ದಕ್ಷಿಣ ಕನ್ನಡ
Praveen Nettar | ಪ್ರವೀಣ್ ನೆಟ್ಟಾರುರವರ ಅಕ್ಷಯ ಚಿಕನ್ ಸೆಂಟರ್ ಮತ್ತೊಬ್ಬ ಹಿಂದೂ ಮುಖಂಡನಿಂದ ಪುನಾರಂಭ : ಮತಾಂಧ ಶಕ್ತಿಗಳ ನೀಚ ಕೃತ್ಯಕ್ಕೆ ಹಿಂದೂ ಸಮಾಜ ಎದೆಗುಂದುವುದಿಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶ
ಮಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮುಖಂಡ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು (praveen nettar )ಹತ್ಯೆ ಬಳಿಕ ಮುಚ್ಚಿದ್ದ ಪ್ರವೀಣ್ ನಡೆಸುತ್ತಿದ್ದ ಕೋಳಿ ಅಂಗಡಿ ಮತ್ತೆ ಪುನಾರಂಭಗೊಂಡಿದೆ.
ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಅಂಗಡಿ ಮುನ್ನಡೆಸಲು ಉತ್ಸಾಹ ತೋರದ ಕಾರಣ ಬೆಳ್ಳಾರೆ ಭಾಗದ ಮತ್ತೊಬ್ಬ ಬಿಜೆಪಿ ಕಾರ್ಯಕರ್ತರೊಬ್ಬರು ಈ ಅಂಗಡಿಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಬೆಳ್ಳಾರೆ ಪೇಟೆಯ ಪೆರುವಾಜೆ ದ್ವಾರದ ಹತ್ತಿರ ಜು.26ರಂದು ಹತ್ಯೆಗೊಳಗಾದ ಪ್ರವೀಣ್ ನೆಟ್ಟರ್ ಅವರ ಚಿಕನ್ ಸೆಂಟರ್ ನ್ನು ಹಿಂದೂ ಸಂಘಟನೆಗಳ ಸಕ್ರೀಯ ಸದಸ್ಯ ಯತೀಶ್ ಮುರ್ಕೆತ್ತಿ ಪುನರಾರಂಭಗೊಳಿಸಿದ್ದಾರೆ. ಯತೀಶ್ ಈ ಹಿಂದೆ ಎಬಿವಿಪಿಯಲ್ಲಿ ಜಿಲ್ಲಾ ಸಂಚಾಲಕರಾಗಿ ಬಳಿಕ ಸುಳ್ಯ ತಾಲೂಕು ಜವಾಬ್ದಾರಿಯಲ್ಲಿ ತೊಡಗಿಸಿಕೊಂಡಿದ್ದರು.
ಯತೀಶ್ ಅಕ್ಷಯ್ ಸಂಸ್ಥೆಯ ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದು ಇದೀಗ ಚಿಕನ್ ಸೆಂಟರ್ ಪ್ರಾರಂಭಿಸುತ್ತಿದ್ದಾರೆ. ಮತಾಂಧ ಶಕ್ತಿಗಳಿಗೆ ಹೆದರದೆ ವ್ಯವಹಾರವನ್ನು ಮುಂದುವರೆಸುತ್ತಿದ್ದೇನೆ. ಮತಾಂಧ ಶಕ್ತಿಗಳ ನೀಚ ಕೆಲಸಕ್ಕೆ ಹಿಂದೂ ಸಮಾಜ ಎಂದಿಗೂ ಎದೆಗುಂದುವುದಿಲ್ಲ ಎಂಬ ಸಂದೇಶವನ್ನು ಈ ಮೂಲಕ ನೀಡುತ್ತಿದ್ದೇನೆ. ಈ ಅಂಗಡಿಯು ಅಕ್ಷಯ ಚಿಕನ್ ಸೆಂಟರ್ ಹೆಸರಿನಲ್ಲೇ ಮುಂದುವರೆಯಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಯತೀಶ್ ಹೇಳಿದ್ದಾರೆ.
ಜು.26 ರಂದು ಪ್ರವೀಣ್ ನೆಟ್ಟಾರುನನ್ನು ಅವರ ಕೋಳಿ ಅಂಗಡಿಯ ಎದುರೇ ಕೊಲೆ ನಡೆಸಿದರು. ಪ್ರಮುಖ ಆರೋಪಿಗಳ ಬಂಧನವೂ ಆಗಿದೆ. ತನಿಖೆಯನ್ನು ಎಎನ್ಐ ಗೆ ಒಪ್ಪಿಸಲಾಗಿದೆ.
ಪ್ರವೀಣ್ ಕೊಲೆಯಾದ ಬಳಿಕ ಪ್ರವೀಣ್ ಮುನ್ನಡೆಸಿಕೊಂಡು ಬರುತಿದ್ದ ಅಕ್ಷಯ್ ಚಿಕನ್ ಸೆಂಟರ್ ಮುಚ್ಚಿತ್ತು . ಆದರೆ ಪ್ರವೀಣ್ ಕುಟುಂಬಿಕರು ಈ ನೋವಿನ ಮಧ್ಯೆ ಅದನ್ನ ಮತ್ತೆ ಆರಂಭಿಸೋ ಮನಸ್ಸು ಮಾಡಿಲ್ಲ.
ಪ್ರವೀಣ್ ನಡೆಸುತ್ತಿದ್ದ ಚಿಕನ್ ಸೆಂಟರ್ ಬಿಲ್ಲವ ನಾಯಕ ಜಯಂತ್ ನಡುಬೈಲ್ ಮಾಲಕತ್ವ ಅಕ್ಷಯ ಚಿಕನ್ ಇದರ ಫ್ರಾಂಚೈಸಿ ಆಗಿದ್ದು, ಇದರ ಫ್ರಾಂಚೈಸಿ ಪಡೆಯಲು ಪ್ರವೀಣ್ ಪತ್ನಿ ನೂತನ ಮುಂದೆ ಬಾರದ ಕಾರಣ ಜಯಂತ್ ನಡುಬೈಲ್ ಅವರು ತನ್ನ ಚಿಕನ್ ಇಂಟಿಗ್ರೇಷನ್ ವ್ಯವಹಾರ ನಡೆಸುತ್ತಿರುವ ಬೆಳ್ಳಾರೆ ಭಾಗದ ಹಿಂದೂ ಕಾರ್ಯಕರ್ತ ಯತೀಶ್ ಅವರಿಗೆ ವಹಿಸಿದ್ದಾರೆ . ಈ ಕಟ್ಟಡವೂ ಜಯಂತ್ ಮಾಲಕತ್ವದ್ದೇ ಆಗಿದೆ.
ಪಕ್ಷ ಮತ್ತು ಆರ್.ಎಸ್.ಎಸ್ ಜೊತೆ ಉತ್ತಮ ನಂಟು ಹೊಂದಿರುವ ಯತೀಶ್ ಪೂಜೆ ನೆರವೇರಿಸಿ ಅಂಗಡಿ ಪುನಾರಂಭಿಸಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಅಂತರ ರಾಜ್ಯ6 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್7 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಸುಳ್ಯ6 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ















