ಒಂದು ಪ್ರಕರಣದಲ್ಲಿ ನಳಿನ್ ಕುಮಾರ್ ಅವರ ಫೋಟೋ ವನ್ನು […]" /> ಒಂದು ಪ್ರಕರಣದಲ್ಲಿ ನಳಿನ್ ಕುಮಾರ್ ಅವರ ಫೋಟೋ ವನ್ನು […]"> Campaign Against Nalin Kumar in Modi Program | Big Breaking : ಮೋದಿ ಕಾರ್ಯಕ್ರಮದಲ್ಲಿ ನಳಿನ್ ವಿರುದ್ದ ಆಕ್ರೋಶಕ್ಕೆ ಸಿದ್ಧತೆ - ಇಬ್ಬರ ವಿರುದ್ಧ ಪ್ರಕರಣ ದಾಖಲು - Nikhara News | Kannada News Website
Connect with us

Uncategorized

Campaign Against Nalin Kumar in Modi Program | Big Breaking : ಮೋದಿ ಕಾರ್ಯಕ್ರಮದಲ್ಲಿ ನಳಿನ್ ವಿರುದ್ದ ಆಕ್ರೋಶಕ್ಕೆ ಸಿದ್ಧತೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಸೆ.2 ಕ್ಕೆ ಮಂಗಳೂರಿಗೆ ಆಗಮಿಸುವ (Modi Visit Mangalore) ಕಾರ್ಯಕ್ರಮದಲ್ಲಿ ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Campaign against NalinKumar in Modi Program ) ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದವರ ವಿರುದ್ದ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನಡೆಯುತ್ತಿರುವ ಚರ್ಚೆಯ ಆಧಾರದಲ್ಲಿ ಎರಡು ಪ್ರಕರಣಗಳನ್ನು ಮಂಗಳೂರು ಪೊಲೀಸರು ದಾಖಲಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಒಂದು ಪ್ರಕರಣದಲ್ಲಿ ನಳಿನ್ ಕುಮಾರ್ ಅವರ ಫೋಟೋ ವನ್ನು ಮಾರ್ಕ್ ಮಾಡಿ ಆಕ್ಷೇಪಾರ್ಹ ರೀತಿ ಚಿತ್ರಿಸಲಾಗಿದೆ ಮತ್ತೊಂದು ಕಾರ್ಯಕ್ರಮ ದಲ್ಲಿ ಗೊಂದಲ ಉಂಟು ಮಾಡುವ ರೀತಿ ಪೋಸ್ಟ್ ಮಾಡಲಾಗಿದೆ.

Ad Widget

Ad Widget <> Ad Widget

ಮೋದಿ ಕಾರ್ಯಕ್ರಮದಲ್ಲಿ ಗೊಂದಲ ನಿರ್ಮಾಣ ಮಾಡಲು ವಾಟ್ಸಪ್ ಗ್ರೂಪ್ ಮಾಡಲಾಗಿದೆ. ಸಾಮಾಜಿಕ ಜಾಲತಾಣವನ್ನು ಮಂಗಳೂರು ಸಿಟಿ ಸೈಬರ್ ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ ಎಂದು ಕಮಿಷನರ್ ಶಶಿಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಬಗ್ಗೆ ಎರಡು ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾದ ಇಬ್ಬರು ಕೂಡ ನಾಪತ್ತೆಯಾಗಿದ್ದಾರೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

Ad Widget

Ad Widget

ಈ ಗ್ರೂಪ್ ಗಳನ್ನು ಸೋಷಿಯಲ್ ಮಿಡಿಯಾ ಸೆಲ್ ಮಾನಿಟರ್ ಮಾಡುತ್ತಿದೆ, ಈ ಪೋಸ್ಟ್ ಅಪರಾಧ ಅಂತಾ ಆದ್ರೆ ಪ್ರಕರಣ ದಾಖಲು ಮಾಡುತ್ತೇವೆ ,ಇಲ್ಲದಿದ್ದಲ್ಲಿ ಅವರಿಂದ ಲಕ್ಷ ರೂಪಾಯಿಯ ಶೂರಿಟಿ ಬಾಂಡ್ ಪಡೆಯಲಿದ್ದೇವೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ, ಕಾರ್ಯಕ್ರಮದಲ್ಲಿ ಗೊಂದಲ ನಿರ್ಮಾಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಸಂಸದ ನಳಿನ್ ಕುಮಾರ್ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಮೃತದೇಹ ನೋಡಲು ಹೋದ ಕಟೀಲ್ ಕಾರನ್ನು ಬಿಜೆಪಿ ಕಾರ್ಯಕರ್ತರು ಜಗ್ಗಾಡುವ ವಿಡಿಯೋ ದೇಶಾದ್ಯಂತ ವೈರಲ್ ಆಗಿತ್ತು.

ಕಾರ್ಯಕರ್ತರ ಆಕ್ರೋಶ ತಣಿಸಲು ಮೋದಿ ಮಂಗಳೂರಿಗೆ ಆಗಮಿಸುತಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಲೇ ಕಟೀಲ್ ವಿರುದ್ದ ಟ್ವೀಟ್ ಅಭಿಯಾನಕ್ಕೆ ಬಿಜೆಪಿಯ ಆಪ್ತ ಸಾಮಾಜಿಕ ಜಾಲತಾಣ ದೈತ್ಯ ಪೋಸ್ಟ್ ಕಾರ್ಡ್ ಕರೆಕೊಟ್ಟಿತ್ತು. ಇದೀಗ ವಿರೋಧ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ.

ಅದರ ನಡುವೆ ಭಾರಿ ಹೊಂಡ ಗುಂಡಿಗಳಿಂದ ಸೇರಿದ್ದ ಮಂಗಳೂರಿನ ರಸ್ತೆಗಳು ತೇಪೆ ಹಾಕುವ ಕಾರ್ಯ ಭರದಿಂದ ಸಾಗುತ್ತಿದೆ. ಇದೂ ಕೂಡ ಹಲವು ಟ್ರೋಲ್ ಗೆ ಕಾರಣವಾಗುತ್ತಿದೆ .

ಸೆ.2 ರ ಕಾರ್ಯಕ್ರಮದಂದು ಗಣೇಶೋತ್ಸವ ಮೆರವಣಿಗೆಗಾಗಿ ಮಂಗಳೂರಿನ ಶಾಲಾ ಕಾಲೇಜಿಗೆ ರಜೆ ಘೋಷಣೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸೌಲಭ್ಯ ಪಡೆದವರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಡ್ಡಾಯಗೊಳಿಸಲಾಗಿದೆ. ಒಟ್ಟಾರೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೆ.2 ಕ್ಕೆ ನಡೆಯುವ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ 2 ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ ಎನ್ನುತ್ತಾರೆ ದಕ್ಷಿಣಕನ್ನಡ ಬಿಜೆಪಿ.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!