ಸುಳ್ಯ
Moral Policing : ಸುಳ್ಯ : ನಿರ್ಜನ ಪ್ರದೇಶದಲ್ಲಿ ಪ್ರತಿಷ್ಠಿತ ಕಾಲೇಜಿನ ಭಿನ್ನ ಕೋಮಿನ ಜೋಡಿ – ತಂಡವೊಂದರ ದಾಳಿಗೆ ವಿದ್ಯಾರ್ಥಿಯ ಬೆನ್ನು ಲಗಾಡಿ
ದಕ್ಷಿಣ ಕನ್ನಡ ಜಿಲ್ಲೆಯ (Dakshina Knnada) ಸುಳ್ಯದಲ್ಲಿ (sullia) ನೈತಿಕ ಪೊಲೀಸ್ ಗಿರಿ (moral policing) ನಡೆದ ಬಗ್ಗೆ ಆರೋಪ ಕೇಳಿ ಬಂದಿದೆ. ಅಲ್ಲಿನ ಖಾಸಗಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿ ಹಾಗೂ ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿ ನಿರ್ಜನ ಪ್ರದೇಶದಲ್ಲಿ ಜತೆಯಾಗಿ ತಿರುಗಾಡುತ್ತಿದ್ದರು. ಹೀಗೆ ಭಿನ್ನ ಕೋಮಿನ (Interfaith) ಜೋಡಿ ಜತೆಯಾಗಿರುವುದನ್ನು ಗಮನಿಸಿದ ತಂಡವೊಂದು ಯುವಕನ ಮೇಲೆ ಬೆನ್ನಿನ ಮೇಲೆ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎನ್ನಲಾಗಿದೆ. ಘಟನೆಯೂ ಆ 30 ರಂದು ನಡೆದಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಖಚಿತ ಮಾಹಿತಿ ದೊರೆತಿಲ್ಲ.
ಲಭ್ಯ ಮಾಹಿತಿ ಪ್ರಕಾರ ಮುಸ್ಲಿಂ ವಿದ್ಯಾರ್ಥಿ ಸುಳ್ಯದ ಸರಕಾರಿ ಕಾಲೇಜಿನ ವಿದ್ಯಾರ್ಥಿ. ಹಿಂದೂ ವಿದ್ಯಾರ್ಥಿನಿ ಸುಳ್ಯದ ಪ್ರತಿಷ್ಟಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ. ಇವರಿಬ್ಬರು ಕಾಲೇಜಿನ ಅವರಣದಿಂದ ಹೊರಗಡೆ ನಿರ್ಜನ ಪ್ರದೇಶವೊಂದರಲ್ಲಿ ಜತೆಯಾಗಿ ವಿಹಾರಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರು ಹೀಗೆ ಸಂಪರ್ಕದಲ್ಲಿರುವುದನ್ನು ಹಾಗೂ ಅಗಾಗ ಜತೆಯಲ್ಲಿ ತಿರುಗಾಡುತ್ತಿರುವ ಮಾಹಿತಿ ಬಲಪಂಥೀಯ ವಿದ್ಯಾರ್ಥಿ ಸಂಘಟನೆಯ ಸದಸ್ಯರ ಗಮನಕ್ಕೆ ಬಂದಿತ್ತು ಹಾಗೂ ಈ ಬಗ್ಗೆ ಎಚ್ಚರಿಕೆ ಕೂಡ ನೀಡಿದ್ದರು ಎನ್ನಲಾಗಿದೆ. ಅದರು ಅವರ ಒಡನಾಟ ಮುಮದುವರಿದಿತ್ತು ಎನ್ನಲಾಗಿದೆ
ಹೀಗಾಗಿ ಇವರ ಚಲನವಲನವನ್ನು ಆ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಹೊಂಚು ಹಾಕಿ ಗಮನಿಸುತ್ತಿದ್ದರು. ನಿನ್ನೆ ಮಧ್ಯಾಹ್ನ ಇವರಿಬ್ಬರು ಕಾಲೇಜು ಪಕ್ಕದ ಗುಡ್ಡವೊಂದರಲ್ಲಿ ಜತೆಯಾಗಿ ಇರುವ ಮಾಹಿತಿ ಪಡೆದ ಸಂಘಟನೆಯ ಯುವಕರು ಅಲ್ಲಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಹಿಂದೂ ವಿದ್ಯಾರ್ಥಿನಿ ತಾನು ಮುಸ್ಲಿಂ ಯುವಕನನ್ನು ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾಳೆ. ಅಲ್ಲದೇ ಇದು ನಮ್ಮಿಬ್ಬರ ವೈಯುಕ್ತಿಕ ಇಚ್ಚೆ . ಅದಕ್ಕೆ ನೀವು ತಲೆ ಹಾಕಬೇಡಿ ಎಂದು ಸಂಘಟನೆಯ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಸಂಘಟನೆಯ ವಿದ್ಯಾರ್ಥಿಗಳು ಹಾಗೂ ಕೆಲ ಬೇರೆ ಯುವಕರು ಒಟ್ಟು ಸೇರಿ ಮುಸ್ಲಿಂ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಹೇಳಲಾಗುತ್ತಿದ್ದು , ಇದನ್ನು ಪುಷ್ಟಿಕರಿಸುವಂತೆ ಕೆಲವೊಂದು ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ (Social Media) ಶೇರ್ ಆಗುತ್ತಿದೆ. ಅದರಲ್ಲಿ ಅರೆ ಬೆತ್ತಲಾಗಿರುವ ಯುವಕನ ಬೆನ್ನ ಮೇಲೆ ರಕ್ತ ಹೆಪ್ಪುಗಟ್ಟಿರುವ ದೊಡ್ಡ ದೊಡ್ಡ ಗಾತ್ರದ ಬಾಸುಂಡೆಗಳು ಗೋಚರಿಸುತ್ತೇವೆ.

ಆದರೇ ಆ ಫೋಟೊದಲ್ಲಿ ಯುವಕನ ಮುಖ ಕಾಣಿಸುತ್ತಿಲ್ಲವಾದುದರಿಂದ ಅದು ಯಾರ ಪೋಟೊ ಎನ್ನುವುದು ಖಚಿತಗೊಂಡಿಲ್ಲ. ಆದರೇ ಅದು ಮುಸ್ಲಿಂ ವಿದ್ಯಾರ್ಥಿಗೆ ಗುಂಪು ಥಳಿಸಿದ ಬಳಿಕ ಅವರೇ ಚಿತ್ರಿಕರಿಸಿದ ಪೋಟೊ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಆ ಇಬ್ಬರು ಭಿನ್ನ ಕೋಮಿನ ಜೋಡಿಯ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಶೇರ್ ಆಗಿದೆ. ಅದರಲ್ಲಿ ಆ ವಿದ್ಯಾರ್ಥಿಗಳು ಕಾಲೇಜ್ ಯೂನಿಫಾರ್ಮ್ ಧರಿಸಿರುವುದನ್ನು ಕಾಣಬಹುದಾಗಿದೆ.
ಮೂಲಗಳ ಪ್ರಕಾರ ಹಲ್ಲೆಗೊಳಗಾದ ವಿದ್ಯಾರ್ಥಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಆದರೇ ಪೊಲೀಸರು FIR ದಾಖಲು ಮಾಡಿರುವ ಮಾಹಿತಿ ಲಭ್ಯವಾಗಿಲ್ಲ.
ನೈತಿಕ ಪೊಲೀಸ್ ಗಿರಿ
“ನೈತಿಕ ಪೊಲೀಸ್ ಗಿರಿ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದ್ದು ಜೋಡಿಗೆ ಕಿರುಕುಳ ನೀಡಲಾಗಿದೆ. ಬಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.. ಬಾಲಕ ಮತ್ತು ಬಾಲಕಿ ಭಿನ್ನ ಕೋಮಿಗೆ ಸೇರಿದವರು” ಎಂದು ಗಂಭೀರವಾಗಿ ಹಲ್ಲೆಗೊಳಗಾದ ಬಾಲಕನ ಪೋಟೊದ ಜತೆಗೆ ಟ್ವಿಟರ್ ನಲ್ಲಿ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ .
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ಬಿಗ್ ನ್ಯೂಸ್24 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್23 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್22 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ22 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ21 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ23 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಅಪರಾಧ4 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು


















