದಲ್ಲಿ ನಡೆದ ಏಷಿಯನ್ ಖೋ ಖೋ ಚಾಂಪಿಯನ್‍ಶಿಪ್‍ನಲ್ಲಿ ಬಾಂಗ್ಲದೇಶದ ವಿರುದ್ಧ ಉತ್ತಮ ಆಟವನ್ನು ಪ್ರದರ್ಶಿಸಿ ಭಾರತ ಖೋಖೋ ತಂಡಕ್ಕೆ ಜಯವನ್ನು ತಂದುಕೊಟ್ಟಿದ್ದಾರೆ.
ಆಳ್ವಾಸ್‍ನಿಂದ ಕರ್ನಾಟಕ ರಾಜ್ಯ ಖೋ ಖೋ ತಂಡಕ್ಕೆ ಆಯ್ಕೆಯಾಗಿ, ರಾಜ್ಯ ಖೋಖೋ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ದ್ವಿತಿಯ ಸ್ಥಾನ ಪಡೆದು, ಕರ್ನಾಟಕದಿಂದ ಭಾರತೀಯ ಖೋ ಖೋ ತಂಡಕ್ಕೆ ದೀಕ್ಷಾ ಆಯ್ಕೆಯಾಗಿದ್ದರು. ನಂತರ ನವದೆಹಲಿಯಲ್ಲಿ ನಡೆದ 20 ದಿನಗಳ ಖೋ-ಖೋ ತರಬೇತಿ ಶಿಬಿರದಲ್ಲಿ ತರಬೇತಿಯನ್ನು ಪಡೆದು ಭಾರತೀಯ ಖೋ ಖೋ ತಂಡದಲ್ಲಿ ಆಡಿದ್ದರು.

ಮೊದಲ ಬಾರಿಗೆ ಆರಂಭಗೊಂಡ ಏಷಿಯನ್ ಚಾಂಪಿಯನ್‍ಶಿಪ್ ಖೊಖೋ ಟೂರ್ನಿಯಲ್ಲಿ ಭಾರತ ಲೀಗ್ ಹಂತದಲ್ಲಿ ನೇಪಾಳ, ಕೋರಿಯಾದೊಂದಿಗೆ ಉತ್ತಮ ಪ್ರದರ್ಶನ ನೀಡಿ, ಸೆಮಿಫೈನಲ್‍ನಲ್ಲಿ ಶ್ರೀಲಂಕಾವನ್ನು ಸೋಲಿಸಿ ಫೈನಲ್‍ನಲ್ಲಿ ಬಾಂಗ್ಲಾದೇಶವನ್ನು 24-19 ಅಂಕಗಳಿಂದ ಮಣಿಸಿ ಮೊದಲ ಆವೃತ್ತಿಯ ಏಷಿಯನ್ ಚಾಂಪಿಯನ್‍ಶಿಪ್ ಟ್ರೋಫಿಯನ್ನು ಗೆದ್ದುಕೊಂಡಿದೆ.
ಪ್ರಶಸ್ತಿ ಪ್ರಧಾನ ಸಮಾರಂಭ:
15 ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ, 14 ಕ್ರೀಡಾಪಟುಗಳಿಗೆ ಕ್ರೀಡಾರತ್ನ ಪ್ರಶಸ್ತಿ, 5 ಜನರಿಗೆ ಜೀವಮಾನ ಸಾಧನೆ ಪ್ರಶಸ್ತಿ, 10 ಸಂಸ್ಥೆಗಳಿಗೆ ಕ್ರೀಡಾ ಪೋಷಕ ಪ್ರಶಸ್ತಿ, ಸಹಸ್ರ ಕ್ರೀಡಾ ಪ್ರತಿಭಾ ಪುರಸ್ಕಾರ ಯೋಜನೆಯಡಿ 750 ಯುವ ಕ್ರೀಡಾಪಟುಗಳಿಗೆ ತಲಾ ಒಂದು ಲಕ್ಷ ನಗದು ಪುರಸ್ಕಾರ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇಕಡ.2 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್’ಗೆ ಚಾಲನೆ ನೀಡಿ 2020 ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ , ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22 ನೆ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಧ್ಯಾನ್‍ಚಂದ್ ಅವರು ಒಲಂಪಿಕ್ಸ್ ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದು, ಭಾರತಕ್ಕೆ ಕೀರ್ತಿ ತಂದವರು. ಹಾಕಿಯ ಜಾದೂಗಾರರಾಗಿದ್ದ ಅವರು ಹಾಕಿಯನ್ನು ಅಗ್ರಮಾನ್ಯ ಸ್ಥಾನಕ್ಕೆ ತಂದವರು. ಧ್ಯಾನ್ ಚಂದ್ ಅವರ ಹೆಸರಿನಲ್ಲಿ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ನೀಡಲಾಗುವ ಏಕಲವ್ಯ ಪ್ರಶಸ್ತಿ , ಕ್ರೀಡಾರತ್ನ ಪ್ರಶಸ್ತಿ, ನಗದು ಪ್ರಶಸ್ತಿ ನೀಡಲಾಗುತ್ತಿದೆ. ಕ್ರೀಡಾಕ್ಷೇತ್ರದಲ್ಲಿನ ತಮ್ಮ ಶ್ರಮ, ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ನಿಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಭಾರತದಲ್ಲಿ ಶೇ. 46 ರಷ್ಟು ಜನಸಂಖ್ಯೆ ಯುವಜನರಿದ್ದಾರೆ. ಮುಂದಿನ 25 ವರ್ಷಗಳು ಭಾರತದ ಭವಿಷ್ಯ ಈ ಯುವಜನತೆಯ ಮೇಲಿದೆ ಎಂದು ಬೊಮ್ಮಾಯಿ ತಿಳಿಸಿದರು.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ಕ್ರೀಡೆ
Asian Games-ಏಷ್ಯನ್ ಗೇಮ್ಸ್ ನಲ್ಲಿ ಮಿಂಚಿದ ಭಾರತದ ಮಹಿಳೆಯರು; 4×400 ರಿಲೇಯಲ್ಲಿ ಚಿನ್ನ, ಹೈಜಂಪ್-ಮಿಶ್ರ ರಿಲೇಯಲ್ಲಿ ಕಂಚು
ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್‌ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ ಮಿಶ್ರ 4×100 ಮೀಟರ್ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
ನಗೋಯಾ: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್‌ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ ಮಿಶ್ರ 4×100 ಮೀಟರ್ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
4×400 ಮೀಟರ್ ರಿಲೇಯಲ್ಲಿ ಬಂಗಾರದ ಓಟ
ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಕಿರಣ್ ಪಹಾಲ್, ಎಂ.ಆರ್. ಪೂವಮ್ಮ, ಪ್ರಾಚಿ ಚೌಧರಿ ಹಾಗೂ ವಿಥ್ಯಾ ರಾಮರಾಜ್ ಅವರನ್ನೊಳಗೊಂಡ ಭಾರತ ತಂಡ 3:29.69 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ತನ್ನದಾಗಿಸಿಕೊಂಡಿತು. ಬಹ್ರೇನ್ 3:30.21 ಸಮಯದೊಂದಿಗೆ ಬೆಳ್ಳಿ ಹಾಗೂ ಚೀನಾ 3:31.02 ಸಮಯದೊಂದಿಗೆ ಕಂಚಿನ ಪದಕ ಗೆದ್ದವು.
ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್ 2026ರಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತ ತನ್ನ ಮೊದಲ ಚಿನ್ನದ ಪದಕ ಗೆದ್ದಂತಾಗಿದೆ. ವಿಥ್ಯಾ ರಾಮರಾಜ್ ಅವರಿಗೆ ಇದು ಕೂಟದ ಮೂರನೇ ಪದಕವಾಗಿದೆ. ಅವರು ಈ ಹಿಂದೆ ಮಿಶ್ರ 4×400 ಮೀಟರ್ ರಿಲೇಯಲ್ಲಿ ಬೆಳ್ಳಿ ಹಾಗೂ ಮಹಿಳೆಯರ 400 ಮೀಟರ್ ಹರ್ಡಲ್ಸ್‌ನಲ್ಲಿ ಕಂಚು ಗೆದ್ದಿದ್ದರು.
ಹೈಜಂಪ್‌ನಲ್ಲಿ ಪೂಜಾಗೆ ಕಂಚು
ಮಹಿಳೆಯರ ಹೈಜಂಪ್ ಫೈನಲ್‌ನಲ್ಲಿ ಭಾರತದ ಪೂಜಾ ಸಿಂಗ್ 1.84 ಮೀಟರ್ ಎತ್ತರ ಜಿಗಿದು ಕಂಚಿನ ಪದಕ ಗೆದ್ದರು. 1.84 ಮೀಟರ್‌ವರೆಗಿನ ಎತ್ತರವನ್ನು ಅವರು ಯಶಸ್ವಿಯಾಗಿ ದಾಟಿದರೂ, 1.87 ಮೀಟರ್ ಎತ್ತರವನ್ನು ಮೂರು ಪ್ರಯತ್ನಗಳಲ್ಲೂ ದಾಟಲು ಸಾಧ್ಯವಾಗಲಿಲ್ಲ.
ಮಿಶ್ರ 4×100 ಮೀಟರ್ ರಿಲೇಯಲ್ಲಿ ಕಂಚು
ಗುರುಂದರ್‌ವೀರ್ ಸಿಂಗ್, ಸ್ನೇಹಾ ಸತ್ಯನಾರಾಯಣ, ಅನಿಮೇಶ್ ಕುಜುರ್ ಹಾಗೂ ಹರಿತಾ ಭದ್ರಾ ಅವರನ್ನೊಳಗೊಂಡ ಭಾರತ ತಂಡ ಮಿಶ್ರ 4×100 ಮೀಟರ್ ರಿಲೇಯಲ್ಲಿ 41.06 ಸೆಕೆಂಡ್‌ಗಳ ಋತುವಿನ ಅತ್ಯುತ್ತಮ ಸಮಯದೊಂದಿಗೆ ಕಂಚಿನ ಪದಕ ಗೆದ್ದಿತು.
ಚೀನಾ 40.78 ಸೆಕೆಂಡ್‌ಗಳಲ್ಲಿ ಚಿನ್ನ ಹಾಗೂ ಥೈಲ್ಯಾಂಡ್ 40.87 ಸೆಕೆಂಡ್‌ಗಳಲ್ಲಿ ಬೆಳ್ಳಿ ಪದಕ ಗೆದ್ದವು. ಭಾರತ 41.06 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆಯಿತು
ಕ್ರೀಡೆ
Fariba-ತಾಲಿಬಾನ್ ಆಡಳಿತದಲ್ಲಿ ಮಹಿಳೆಯರಿಗೆ ನಿರ್ಬಂಧ: ಪುರುಷರ ರೀತಿ ವೇಷ ಧರಿಸಿ ತರಬೇತಿ ಪಡೆದು ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಅಫ್ಘಾನಿಸ್ತಾನದ ಮೊದಲ ಮಹಿಳಾ ಕ್ರೀಡಾಪಟು ಫರೀಬಾ..!
ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಐಚಿ-ನಗೋಯಾ: ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಜಪಾನ್‌ನ ಐಚಿ ಪ್ರಾಂತ್ಯದ ಶಿನ್‌ಶಿರೋ ಸೈಕ್ಲಿಂಗ್ ರೋಡ್ ಕೋರ್ಸ್‌ನಲ್ಲಿ ಸೆ.22ರಂದು ನಡೆದ ಮಹಿಳೆಯರ 90.4 ಕಿ.ಮೀ. ವೈಯಕ್ತಿಕ ರೋಡ್ ರೇಸ್‌ನಲ್ಲಿ 23 ವರ್ಷದ ಫರೀಬಾ ಬೆಳ್ಳಿ ಪದಕ ಗೆದ್ದರು. ಇದರೊಂದಿಗೆ 2002ರ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಅಫ್ಘಾನಿಸ್ತಾನದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ರೋಚಕವಾಗಿ ನಡೆದ ಫೈನಲ್‌ನಲ್ಲಿ ಫರೀಬಾ ಹಾಗೂ ಚಿನ್ನದ ಪದಕ ಗೆದ್ದ ಚೀನಾದ ಗುವೋ ಲಿ ಇಬ್ಬರೂ 2 ಗಂಟೆ 50 ನಿಮಿಷ 05 ಸೆಕೆಂಡ್‌ಗಳಲ್ಲಿ ಗುರಿ ತಲುಪಿದರು. ಮೊದಲ ಎರಡು ಲ್ಯಾಪ್‌ಗಳಲ್ಲಿ ಫರೀಬಾ ಮುನ್ನಡೆ ಸಾಧಿಸಿದ್ದರು. ಆದರೆ ಅಂತಿಮ 300–400 ಮೀಟರ್‌ಗಳಲ್ಲಿ ಗುವೋ ಲಿ ಅತ್ಯಲ್ಪ ಅಂತರದಲ್ಲಿ ಮುನ್ನಡೆ ಪಡೆದು ಸ್ವರ್ಣ ಪದಕ ಗೆದ್ದರು. ಹಾಂಗ್‌ಕಾಂಗ್‌ನ ಲಿಯಾಂಗ್ ವಿಂಗ್ ಯೀ ಕಂಚಿನ ಪದಕ ಪಡೆದರು.
ಇದಕ್ಕೂ ಎರಡು ದಿನಗಳ ಮೊದಲು ನಡೆದ 24.2 ಕಿ.ಮೀ. ವೈಯಕ್ತಿಕ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಫರೀಬಾ ಏಳನೇ ಸ್ಥಾನ ಪಡೆದಿದ್ದರು.
ವೇಷ ಬದಲಿಸಿ ಸೈಕ್ಲಿಂಗ್ ತರಬೇತಿ
ಉತ್ತರ ಅಫ್ಘಾನಿಸ್ತಾನದ ಫರ್ಯಾಬ್ ಪ್ರಾಂತ್ಯದ ಫರೀಬಾ ತಮ್ಮ 15ನೇ ವಯಸ್ಸಿನಲ್ಲಿ ಅಕ್ಕ ಯುಲ್ದುಜ್ ಹಾಶಿಮಿ ಅವರ ಪ್ರೇರಣೆಯಿಂದ ಸೈಕ್ಲಿಂಗ್ ಆರಂಭಿಸಿದ್ದರು. ಮಹಿಳೆಯರು ಸಾರ್ವಜನಿಕವಾಗಿ ಸೈಕಲ್ ಚಲಾಯಿಸುವುದಕ್ಕೆ ವಿರೋಧವಿದ್ದ ಸಾಂಪ್ರದಾಯಿಕ ವಾತಾವರಣದಲ್ಲಿ ಗುರುತು ಪತ್ತೆಯಾಗದಂತೆ ಪುರುಷರ ವೇಷ ಧರಿಸಿ ಅವರು ತರಬೇತಿ ಪಡೆಯುತ್ತಿದ್ದರು.
ಮುಖಕ್ಕೆ ಎರಡು-ಮೂರು ಮಾಸ್ಕ್‌ಗಳು, ಹೆಡ್‌ಸ್ಕಾರ್ಫ್ ಹಾಗೂ ಸನ್‌ಗ್ಲಾಸ್ ಧರಿಸಿ ಸೈಕ್ಲಿಂಗ್ ಮಾಡುತ್ತಿದ್ದ ಫರೀಬಾ ಮತ್ತು ಅವರ ಸಹೋದರಿಗೆ ತರಬೇತಿ ವೇಳೆ ಜನರು ಕಲ್ಲು, ಬಾಟಲಿ ಎಸೆದು ನಿಂದಿಸುತ್ತಿದ್ದರು. ಇದೇ ವೇಳೆ ನಡೆದ ರಿಕ್ಷಾ ಅಪಘಾತದಲ್ಲಿ ಯುಲ್ದುಜ್ ಅವರ ಮಣಿಕಟ್ಟು ಮುರಿದ ಘಟನೆಯೂ ನಡೆದಿದೆ.
ತಾಲಿಬಾನ್ ಆಡಳಿತದ ಬಳಿಕ ದೇಶತ್ಯಾಗ
2020ರಲ್ಲಿ ಫರೀಬಾ ಮತ್ತು ಯುಲ್ದುಜ್ ಅಫ್ಘಾನಿಸ್ತಾನದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ 2021ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಕ್ರೀಡೆಗಳ ಮೇಲಿನ ನಿರ್ಬಂಧದಿಂದಾಗಿ ಅವರ ಕ್ರೀಡಾ ಬದುಕಿಗೂ ಸಂಕಷ್ಟ ಎದುರಾಯಿತು.
ಮಾಜಿ ವಿಶ್ವ ಚಾಂಪಿಯನ್ ಅಲೆಸ್ಸಾಂಡ್ರಾ ಕ್ಯಾಪೆಲ್ಲೊಟ್ಟೊ ಅವರ ನೆರವಿನಿಂದ ಸಹೋದರಿಯರು ಇಟಲಿಗೆ ವಲಸೆ ಹೋದರು. ಅಲ್ಲಿ ತರಬೇತಿ ಮುಂದುವರಿಸಿದ ಫರೀಬಾ 2022ರಲ್ಲಿ ಅಫ್ಘಾನ್ ರಾಷ್ಟ್ರೀಯ ಚಾಂಪಿಯನ್ ಆದರು. ಅಲ್ಲದೆ, UCI ರೇಸ್ ಗೆದ್ದ ಮೊದಲ ಅಫ್ಘಾನ್ ಮಹಿಳಾ ಸೈಕ್ಲಿಸ್ಟ್ ಎಂಬ ಸಾಧನೆ ಮಾಡಿದರು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲೂ ಅಫ್ಘಾನಿಸ್ತಾನವನ್ನು ಪ್ರತಿನಿಧಿಸಿದ್ದರು.
‘ಅಫ್ಘಾನ್ ಮಹಿಳೆಯರ ಶಕ್ತಿಯ ಸಂಕೇತ’
ಬೆಳ್ಳಿ ಪದಕ ಗೆದ್ದ ಬಳಿಕ ಮಾತನಾಡಿದ ಫರೀಬಾ, ಈ ಪದಕ ಅಫ್ಘಾನ್ ಮಹಿಳೆಯರ ಪ್ರತಿರೋಧ ಮತ್ತು ಶಕ್ತಿಯ ಸಂಕೇತವಾಗಿದೆ ಎಂದು ಹೇಳಿದರು.
“ನಾವು ಇಂದಿಗೂ ಬದುಕುಳಿದಿದ್ದೇವೆ ಮತ್ತು ಹೋರಾಡುತ್ತಿದ್ದೇವೆ ಎಂಬುದಕ್ಕೆ ಇದು ಸಾಕ್ಷಿ. ನನ್ನ ಮೇಲೆ ಬಿದ್ದ ಪ್ರತಿಯೊಂದು ಕಲ್ಲು ಸ್ವಾತಂತ್ರ್ಯಕ್ಕಾಗಿ ಹೋರಾಡುವ ಶಕ್ತಿಯನ್ನು ನೀಡಿತು. ಮುಂದಿನ ಪೀಳಿಗೆಯ ಅಫ್ಘಾನ್ ಹೆಣ್ಣುಮಕ್ಕಳು ಯಾವುದೇ ಭಯವಿಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವಂತಾಗಲಿ” ಎಂದು ಅವರು ಆಶಯ ವ್ಯಕ್ತಪಡಿಸಿದರು.
ತಾಲಿಬಾನ್ ಆಡಳಿತದ ಬಳಿಕ ಅಫ್ಘಾನ್ ಮಹಿಳಾ ಕ್ರೀಡಾಪಟುಗಳ ಪರಿಸ್ಥಿತಿ ಜಾಗತಿಕ ಗಮನ ಸೆಳೆದಿದೆ. ನಿರಾಶ್ರಿತರಾಗಿರುವ ಅಫ್ಘಾನಿಸ್ತಾನದ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ತರಬೇತಿ ಪಡೆಯುತ್ತಿರುವ ವರದಿಗಳೂ ಈ ಹಿಂದೆ ಪ್ರಕಟವಾಗಿದ್ದವು.
-
ಬಿಗ್ ನ್ಯೂಸ್23 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್23 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ23 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ22 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ22 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಪರಾಧ4 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಮಂಗಳೂರು21 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
-
ಅಂತರ ರಾಜ್ಯ23 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ


















