Connect with us

ಉದ್ಯೋಗ

DHFWS Karnataka Recruitment : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 320 ಹುದ್ದೆಗಳಿಗೆ ಅರ್ಜಿ ಅಹ್ವಾನ : SSLC, ಪಿಯುಸಿ, ಡಿಗ್ರಿ ಹಾಗೂ ಸ್ನಾತಕೋತರ ಪದವಿ ಪಡೆದವರಿಗೆ ವಿವಿಧ ಹುದ್ದೆಗಳು

Published

on

Ad Widget

Ad Widget

Ad Widget

Ad Widget

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (Health and Family Welfare Department) ಖಾಲಿ ಇರುವ ವಿವಿಧ ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಫಾರ್ಮಸಿ ಆಫೀಸರ್, ಕಿರಿಯ ಆರೋಗ್ಯ ಸಹಾಯಕ ಸೇರಿದಂತೆ ಒಟ್ಟು 320 ಹುದ್ದೆಗಳ ಭರ್ತಿಗೆ ((DHFWS Karnataka Recruitment)) ಅರ್ಜಿ ಆಹ್ವಾನಿಸಲಾಗಿದೆ. 

Ad Widget

Ad Widget

Ad Widget

Ad Widget

ಆಗಸ್ಟ್ 29,2022 ರಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ  ಸಲ್ಲಿಕೆ ಆರಂಭಗೊಂಡಿದೆ.  28 ಸೆಪ್ಟೆಂಬರ್ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಎಂದು ನಿಗದಿಪಡಿಸಲಾಗಿದೆ.  ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೋಡ್ ನಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ.  ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Ad Widget

Ad Widget alt="Ad Widget"/>

Ad Widget
ವಿದ್ಯಾರ್ಹತೆ :

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ 10ನೇ ತರಗತಿ, 12ನೇ ತರಗತಿ, ಪದವಿ, ಬಿ.ಎಸ್ಸಿ, ಎಂ.ಎಸ್ಸಿ, ವಿದ್ಯಾರ್ಹತೆಯನ್ನು ಹೊಂದಿರಬೇಕು.

Ad Widget

Ad Widget <> Ad Widget

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ಮತ್ತು ಗರಿಷ್ಟ 35 ವರ್ಷ ವಯೋಮಿತಿ ಹೊಂದಿರಬೇಕು. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿ ಸಡಿಲಿಕೆ ಇದೆ

ಅಭ್ಯರ್ಥಿಗಳ ಹುದ್ದೆಗೆ ಅನುಸಾರವಾಗಿ ವೇತನ  ನಿಗದಿಪಡಿಸಲಾಗಿದ್ದು , 23,500 – 83,900 ವೇತನವಾಗಿದೆ

Ad Widget

Ad Widget

Best Pripaid Plans : ಅನಿಯಮಿತ ಕರೆ, ಡೇಟಾ ಪ್ರಯೋಜನಗಳನ್ನು ನೀಡುವ ರಿಲಯನ್ಸ್ ಜಿಯೋ vs ಏರ್‌ಟೆಲ್ vs ವೊಡಾಫೋನ್ ಕಂಪೆನಿಗಳ ರೂಪಾಯಿ 200 ರ ಒಳಗಿನ ಪ್ರಿಪೇಯ್ಡ್ ಯೋಜನೆಗಳ ವಿವರ ಇಲ್ಲಿದೆ   

ಅರ್ಜಿ ಶುಲ್ಕ :

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 700/-ರೂ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 400/-ರೂ, ಮಾಜಿ ಸೈನಿಕ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸೆಪ್ಟೆಂಬರ್ 29,2022ರೊಳಗೆ ಪಾವತಿಸಬೇಕಿರುತ್ತದೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀಧರ್, ಬಳ್ಳಾರಿ ಮತ್ತು ವಿಜಯನಗರದಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಮತ್ತು ಬ್ಯಾಕ್ಲಾಗ್ ಹುದ್ದೆಗಳು ಇವಾಗಿವೆ.

ಮನಶಾಸ್ತ್ರಜ್ಞ, ಸೈಕಿಯಾಟ್ರಿಸ್ಟ್ ಸೋಶಿಯಲ್ ವರ್ಕ್, ಸೈಕಿಯಾಟ್ರಿಸ್ಟ್ ಸೋಶಿಯಲ್ ವರ್ಕ್, ಫಾರ್ಮಸಿಸ್ಟ್ಕಿರಿಯ ಆರೋಗ್ಯ ಸಹಾಯಕರು, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಕುರಿತಾಗಿ ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆ ವೀಕ್ಷಣೆಗೆ ಅಭ್ಯರ್ಥಿಗಳು ಈ  ಮಾಡಿ. ಅರ್ಜಿಯನ್ನು karunadu.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬಹುದಾಗಿದೆ.

ಈ ಹುದ್ದೆಗ ಕುರಿತಾದ ಸಂಪೂರ್ಣ ಮಾಹಿತಿ, ಹುದ್ದೆ ವಿವರ, ವೇತನ, ನೇಮಕಾತಿ ಸೇರಿದಂತೆ ಸಂಪೂರ್ಣ ವಿವರ ಪಡೆಯಲು ಈ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು ಮಾಡಿ.

Karnataka PU Lecturer Recruitment : ಪಿಯು ಉಪನ್ಯಾಸಕರ ನೇಮಕಾತಿ – 778 ಹುದ್ದೆಗೆ ಅಧಿಸೂಚನೆ | ಇಲ್ಲಿದೆ ವಿದ್ಯಾರ್ಹತೆ, ವಯೋಮಿತಿಯ ವಿವರ

Ad Widget
Click to comment

Leave a Reply

ಸುಳ್ಯ

Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

Published

on

Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.

Ad Widget

Ad Widget alt="Ad Widget"/>

Ad Widget

ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

Ad Widget

Ad Widget <> Ad Widget

ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.

Ad Widget

Ad Widget

ಸಂದರ್ಶನವು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ‘ವಿದ್ಯಾಮಾತಾ ಅಕಾಡೆಮಿ’ಯ ಮುಖ್ಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಯ ವಿವರಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 96204 68869 ಅನ್ನು ಸಂಪರ್ಕಿಸಬಹುದಾಗಿದೆ.

Ad Widget
Continue Reading

ಉದ್ಯೋಗ

Puttur-Sales‌ನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening

Published

on

Ad Widget

Ad Widget

Ad Widget

Ad Widget

ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget alt="Ad Widget"/>

Ad Widget

TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

Ad Widget

Ad Widget <> Ad Widget

ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ

ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Ad Widget

Ad Widget

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ

ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ

ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.

PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!

ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.

ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.

📞 ಸಂಪರ್ಕ: +91 82965 79206

📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.

Ad Widget
Continue Reading

ಉದ್ಯೋಗ

Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

Published

on

Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.

ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

Ad Widget

Ad Widget

ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Ad Widget
Continue Reading
ರಾಜಕೀಯ12 minutes ago

Priyanka Kharge-ಕರ್ನಾಟಕದ ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ; ಬೆಂಗಳೂರಿನ ಬೆಳವಣಿಗೆಯ ಅಂತರವನ್ನು ಕಡಿಮೆ ಮಾಡುವ ಸಾಮರ್ಥ್ಯ ಮಂಗಳೂರಿಗಿದೆ; ಹೂಡಿಕೆ, ಕೌಶಲ್ಯಾಭಿವೃದ್ಧಿ ಮತ್ತು ನವೋದ್ಯಮಗಳ ಮೂಲಕ ಬಿಯಾಂಡ್ ಬೆಂಗಳೂರು ಅಭಿಯಾನವನ್ನು ವೇಗಗೊಳಿಸಲು ಉದ್ಯಮ ವಲಯಕ್ಕೆ ಸಚಿವರ ಕರೆ

ನಿಧನ ವಾರ್ತೆ25 minutes ago

Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು

ಬಿಗ್ ನ್ಯೂಸ್36 minutes ago

Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!