Connect with us

ರಾಷ್ಟ್ರೀಯ

Murgha Seer Sex Scandal : ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ- ಕಾರಾಗೃಹದ ಬಾಗಿಲು ದಾಟುವುದನ್ನು ಕಂಡು ಕಣ್ಣೀರಾದ ಅನುಯಾಯಿಗಳು

Published

on



Ad Widget

Ad Widget

Ad Widget

Ad Widget

ಚಿತ್ರದುರ್ಗ chitradurga : ನಗರದ ಹೊರವಲಯದಲ್ಲಿರುವ ಮುರಘಾ ಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.

Ad Widget

Ad Widget

Ad Widget

Ad Widget

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ನಸುಕಿನಲ್ಲಿ ಜೈಲು ಸೇರಿದರು. ಕಾರಾಗೃಹದ ಬಾಗಿಲು ದಾಟುವುದನ್ನು ಕಂಡು ಅವರ ಅನುಯಾಯಿಗಳು ಕಣ್ಣೀರಾದರು.

Ad Widget

Ad Widget

Ad Widget alt="Ad Widget"/>

Ad Widget

ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದರು. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದು. ಈ ವೇಳೆ ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ. ಮಧ್ಯರಾತ್ರಿ ನ್ಯಾ. ಕೋಮಲಾ ಅವರು ಆದೇಶ ನೀಡಿದ್ದಾರೆ.

Ad Widget

Ad Widget <> Ad Widget

ಗುರುವಾರ ರಾತ್ರಿ 10ಗಂಟೆಯಿಂದ ಆರಂಭವಾದ ಬಂಧನ ಪ್ರಹಸನ ಶುಕ್ರವಾರ ನಸುಕಿನ 3 ಗಂಟೆಗೆ ಶರಣರು ಜೈಲು ಸೇರುವ ಮೂಲಕ ಕೊನೆಗೊಂಡಿತು. ಪ್ರಾಥಮಿಕ ವಿಚಾರಣೆ, ವೈದ್ಯಕೀಯ ತಪಾಸಣೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಿದ ಪೊಲೀಸ್ ಅಧಿಕಾರಿಗಳು ನಗರದ ಹೊರವಲಯದ ಹಳೆ ಬೆಂಗಳೂರು ರಸ್ತೆಯಲ್ಲಿರುವ ಕಾರಾಗೃಹ ಸೇರಿಸಿದರು.



Ad Widget

ಇದನ್ನು ಓದಿ : Murugha Seer Sex scandal : ಮುರುಘಾ ಮಠದ‌ ಡಾ. ಶಿವಮೂರ್ತಿ ಸ್ವಾಮೀಜಿಯಿಂದ ಹಾಸ್ಟೇಲ್‌ ನಲ್ಲಿರುವ SSLC ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು

Ad Widget

Ad Widget

ಕಾವಿ ಕಳಚಿದ ಸ್ವಾಮೀಜಿ

ಮುರುಘಾ ಮಠಕ್ಕೆ ತೆರಳಿ ಶರಣರನ್ನು ಪೊಲೀಸರು ವಶಕ್ಕೆ ಪಡೆದರು. ಮಠದ ಅವರಣದಲ್ಲಿ ಕಾರು ಏರುವ ಮುನ್ನ ಶ್ರೀಗಳು ಕಾವಿ ಕಳಚಿ ಬಿಳಿ ಬಟ್ಟೆ ಧರಿಸಿದರು. ವಿಚಾರಣೆಗಾಗಿ 30 ಕಿ.ಮೀ ದೂರದ ಚಳ್ಳಕೆರೆಗೆ ಕರೆದೊಯ್ದರು. ಡಿವೈಎಸ್ಪಿ ಕಚೇರಿಯಲ್ಲಿ ಅವರನ್ನು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಅಧಿಕೃತವಾಗಿ ಬಂಧಿಸಿದರು. ವೈದ್ಯಕೀಯ ತಪಾಸಣೆಗಾಗಿ ಅಲ್ಲಿಂದ ನೇರವಾಗಿ ಜಿಲ್ಲಾ ಆಸ್ಪತ್ರೆಗೆ ಕರೆತರಲಾಯಿತು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ ನೇತೃತ್ವದ ವೈದ್ಯರ ತಂಡ ಶರಣರನ್ನು ಸುಮಾರು ಎರಡು ಗಂಟೆ ಕಾಲ ತಪಾಸಣೆ ನಡೆಸಿತು. ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಆರೋಗ್ಯ ಸೇರಿ ಎಲ್ಲ ರೀತಿಯ ಪರೀಕ್ಷೆಗಳನ್ನು ನಡೆಸಲಾಯಿತು. ಈ ಮಾಹಿತಿ ತಿಳಿದು ನೂರಾರು ಜನರು ಆಸ್ಪತ್ರೆಯ ಎದುರು ಜಮಾಯಿಸಿದರು. ಭಕ್ತರು, ಅನುಯಾಯಿಗಳಿಗೆ ಆಸ್ಪತ್ರೆ ಪ್ರವೇಶಿಸದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದರು.

ಇದನ್ನು ಓದಿ : Mahalakshmi : ನಿರ್ಮಾಪಕ ರವೀಂದರ್‌ ಜೊತೆಗೆ ನೆರವೇರಿತು ನಟಿ, ನಿರೂಪಕಿ ಮಹಾಲಕ್ಷ್ಮೀ ವಿವಾಹ

ನಸುಕಿನ 2.25ಕ್ಕೆ ಆಸ್ಪತ್ರೆಯಿಂದ ಹೊರಟ ಪೊಲೀಸರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಎದುರು ಹಾಜರುಪಡಿಸಿದರು. ಶರಣರ ಪರ ವಕೀಲರು ಜಾಮೀನು ಕೋರಿ ಸ್ಥಳದಲ್ಲೇ ಅರ್ಜಿ ಸಲ್ಲಿಸಿದರು. ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಸೂಚಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಮುರುಘಾಶ್ರೀ ಅವರನ್ನು ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಿದರು. ತಪಾಸಣೆ ನಡೆಸಿದ ಜೈಲು ಸಿಬ್ಬಂದಿ ಅವರನ್ನು ಕಾರಾಗೃಹಕ್ಕೆ ಕರೆದೊಯ್ದರು. ಸ್ಥಳದಲ್ಲಿದ್ದ ಕೆಲ ಭಕ್ತರು ಕಣ್ಣೀರಾದರು. ಇನ್ನೂ ಹಲವರು ಭಾವೋದ್ವೇಗದಿಂದ ಬಿಕ್ಕಳಿಸಿದರು.

ಶರಣಾಗಿದ್ದಾರೆ

ಇನ್ನು ಮುರುಘಾ ಶ್ರೀಗಳನ್ನು ಬಂಧನ ಮಾಡಲಾಗಿಲ್ಲ. ಅವರೇ ಶರಣಾಗಿದ್ದಾರೆ ಎಂದು ಶ್ರೀಗಳ ಪರ ವಕೀಲರು ತಿಳಿಸಿದ್ದಾರೆ. ಕಾನೂನಿಗೆ ಗೌರವ ನೀಡಿ ಸ್ವತಃ ಅವರೇ ಶರಣಾಗಿದ್ದಾರೆ. ಇಂದು ಜಾಮೀನು ಕೋರಿ ಮತ್ತೆ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮಠದ ಪರ ವಕೀಲ ಉಮೇಶ್ ತಿಳಿಸಿದ್ದಾರೆ.

ಆದರೆ ಈ ಕುರಿತು ಮಾಧ್ಯಮದವರಿಗೆ ಹೇಳಿಕೆ ನೀಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರುಶುರಾಂ ” ಶರಣರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ : pregnant Indian tourist | ಭಾರತೀಯ ಗರ್ಭಿಣಿ ಪ್ರವಾಸಿ ಸಾವು – ತನ್ನ ವಿಫಲತೆ ಒಪ್ಪಿ 5 ಗಂಟೆಯೊಳಗೆ ರಾಜಿನಾಮೆ ನೀಡಿದ ಕೋವಿಡ್ ಸಂದರ್ಭ ಹೆಸರುವಾಸಿಯಾಗಿದ್ದ ಫೋರ್ಚುಗಲ್ ಆರೋಗ್ಯ ಸಚಿವೆ

ರಾತ್ರಿ ಏನಾಯಿತು?

  • ಗುರುವಾರ ರಾತ್ರಿ 9.30ಕ್ಕೆ ಮುರುಘಾ ಮಠ ಪ್ರವೇಶಿಸಿದ ಪೊಲೀಸರು
  • ರಾತ್ರಿ 10ಕ್ಕೆ ಶಿವಮೂರ್ತಿ ಮುರುಘಾ ಶರಣರನ್ನು ವಶಕ್ಕೆ ಪಡೆದ ತನಿಖಾ ತಂಡ
  • ರಾತ್ರಿ 10.45ಕ್ಕೆ ಚಳ್ಳಕೆರೆಯ ಡಿವೈಎಸ್ಪಿ ಕಚೇರಿಗೆ ಹಾಜರು, ಪ್ರಾಥಮಿಕ ವಿಚಾರಣೆ
  • ರಾತ್ರಿ 12.48ಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಆರಂಭ
  • ನಸುಕಿನ 2.46ಕ್ಕೆ ನ್ಯಾಯಾಧೀಶರ ಎದುರು ಹಾಜರು
  • ನಸಕಿನ 3 ಗಂಟೆಗೆ ಜೈಲು ಸೇರಿದ ಶರಣರು
Ad Widget
Click to comment

Leave a Reply

ರಾಷ್ಟ್ರೀಯ

Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ

Published

on



Ad Widget

Ad Widget

Ad Widget

Ad Widget

ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್‌-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.



Ad Widget

ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

Ad Widget

Ad Widget

ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.

Ad Widget
Continue Reading

ಕ್ರೀಡೆ

India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ

Published

on



Ad Widget

Ad Widget

Ad Widget

Ad Widget

ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget

Ad Widget

ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget alt="Ad Widget"/>

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

Ad Widget

Ad Widget <> Ad Widget

ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.



Ad Widget

ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.

ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.

ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.

ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.

ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.

ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.

Ad Widget
Continue Reading

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ

Published

on



Ad Widget

Ad Widget

Ad Widget

Ad Widget

ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್‌ ಬಹಿರಂಗಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾ‌ರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.



Ad Widget

ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Ad Widget

Ad Widget

ಥಾಮ್ಪನ್ ಹಾಗೂ ಜ್ಞಾನೇಶ್ ಕುಮಾರ್ ಇಬ್ಬರೂ ಕೇರಳಂ ಕೇಡರ್‌ನ ಐಎಎಸ್‌ ಅಧಿಕಾರಿಗಳು. ಥಾಮ್ರನ್ 1980ರ ಹಾಗೂ ಕುಮಾರ್ 1988ರ ಬ್ಯಾಚ್‌ನ ಅಧಿಕಾರಿ. ಕೇರಳಂನ ಲೋಕೋಪಯೋಗಿ ಕಾರ್ಯದರ್ಶಿಯಾಗಿಯೂ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading