ಅಪರಾಧ
Railway Track Damage : ಕಾಸರಗೋಡು : ವಿಧ್ವಂಸಕ ಕೃತ್ಯದ ಶಂಕೆ ಮೂಡಿಸಿದ ರೈಲ್ವೇ ಹಳಿ ಮೇಲೆ ಕಾಂಕ್ರೀಟಿನ ತುಂಡು ಪತ್ತೆ ಪ್ರಕರಣ ಮೆಗಾ ಟ್ವಿಸ್ಟ್ : ಆರೋಪಿಯ ಬಂಧನ: ಆಕೆ ಹಾಗೇ ಮಾಡಿದ್ದು ಯಾಕೇ ಗೊತ್ತೆ ?
ಕಾಸರಗೋಡು (Kasaragod ಸೆ 1:) ರೈಲು ಹಳಿಗಳಿಗೆ ಹಾನಿ (Railway Track Damage) ಮಾಡಿ ವಿಧ್ವಂಸಕ ಕೃತ್ಯಕ್ಕೆ (Vandalism) ಸಂಚು ರೂಪಿಸಲಾಗಿತ್ತು ಎಂಬ ಭೀತಿ ಮತ್ತು ಆತಂಕಕ್ಕೆ ಕಾರಣವಾಗಿದ್ದ ಪ್ರಕರಣ ಮಹತ್ವದ ತಿರುವು ಪಡೆದಿದೆ. ಕೃತ್ಯ ಎಸಗಿದ ಆರೋಪಿ ಮಹಿಳೆಯಾಗಿದ್ದು, ಆಕೆ ಅದನ್ನು ಅಲ್ಲಿರಿಸಿದ್ದ ಕಾರಣ ಮಾತ್ರ ಎಂಥಹವರನ್ನು ಅಶ್ಚರ್ಯಚಕಿತರನ್ನಾಗಿಸಬಹುದು.
ಕಾಸರಗೋಡು -ಕಾಞಂಗಾಡ್ ಮಧ್ಯೆ ಹಾದುಹೋಗುವ ಕೋಟಿಕುಳಂ- ಬೇಕಲ ನಡುವೆ ರೈಲು ಹಳಿಗಳಲ್ಲಿ ಕಾಂಕ್ರೀಟ್ ತುಂಡುಗಳನ್ನು ಇಟ್ಟಿದ್ದು ಕೆಲ ದಿನಗಳ ಹಿಂದೆ ಬೆಳಕಿಗೆ ಬಂದಿತ್ತು . ಈ ಘಟನೆ ಪೊಲೀಸ್ ಇಲಾಖೆ ಹಾಗೂ ರೈಲ್ವೆ ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿತು. ಇದರ ಹಿಂದೆ ಭಯೋತ್ಪಾದಕ ಚಟುವಟಿಕೆಯ (terrorism) ಕರಿ ನೆರಳು ಇರುವ ಬಗ್ಗೆಯೂ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಇದೀಗ ಈ ಪ್ರಕರಣದ ಆರೊಫಿಯನ್ನು ರೈಲ್ವೆ ಭದ್ರತಾಪಡೆ ಹಾಗೂ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ವಿಲ್ಲಾಪುರದ ಕನಕವಳ್ಳಿ (22 )ಕೃತ್ಯ ಎಸಗಿದ ಆರೋಪಿ. ಈಕೆ ಗುಜುರಿ ಹೆಕ್ಕುವ ಕೆಲಸ ಮಾಡುತ್ತಿದ್ದು, ಸದ್ಯ ಕೇರಳದಲ್ಲಿ ನೆಲೆಸಿದ್ದಾಳೆ. ಶಂಕೆಯ ಹಿನ್ನೆಲೆಯಲ್ಲಿ ಈಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಶ್ನಿಸಿದ್ದರು. ಈ ವೇಳೆ ಆಕೆ ರೈಲು ಹಳಿಯಲ್ಲಿ ಕಬ್ಬಿಣದ ಸಲಾಕೆ ಇರಿಸಿದು ತಾನೆಂದು ತಪ್ಪೊಪ್ಪಿಕೊಂಡಿದ್ದಾಳೆ.
ಏನಿದು ಪ್ರಕರಣ ?
10 ದಿನಗಳ ಹಿಂದೆ ಆ.21ರಂದು ಕಾಸರಗೋಡು -ಕಾಞಂಗಾಡ್ ಮಧ್ಯೆ ಹಾದುಹೋಗುವ ಹಳಿಗಳಲ್ಲಿ ಕೋಟಿಕುಳಂ- ಬೇಕಲ ನಡುವೆ ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟಿಕುಳಂನಲ್ಲಿ ರೈಲು ಹಳಿಯಲ್ಲಿ ಕಬ್ಬಿಣದ ಸಲಾಕೆ ಕಂಡು ಬಂದಿತ್ತು. ಅಲ್ಲದೇ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು, ಬೀಮ್ ಪತ್ತೆಯಾಗಿತ್ತು. ರೈಲ್ವೆ ಗಾರ್ಡ್ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಮಂಗಳವಾರ ಸಂಜೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈಕೆಯನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ನಡೆಸಿರುವುದನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Vandalism Railway track : ಕರ್ನಾಟಕ – ಕೇರಳ ಸಂಪರ್ಕಿಸುವ ರೈಲು ಮಾರ್ಗದಲ್ಲಿ ಬುಡಮೇಲು ಕೃತ್ಯಕ್ಕೆ ಹುನ್ನಾರ
ಕಬ್ಬಿಣದ ಸಲಾಕೆ ಇರಿಸಿದ್ದು ಯಾಕೇ ಗೊತ್ತೆ ?
ಈಕೆ ಗುಜುರಿ ಹೆಕ್ಕುವ ಕಾಯಕ ನಡೆಸುತ್ತಿದ್ದು, ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳು ಆ ದಿನ ಆಕೆಗೆ ಸಿಕ್ಕಿತ್ತು. ಸರಳಿನಿಂದ ಸಿಮೆಂಟ್ ಬೇರ್ಪಡಿಸುವ ಉದ್ದೇಶದಿಂದ ಆಕೆ ಅದನ್ನು ರೈಲು ಹಳಿಯಲ್ಲಿ ಇಟ್ಟಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಕೆಯ ವಿರುದ್ಧದ ಪ್ರಕರಣ ಗಂಭೀರ ಸೆಕ್ಷನ್ ಗಳನ್ನು ಒಳಗೊಂಡಿದೆ. ಹೀಗಾಗಿ ಆಕೆಗೆ ಕನಿಷ್ಠ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆಯಾಗಬಹುದು, ಕನಕವಲ್ಲಿ ಅವರ ಉದ್ದೇಶಗಳು ದುರುದ್ದೇಶಪೂರಿತವಾಗಿರಲಿಲ್ಲ ಎಂದು ಪೊಲೀಸರು ಹೇಳುತ್ತಾರೆ. ಇದು ವಿಧ್ವಂಸಕ ಯತ್ನವಲ್ಲ, ಆದರೆ ಕನಕವಲ್ಲಿ ಅವರು ಮುಗ್ಧ ಮನಸ್ಸಿನಿಂದ ವೇಗವಾಗಿ ಬರುವ ರೈಲನ್ನು ಬಳಸಿ ಲೋಹದ ತುಂಡನ್ನು ಕತ್ತರಿಸಲು ಪ್ರಯತ್ನಿಸಿದರು ಎಂದು ಬೇಕಲ ಠಾಣಾಧಿಕಾರಿ ವಿಪಿನ್ ಯು ಪಿ ಹೇಳಿದ್ದಾರೆ.

ಪೊಲೀಸ್ ಅಧಿಕಾರಿ ಹೇಳಿದ್ದೆನು ?
ಕೇವಲ 2ನೇ ತರಗತಿವರೆಗೆ ಓದಿರುವ ಕನಕವಲ್ಲಿ, ಐದು ವರ್ಷದ ಬಾಲಕನ ತಾಯಿ. ಸರಳಿಗೆ ಅಂಟಿದ ಕಾಂಕ್ರೀಟ್ ಬೇಸ್ ಕತ್ತರಿಸಿ 1,000 ರೂಪಾಯಿ ಮೌಲ್ಯದ ಲೋಹದ ತುಂಡನ್ನು ಮನೆಗೆ ತೆಗೆದುಕೊಂಡು ಹೋಗುವುದು ಅವಳ ಹವಣಿಕೆಯಾಗಿತ್ತು. “ಇಂತಹ ಹೆವಿ ಮೆಟಲ್ ತುಂಡನ್ನು ರೈಲ್ವೇ ಹಳಿ ಮೇಲೆ ಇಡುವುದರಿಂದ ರೈಲು ಹಳಿತಪ್ಪುತ್ತದೆ ಎಂದು ಆಕೆಗೆ ತಿಳಿದಿರಲಿಲ್ಲ” ಎಂದು ಅಧಿಕಾರಿ ಹೇಳಿದ್ದಾರೆ. ಆದರೆ ಕನಕವಲ್ಲಿಯವರ ಮುಗ್ಧ ಅಲೋಚನೆಗೆ ಇಡೀ ಪೊಲೀಸ್ ಇಲಾಖೆ ಮತ್ತು ರೈಲ್ವೇ ರಕ್ಷಣಾ ಪಡೆಗಳು ತಲೆ ಕೆಡಿಸಿಕೊಂಡಿದ್ದವು.
ತನಿಖೆ ಮುಂದುವರಿಯಲಿದೆ :
ಅದೇ ದಿನ ತಳಂಗರೆ, ಕೀಯೂರು, ಕುಂಬಳೆ ಎಂಬೆಡೆಗಳಲ್ಲಿ ರೈಲಿನ ಮೇಲೆ ಕಲ್ಲೆಸೆತ, ಬೀರು ಬಾಟಲಿ ಎಸೆತ ಉಂಟಾಗಿತ್ತು. ಈ ಬಗ್ಗೆ ತನಿಖೆ ನಡೆಯುತ್ತಿದೆಯೆಂದು ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿ ಡಾ.ವೈಭವ್ ಸಕ್ಸೇನಾ, ಬೇಕಲ ಡಿವೈಎಸ್ಪಿ ಸಿ.ಕೆ.ಸುನಿಲ್ ಕುಮಾರ್ ಮೊದಲಾದವರು ತಿಳಿಸಿದ್ದಾರೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಶಿಕ್ಷಣ15 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ9 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ14 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ8 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ13 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ14 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ14 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ14 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















