Connect with us

ಮಂಗಳೂರು

PM Modi Mangalore Visit : ಪ್ರಧಾನಿ ಮೋದಿ ಸಮಾವೇಶ : ಕಾರ್ಯಕ್ರಮ ನಿರ್ವಾಹಕ ಕಂಪೆನಿಗಳ ಮೇಲೆ ಗರಂ ಆದ ಎಡಿಜಿಪಿ : ಪೊಲೀಸರಿಗೂ ಸಕತ್ ಕ್ಲಾಸ್

Published

on

Ad Widget

Ad Widget

Ad Widget

Ad Widget

ಮಂಗಳೂರು Mangalore ಸೆ 1 : ಪ್ರಧಾನಿ (Prime Minister) ಮಂಗಳೂರು ಭೇಟಿಗೆ ಮಾಡಿರುವ ವ್ಯವಸ್ಥೆಯಿಂದ ಅಸಂತುಷ್ಟರಾದ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಕಾರ್ಯಕ್ರಮ ನಿರ್ವಾಹಕ ಕಂಪೆನಿಗಳ ಜತೆ ಗರಂ ಆದ ಘಟನೆ ಇಂದು ನಡೆದಿದೆ. ಮೈದಾನದಲ್ಲಿ ಸಾಕಷ್ಟು ಸಿಸಿಟಿವಿ ಅಳವಡಿಸಿರಲಿಲ್ಲ. ಇದನ್ನು ಗಮನಿಸಿದ ಎಡಿಜಿಪಿ ಇಷ್ಟು ದೊಡ್ಡ ಮೈದಾನದಲ್ಲಿ ಕೇವಲ ಎರಡೇ ಸಿಸಿ ಕ್ಯಾಮರಾ ಅಳವಡಿಸಿದ್ದಿರಿ.. ಇದು ಸಾಕಾಗೊಲ್ಲ, ಕೂಡಲೇ ಮೈದಾನದ ಎಲ್ಲ ಕಡೆ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ತಾಕೀತು ಮಾಡಿದರು.

Ad Widget

Ad Widget

Ad Widget

Ad Widget

ಸೆ. 2 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಬೇಟಿ (PM Modi Mangalore Visit) ನೀಡಲಿದ್ದಾರೆ. ಅಲ್ಲಿ ಸುಮಾರು 4000 ಕೋ. ರೂ ಮೌಲ್ಯದ ವಿವಿಧ ಪ್ರಾಜೆಕ್ಟ್ ಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ನಗರದಲ್ಲಿರುವ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಹಾಗೂ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯನ್ನು ಬಿಜೆಪಿ ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕಾರ್ಯಕ್ರಮದ ಸಿದ್ದತೆಗಳ ಪರಿಶೀಲನೆಗೆ ಎಡಿಜಿಪಿ ಅಲೋಕ್ ಕುಮಾರ್ ಖುದ್ದು ಮಂಗಳೂರಿಗೆ ಆಗಮಿಸಿದರು ಈ ವೇಳೆ ಅವರು ಕಾರ್ಯಕ್ರಮದ ಭದ್ರತೆಯ ವ್ಯವಸ್ಥೆಯನ್ನು ನೋಡಿಕೊಳ್ಳುವ ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಹಲವು ಸೂಚನೆ ಹಾಗೂ ಎಚ್ಚರಿಕೆಗಳನ್ನು ನೀಡಿದರು.

Ad Widget

Ad Widget <> Ad Widget

ಪೊಲೀಸರಿಗೆ ಕ್ಲಾಸ್

ಭದ್ರತೆಗೆ ನಿಯೋಜಿಸಲ್ಪಟ್ಟ ಸಿಬಂದಿಗಳು ಯಾರೂ ಮೊಬೈಲ್ ನಲ್ಲಿ ಫೋಟೋ ತೆಗೆಯಬಾರದು. ನಿಮ್ಮ ಕಣ್ಣು ಮೈದಾನದಲ್ಲಿ ಸೇರಿದ ಜನರ ಮೇಲೆ ಇರಬೇಕು. ಭಾಷಣ ಮಾಡುವ ಸಂಧರ್ಭದಲ್ಲಿ ಭಾಷಣ ನೋಡೋದು,ಮೊಬೈಲ್ ನಲ್ಲಿ ಫೋಟೋ ತೆಗೆಯೋದು ಮಾಡಬಾರದು.ಮಾಡಿದ್ರೆ ನಿಮ್ಮ ಮೊಬೈಲನ್ನು ಸೀಜ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Modi Visit Mangalore | ಮೋದಿ ಕಾರ್ಯಕ್ರಮಕ್ಕೆ ಮೈದಾನ ಸಾಕಾಗುತ್ತಾ ಇಲ್ವ ಅನ್ನುವ ಪ್ರಶ್ನೆ ಎದುರಾಗಿದೆ – ಗೋಲ್ಡ್ ಫಿಂಚ್ ಮೈದಾನಕ್ಕಿಂತ ದೊಡ್ಡ ಜಾಗ ಬೇಕಾದಿತು : ಯು.ಟಿ ಖಾದರ್ – ಕಾಂಗ್ರೇಸ್ ನಾಯಕ ಈ ರೀತಿ ಹೇಳಿರುವುದು ಯಾಕೆ ಗೊತ್ತೇ..?

Ad Widget

Ad Widget

ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರ ಜತೆ ಕಿರಿಕ್ ಮಾಡಬಾರದು. ಗೊಂದಲ ಸೃಷ್ಠಿಯಾದರೆ ಯಾರ ಮೇಲೂ ಕೈ ಮಾಡಬಾರದು. ಅವರ ಅವರ ಬಾಯಿ ಮುಚ್ಚಿ, ಎರಡು ಕೈಗಳನ್ನು ಹಿಂಬದಿಯಿಂದ ಲಾಕ್ ವ್ಯಾನ್ ಹತ್ತಿರ ಕರೆತರಬೇಕು. ಯಾವುದೇ ಗೊಂದಲಗಳಿದ್ದರೂ ಕೂಡಲೇ ಹಿರಿಯ ಅಧಿಕಾರಿಗಳಿಗೆತಿಳಿಸಬೇಕು. ಕಾರ್ಯಕ್ರಮಕ್ಕೆ ಬರುವವರ ಶೂ ಸಹಿತ ಸಂಪೂರ್ಣ ತಪಾಸಣೆ ಮಾಡಬೇಕು ಎಂಬ ಖಡಕ್ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ಪೊಲೀಸರಿಗೆ ನೀಡಿದ್ದಾರೆ.

ಎಡಿಜಿಪಿ ಏನೂ ಹೇಳಿದ್ರು ವಿಡಿಯೋ ನೋಡಿ

ಬಸ್ಸು ವ್ಯತ್ಯಯ

ಸಮಾವೇಶದ ಹಿನ್ನಲೆಯಲ್ಲಿ ವಿವಿಧ ಭಾಗಗಳಿಂದ ಕೇಂದ್ರ ಸರ್ಕಾರದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತದೆ. ಈ ಹಿನ್ನಲೆಯಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ಸಂಚಾರ ನಡೆಸುವ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಜನರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಹಕಾರ ನೀಡಬೇಕು ಎಂದು ಕೋರಲಾಗಿದೆ.

Campaign Against Nalin Kumar in Modi Program | Big Breaking : ಮೋದಿ ಕಾರ್ಯಕ್ರಮದಲ್ಲಿ ನಳಿನ್ ವಿರುದ್ದ ಆಕ್ರೋಶಕ್ಕೆ ಸಿದ್ಧತೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಸೆಪ್ಟೆಂಬರ್ 2ರ ಶುಕ್ರವಾರ 12.55ಕ್ಕೆ ವಿಶೇಷ ವಿಮಾನದಲ್ಲಿ ಮೋದಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಮಧ್ಯಾಹ್ನ 1.30ಕ್ಕೆ ಸಭಾ ಕಾರ್ಯಕ್ರಮ ನಡೆಯುವ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸುತ್ತಾರೆ. ಸಂಜೆ 4.20ಕ್ಕೆ ಮಂಗಳೂರಿನಿಂದ ಮೋದಿ ವಾಪಸ್ ಆಗಲಿದ್ದಾರೆ.

ಚಾಲನೆ:

ಪ್ರಧಾನಿ ಒಟ್ಟಿಗೆ 3,783 ಕೋಟಿ ರೂ. ಮೊತ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ. ಎನ್ಎಂಪಿಎ ಬಂದರಿನಲ್ಲಿ ಕಂಟೈನರ್ ಹಾಗೂ ಇತರ ಸರಕುಗಳನ್ನು ನಿರ್ವಹಣೆ ಮಾಡುವ 14ನೇ ಸಂಖ್ಯೆಯದಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಯೋಜನೆಯ ಮೊತ್ತ 281 ಕೋಟಿ ರೂ.ಗಳು. ಎಲ್ಪಿಜಿ ಮತ್ತು ಬಲ್ಕ್ ದ್ರವ ಪಿಒಎಲ್ ಘಟಕ ಶಂಕುಸ್ಥಾಪನೆ, ಖಾದ್ಯ ತೈಲ ಸಂಸ್ಕರಣೆ & ಸಂಗ್ರಹ ಘಟಕಕ್ಕೆ ಶಂಕುಸ್ಥಾಪನೆ, ಸಮುದ್ರ ನೀರಿನಿಂದ ಉಪ್ಪನ್ನು ಬೇರ್ಪಡಿಸಿ ಶುದ್ದೀಕರಿಸಿವ ಘಟಕದ ನಿರ್ಮಾಣಕ್ಕೂ ಮೋದಿ ಚಾಲನೆ ನೀಡಲಿದ್ದಾರೆ.

Honey Trap : ರೀಲ್ಸ್‌ ಮೂಲಕ ಭಾರೀ ಜನಪ್ರಿಯತೆ ಸಂಪಾದಿಸಿದ Instagramನ ಖ್ಯಾತ ಜೋಡಿಯಿಂದ ಕೈಗಾರಿಕೋದ್ಯಮಿಯ ಹನಿಟ್ರ್ಯಾಪ್‌

Ad Widget
Click to comment

Leave a Reply

ಮಂಗಳೂರು

Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget alt="Ad Widget"/>

Ad Widget

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.

Ad Widget

Ad Widget <> Ad Widget

ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

Ad Widget

Ad Widget

ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.

ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.

ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ

ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.

ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.

ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು

ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.

ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.

ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.

Ad Widget
Continue Reading

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading

ನಿಧನ ವಾರ್ತೆ

ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget alt="Ad Widget"/>

Ad Widget

ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget <> Ad Widget

ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್‌ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.

ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Ad Widget

Ad Widget

ಕಮರಿದ ಕುಟುಂಬಕ್ಕೆ ಆಧಾರವಾಗುವ ಕನಸು
ಕಷ್ಟದ ಪರಿಸ್ಥಿತಿಯಲ್ಲಿ ಬೆಳೆದು ಬಂದಿದ್ದ ಜ್ಯೋತಿ ನರ್ಸ್ ಆಗಿ ಕುಟುಂಬಕ್ಕೆ ಆಸರೆಯಾಗಬೇಕೆಂಬ ಕನಸು ಕಂಡಿದ್ದರು. ಆದರೆ, ರಸ್ತೆ ಅಪಘಾತ ಆಕೆಯ ಕನಸನ್ನು ನುಚ್ಚುನೂರಾಗಿಸಿದ್ದು, ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!