ಜೀವನಶೈಲಿ
Best Pripaid Plans : ಅನಿಯಮಿತ ಕರೆ, ಡೇಟಾ ಪ್ರಯೋಜನಗಳನ್ನು ನೀಡುವ ರಿಲಯನ್ಸ್ ಜಿಯೋ vs ಏರ್‌ಟೆಲ್ vs ವೊಡಾಫೋನ್ ಕಂಪೆನಿಗಳ ರೂಪಾಯಿ 200 ರ ಒಳಗಿನ ಪ್ರಿಪೇಯ್ಡ್ ಯೋಜನೆಗಳ ವಿವರ ಇಲ್ಲಿದೆ
ನಿಮ್ಮ ಖರ್ಚುಗಳನ್ನು ಮಿತಗೊಳಿಸುವ ಯೋಜನೆಯಲ್ಲಿ ಇದ್ದೀರಾ? ಅದಕ್ಕಾಗಿ ಮೊಬೈಲ್ ರಿಚಾರ್ಜ್ ಗಳ ಮೌಲ್ಯವನ್ನು (Pripaid Plans) ಕಡಿತಗೊಳಿಸಲು ಬಯಸಿದ್ದೀರಾ ? ಅನಿಯಮಿತ ಕರೆ ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡ ಪ್ರಿಪೇಯ್ಡ್ ಯೋಜನೆಯನ್ನು (plans) ಬಯಸುತ್ತಿದ್ದೀರಾ ? ಹಾಗಾದರೇ ಈ ವರದಿ ಅವಶ್ಯವಾಗಿ ಓದಿ. ಸಾಮಾನ್ಯವಾಗಿ ಈಗ ಕಛೇರಿ ಹಾಗೂ ಮನೆಗಳಲ್ಲಿ ಇಂಟರ್ನೆಟ್ ಬಳಕೆಗೆ ವೈಫೈ ಬಳಸುತ್ತಿದ್ದಾರೆ. ಹಾಗಾಗಿ ಅವರಿಗೆ ಪ್ರಯಾಣದ ವೇಳೆ ಅಥವಾ ತುರ್ತು ಸಂದರ್ಭಗಳಲ್ಲಿ ಮಾತ್ರ ಫೋನ್‌ನಲ್ಲಿ ಡೇಟಾವನ್ನು ಬಳಸಿಕೊಳ್ಳುತ್ತಾರೆ. ಇವರಿಗೆ ಅನಿಯಮಿತ ಕಾಲ್ ಕರೆ ಹಾಗೂ ಸಣ್ಣ ಗಾತ್ರದ ದೈನಂದಿನ ಡೇಟಾ ಪ್ಯಾಕ್ ಸಾಕಾಗುತ್ತದೆ.
Jio, Airtel ಮತ್ತು Vi ಅನಿಯಮಿತ ಡೇಟಾ ಮತ್ತು ಕರೆಯೊಂದಿಗೆ ರೂ 200 ರ ಅಡಿಯಲ್ಲಿ ಆಯ್ದ ಪ್ರಿಪೇಯ್ಡ್ ಯೋಜನೆಗಳನ್ನು ನೀಡುತ್ತಿವೆ.ಅದರ ವಿವರಗಳನ್ನು ಇಲ್ಲಿ ನೀಡಲಾಗಿದೆ. Jio, Airtel ಮತ್ತು Vi ಕೇವಲ 200 ರೂ.ಒಳಗಿನ ಆಯ್ದ ಪ್ರಿಪೇಯ್ಡ್ ಪ್ಯಾಕ್ ಗಳಲ್ಲಿ, ದೈನಂದಿನ ಡೇಟಾ ಪ್ರಯೋಜನಗಳು, ಅನಿಯಮಿತ ಕರೆಗಳು, SMS ಪ್ರಯೋಜನಗಳನ್ನು ನೀಡುತ್ತಿವೆ. ಆದ್ದರಿಂದ ನೀವು ಅಲ್ಪಾವಧಿಯ ಯೋಜನೆಯನ್ನು ಹುಡುಕುತ್ತಿದ್ದರೆ ಮತ್ತು ಪಾಕೆಟ್-ಸ್ನೇಹಿ ರೀಚಾರ್ಜ್ ಬಯಸಿದರೆ, 200 ರೂ. ಅಡಿಯಲ್ಲಿ ಪ್ರಿಪೇಯ್ಡ್ ಯೋಜನೆಗಳ ಪಟ್ಟಿ ಇಲ್ಲಿದೆ.
ಜಿಯೋ ಪ್ರಿಪೇಯ್ಡ್ ಯೋಜನೆಗಳು 200 ರೂ:
ರೂ 149 ಯೋಜನೆ: ಈ ಯೋಜನೆಯು ಅನಿಯಮಿತ ಕರೆಯೊಂದಿಗೆ 1GB ದೈನಂದಿನ ಡೇಟಾ ಹಾಗೂ ದಿನಕ್ಕೆ 100 SMS ಒದಗಿಸುತ್ತದೆ.ಇದು 20 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ
ರೂ 179 ಯೋಜನೆ: ಈ ಯೋಜನೆಯಲ್ಲಿ ಪ್ರತಿದಿನ ಗರಿಷ್ಟ 1GB ದೈನಂದಿನ ಡೇಟಾ, ಅನಿಯಮಿತ ಪೋನ್ ಕರೆ ಮತ್ತು 100 SMS ಸೌಲಭ್ಯವನ್ನು ಹೊಂದಿದೆ. ಇದು ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ
ರೂ 209 ಯೋಜನೆ: ಈ ಯೋಜನೆಯಲ್ಲಿ ಪ್ರತಿದಿನ ಗರಿಷ್ಟ 1GB ದೈನಂದಿನ ಡೇಟಾ, ಅನಿಯಮಿತ ಪೋನ್ ಕರೆ ಮತ್ತು 100 SMS ಸೌಲಭ್ಯವನ್ನು ಹೊಂದಿದೆ. ಇದು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ
ಏರ್‌ಟೆಲ್ ಪ್ರಿಪೇಯ್ಡ್ ಪ್ಲಾನ್‌ಗಳು 200 ರೂ
ರೂ 155 ಯೋಜನೆ: ಯೋಜನೆಯು 24 ದಿನಗಳ ವ್ಯಾಲಿಡಿಟಿ ಹೊಂದಿದ್ದು ಅನಿಯಮಿತ ಕರೆ, 300 SMS, 1GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರ ಜೊತೆಗೆ ಹೆಲೋಟ್ಯೂನ್‌ಗಳ ಹೆಚ್ಚುವರಿ ಪ್ರಯೋಜನಗಳು ಮತ್ತು Wynk ಸಂಗೀತಕ್ಕೆ ಉಚಿತ ಚಂದಾದಾರಿಕೆಯನ್ನು ನೀಡುತ್ತದೆ.
ರೂ 179 ಪ್ಲಾನ್: ಯೋಜನೆಯು 24 ದಿನಗಳ ವ್ಯಾಲಿಡಿಟಿ ಹೊಂದಿದ್ದು ಅನಿಯಮಿತ ಕರೆ, 300 SMS, 2GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರ ಜೊತೆಗೆ ಹೆಲೋಟ್ಯೂನ್‌ಗಳ ಹೆಚ್ಚುವರಿ ಪ್ರಯೋಜನಗಳು ಮತ್ತು Wynk ಸಂಗೀತಕ್ಕೆ ಉಚಿತ ಚಂದಾದಾರಿಕೆಯನ್ನು ನೀಡುತ್ತದೆ.
ರೂ 209 ಯೋಜನೆ: ಯೋಜನೆಯು 21 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು ಅನಿಯಮಿತ ಕರೆ, ದಿನಕ್ಕೆ 100 SMS, 1GB ದೈನಂದಿನ ಡೇಟಾ ಮತ್ತು ಹೆಲೋಟ್ಯೂನ್‌ಗಳ ಹೆಚ್ಚುವರಿ ಪ್ರಯೋಜನಗಳು ಮತ್ತು Wynk ಸಂಗೀತಕ್ಕೆ ಉಚಿತ ಚಂದಾದಾರಿಕೆಯನ್ನು ನೀಡುತ್ತದೆ.
Vi 200 ರೂ ಒಳಗಿನ ಪ್ರಿಪೇಯ್ಡ್ ಯೋಜನೆಗಳು
ರೂ 179 ಯೋಜನೆ: ಯೋಜನೆಯು ಅನಿಯಮಿತ ಕರೆ, 300 SMS, 2GB ಡೇಟಾ ಸೌಲಭ್ಯ ಒದಗಿಸುತ್ತಿದ್ದು 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಇದರ ಜತೆಗೆ Vi ಚಲನಚಿತ್ರಗಳು ಮತ್ತು ಟಿವಿಯ ಹೆಚ್ಚುವರಿ ಪ್ರಯೋಜನಗಳನ್ನು ನೀಡುತ್ತದೆ.
ರೂ 195 ಯೋಜನೆ: ಯೋಜನೆಯು ಅನಿಯಮಿತ ಕರೆ, 300 SMS, 2GB ಡೇಟಾ ಸೌಲಭ್ಯ ಒದಗಿಸುತ್ತಿದ್ದು ಒಂದು ತಿಂಗಳ ವ್ಯಾಲಿಡಿಟಿಯನ್ನು ಹೊಂದಿದೆ. ಇದರ ಜತೆಗೆ Vi ಚಲನಚಿತ್ರಗಳು ಮತ್ತು ಟಿವಿಯ ಹೆಚ್ಚುವರಿ ಪ್ರಯೋಜನಗಳನ್ನು ನೀಡುತ್ತದೆ.
ಲೇಖನಗಳು
Rahu-Ketu-18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ; 12 ರಾಶಿಗಳ ಭವಿಷ್ಯ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.
ಈ ಸಂಚಾರವು 2028ರ ಜೂನ್‌ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ರಾಹುವನ್ನು ಮಹತ್ವಾಕಾಂಕ್ಷೆ, ಭೌತಿಕ ಆಸೆ ಮತ್ತು ಅನಿರೀಕ್ಷಿತ ಬೆಳವಣಿಗೆಗಳ ಸಂಕೇತವಾಗಿ ಪರಿಗಣಿಸಿದರೆ, ಕೇತುವನ್ನು ಆಧ್ಯಾತ್ಮಿಕತೆ, ವೈರಾಗ್ಯ ಮತ್ತು ಅಂತಃಪ್ರಜ್ಞೆಯ ಸಂಕೇತವೆಂದು ನಂಬಲಾಗಿದೆ. ಹಾಗಾದರೆ ಈ ಸಂಚಾರವು 12 ರಾಶಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ನೋಡೋಣ.
ಮೇಷ ರಾಶಿ
ಮೇಷ ರಾಶಿಯವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಉದ್ಯೋಗ ಬದಲಾವಣೆ, ಬಡ್ತಿ ಹಾಗೂ ವ್ಯಾಪಾರ ವಿಸ್ತರಣೆಗೆ ಅನುಕೂಲಕರ ಸಮಯವಾಗಬಹುದು. ಕೆಲಸದ ಜವಾಬ್ದಾರಿ ಹೆಚ್ಚಾದರೂ ಅದಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆಯಿದೆ. ಮನೆ, ವಾಹನ ಮತ್ತು ಆಸ್ತಿ ಖರೀದಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬಹುದು. ಹಳೆಯ ವಾಹನ ಬದಲಿಸಿ ಹೊಸ ವಾಹನ ಖರೀದಿಸುವ ಯೋಗವೂ ಇದೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಬಹುದು. ಬಹುಕಾಲದಿಂದ ಮುಂದೂಡಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಬಹುದು. ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ನೆಲೆಸುವ ನಿರೀಕ್ಷೆಯಿದೆ. ಅನಿರೀಕ್ಷಿತ ಆರ್ಥಿಕ ಲಾಭದ ಅವಕಾಶಗಳು ಎದುರಾಗಬಹುದು. ದೂರದ ಪ್ರಯಾಣ, ಧಾರ್ಮಿಕ ಕಾರ್ಯಗಳು ಹಾಗೂ ಹೊಸ ಅನುಭವಗಳಿಗೆ ಅವಕಾಶ ದೊರೆಯಬಹುದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಜೀವನದಲ್ಲಿ ಕೆಲವು ಅನಿರೀಕ್ಷಿತ ಬದಲಾವಣೆಗಳು ಸಂಭವಿಸಬಹುದು. ವಿದೇಶಿ ಸಂಪರ್ಕಗಳು ಹೆಚ್ಚಾಗುವ ಜೊತೆಗೆ ಉದ್ಯೋಗ ಅಥವಾ ವ್ಯಾಪಾರದ ನಿಮಿತ್ತ ವಿದೇಶ ಪ್ರಯಾಣ ಮಾಡುವ ಅವಕಾಶ ಸಿಗಬಹುದು. ಆರ್ಥಿಕ ಲಾಭದ ಸಾಧ್ಯತೆಯೂ ಇದೆ. ಆದರೆ ಕೆಲವು ಕೆಲಸಗಳಲ್ಲಿ ವಿಳಂಬ ಮತ್ತು ಅಡೆತಡೆಗಳು ಎದುರಾಗಬಹುದು. ಕುಟುಂಬದ ವಿಚಾರದಲ್ಲಿ ಮಾತನಾಡುವಾಗ ಸಂಯಮ ಇರಲಿ. ಆರೋಗ್ಯದ ಕಡೆಗೂ ಗಮನ ನೀಡುವುದು ಅಗತ್ಯ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ಸಮಾಜದಲ್ಲಿ ಗೌರವ ಮತ್ತು ಸ್ಥಾನಮಾನ ಹೆಚ್ಚಾಗುವ ಸಾಧ್ಯತೆಯಿದೆ. ವ್ಯಕ್ತಿತ್ವದಲ್ಲಿ ಬದಲಾವಣೆ ಕಂಡುಬರಬಹುದು. ಹೊಸ ಸ್ನೇಹಿತರು ಮತ್ತು ಪರಿಚಯಗಳು ಬೆಳೆಯಲಿವೆ. ವಿದೇಶದಲ್ಲಿ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಅವಕಾಶಗಳು ದೊರೆಯಬಹುದು. ಆದರೆ ವೈವಾಹಿಕ ಜೀವನ ಮತ್ತು ವ್ಯಾಪಾರ ಪಾಲುದಾರಿಕೆಯಲ್ಲಿ ಪರಸ್ಪರ ನಂಬಿಕೆ ಹಾಗೂ ಉತ್ತಮ ಸಂವಹನಕ್ಕೆ ಆದ್ಯತೆ ನೀಡಬೇಕು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕ್ರಮೇಣ ಕಡಿಮೆಯಾಗಬಹುದು. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆಯಿದೆ. ವಿರೋಧಿಗಳು ಹಾಗೂ ಸ್ಪರ್ಧಿಗಳ ವಿರುದ್ಧ ಮೇಲುಗೈ ಸಾಧಿಸಬಹುದು. ಬಾಕಿ ಉಳಿದಿರುವ ಕಾನೂನು ವಿವಾದಗಳು ಮತ್ತು ಆಸ್ತಿ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ನಿರೀಕ್ಷಿಸಬಹುದು. ವಿದೇಶಿ ಉದ್ಯೋಗದ ಪ್ರಯತ್ನಗಳಿಗೂ ಉತ್ತಮ ಅವಕಾಶಗಳು ಸಿಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಉದ್ಯೋಗ, ಆರ್ಥಿಕ ಸ್ಥಿತಿ ಮತ್ತು ಕುಟುಂಬದ ವಿಚಾರಗಳಲ್ಲಿ ಶುಭ ಬೆಳವಣಿಗೆಗಳು ಕಂಡುಬರಬಹುದು. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳು ದೊರೆಯಬಹುದು. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಮಕ್ಕಳಿಂದ ಸಂತೋಷದ ಸುದ್ದಿ ಸಿಗಬಹುದು. ಬಹುಕಾಲದಿಂದ ಬಾಕಿ ಉಳಿದಿರುವ ಹಣಕಾಸು ಮತ್ತು ಆಸ್ತಿ ಸಂಬಂಧಿತ ವಿಚಾರಗಳು ಬಗೆಹರಿಯುವ ನಿರೀಕ್ಷೆಯಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಮನೆ, ವಾಹನ ಮತ್ತು ವೃತ್ತಿಜೀವನದಲ್ಲಿ ಬದಲಾವಣೆಗಳು ಸಂಭವಿಸಬಹುದು. ಸ್ವಂತ ಮನೆ ಖರೀದಿಸುವ ಅಥವಾ ಹೊಸ ಆಸ್ತಿ ಪಡೆಯುವ ಯೋಜನೆಗಳು ಈಡೇರಬಹುದು. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಮತ್ತು ಹೊಸ ಜವಾಬ್ದಾರಿಗಳು ದೊರೆಯಬಹುದು. ಆದರೆ ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕುಟುಂಬದ ಅಗತ್ಯಗಳಿಗಾಗಿ ಹೆಚ್ಚುವರಿ ಖರ್ಚು ಎದುರಾಗುವ ಸಾಧ್ಯತೆಯಿದೆ.
ಧನು ರಾಶಿ
ಧನು ರಾಶಿಯವರಿಗೆ ಆರ್ಥಿಕವಾಗಿ ಪ್ರಗತಿ ಸಾಧಿಸುವ ಅವಕಾಶಗಳು ದೊರೆಯಬಹುದು. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಬಹುದು. ವಿದೇಶಿ ಸಂಪರ್ಕಗಳಿಂದ ಲಾಭವಾಗುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ನಿರೀಕ್ಷೆಯಿದೆ. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ದೊರೆಯಬಹುದು. ಕುಟುಂಬದಲ್ಲಿ ಸಂತೋಷ ಮತ್ತು ನೆಮ್ಮದಿ ಹೆಚ್ಚಾಗಲಿದ್ದು, ಶುಭಕಾರ್ಯಗಳು ನಡೆಯುವ ಸಾಧ್ಯತೆಯಿದೆ. ಮಾತಿನ ಮೇಲೆ ಹಿಡಿತವಿರಲಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಧೈರ್ಯ, ಆತ್ಮವಿಶ್ವಾಸ ಮತ್ತು ಕೆಲಸ ಮಾಡುವ ಉತ್ಸಾಹ ಹೆಚ್ಚಾಗಬಹುದು. ಉದ್ಯೋಗ ಹಾಗೂ ವ್ಯಾಪಾರದಲ್ಲಿ ಹೊಸ ಪ್ರಯತ್ನಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಬಹುದು. ಪ್ರಭಾವಿ ವ್ಯಕ್ತಿಗಳ ಪರಿಚಯದಿಂದ ವೃತ್ತಿಜೀವನದಲ್ಲಿ ಅನುಕೂಲವಾಗಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೂ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ಸಂಚಾರದಲ್ಲಿ ಮಹತ್ವದ ಬದಲಾವಣೆಗಳು ಎದುರಾಗಬಹುದು. ಉದ್ಯೋಗ ಮತ್ತು ವೃತ್ತಿಜೀವನದ ಕಾರಣದಿಂದ ಸ್ಥಳಾಂತರಗೊಳ್ಳುವ ಸಂದರ್ಭ ಬರಬಹುದು. ಹೊಸ ಕೆಲಸ ಅಥವಾ ವೃತ್ತಿ ಆರಂಭಿಸುವ ಆಲೋಚನೆಗಳು ಮೂಡಬಹುದು. ಆರಂಭದಲ್ಲಿ ಕೆಲವು ಗೊಂದಲಗಳು ಎದುರಾದರೂ ಮುಂದಿನ ದಿನಗಳಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳಬಹುದು. ವ್ಯಾಪಾರ ಪಾಲುದಾರಿಕೆ ಮತ್ತು ವೈವಾಹಿಕ ಸಂಬಂಧಗಳಲ್ಲಿ ಎಚ್ಚರಿಕೆ ಹಾಗೂ ಪರಸ್ಪರ ತಿಳುವಳಿಕೆ ಅಗತ್ಯ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕಡಿಮೆಯಾಗುವ ಸಾಧ್ಯತೆಯಿದೆ. ಜಮೀನು ಅಥವಾ ನಿವೇಶನ ಖರೀದಿಸಿ ಮನೆ ನಿರ್ಮಿಸುವ ಯೋಜನೆಗಳು ಮುಂದುವರಿಯಬಹುದು. ವಾಹನ ಖರೀದಿಸುವ ಯೋಗವೂ ಇದೆ. ಮಕ್ಕಳಿಂದ ಸಂತೋಷದ ಸುದ್ದಿ ದೊರೆಯಬಹುದು. ದಾಂಪತ್ಯ ಜೀವನದಲ್ಲಿ ಸಾಮರಸ್ಯ ಹೆಚ್ಚಾಗುವ ನಿರೀಕ್ಷೆಯಿದೆ. ವಿದೇಶಿ ಉದ್ಯೋಗದ ಪ್ರಯತ್ನಗಳು ಮತ್ತು ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹೊಸ ಅವಕಾಶಗಳು ಸಿಗಬಹುದು.
ಮೀನ ರಾಶಿ
ಮೀನ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಬೆಳವಣಿಗೆಗಳು ಕಂಡುಬರಬಹುದು. ಅನಿರೀಕ್ಷಿತ ಮೂಲಗಳಿಂದ ಹಣ ಲಭಿಸುವ ಸಾಧ್ಯತೆಯಿದೆ. ಆಸ್ತಿ-ಪಾಸ್ತಿ ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಫಲಿತಾಂಶ ದೊರೆಯಬಹುದು. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ಮತ್ತು ಸಂಪರ್ಕಗಳಿಂದ ಲಾಭವಾಗಬಹುದು. ಮಕ್ಕಳ ಸಾಧನೆಯಿಂದ ಸಂತೋಷ ಸಿಗಬಹುದು. ವಿದೇಶದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಹೊಸ ಅವಕಾಶಗಳು ಎದುರಾಗಬಹುದು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
ಲೇಖನಗಳು
Mars star change-ಮಂಗಳನ ನಕ್ಷತ್ರ ಬದಲಾವಣೆ: ಈ 5 ರಾಶಿಗಳಿಗೆ ಶುಕ್ರದೆಸೆ; ಕೈತುಂಬಾ ಹಣ, ಉದ್ಯೋಗದಲ್ಲಿ ಬಡ್ತಿ..!
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸಂಚಾರವು ಪ್ರತಿಯೊಂದು ರಾಶಿಯವರ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಇದೀಗ ಮಂಗಳ ಗ್ರಹವು ಕೇತು ಅಧಿಪತ್ಯದ ಮಾಘ ನಕ್ಷತ್ರವನ್ನು ಪ್ರವೇಶಿಸಲು ಸಜ್ಜಾಗಿದೆ. ಈ ಸಂಚಾರದಿಂದ ಕೆಲವು ರಾಶಿಯವರಿಗೆ ಅದೃಷ್ಟ ಒಲಿಯಲಿದ್ದು, ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ ಹಾಗೂ ಹೊಸ ಅವಕಾಶಗಳು ದೊರೆಯಲಿವೆ ಎಂದು ಜ್ಯೋತಿಷ್ಯ ಹೇಳುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸಂಚಾರವು ಪ್ರತಿಯೊಂದು ರಾಶಿಯವರ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಇದೀಗ ಮಂಗಳ ಗ್ರಹವು ಕೇತು ಅಧಿಪತ್ಯದ ಮಾಘ ನಕ್ಷತ್ರವನ್ನು ಪ್ರವೇಶಿಸಲು ಸಜ್ಜಾಗಿದೆ. ಈ ಸಂಚಾರದಿಂದ ಕೆಲವು ರಾಶಿಯವರಿಗೆ ಅದೃಷ್ಟ ಒಲಿಯಲಿದ್ದು, ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ ಹಾಗೂ ಹೊಸ ಅವಕಾಶಗಳು ದೊರೆಯಲಿವೆ ಎಂದು ಜ್ಯೋತಿಷ್ಯ ಹೇಳುತ್ತದೆ.
ಜ್ಯೋತಿಷ್ಯದಲ್ಲಿ ಮಂಗಳ ಗ್ರಹವನ್ನು ಧೈರ್ಯ, ಶಕ್ತಿ, ಸಾಹಸ ಮತ್ತು ಪರಾಕ್ರಮದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಕೇತು ಆಧ್ಯಾತ್ಮಿಕತೆ, ವಿಚ್ಛೇದನ ಹಾಗೂ ಅನಿರೀಕ್ಷಿತ ಘಟನೆಗಳ ಕಾರಕನಾಗಿದ್ದಾನೆ. ಮಂಗಳ ಗ್ರಹವು ಪ್ರತಿ 45 ದಿನಗಳಿಗೊಮ್ಮೆ ರಾಶಿಯನ್ನು ಬದಲಾಯಿಸುವುದರ ಜತೆಗೆ ಕಾಲಕಾಲಕ್ಕೆ ನಕ್ಷತ್ರ ಸಂಚಾರವನ್ನೂ ಮಾಡುತ್ತದೆ.
ಪ್ರಸ್ತುತ ಕಟಕ ರಾಶಿಯಲ್ಲಿರುವ ಮಂಗಳ ನವೆಂಬರ್ 13ರಂದು ಸಿಂಹ ರಾಶಿಗೆ ಪ್ರವೇಶಿಸಲಿದ್ದು, 2027ರ ಜನವರಿ 31ರಂದು ಕೇತು ಅಧಿಪತ್ಯದ ಮಾಘ ನಕ್ಷತ್ರವನ್ನು ಪ್ರವೇಶಿಸಲಿದೆ. ಮಂಗಳನ ಈ ನಕ್ಷತ್ರ ಬದಲಾವಣೆಯಿಂದ ಕೆಲವು ರಾಶಿಯವರಿಗೆ ಅನಿರೀಕ್ಷಿತ ಶುಭಫಲಗಳು ದೊರೆಯುವ ಸಾಧ್ಯತೆಯಿದೆ. ವಿಶೇಷವಾಗಿ ಆರ್ಥಿಕ ಸ್ಥಿತಿ ಸುಧಾರಣೆ, ನಾಯಕತ್ವದ ಗುಣಗಳ ವೃದ್ಧಿ ಹಾಗೂ ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರಬಹುದು. ಹಾಗಾದರೆ ಈ ಸಂಚಾರದಿಂದ ಶುಭಫಲ ಪಡೆಯಲಿರುವ ಐದು ರಾಶಿಗಳು ಯಾವುವು ನೋಡೋಣ.
ತುಲಾ ರಾಶಿ: ಆದಾಯದ ಮೂಲ ಹೆಚ್ಚಳ, ಆರ್ಥಿಕ ಪ್ರಗತಿ
ತುಲಾ ರಾಶಿಯವರಿಗೆ ಮಂಗಳನ ನಕ್ಷತ್ರ ಸಂಚಾರವು ಅನುಕೂಲಕರವಾಗಿರಲಿದೆ. ಹೊಸ ವರ್ಷವು ಹೊಸ ಅವಕಾಶಗಳೊಂದಿಗೆ ಆರಂಭವಾಗುವ ಸಾಧ್ಯತೆಯಿದೆ. ಮಂಗಳನ ಲಾಭ ಸ್ಥಾನದಲ್ಲಿನ ಸಂಚಾರದಿಂದ ಆದಾಯದ ಮೂಲಗಳು ಹೆಚ್ಚಾಗಲಿದ್ದು, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
ಉದ್ಯೋಗಿಗಳಿಗೆ ಮೇಲಧಿಕಾರಿಗಳ ಬೆಂಬಲ ದೊರೆಯಲಿದೆ. ಹೊಸ ಸ್ನೇಹ ಸಂಬಂಧಗಳು ಭವಿಷ್ಯದಲ್ಲಿ ಆರ್ಥಿಕ ಲಾಭಕ್ಕೆ ಕಾರಣವಾಗಬಹುದು. ಕೈಗೆತ್ತಿಕೊಂಡ ಕೆಲಸಗಳಲ್ಲಿ ಯಶಸ್ಸು ಸಿಗುವ ಸಾಧ್ಯತೆಯಿದ್ದು, ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ.
ಮೀನ ರಾಶಿ: ಶತ್ರುಗಳ ಮೇಲೆ ಜಯ, ಉದ್ಯೋಗದಲ್ಲಿ ಬಡ್ತಿ ಭಾಗ್ಯ
ಮೀನ ರಾಶಿಯವರಿಗೆ ಮಂಗಳನ ಸಂಚಾರವು ಶುಭ ಫಲಗಳನ್ನು ನೀಡಲಿದೆ. ಜಾತಕದ ಆರನೇ ಮನೆಯಲ್ಲಿ ಮಂಗಳನ ಪ್ರಭಾವದಿಂದ ಶತ್ರುಗಳ ಕಾಟ ಕಡಿಮೆಯಾಗಲಿದ್ದು, ನ್ಯಾಯಾಲಯದ ಪ್ರಕರಣಗಳಲ್ಲಿ ಅನುಕೂಲಕರ ಫಲಿತಾಂಶ ದೊರೆಯುವ ಸಾಧ್ಯತೆಯಿದೆ.
ಪೊಲೀಸ್, ಸೇನೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ವಿಶೇಷ ಅವಕಾಶಗಳು ಸಿಗಬಹುದು. ಕೃಷಿಕರಿಗೆ ಅನಿರೀಕ್ಷಿತ ಲಾಭವಾಗುವ ಸಾಧ್ಯತೆಯಿದೆ. ಹೂಡಿಕೆಗಳಿಂದ ಉತ್ತಮ ಪ್ರತಿಫಲ ದೊರೆಯಲಿದ್ದು, ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಬಹುದು. ಉದ್ಯೋಗಿಗಳಿಗೆ ಬಡ್ತಿ ಹಾಗೂ ವೇತನ ಹೆಚ್ಚಳದ ಯೋಗವಿದೆ. ಕೌಟುಂಬಿಕ ಜೀವನವೂ ಸಂತೋಷದಿಂದ ಕೂಡಿರಲಿದೆ.
ಧನು ರಾಶಿ: ಹಠಾತ್ ಧನಲಾಭ, ಗೌರವ-ಪ್ರತಿಷ್ಠೆ ಹೆಚ್ಚಳ
ಧನು ರಾಶಿಯವರಿಗೆ ಹೊಸ ವರ್ಷದ ಆರಂಭ ಅದೃಷ್ಟದಾಯಕವಾಗಿರಲಿದೆ. ಮಂಗಳನ ನಕ್ಷತ್ರ ಸಂಚಾರದಿಂದ ಅನಿರೀಕ್ಷಿತ ಆರ್ಥಿಕ ಲಾಭ ದೊರೆಯುವ ಸಾಧ್ಯತೆಯಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪರಿಶ್ರಮಕ್ಕೆ ಮನ್ನಣೆ ಸಿಗಲಿದ್ದು, ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ.
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚಾಗಲಿದ್ದು, ಹೊಸ ವಿಷಯಗಳನ್ನು ಕಲಿಯಲು ಉತ್ತಮ ಅವಕಾಶಗಳು ದೊರೆಯಲಿವೆ. ವೈವಾಹಿಕ ಜೀವನದಲ್ಲಿನ ಭಿನ್ನಾಭಿಪ್ರಾಯಗಳು ದೂರವಾಗಬಹುದು. ಸಾಲದ ಸಮಸ್ಯೆಗಳು ಕಡಿಮೆಯಾಗುವ ಸಾಧ್ಯತೆಯಿದ್ದು, ದೂರದ ಪ್ರಯಾಣ ಮಾಡುವ ಯೋಗವೂ ಇದೆ.
ಕಟಕ ರಾಶಿ: ಬಾಕಿ ಕೆಲಸ ಪೂರ್ಣ, ಆರ್ಥಿಕ ಸಂಕಷ್ಟಕ್ಕೆ ಮುಕ್ತಿ
ಕಟಕ ರಾಶಿಯವರಿಗೆ ಹೊಸ ವರ್ಷದ ಆರಂಭದಲ್ಲಿ ಮಂಗಳನ ವಿಶೇಷ ಅನುಗ್ರಹ ದೊರೆಯಲಿದೆ ಎಂದು ಜ್ಯೋತಿಷ್ಯ ಹೇಳುತ್ತದೆ. ಮಂಗಳನ ಎರಡನೇ ಮನೆಯ ಸಂಚಾರದಿಂದ ಆರ್ಥಿಕ ಪ್ರಗತಿಗೆ ಹೊಸ ದಾರಿಗಳು ತೆರೆದುಕೊಳ್ಳಲಿವೆ.
ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿದ್ದು, ಉತ್ತಮ ಲಾಭ ದೊರೆಯುವ ಸಾಧ್ಯತೆಯಿದೆ. ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚಾಗುವುದರಿಂದ ಹೊಸ ಕೆಲಸಗಳನ್ನು ಆರಂಭಿಸಲು ಅನುಕೂಲಕರ ಸಮಯವಾಗಿದೆ. ಉದ್ಯೋಗಕ್ಕೆ ಸಂಬಂಧಿಸಿದ ಪ್ರಯಾಣಗಳಿಂದಲೂ ಲಾಭವಾಗಬಹುದು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡುವ ಸಾಧ್ಯತೆಯಿದೆ.
ಮಕರ ರಾಶಿ: ಆಸ್ತಿ ಖರೀದಿ ಯೋಗ, ವೃತ್ತಿಜೀವನದಲ್ಲಿ ಪ್ರಗತಿ
ಮಕರ ರಾಶಿಯವರಿಗೆ ಮಂಗಳನ ನಕ್ಷತ್ರ ಸಂಚಾರವು ಅದೃಷ್ಟದ ಬಾಗಿಲು ತೆರೆಯಲಿದೆ. ಜನವರಿಯಲ್ಲಿ ಕೈಗೊಳ್ಳುವ ಕೆಲಸಗಳಿಂದ ಉತ್ತಮ ಫಲಿತಾಂಶ ದೊರೆಯುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಉನ್ನತ ಸ್ಥಾನ, ನಾಯಕತ್ವದ ಗುಣ ಹಾಗೂ ಸಮಾಜದಲ್ಲಿ ಗೌರವ ಹೆಚ್ಚಾಗಬಹುದು.
ಭೂಮಿ ಮತ್ತು ಆಸ್ತಿ ಖರೀದಿಗೆ ಸಂಬಂಧಿಸಿದ ಪ್ರಯತ್ನಗಳು ಫಲ ನೀಡುವ ಸಾಧ್ಯತೆಯಿದೆ. ಆಸ್ತಿಗೆ ಸಂಬಂಧಿಸಿದ ಹಳೆಯ ಸಮಸ್ಯೆಗಳು ಬಗೆಹರಿಯಬಹುದು. ಹೊಸ ವಾಹನ ಖರೀದಿಸುವ ಯೋಗವೂ ಇದೆ. ಕುಟುಂಬದಲ್ಲಿ ನೆಮ್ಮದಿ ಮತ್ತು ಸಂತೋಷ ಹೆಚ್ಚಾಗಲಿದ್ದು, ವೃತ್ತಿಜೀವನದಲ್ಲಿಯೂ ಉತ್ತಮ ಪ್ರಗತಿ ಕಂಡುಬರಬಹುದು.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್3 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















