ಸಾಮಾಜಿಕ ಮಾಧ್ಯಮ
Honey Trap : ರೀಲ್ಸ್ ಮೂಲಕ ಭಾರೀ ಜನಪ್ರಿಯತೆ ಸಂಪಾದಿಸಿದ Instagramನ ಖ್ಯಾತ ಜೋಡಿಯಿಂದ ಕೈಗಾರಿಕೋದ್ಯಮಿಯ ಹನಿಟ್ರ್ಯಾಪ್
ಪಾಲಕ್ಕಾಡ್ Palakkad ಸೆ 1 : ಅಕರ್ಷಕ ರೀಲ್ಸ್ (Reels) ಮೂಲಕ ಇನ್ಸ್ಟಾಗ್ರಾಮ್ (Instagram) ನಲ್ಲಿ ಭಾರೀ ಜನಪ್ರಿಯತೆ ಸಂಪಾದಿಸಿರುವ ಜೋಡಿಯೊಂದನ್ನು ಕೈಗಾರಿಕೋದ್ಯಮಿಯೊಬ್ಬರನ್ನು (industrialist) ಹನಿಟ್ರ್ಯಾಪ್ (Honey Trap) ಮಾಡಿದ ಆರೋಪದಡಿ ಕೇರಳದ (Kerala) ಪಾಲಕ್ಕಾಡ್ ಪೊಲೀಸರು ಬಂಧಿಸಿದ್ದಾರೆ. ಈ ಜೋಡಿಯನ್ನು ಪ್ರಕರಣದ ಉಳಿದ ನಾಲ್ವರು ಆರೋಪಿಗಳು ಕೈಗಾರಿಕೋದ್ಯಮಿಗೆ ಖೆಡ್ಡಾ ತೋಡಲು ಬಳಸಿಕೊಂಡಿದ್ದರು ಎಂಬ ವಿಚಾರ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ದೇವು ಮತ್ತು ಗೋಕುಲ್ ದೀಪ್ ದಂಪತಿಗಳು ರೀಲ್ಸ್ ಮೂಲಕ ಇನ್ಸ್ಟಾಗ್ರಾಮ್ ನಲ್ಲಿ ದೊಡ್ಡ ಸದ್ದು ಮಾಡುತ್ತಿರುವ ದಂಪತಿಗಳು. ಈ ದಂಪತಿಗಳು 50,000 ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಇನ್ಸ್ಟಾಗ್ರಾಂ ರೀಲ್ಸ್ ಜೋಡಿ ಎಂದೇ ಇಬ್ಬರು ಖ್ಯಾತಿಯಾಗಿದ್ದಾರೆ. ಇವರೆ ಈಗ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿ ಬಂಧಿತರಾಗಿರುವ ಆರೋಪಿಗಳು.
ಇವರ ಜತೆ ಪಾಲಾ ಮೂಲದ ಶರತ್ (24), ಇರಿಂಜಲಕುಡ ಮೂಲದ ಅಜಿತ್ (20), ವಿನಯ್ (24) ಮತ್ತು ಜಿಷ್ಣು (20) ಎಂಬವರನ್ನು ಕೂಡ ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಶರತ್ ತಾನು ಮಹಿಳೆ ಎಂದು ಸೋಗು ಹಾಕಿ ಹೆಣ್ಣಿನ ಹೆಸರಿನಲ್ಲಿ ಇನ್ಸ್ಟಾಗ್ರಾಮ್ ಮೂಲಕ ಕೈಗಾರಿಕೋದ್ಯಮಿಯ ಸ್ನೇಹ ಬೆಳೆಸಿಕೊಂಡಿದ್ದಾನೆ. ಕೈಗಾರಿಕೋದ್ಯಮಿಯೊಂದಿಗೆ ಹೆಣ್ಣು ಎಂದು ಚಾಟ್ ಮಾಡುತ್ತಿದ್ದ ಆರೋಪಿಯು ತನ್ನನ್ನು ತಾನು ವಿದೇಶದಲ್ಲಿ ಮದುವೆಯಾಗಿ ಅನಾರೋಗ್ಯ ಪೀಡಿತ ತಾಯಿಯೊಂದಿಗೆ ವಾಸಿಸುತ್ತಿರುವ ಮಹಿಳೆ ಎಂದು ಪರಿಚಯಿಸಿಕೊಂಡಿದ್ದ.

ಖೆಡ್ಡಾ …!
ಒಂದು ಹಂತದಲ್ಲಿ, ಇರಿಂಜಲಕುಡ ಮೂಲದ ಕೈಗಾರಿಕೋದ್ಯಮಿ ಮಹಿಳೆಯನ್ನು ಖುದ್ದಾಗಿ ಭೇಟಿಯಾಗಲು ಇಚ್ಚೆ ವ್ಯಕ್ತಪಡಿಸಿದ್ದಾನೆ. ಆಗ ಆರೋಪಿಯು ರೀಲ್ಸ್ ಸ್ಠಾರ್ ಗಳಾದ ದೇವು ಮತ್ತು ಗೋಕುಲ್ ದೀಪ್ ಅವರನ್ನು ಬಾಡಿಗೆಗೆ ನೇಮಿಸಿಕೊಂಡಿದ್ದಾರೆ. ಹೀಗಾಗಿ ದೇವು ಆ ಕೈಗಾರಿಕೋದ್ಯಮಿಯನ್ನು ಪೋನಿನಲ್ಲಿ ಸಂಪರ್ಕಿಸಿದ್ದಾಳೆ. ಈ ಹಿಂದೆ ಶರತ್ ಉದ್ಯಮಿ ಬಳಿ ತನ್ನ ಮನೆ ಪಾಲಕ್ಕಾಡ್ ಅಂತ ಹೇಳಿದ್ದ. ಆದರೇ ಈಗ ಕಾಲ್ ಮಾಡಿದ ದೇವ್ ಯಕ್ಕರದಲ್ಲಿರುವ ಬಾಡಿಗೆ ಮನೆಗೆ ಬರುವಂತೆ ತಿಳಿಸಿದಳು.
ಯಕ್ಕೆದ ಬಾಡಿಗೆ ಮನೆಗೆ ಕೈಗಾರಿಕೋದ್ಯಮಿ ಬಂದಾಗ ಆತನ ಜತೆ ದೇವು ಇರುವ ಪೋಟೊ ಹಾಗೂ ವಿಡಿಯೋವನ್ನು ಆರೋಪಿಗಳು ಸೆರೆ ಹಿಡಿದಿದ್ದಾರೆ ಎನ್ನಲಾಗಿದೆ. ಬಳಿಕ ಅದನ್ನು ತೋರಿಸಿ ಉದ್ಯಮಿಗೆ ಬೆದರಿಕೆ ಹಾಕಿದ್ದಾರೆ. ಆತನ ಬಳಿಯಿದ್ದ ಚಿನ್ನದ ಸರ, ಕಾರು, ಮೊಬೈಲ್ ಫೋನ್, ಡೆಬಿಟ್/ಕ್ರೆಡಿಟ್ ಕಾರ್ಡ್ಗಳು, ಅಧಿಕೃತ ದಾಖಲೆಗಳು ಮತ್ತು ಹಣವನ್ನು ದೋಚಿದೆ.

ಇನ್ನಷ್ಟು ಲೂಟಿಗೆ ಪ್ರಯತ್ನ
ಇಷ್ಟಾದ ಬಳಿಕವು ಸುಮ್ಮನಾಗದ ದುಷ್ಕರ್ಮಿಗಳು, ಕೈಗಾರಿಕೋದ್ಯಮಿಯನ್ನು ಇನ್ನಷ್ಟು ಲೂಟಿ ಮಾಡುವ ಉದ್ದೇಶದಿಂದ ಆತನನ್ನು ಅಪಹರಿಸಿದೆ. ಆತನನ್ನು ಕಾರಿನಲ್ಲಿ ಕೊಡುಂಗಲ್ಲೂರಿನ ತಮ್ಮ ಫ್ಲಾಟ್ಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಹೀಗೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿರುವಾಗ ದಾರಿ ಮದ್ಯೆ ಎಟಿಎಂನಿಂದ ಹೆಚ್ಚಿನ ಹಣವನ್ನು ಡ್ರಾ ಮಾಡಲು ಪ್ರಯತ್ನಿಸಿದರು. ಆದರೆ, ಅದು ಸಾಧ್ಯವಾಗಲಿಲ್ಲ. ದಾರಿ ಮಧ್ಯೆ ಆರೋಪಿಗಳ ಹಿಡಿತದಿಂದ ತಪ್ಪಿಸಿಕೊಂಡ ಕೈಗಾರಿಕೋದ್ಯಮಿ ಟೌನ್ ಸೌತ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸಬ್ ಇನ್ಸ್ಪೆಕ್ಟರ್ಗಳಾದ ವಿ ಹೇಮಲತಾ, ಎಂ ಅಜಾಜುದ್ದೀನ್, ಎಸ್ ಜಲೀಲ್, ಎಎಸ್ಐ ಕೆ. ಕೃಷ್ಣಪ್ರಸಾದ್, ಹಿರಿಯ ಸಿಪಿಒಗಳಾದ ಎಂ ಸುನೀಲ್, ಆರ್. ವಿನೀಶ್, ಕೆ ಗೋಪಿನಾಥ್, ಸಿಪಿಒಗಳಾದ ಎಸ್ ಶಾನೋಸ್, ಕೆ ರಾಜೇಶ್, ಕೆ ವಿನೋದ್, ಎಂ ರಾಜ್ಮೋನ್ ನೇತೃತ್ವದ ತಂಡ ದುಷ್ಕರ್ಮಿಗಳನ್ನು ಬಂಧಿಸಿದೆ.
ಕಾರಣ ಕೇಳಿ ಪೊಲೀಸರು ಶಾಕ್
ಸಂತ್ರಸ್ತನನ್ನು ಗ್ಯಾಂಗ್ ಹೇಳಿದ ಜಾಗಕ್ಕೆ ಕರೆದೊಯ್ದರೆ 40 ಸಾವಿರ ಕಮಿಷನ್ ಸಿಗುತ್ತಿತ್ತು ಎಂದು ಬಂಧಿತ ದಂಪತಿ ಪೊಲೀಸ್ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. ದುಬಾರಿಜೀವನ ಶೈಲಿಯಿಂದಾಗಿ ಭಾರೀ ಮೊತ್ತದ ಸಾಲ ಶೂಲಕ್ಕೆ ದಂಪತಿಗಳು ಸಿಲುಕಿದ್ದರು ಹೀಗಾಗಿ ಶ್ರೀಮಂತ ವ್ಯಕ್ತಿಗಳನ್ನು ಹನಿ ಟ್ರ್ಯಾಪ್ ಮಾಡಿ ಹಣ ಗಳಿಸುವ ಯೋಜನೆ ರೂಪಿಸಿದ್ದರು ಎಂದು ಕೂಡ ದಂಪತಿಗಳು ಹೇಳಿಕೊಂಡಿದ್ದಾರೆ.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್ನಿಂದ ಇಂಟರ್ನೆಟ್ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್ನಲ್ಲಿ ಹೃತಿಕ್ ರೋಷನ್ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್ಗಾಗಿ ಸಖತ್ ಆಗಿ ಜಿಮ್ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ಸ್ಥಳೀಯ5 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್4 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ6 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ6 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
















