ಲೇಖನಗಳು
Ganesh chaturthi 2022 : ಗಣೇಶ ಚತುರ್ಥಿ ಹಬ್ಬ : ಆಚರಣೆ, ಮಹತ್ವ , ಐತಿಹ್ಯ, ಶ್ಲೋಕ , ಪೂಜಿಸುವ ವಿಧಾನದ ವಿವರ ಇಲ್ಲಿದೆ
ಹಿಂದೂ ಆಸ್ತಿಕರು ಸಡಗರದಿಂದ ಕಾಯುತ್ತಿದ್ದ ಗೌರಿ ಗಣೇಶ ಹಬ್ಬ (Ganesha Festival) ಬಂದೇ ಬಿಟ್ಟಿದೆ. ಕಳೆದೆರಡು ವರ್ಷ ಕೋವಿಡ್ ಮಹಾಮಾರಿಯಿಂದಾಗಿ ಕಳೆಗೊಂದಿದ್ದ ಗಣೇಶನ ಹಬ್ಬ ಈ ಬಾರಿ ಮತ್ತೆ ವಿಜ್ರಂಭಣೆಯಿಂದ ನಡೆಸಲು ಎಲ್ಲ ಕಡೆ ಸಿದ್ದತೆ ನಡೆಸಲಾಗುತ್ತಿದೆ. ಹಿಂದೂಗಳಲ್ಲಿ ಗಣೇಶನ ಹಬ್ಬಕ್ಕೆ ವಿಶೇಷ ಮಹತ್ವವಿದೆ. ತಾನೂ ಮಾಡುವ ಪ್ರತಿ ಶುಭ ಕಾರ್ಯದಲ್ಲೂ ಮೊದಲ ಪೂಜೆ ಗಣಪತಿಗೆ ಸಲ್ಲುತ್ತದೆ. ಶಿ,ವ ಪಾರ್ವತಿಯರ ಪುತ್ರನಾದ ಗಣೇಶ ಅದೃಷ್ಟ, ಸಮೃದ್ಧಿ , ಜ್ಞಾನ, ವಿಧ್ಯೆ ಬುದ್ಧಿವಂತಿಕೆಯ ಪ್ರತೀಕ ಎಂದು ಭಕ್ತರು ನಂಬುತ್ತಾರೆ. ಹೀಗಾಗಿ ತಾವು ಮಾಡುವ ಯಾವುದೇ ಕಾರ್ಯಕ್ಕೆ ವಿಘ್ನ ಬಾರದಿರಲಿಯೆಂದು ಮೊದಲಿಗೆ ಗಣೇಶನನ್ನು ಸ್ತುತಿಸುತ್ತಾರೆ. ಹೀಗಾಗಿ ಅವನನ್ನು ವಿಘ್ನಹರ್ತ ಎಂದೂ ಕರೆಯಲಾಗುತ್ತದೆ.
ಗಣೇಶ ಚತುರ್ಥಿಯ ವಿಶೇಷತೆ
ಗಣೇಶ ಪುರಾಣ ಮತ್ತು ಸ್ಕಂದ ಪುರಾಣದ ಪ್ರಕಾರ, ಗಣೇಶನು ಭಾದ್ರಪದ ಮಾಸದ ಶುಕ್ಲ ಪಕ್ಷದ ನಾಲ್ಕನೇ ದಿನ ಜನಿಸಿದನು. ಹೀಗಾಗಿ ಈ ದಿನವನ್ನು ಗಣೇಶ ಚತುರ್ಥಿ ಎಂದು ಆಚರಿಸಲಾಗುತ್ತದೆ. ಅಂದು ಗಣಪತಿಯನ್ನು ತಾಯಿ ಪಾರ್ವತಿಯೊಂದಿಗೆ ಕೈಲಾಸ ಪರ್ವತದಿಂದ ಭೂಮಿಗೆ ಸ್ವಾಗತಿಸಲಾಗುತ್ತದೆ. ಈ ದಿನದಂದು ಭಕ್ತರು ಬೇಗನೆ ಎದ್ದು ಹೊಸ ಬಟ್ಟೆಗಳನ್ನು ಧರಿಸುತ್ತಾರೆ. ಅವರೂ ಉಪವಾಸವಿದ್ದು ಗಣೇಶನ ಮೂರ್ತಿಗಳಿಗೆ ಪೂಜೆ ಸಲ್ಲಿಸುತ್ತಾರೆ. ಮನೆ ಮನೆಗಳಲ್ಲಿ ಗಣಪತಿಯನ್ನು ಪ್ರತಿಷ್ಟಾಪಿಸಿ ಆತನಿಗೆ ಪೂಜೆ ಸಲ್ಲಿಸಲಾಗುತ್ತದೆ. ಅದಕ್ಕೂ ಮೊದಲು ಮನೆಗಳಿಗೆ ಗಣೇಶನನ್ನು ಸ್ವಾಗತಿಸಲು ತಮ್ಮ ಮನೆಗಳನ್ನು ವಿಧವಿಧವಾಗಿ ಅಲಂಕರಿಸುತ್ತಾರೆ.
ಗಣೇಶ ಚತುರ್ಥಿಯ ಮಹತ್ವ :
ಗಣೇಶ ಚತುರ್ಥಿಯ ಮುಖ್ಯ ಸಾರವೆಂದರೆ ಅವನನ್ನು ಈ ದಿನ ಪ್ರಾರ್ಥಿಸುವ ಭಕ್ತರು ಪಾಪಗಳಿಂದ ಮುಕ್ತರಾಗುತ್ತಾರೆ. ಆತನ ಆರಾಧನೆಯು ಅವರನ್ನು ಜ್ಞಾನ ಮತ್ತು ಬುದ್ಧಿವಂತಿಕೆಯ ಹಾದಿಯಲ್ಲಿ ಕೊಂಡೊಯ್ಯುತ್ತದೆ. ಮತ್ತು ಗಣಪನ ಪೂಜೆಯಿಂದ ಅವರ ಇಷ್ಟಾರ್ಥಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ನಂಬಲಾಗಿದೆ. ಐತಿಹಾಸಿಕವಾಗಿ, ರಾಜ ಶಿವಾಜಿ ಕಾಲದಿಂದಲೂ ಹಬ್ಬವನ್ನು ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಲೋಕಮಾನ್ಯ ತಿಲಕರು ಗಣೇಶ ಚತುರ್ಥಿಯನ್ನು ಖಾಸಗಿ ಆಚರಣೆಯಿಂದ ಸಮಾಜದ ಎಲ್ಲಾ ಜಾತಿಗಳ ಜನರು ಒಟ್ಟಾಗಿ, ಪ್ರಾರ್ಥನೆ ಮತ್ತು ಒಗ್ಗೂಡಿಸಬಹುದಾದ ಭವ್ಯವಾದ ಸಾರ್ವಜನಿಕ ಉತ್ಸವಕ್ಕೆ ಬದಲಾಯಿಸಿದರು.

ಗಣಪತಿಯ ಪೂಜಿಸುವ ವಿಧಾನ:
ವಿಘ್ನ ನಿವಾರಕನಾದ ಗಜಮುಖನನ್ನು ಪೂಜಿಸುವ ಅತ್ಯಂತ ಪ್ರಶಸ್ತ ದಿನವಾಗಿರುವ ಗಣೇಶ ಚತುರ್ಥಿಯಂದು ಗಣಪನ ಸುಂದರ ಮೂರ್ತಿಗಳನ್ನು ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ವಿಗ್ರಹಕ್ಕೆ ದೇವತೆಯ ಶಕ್ತಿಯನ್ನು ಆಹ್ವಾನಿಸಲು ಅದಕ್ಕೆ ಮೊದಲಿಗೆ ಪ್ರಾಣ ಪ್ರತಿಷ್ಠೆಯನ್ನು ಮಾಡಲಾಗುತ್ತದೆ. ಬಳಿಕ 16 ರೀತಿಯ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಗುತ್ತದೆಅದನ್ನು “ಷೋಡಶೋಪಚಾರ ಪೂಜೆ” ಎಂದು ಕರೆಯಲಾಗುತ್ತದೆ.
ಪೂಜೆಯ ವೇಳೆ ಗಣೇಶನ ವಿಗ್ರಹಕ್ಕೆ ಮೋದಕ ಸಿಹಿ ತಿನಿಸುಗಳು, ತೆಂಗಿನಕಾಯಿ ಹೂವು ಹಾಗೂ ವಿವಿಧ ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ. ಗಣಪತಿಯು ಜನಿಸದನೆಂದು ನಂಬಲಾದ ಗಣೇಶ ಚತುರ್ಥಿಯಂದು ಮಧ್ಯಾಹ್ನದ (ಮಧ್ಯಾಹ್ನ) ಶುಭ ಸಮಯದಲ್ಲಿ ಸಾಮಾನ್ಯವಾಗಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಇದು ಸುಮಾರು 11 ರಿಂದ ಮಧ್ಯಾಹ್ನ 1.30 ರವರೆಗೆ ಇರುತ್ತದೆ. ಹಾಗಾಗಿಯೂ ಭಾರತದ ವಿವಿಧ ಸ್ಥಳಗಳಲ್ಲಿ ಅಲ್ಲಿನ ಪಂಚಾಗಕ್ಕೆ ಅವಲಂಬಿಸಿ ಮುಹೂರ್ತ ನಿಗದಿ ಪಡಿಸಲಾಗುತ್ತದೆ.

ಶ್ಲೋಕ
ಶ್ರೀ ಗಣೇಶ ಚತುರ್ಥಿಯ ತಿಥಿಯಂದು ಪೃಥ್ವಿಯ ಮೇಲೆ ಶ್ರೀ ಗಣೇಶ ತತ್ವವು 1000ಪಟ್ಟು ಹೆಚ್ಚು ಕಾರ್ಯರತವಾಗುತ್ತದೆ. ಈ ದಿನದಂದು ಆದಷ್ಟು ಹೆಚ್ಚು ‘ಶ್ರೀ ಗಣೇಶಾಯ ನಮಃ |’ ಅಥವಾ ‘ಓಂ ಗಂ ಗಣಪತಯೇ ನಮಃ |’ ಜಪಿಸಿ
ಗಣೇಶನ ಹುಟ್ಟಿನ ಕಥೆ
ಗಣೇಶ ಪಾರ್ವತಿಯ ಮೈಯಿಂದ ಹುಟ್ಟಿದವನು ಎಂದು ಹಿಂದೂ ಪುರಾಣಗಳಲ್ಲಿ ಹೇಳಲಾಗಿದೆ. ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬುತ್ತಾಳೆ. ಬಳಿಕ ಆತನನ್ನು ಮನೆ ಕಾಯಲು ದ್ವಾರಪಾಲಕನಾಗಿ ನೇಮಿಸಿ ಗೌರಿ ಸ್ನಾನಕ್ಕೆ ಹೋಗುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಆತನ ಪರಿಚಯವಿಲ್ಲದ ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ.
ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ.

ಅವರು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯಾನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು. ಆಗ ಗಣೇಶನಿಗೆ ಮರಳಿ ಜೀವ ಬರುತ್ತಾದೆ. ಬಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಮಧ್ಯಾಹ್ನ ಗಣೇಶನಿಗೆ ಆನೆಯ ಮುಖವನ್ನು ಜೋಡಿಸಲಾಗುತ್ತದೆ. ಹೀಗಾಗಿ ಆ ದಿನವನ್ನು ಗಣೇಶ ಚತುರ್ಥಿ ಎಂದು ಆಚರಿಸಲಾಗುತ್ತದೆ
ಆನೆಯ ಶಿರ ಧರಿಸಿದ ಕಾರಣಕ್ಕೆ ಆತ ಗಜಮುಖನೆನಿಸಿ ಕೊಳ್ಳುತ್ತಾನೆ. ಅಲ್ಲದೇ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದ್ದ ಆನೆಯ ಶಿರವನ್ನು ಗಣಗಳು ಛೇಧಿಸಿದ ಕಾರಣಕ್ಕೆ ಉತ್ತರಕ್ಕೆ ತಲೆ ಹಾಕಿ ಮಲಗಬಾರದು ಎಂಬ ನಂಬಿಕೆ ಹಿಂದೂಗಳು ಇಗಲೂ ಪಾಲಿಸುತ್ತಾರೆ.
ಮುಹೂರ್ತ
ದೃಕ್ ಪಂಚಾಂಗದ ಪ್ರಕಾರ, ಗಣೇಶನ ಮಧ್ಯಾಹ್ನ ಪೂಜೆ ಮುಹೂರ್ತವು ಆಗಸ್ಟ್ 31 ರಂದು ಬೆಳಿಗ್ಗೆ 11:05 ರಿಂದ ಮಧ್ಯಾಹ್ನ 01:38 ರ ನಡುವೆ 2 ಗಂಟೆ 33 ನಿಮಿಷಗಳ ಕಾಲ ಇರಲಿದೆ. ಚತುರ್ಥಿ ತಿಥಿಯು ಆಗಸ್ಟ್ 30 ರಂದು ಮಧ್ಯಾಹ್ನ 03:33 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಆಗಷ್ಟ್ 31 ರಂದು ಮಧ್ಯಾಹ್ನ 03:22 ಕ್ಕೆ ಕೊನೆಗೊಳ್ಳುತ್ತದೆ.
ಲೇಖನಗಳು
Mercury-ಬುಧನ ನಕ್ಷತ್ರ ಬದಲಾವಣೆ: ಈ 5 ರಾಶಿಯವರಿಗೆ ಇಂದಿನಿಂದ ‘ರಾಜಯೋಗ’, ಅದೃಷ್ಟದ ಬಾಗಿಲು ಓಪನ್..!
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.
ಈ ನಕ್ಷತ್ರ ಬದಲಾವಣೆಯು ಮುಂದಿನ 13 ದಿನಗಳ ಕಾಲ ಎಲ್ಲಾ ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, 5 ರಾಶಿಯವರಿಗೆ ಮಾತ್ರ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಉದ್ಯೋಗ, ವ್ಯವಹಾರ ಮತ್ತು ಆರ್ಥಿಕವಾಗಿ ಲಾಭ ಪಡೆಯಲಿರುವ ಆ ಅದೃಷ್ಟದ ರಾಶಿಗಳು ಇಲ್ಲಿವೆ:
ವೃಷಭ ರಾಶಿ
ವೃಷಭ ರಾಶಿಯವರಿಗೆ ಬುಧನ ನಕ್ಷತ್ರ ಬದಲಾವಣೆ ಹೊಸ ಅವಕಾಶಗಳ ಬಾಗಿಲು ತೆರೆಯಬಹುದು. ವೃತ್ತಿಜೀವನದಲ್ಲಿ ಬಹುದಿನಗಳಿಂದ ಎದುರು ನೋಡುತ್ತಿದ್ದ ಅವಕಾಶಗಳು ಸಿಗುವ ಸಾಧ್ಯತೆಯಿದೆ. ಕೆಲಸದಲ್ಲಿ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲ ದೊರೆಯುವುದರಿಂದ ನಿಮ್ಮ ಯೋಜನೆಗಳನ್ನು ಯಶಸ್ವಿಯಾಗಿ ಮುಂದಕ್ಕೆ ಕೊಂಡೊಯ್ಯಬಹುದು. ಇದರಿಂದ ವೃತ್ತಿಯಲ್ಲಿ ಆತ್ಮವಿಶ್ವಾಸವೂ ಹೆಚ್ಚಾಗಬಹುದು. ಉದ್ಯೋಗದ ಜೊತೆಗೆ ಕುಟುಂಬದ ವಿಚಾರದಲ್ಲೂ ಈ ಅವಧಿ ಖುಷಿ ನೀಡಬಹುದು. ಕುಟುಂಬದವರೊಂದಿಗೆ ಪ್ರವಾಸ ಅಥವಾ ಮಕ್ಕಳೊಂದಿಗೆ ವಿಶೇಷ ಸಮಯ ಕಳೆಯುವ ಅವಕಾಶ ಸಿಗಬಹುದು. ಒಟ್ಟಿನಲ್ಲಿ, ಕೆಲಸದಲ್ಲಿ ಪ್ರಗತಿ ಮತ್ತು ಕುಟುಂಬದಲ್ಲಿ ಸಂತೋಷ ಎರಡೂ ಒಟ್ಟಿಗೆ ಸಿಗುವ ಆಹ್ಲಾದಕರ ದಿನಗಳು ನಿಮ್ಮದಾಗಬಹುದು.
ಮಿಥುನ ರಾಶಿ
ಬುಧನ ಬದಲಾವಣೆ ಮಿಥುನ ರಾಶಿಯವರಿಗೆ ಹಣದ ವಿಚಾರದಲ್ಲಿ ಹೊಸ ದಾರಿ ತೋರಿಸಬಹುದು. ವ್ಯಾಪಾರದಲ್ಲಿ ತೊಡಗಿರುವವರಿಗೆ ಹೊಸ ಯೋಜನೆಗಳು ಮತ್ತು ಪ್ರಮುಖ ಒಪ್ಪಂದಗಳನ್ನು ಅಂತಿಮಗೊಳಿಸುವ ಅವಕಾಶ ಸಿಗಬಹುದು. ಈಗ ಮಾಡಿಕೊಳ್ಳುವ ಕೆಲವು ವ್ಯವಹಾರ ಸಂಪರ್ಕಗಳು ಮುಂದಿನ ದಿನಗಳಲ್ಲಿ ದೊಡ್ಡ ಲಾಭ ತಂದುಕೊಡುವ ಸಾಧ್ಯತೆಯಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವ ಸಮಯ ಇದಾಗಿದ್ದು, ಆದಾಯ ಗಳಿಸಲು ಹೊಸ ಮಾರ್ಗಗಳು ತೆರೆದುಕೊಳ್ಳಬಹುದು. ಹಣಕಾಸಿನ ಪರಿಸ್ಥಿತಿಯಲ್ಲೂ ಸುಧಾರಣೆ ಕಂಡುಬರಬಹುದು. ವ್ಯವಹಾರ ವಿಸ್ತರಣೆ ಜೊತೆಗೆ ಆದಾಯ ಹೆಚ್ಚಿಸಿಕೊಳ್ಳುವ ಅವಕಾಶವೂ ಒಟ್ಟಿಗೆ ಒಲಿದುಬರಬಹುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಇಂದಿನಿಂದಲೇ ಶುಭ ಸುದ್ದಿಗಳ ನಿರೀಕ್ಷೆ. ಸೂರ್ಯನ ಅಧಿಪತ್ಯದ ಸಿಂಹ ರಾಶಿಯವರಿಗೆ ಬುಧನ ನಕ್ಷತ್ರ ಬದಲಾವಣೆ ವಿಶೇಷವಾಗಿರಬಹುದು. ವಿಶೇಷವಾಗಿ ಸೆಪ್ಟೆಂಬರ್ 13ರವರೆಗಿನ ಅವಧಿ ಹಲವು ವಿಚಾರಗಳಲ್ಲಿ ಅನುಕೂಲಕರವಾಗಿರಬಹುದು. ನೀವು ಅಂದುಕೊಂಡ ಕೆಲಸಗಳು ನಿರೀಕ್ಷೆಯಂತೆ ನಡೆಯುವ ಸಾಧ್ಯತೆಯಿದ್ದು, ಮನಸ್ಸಿನಲ್ಲೂ ಹೊಸ ಉತ್ಸಾಹ ಮೂಡಬಹುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದ್ದು, ಕುಟುಂಬದವರಿಂದ ಉತ್ತಮ ಬೆಂಬಲ ಸಿಗಬಹುದು. ಹಣಕಾಸಿನ ವಿಚಾರಗಳಲ್ಲೂ ಸ್ಥಿರತೆ ಹೆಚ್ಚಾಗುವ ಸಾಧ್ಯತೆಯಿದೆ. ಹಣದ ಚಿಂತೆ ಕಡಿಮೆಯಾಗಿ ಮನಸ್ಸಿಗೆ ನೆಮ್ಮದಿ, ಕೆಲಸದಲ್ಲಿ ಸ್ಪಷ್ಟತೆ ಸಿಗುವ ದಿನಗಳು ಆರಂಭವಾಗಬಹುದು.
ವೃಶ್ಚಿಕ ರಾಶಿ
ಮುಂದಿನ ದಿನಗಳು ವೃಶ್ಚಿಕ ರಾಶಿಯವರಿಗೆ ಹೊಸ ಅನುಭವಗಳ ಜೊತೆಗೆ ನೆಮ್ಮದಿಯನ್ನೂ ತರಬಹುದು. ಇಂದಿನಿಂದ ಸೆ.13ರವರೆಗಿನ ಅವಧಿ ನಿಮಗೆ ವಿಶೇಷವಾಗಿರಬಹುದು. ಹೊಸ ವಿಷಯಗಳನ್ನು ಕಲಿಯಲು ಮತ್ತು ನಿಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಲು ಉತ್ತಮ ಅವಕಾಶಗಳು ಸಿಗಬಹುದು. ಕುಟುಂಬದವರೊಂದಿಗೆ ಪ್ರವಾಸಕ್ಕೆ ಯೋಜನೆ ರೂಪಿಸುವ ಸಾಧ್ಯತೆಯಿದ್ದು, ಬಹುದಿನಗಳಿಂದ ಬಯಸುತ್ತಿದ್ದವರೊಂದಿಗೆ ಗುಣಮಟ್ಟದ ಸಮಯ ಕಳೆಯಬಹುದು. ಇದೇ ಸಮಯದಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳತ್ತ ಆಸಕ್ತಿ ಹೆಚ್ಚಾಗಬಹುದು. ಕುಟುಂಬದ ಸಂತೋಷ, ಹೊಸ ಕಲಿಕೆ ಮತ್ತು ಮನಸ್ಸಿನ ನೆಮ್ಮದಿ-ಮೂರೂ ಒಂದೇ ಸಮಯದಲ್ಲಿ ಸಿಗುವ ಸಾಧ್ಯತೆಯಿದೆ.
ಧನು ರಾಶಿ
ಬುಧನ ನಕ್ಷತ್ರ ಬದಲಾವಣೆ ಧನು ರಾಶಿಯವರಿಗೆ ಪ್ರಗತಿಯ ಹೊಸ ಬಾಗಿಲು ತೆರೆಯಬಹುದು. ಉದ್ಯೋಗದಲ್ಲಿರುವವರಿಗೆ ತಮ್ಮ ಕ್ಷೇತ್ರದಲ್ಲಿ ಮುನ್ನಡೆಯಲು ಉತ್ತಮ ಅವಕಾಶಗಳು ದೊರೆಯಬಹುದು. ವ್ಯವಹಾರಸ್ಥರಿಗೂ ಹೊಸ ಅವಕಾಶಗಳು ಸಿಗುವ ಸಾಧ್ಯತೆಯಿದ್ದು, ಕೈಗೆತ್ತಿಕೊಂಡ ಕೆಲಸಗಳಲ್ಲಿ ಯಶಸ್ಸು ಕಾಣಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ಸಾಧ್ಯತೆಯಿದ್ದು, ಆರ್ಥಿಕ ಲಾಭವೂ ದೊರೆಯಬಹುದು. ಯಶಸ್ಸಿನ ಅನುಭವದಿಂದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಲಿದೆ. ಕೆಲಸದಲ್ಲಿ ಯಶಸ್ಸು, ಹಣದಲ್ಲಿ ಲಾಭ ಮತ್ತು ಆತ್ಮವಿಶ್ವಾಸದ ಹೆಚ್ಚಳ-ಧನು ರಾಶಿಯವರಿಗೆ ಶುಭ ದಿನಗಳು ಆರಂಭವಾಗಬಹುದು.
ಲೇಖನಗಳು
Shani Dev-ರೇವತಿ ನಕ್ಷತ್ರಕ್ಕೆ ಶನಿ ಪ್ರವೇಶ; ಈ 4 ರಾಶಿಯವರಿಗೆ ಶುಕ್ರದೆಸೆ ಆರಂಭ..!
ಗ್ರಹಗಳ ಚಲನೆಯಲ್ಲಿ ನ್ಯಾಯದ ದೇವತೆ ಎಂದು ಕರೆಯಲ್ಪಡುವ ಶನಿ ಮಹಾತ್ಮನ ಸಂಚಾರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅತ್ಯಂತ ನಿಧಾನವಾಗಿ ಚಲಿಸುವ ಗ್ರಹವಾದ ಶನಿಯು ಶೀಘ್ರದಲ್ಲೇ ತನ್ನ ನಕ್ಷತ್ರವನ್ನು ಬದಲಾಯಿಸಲಿದ್ದು, ಈ ಬದಲಾವಣೆಯು ಕೆಲವು ರಾಶಿಯವರ ಬದುಕಿನಲ್ಲಿ ಸುಖವನ್ನು ತರಲಿದೆ.
ಜ್ಯೋತಿಷ್ಯ ಲೋಕ: ಗ್ರಹಗಳ ಚಲನೆಯಲ್ಲಿ ನ್ಯಾಯದ ದೇವತೆ ಎಂದು ಕರೆಯಲ್ಪಡುವ ಶನಿ ಮಹಾತ್ಮನ ಸಂಚಾರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅತ್ಯಂತ ನಿಧಾನವಾಗಿ ಚಲಿಸುವ ಗ್ರಹವಾದ ಶನಿಯು ಶೀಘ್ರದಲ್ಲೇ ತನ್ನ ನಕ್ಷತ್ರವನ್ನು ಬದಲಾಯಿಸಲಿದ್ದು, ಈ ಬದಲಾವಣೆಯು ಕೆಲವು ರಾಶಿಯವರ ಬದುಕಿನಲ್ಲಿ ಸುಖವನ್ನು ತರಲಿದೆ.
ರೇವತಿ ನಕ್ಷತ್ರಕ್ಕೆ ಶನಿ ಪಾದಾರ್ಪಣೆ:
ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ, ಆಗಸ್ಟ್ 20, 2026ರ ಸಂಜೆ 07:45ಕ್ಕೆ ಶನಿಯು ರೇವತಿ ನಕ್ಷತ್ರದ ಮೊದಲ ಪಾದಕ್ಕೆ ಪ್ರವೇಶಿಸಲಿದ್ದಾನೆ. ಅಕ್ಟೋಬರ್ 09, 2026ರವರೆಗೆ ಶನಿಯು ಇದೇ ನಕ್ಷತ್ರದಲ್ಲಿ ವಿರಾಜಮಾನನಾಗಿರುತ್ತಾನೆ. ಈ ಅವಧಿಯಲ್ಲಿ ಶನಿ ದೇವನು ನಾಲ್ಕು ರಾಶಿಯವರಿಗೆ ವಿಶೇಷ ಆಶೀರ್ವಾದ ನೀಡಲಿದ್ದಾನೆ.
ಯಾರಿಗೆ ಅದೃಷ್ಟ?
ಮಿಥುನ ರಾಶಿ: ಮಿಥುನ ರಾಶಿಯವರಿಗೆ ಈ ಅವಧಿಯಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ನಿರುದ್ಯೋಗಿಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಉದ್ಯೋಗದ ಆಫರ್ ಸಿಗುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದ್ದು, ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ದೀರ್ಘಕಾಲದ ಬಾಕಿ ಕೆಲಸಗಳು ಪೂರ್ಣಗೊಳ್ಳಲಿವೆ.
ಸಿಂಹ ರಾಶಿ: ಅಕ್ಟೋಬರ್ ವರೆಗಿನ ಸಮಯವು ಸಿಂಹ ರಾಶಿಯವರಿಗೆ ‘ಸುವರ್ಣ ಅವಧಿ’ಯಾಗಲಿದೆ. ನೀವು ಕೈಹಾಕಿದ ಪ್ರಮುಖ ಕೆಲಸಗಳಲ್ಲಿ ಭರ್ಜರಿ ಯಶಸ್ಸು ಸಿಗಲಿದೆ. ಹಳೆಯ ಹೂಡಿಕೆಗಳಿಂದ ದೊಡ್ಡ ಲಾಭ ದೊರೆಯಲಿದ್ದು, ಹಣಕಾಸಿನ ಸ್ಥಿತಿ ಬಲಗೊಳ್ಳಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ಕಾಲವಿದು.
ಕನ್ಯಾ ರಾಶಿ: ಈ ರಾಶಿಯವರು ಮಾನಸಿಕ ಒತ್ತಡದಿಂದ ಮುಕ್ತಿ ಪಡೆಯಲಿದ್ದಾರೆ. ಉದ್ಯೋಗದಲ್ಲಿ ಬಡ್ತಿ (Promotion) ಸಿಗುವ ಸಾಧ್ಯತೆ ದಟ್ಟವಾಗಿದೆ. ನಿಮ್ಮ ಕಾರ್ಯಕ್ಷಮತೆಯನ್ನು ಮೇಲಧಿಕಾರಿಗಳು ಶ್ಲಾಘಿಸಲಿದ್ದು, ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿದ್ದೀರಿ.
ಮಕರ ರಾಶಿ: ಶನಿಯ ನಕ್ಷತ್ರ ಬದಲಾವಣೆಯು ಮಕರ ರಾಶಿಯವರ ಕೌಟುಂಬಿಕ ಜೀವನದಲ್ಲಿ ಸಂತೋಷ ತರಲಿದೆ. ಮನೆಯಲ್ಲಿ ಮದುವೆಯಂತಹ ಶುಭ ಕಾರ್ಯಗಳು ಜರುಗಲಿವೆ. ಪ್ರೇಮ ಜೀವನದಲ್ಲಿ ಯಶಸ್ಸು ಸಿಗಲಿದ್ದು, ಸಂಬಂಧಗಳು ಮತ್ತಷ್ಟು ಬಲಗೊಳ್ಳುತ್ತವೆ. ಬಾಕಿ ಉಳಿದಿದ್ದ ಕಾನೂನು ಕೆಲಸಗಳಲ್ಲಿ ಜಯ ಸಿಗಲಿದೆ.
ಒಟ್ಟಾರೆಯಾಗಿ, ಶನಿ ದೇವನ ಈ ನಕ್ಷತ್ರ ಪರಿವರ್ತನೆಯು ಈ ನಾಲ್ಕು ರಾಶಿಯವರ ಪಾಲಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ.
ಲೇಖನಗಳು
Lakshmi Rajyoga-ಶುಕ್ರ-ಚಂದ್ರ ಸಂಯೋಗ: ಸೆ.13ರಿಂದ ಈ 5 ರಾಶಿಯವರಿಗೆ ಒಲಿಯಲಿದೆ ‘ಲಕ್ಷ್ಮಿ ರಾಜಯೋಗ’..!
ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸ್ಥಾನಪಲ್ಲಟಕ್ಕೆ ವಿಶೇಷ ಮಹತ್ವವಿದೆ. ಮುಂಬರುವ ಸೆಪ್ಟೆಂಬರ್ ತಿಂಗಳಲ್ಲಿ ಒಂದು ಅಪರೂಪದ ಗ್ರಹ ಸಂಯೋಗ ನಡೆಯಲಿದ್ದು, ಇದು ಹಲವು ರಾಶಿಯವರ ಪಾಲಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸ್ಥಾನಪಲ್ಲಟಕ್ಕೆ ವಿಶೇಷ ಮಹತ್ವವಿದೆ. ಮುಂಬರುವ ಸೆಪ್ಟೆಂಬರ್ ತಿಂಗಳಲ್ಲಿ ಒಂದು ಅಪರೂಪದ ಗ್ರಹ ಸಂಯೋಗ ನಡೆಯಲಿದ್ದು, ಇದು ಹಲವು ರಾಶಿಯವರ ಪಾಲಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ.
ಸೆ.13ರಂದು ಸೃಷ್ಟಿಯಾಗಲಿದೆ ಲಕ್ಷ್ಮಿ ರಾಜಯೋಗ
ಸೆಪ್ಟೆಂಬರ್ 13 ರಂದು ಕಲೆ, ಪ್ರೀತಿ ಮತ್ತು ವೈಭವದ ಕಾರಕನಾದ ಶುಕ್ರ ಹಾಗೂ ಮನಸ್ಸಿನ ಕಾರಕನಾದ ಚಂದ್ರ ತುಲಾ ರಾಶಿಯಲ್ಲಿ ಒಂದಾಗಲಿದ್ದಾರೆ. ಈ ಎರಡು ಪ್ರಬಲ ಗ್ರಹಗಳ ಮಿಲನದಿಂದಾಗಿ ‘ಲಕ್ಷ್ಮಿ ರಾಜಯೋಗ’ ಸೃಷ್ಟಿಯಾಗಲಿದೆ. ಈ ಯೋಗವು ಸೃಜನಶೀಲತೆ ಮತ್ತು ಉತ್ಸಾಹವನ್ನು ಹೆಚ್ಚಿಸುವುದಲ್ಲದೆ, ಕೆಲವು ರಾಶಿಗಳಿಗೆ ಆರ್ಥಿಕವಾಗಿ ಅಪಾರ ಲಾಭವನ್ನು ತಂದುಕೊಡಲಿದೆ. ಆ ಅದೃಷ್ಟವಂತ 5 ರಾಶಿಗಳು ಇಲ್ಲಿವೆ:
ಕಟಕ ರಾಶಿ
ಇನ್ನೊಂದು ತಿಂಗಳಲ್ಲಿ ಕಟಕ ರಾಶಿಯವರ ಬಾಳು ಬೆಳಗುವುದು. ಕಟಕ ರಾಶಿಯವರ ಆತ್ಮ ವಿಶ್ವಾಸ ಮತ್ತು ವ್ಯಕ್ತಿತ್ವವನ್ನು ಸುಧಾರಿಸಲಿದೆ. ಇದು ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಬಲವಾದ ಪ್ರಭಾವ ಬೀರುವುದು. ಕಚೇರಿಯಲ್ಲಿ ನಿಮ್ಮ ಮೇಲಿನ ಗೌರವ ಹೆಚ್ಚಾಗಬಹುದು. ಕೆಲವರಿಗೆ ಹೊಸ ಜವಾಬ್ದಾರಿಗಳನ್ನು ನೀಡಬಹುದು. ಬಡ್ತಿಗೆ ಅವಕಾಶಗಳು ಸಿಗಲಿವೆ. ಅಲ್ಲದೆ ಕುಟುಂಬದಲ್ಲಿ ಸಂತೋಷದ ವಾತಾವರಣವನ್ನು ನೀವು ಕಾಣುವಿರಿ. ವಿವಾಹಿತ ದಂಪತಿಗಳ ನಡುವೆ ಅನ್ಯೋನ್ಯತೆ ದ್ವಿಗುಣವಾಗಲಿದೆ. ಈ ಅವಧಿಯು ವಿದ್ಯಾರ್ಥಿಗಳಿಗೆ ಉತ್ತಮ ಸಮಯವಾಗಿರುತ್ತದೆ. ಯಾಕೆಂದರೆ ನೀವು ನಿಮ್ಮ ಪರೀಕ್ಷೆಗಳಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಭರವಸೆಗಳನ್ನು ಪೂರೈಸಲು ಸಾಧ್ಯವಾಗುವ ಸಮಯ ಇದು. ಆಸ್ತಿಗಳಲ್ಲಿ ಹೂಡಿಕೆ ಮಾಡಲು ಇದು ಅತ್ಯುತ್ತಮ ಸಮಯ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಸೆಪ್ಟೆಂಬರ್ ತಿಂಗಳು ನೆಮ್ಮದಿಯನ್ನು ತರಲಿದೆ. ಶುಕ್ರ ಚಂದ್ರ ಗ್ರಹ ಸಂಚಾರವು ಹೊಸ ಆದಾಯದ ಅವಕಾಶಗಳನ್ನು ಸೃಷ್ಟಿಸಬಹುದು. ಬಹುನಿರೀಕ್ಷಿತ ಹಣ ಈ ಸಮಯದಲ್ಲಿ ಉಪಯೋಗಕ್ಕೆ ಬರಬಹುದು. ಹೂಡಿಕೆಗಳು ಅನಿರೀಕ್ಷಿತ ಲಾಭವನ್ನು ನೀಡುತ್ತವೆ. ಐಷಾರಾಮಿ ವಸ್ತುಗಳ ಮೇಲಿನ ವೆಚ್ಚಗಳು ಹೆಚ್ಚಾಗಲಿವೆ. ಆದರೆ ಆರ್ಥಿಕ ಪರಿಸ್ಥಿತಿ ಸಾಕಷ್ಟು ಸುಧಾರಣೆ ಕಾಣುವುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಯಶಸ್ಸು ಕಂಡುಬರುವ ಸಾಧ್ಯತೆಗಳು ಇವೆ. ಇದಲ್ಲದೆ ಹೆಚ್ಚಿದ ಆತ್ಮವಿಶ್ವಾಸ ನಿಮ್ಮ ವೃತ್ತಿಜೀವನದಲ್ಲಿ ಪ್ರಮುಖ ಮೈಲಿಗಲ್ಲುಗಳನ್ನು ತಲುಪಲು ನಿಮಗೆ ಸಹಾಯ ಮಾಡುತ್ತದೆ.
ಧನು ರಾಶಿ
ಧನು ರಾಶಿಯವರಿಗೆ ಭಾಗ್ಯದ ಬಾಗಿಲು ತೆರೆಯುವ ಸಮಯ. ಈ ಸಮಯದಲ್ಲಿ ನೀವು ಮಾಡುವ ಕಾರ್ಯಗಳು ದುಪ್ಪಟ್ಟು ಲಾಭವನ್ನು ನೀಡುತ್ತವೆ. ಹಿಂದೆ ಮಾಡಿದ ಸಾಲಗಳನ್ನು ತೀರಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುವ ನಿರೀಕ್ಷೆಯಿದೆ. ಇದಲ್ಲದೆ ಉದ್ಯೋಗದಲ್ಲಿ ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಕೌಶಲ್ಯಗಳು ವೃದ್ಧಿಯಾಗುತ್ತವೆ. ಇದು ವ್ಯವಹಾರ ಮತ್ತು ವೈಯಕ್ತಿಕ ವಿಷಯಗಳಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವ ಸಮಯ. ಹೀಗಾಗಿ ನೀವು ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಕಾಣುವಿರಿ. ನೆಮ್ಮದಿಯ ಜೀವನ ನಿಮ್ಮದಾಗಲಿದೆ. ದೀರ್ಘಕಾಲದಿಂದ ನಿಂತುಹೋಗಿದ್ದ ಶುಭ ಕಾರ್ಯಗಳು ಮತ್ತೆ ಶುರುವಾಗಲಿವೆ.
ತುಲಾ ರಾಶಿ
ಲಕ್ಷ್ಮಿ ರಾಜಯೋಗದಿಂದಾಗಿ ಸೆಪ್ಟೆಂಬರ್ 13ರಿಂದ ತುಲಾ ರಾಶಿಯವರ ಆದಾಯ ದ್ವಿಗುಣವಾಗುವುದು. ವಿದೇಶದಲ್ಲಿ ವ್ಯಾಪಾರ ಅಥವಾ ಕೆಲಸದಲ್ಲಿ ತೊಡಗಿರುವವರು ಹೆಚ್ಚಿನ ಲಾಭವನ್ನು ಗಳಿಸಬಹುದು. ಶುಕ್ರ ಚಂದ್ರ ಗ್ರಹಗಳ ಸಂಯೋಗದಿಂದ ತುಲಾ ರಾಶಿಯವರ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. ಹಳೆಯ ಹೂಡಿಕೆಗಳಿಂದ ಲಾಭವನ್ನು ನಿರೀಕ್ಷಿಸಬಹುದು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿನ ಸಾಧ್ಯತೆಗಳಿವೆ. ವೈವಾಹಿಕ ಜೀವನದಲ್ಲಿ ಸಂತೋಷದ ಕ್ಷಣಗಳು ಇರುತ್ತವೆ. ವಿಶೇಷವಾಗಿ ಶುಕ್ರನು ಹಣದ ಮನೆಯಲ್ಲಿ ಸಂಯೋಗದಲ್ಲಿರುವುದರಿಂದ, ಆರ್ಥಿಕ ಪರಿಸ್ಥಿತಿ ನಿರೀಕ್ಷೆಗಿಂತ ಹೆಚ್ಚು ಸುಧಾರಿಸುತ್ತದೆ. ಆರ್ಥಿಕ ಸಮಸ್ಯೆಗಳು ಮತ್ತು ಬಿಕ್ಕಟ್ಟುಗಳು ಬಹಳ ಕಡಿಮೆಯಾಗುವುದು. ಪ್ರಮುಖ ಅಗತ್ಯಗಳು ಈಡೇರುತ್ತವೆ. ಆರೋಗ್ಯ ಬಹಳಷ್ಟು ಸುಧಾರಣೆ ಕಾಣುವುದು. ನೀವು ವೈಯಕ್ತಿಕ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ. ವೃತ್ತಿ ಮತ್ತು ಕೆಲಸದಲ್ಲಿ ಮಾತ್ರವಲ್ಲದೆ ಸಮಾಜದಲ್ಲಿಯೂ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ನೀವಿರುವ ಸ್ಥಳದಲ್ಲಿ ಉದ್ಯೋಗ ಸಿಗಬಹುದು. ನಿರೀಕ್ಷಿತ ಶುಭ ಸುದ್ದಿ ಬರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಶುಕ್ರ ಚಂದ್ರ ಸಂಯೋಗ ಅಪಾರ ಲಾಭವನ್ನು ತಂದುಕೊಡುವುದು. ಶುಕ್ರನ ಅನುಗ್ರಹದಿಂದ ಮನೆಯಲ್ಲಿ ಮದುವೆಯಂತಹ ಶುಭ ಘಟನೆಗಳು ನಡೆಯಲಿವೆ. ಆರ್ಥಿಕ ಸ್ಥಿತಿ ಸಾಕಷ್ಟು ಸುಧಾರಣೆ ಕಾಣುವುದು. ಇಲ್ಲಿಯವರೆಗೆ ನಿಧಾನವಾಗಿ ಚಲಿಸುತ್ತಿರುವ ಯೋಜನೆಗಳು ವೇಗವನ್ನು ಪಡೆಯಲು ಪ್ರಾರಂಭಿಸಬಹುದು. ಬೆಳವಣಿಗೆ ಮತ್ತು ಆರ್ಥಿಕ ಲಾಭಗಳಿಗೆ ಅವಕಾಶಗಳನ್ನು ಸೃಷ್ಟಿಲಾಗಲಿವೆ. ವೃತ್ತಿಪರ ಮತ್ತು ವ್ಯವಹಾರ-ಸಂಬಂಧಿತ ಪ್ರಯತ್ನಗಳಲ್ಲಿ ಅನುಕೂಲಕರ ಬೆಳವಣಿಗೆಗಳು ಕಂಡುಬರುವ ಸಾಧ್ಯತೆ ಉಂಟು. ಸಹೋದ್ಯೋಗಿಗಳು ಮತ್ತು ಮೇಲಧಿಕಾರಿಗಳ ಬೆಂಬಲ ನಿಮ್ಮ ಮೇಲೆ ಇರುವುದರಿಂದ ನಿಮ್ಮೆಲ್ಲಾ ಕಾರ್ಯಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಆದರೆ ಸಮಾಜದಲ್ಲಿ ನಿಮ್ಮ ಖ್ಯಾತಿ ಮತ್ತು ಪ್ರಭಾವ ದ್ವಿಗುಣವಾಗಲಿದೆ.
-
ನಿಧನ ವಾರ್ತೆ22 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
Uncategorized20 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ21 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಮಂಗಳೂರು21 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ಬಿಗ್ ನ್ಯೂಸ್22 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ19 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ20 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು


















