ಸನ್ಮಾನ್ಯ ಪ್ರಧಾನಮಂತ್ರಿ Narendra Modi ಯವರಿಗೆ ಮಂಗಳೂರಿಗೆ ಸ್ವಾಗತ.ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ದಕ್ಷಿಣ ಕನ್ನಡದ ಉದ್ಯಮ ಶೀಲ […]" /> ಸನ್ಮಾನ್ಯ ಪ್ರಧಾನಮಂತ್ರಿ Narendra Modi ಯವರಿಗೆ ಮಂಗಳೂರಿಗೆ ಸ್ವಾಗತ.ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ದಕ್ಷಿಣ ಕನ್ನಡದ ಉದ್ಯಮ ಶೀಲ […]"> Answer Madi Modi ಎಂದು ಮಂಗಳೂರಿನ ಬಗ್ಗೆ ಹಲವು ಪ್ರಶ್ನೆ ಮುಂದಿಟ್ಟ ಸಿದ್ದರಾಮಯ್ಯ- ವಿಪಕ್ಷ ನಾಯಕ ಕೇಳಿದ ಪ್ರಶ್ನೆಗಳು ಯಾವೂದು ಗೊತ್ತೇ..? - Nikhara News | Kannada News Website
Connect with us

Uncategorized

Answer Madi Modi ಎಂದು ಮಂಗಳೂರಿನ ಬಗ್ಗೆ ಹಲವು ಪ್ರಶ್ನೆ ಮುಂದಿಟ್ಟ ಸಿದ್ದರಾಮಯ್ಯ- ವಿಪಕ್ಷ ನಾಯಕ ಕೇಳಿದ ಪ್ರಶ್ನೆಗಳು ಯಾವೂದು ಗೊತ್ತೇ..?

Published

on

Ad Widget

Ad Widget

Ad Widget

Ad Widget

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ(Siddaramaiah) ಇಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ(NarendraModi) ಅವರಿಗೆ #AnswerMadiModi ಎಂಬ ಹ್ಯಾಷ್ ಟ್ಯಾಗ್ ನಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಸಿದ್ದರಾಮಯ್ಯ ಅವರು ಪ್ರಧಾನಿಗಳಿಗೆ ಕೇಳಿರುವ ಪ್ರಶ್ನೆಗಳು ಇಂತಿವೆ:

Ad Widget

Ad Widget alt="Ad Widget"/>

Ad Widget

ಸನ್ಮಾನ್ಯ ಪ್ರಧಾನಮಂತ್ರಿ Narendra Modi ಯವರಿಗೆ ಮಂಗಳೂರಿಗೆ ಸ್ವಾಗತ.
ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?
ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ.

Ad Widget

Ad Widget <> Ad Widget

ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ.
ಇದು ವಿಕಾಸವೋ? ವಿನಾಶವೋ?

ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906),
ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925).
ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931).
ಪ್ರಧಾನಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ?
ಇದು ವಿಕಾಸವೋ? ವಿನಾಶವೋ?

Ad Widget

Ad Widget

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.
ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ನರೇಂದ್ರ ಮೋದಿ.
ಇದು ವಿಕಾಸವೋ? ವಿನಾಶವೋ?

ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.
ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ.
ಇದು ವಿಕಾಸನೋ? ವಿನಾಶನೋ?

ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ.
ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು?
ಇದು ವಿಕಾಸವೋ? ವಿನಾಶನೋ?

ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ.
ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ ಕಟೀಲ್.
ಇದು ವಿಕಾಸವೋ? ವಿನಾಶವೋ?

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ.
ಇದು ವಿಕಾಸನೋ? ವಿನಾಶನೋ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು..
ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ
ಇದು ವಿಕಾಸನೋ? ವಿನಾಶನೋ?

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ.
ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ.
ಕಡಲ್ಕೊರೆತ ಮುಂದುವರಿದಿದೆ.
ಇದು ವಿಕಾಸವೋ? ವಿನಾಶನೋ?

ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ
ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ
ಇದು ವಿಕಾಸನೋ? ವಿನಾಶನೋ?

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು.
ವಾಹನ ಸಂಚಾರಿಗಳ ಜೇಬು ಖಾಲಿ,
ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿ.
ಇದು ವಿಕಾಸನೋ? ವಿನಾಶನೋ?

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!