ಸುಳ್ಯ
Moral Policing ಸುಳ್ಯ : ಕಾಲೇಜಿನ ವಿದ್ಯಾರ್ಥಿನಿ ಜತೆ ಮಾತನಾಡಿದ್ದಕ್ಕೆ ಮೈದಾನಕ್ಕೆ ಕರಕೊಂಡು ಹೋಗಿ ದೊಣ್ಣೆಯಿಂದ ಬಾರಿಸಿದ್ರು : ವಿದ್ಯಾರ್ಥಿಯ ದೂರಿನಂತೆ 7 ಜನರ ವಿರುದ್ದ FIR
ಸುಳ್ಯ (Sullia ಆ 31) : ಭಿನ್ನ ಕೋಮಿನ (Interfaith) ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ (student) ಜತೆಯಾಗಿ ಇದುದ್ದನ್ನು ಆಕ್ಷೇಪಿಸಿ ಆ 30 ರಂದು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸುವ ಮೂಲಕ ನೈತಿಕ ಪೊಲೀಸ್ ಗಿರಿ (Moral Policing) ನಡೆಸಲಾಗಿದೆ ಎಂಬ ಆರೋಪ ಸುಳ್ಯದಲ್ಲಿ ಕೇಳಿ ಬಂದಿತ್ತು. ಇದೀಗ ಈ ಘಟನೆ ಠಾಣೆ ಮೆಟ್ಟಿಲೇರಿ ಪ್ರಕರಣ ದಾಖಲಾಗಿದೆ. ತನ್ನದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಜತೆ ಮಾತನಾಡಿದನ್ನು ಆಕ್ಷೇಪಿಸಿ 7 ಜನ ವಿದ್ಯಾರ್ಥಿಗಳು ದೊಣ್ಣೆಯಿಂದ ಹಲ್ಲೆ ನಡೆಸಿದರೆಂದು ಸುಳ್ಯದ (Sullia) ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ದೂರು ನೀಡಿದ್ದಾರೆ. ಆ ದೂರಿನಂತೆ ಸುಳ್ಯ ಠಾಣೆಯಲ್ಲಿ ಆ 30 ರಂದು ರಾತ್ರಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಸೋಣಂಗೇರೆ ಬಳಿಯ ಪೈಚಾರ್ ಮನೆ ನಿವಾಸಿ ಲತೀಫ್ ಎಂಬವರ ಪುತ್ರ ಮಹಮ್ಮದ್ ಸನೀಫ್ (19) ಎಂಬವರು ಹಲ್ಲೆಯಾದ ಬಗ್ಗೆ ದೂರು ನೀಡಿದವರು .ಈತ ಸುಳ್ಯದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ .ಕಾಂ ವಿದ್ಯಾರ್ಥಿ.
ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಬಿಎ ವಿಧ್ಯಾರ್ಥಿಗಳಾದ ದೀಕ್ಷಿತ್ , ಧನುಷ್ , ಪ್ರಜ್ವಲ್,) ತನುಜ್ (ಅಂತಿಮ ವರ್ಷದ ಬಿಕಾಂ) ಅಕ್ಷಯ್ (ದ್ವಿತಿಯ ವರ್ಷದ ಬಿಕಾಂ) ಮೋಕ್ಷಿತ್ (ಅಂತಿಮ ವರ್ಷದ ಬಿಕಾಂ) ಹಾಗೂ ಸುಳ್ಯದ ಎನ್ ಎಂಸಿ ಕಾಲೇಜಿನ ಗೌತಮ್ ಪ್ರಕರಣದ ಆರೋಪಿಗಳು.ಇವರ ವಿರುದ್ದ ಐಪಿಸಿ ಕಲಂ 143.147.148.323.324.506. ಜೊತೆಗೆ 149 ರಂತೆ ಪ್ರಕರಣ ದಾಖಲಾಗಿದೆ.
ದೂರುದಾರ ಸನೀಫ್ ಗೆ ಅದೇ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ ಎಂಬ ಹುಡುಗಿಯು ಸ್ನೇಹಿತೆಯಾಗಿದ್ದಾರೆ. ಇವರಿಬ್ಬರು ಪರಸ್ಪರ ಮಾತನಾಡುವುದಕ್ಕೆ ಹಲವರ ಆಕ್ಷೇಪವಿತ್ತು. ಆ 30 ರಂದು ಬೆಳಿಗ್ಗೆ 10.30ರ ಸುಮಾರಿಗೆ ಸನೀಫ್ ಕಾಲೇಜಿನ ಕ್ಲಾಸ್ ರೂಂ ನಲ್ಲಿದ್ದಾಗ ಆರೋಪಿಗಳಾದ ದೀಕ್ಷಿತ್ ಮತ್ತು ಧನುಷ್ ಎಂಬವರು ಅಲ್ಲಿಗೆ ಬಂದು ಮಾತನಾಡಲಿಕೆಯಿದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ ಗೆ ಕರೆದುಕೊಂಡು ಹೋಗಿದ್ದಾರೆ. ಆಗ ಅಲ್ಲಿ ಇತರ ಆರೋಪಿಗಳಾದ ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್ ಹಾಗೂ ಸುಳ್ಯದ ಎನ್ ಎಂಸಿ ಕಾಲೇಜಿನ ಗೌತಮ್ ಹಾಗೂ ಇತರರಿದ್ದರು.
ಆರೋಪಿಗಳು ಕಲರ್ ಪಟ್ಟಿ ಹಿಡಿದು ನೀನು ಪಲ್ಲವಿಯೊಟ್ಟಿಗೆ ಯಾಕೆ ಮಾತನಾಡುತ್ತಿಯಾ ಎಂದು ಪ್ರಶ್ನಿಸಿ ದೊಣ್ಣೆಯಿಂದ ಬೆನ್ನಿಗೆ ಹೊಡೆದು, ಕೆಳಗೆ ದೂಡಿ ಹಾಕಿ ಕಾಲಿನಿಂದ ತುಳಿದಿದ್ದಾರೆ. ಇನ್ನೂ ಮುಂದೆ ಪಲ್ಲವಿಯೊಂದಿಗೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿರುವುದಾಗಿ ಸನೀಫ್ ಆರೋಪಿಸಿದ್ದಾರೆ.
ಬಳಿಕ ಸನೀಫ್ ಕ್ಲಾಸ್ ಗೆ ವಾಪಸ್ಸು ತೆರಳಿ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಬೆನ್ನಿನ ಗಾಯಕ್ಕೆ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಠಾಣೆಗೆ ದೂರು ನೀಡಿದ್ದು ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ದಕ್ಷಿಣ ಕನ್ನಡ19 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ24 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಮಂಗಳೂರು20 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















