ಕಾರ್ಯಕ್ರಮಗಳು
ʼಮಕ್ಕಳಿಗೆ ಬಾಲ್ಯದಲ್ಲೆ ಧಾರ್ಮಿಕ ಶಿಕ್ಷಣ ಸಿಗುವಂತಾಗಬೇಕುʼ : ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಆಯೋಜಿಸಿದ್ದ ಗಣೇಶ ಸಂಭ್ರಮ ಡ್ಯಾನ್ಸ್ ಝಲಕ್ ಕಾರ್ಯಕ್ರಮದಲ್ಲಿ ದಿವ್ಯಪ್ರಭಾ ಗೌಡ ಚಿಲ್ತಡ್ಕ
ಪುತ್ತೂರು: ಮಕ್ಕಳಿಗೆ ಬಾಲ್ಯದಲ್ಲೆ ಧಾರ್ಮಿಕ ಶಿಕ್ಷಣ ಸಿಗಬೇಕು. ಆಗ ಅವರು ಧಾರ್ಮಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಅವರ ಅಸಕ್ತಿಯ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತೆ ಪೋಷಕರು ನೋಡಿಕೊಳ್ಳ ಬೇಕೇ ಹೊರತು ಹೆಚ್ಚು ಡೊನೇಷನ್ ಕೇಳುವ ಶಿಕ್ಷಣ ಸಂಸ್ಥೆಗಳ ಹಿಂದೆ ಹೋಗ ಬಾರದು ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕರವರು ಹೇಳಿದರು.
ಸೇಡಿಯಾಪು ಫ್ರೆಂಡ್ಸ್ ಕ್ಲಬ್ ವತಿಯಿಂದ ಸೆ 2 ರಂದು ಸಂಜೆ ಸೇಡಿಯಾಪಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ, ರಾಜ್ ಕ್ರಿಯೇಶನ್ಸ್ ಮತ್ತು ಅಂಗನವಾಡಿಯ ಪುಟಾಣಿಗಳಿಂದ ಡ್ಯಾನ್ಸ್ ಝಲಕ್ ಗಣೇಶ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಬಳಿಕ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದರು.
ಕೋಡಿಂಬಾಡಿಯ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕೋಡಿಂಬಾಡಿ ಅಶ್ವತ್ಥಕಟ್ಟೆ ವಠಾರದಲ್ಲಿ ಆ.31ರಿಂದ ಸೆ.2ರವರೆಗೆ ನಡೆದ 39ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆಯ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಿವೃತ್ತ ಸೈನಿಕ ಪುಷ್ಪರಾಜ ಗೌಡ ಬಾರ್ತಿಕುಮೇರುರವರು ಕಾರ್ಯಕ್ರಮ ಉದ್ಘಾಟಿಸಿದರು.

ಗೌರವರ್ಪಣೆ :
ಎಂ.ಎಸ್ಸಿ. ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದಿರುವ ವಂದನಾ ಸಾಮಂತ್ ನೆಕ್ಕರಾಜೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿರುವ ಅನ್ವಿಕಾ ಪ್ರಭು ದಾರಂದಕುಕ್ಕು, ನೆಕ್ಕಿಲಾಡಿ ರಾಘವೇಂದ್ರ ಲೈಟ್ಸ್ ಮತ್ತು ಸೌಂಡ್ಸ್ ಮಾಲಕ ದಿನೇಶ್ ಗೌಡ ಪನಿತೋಟ, ರಾಜ್ ಕ್ರಿಯೇಷನ್ಸ್ ನ ಶ್ರೀನಿ ಆಚಾರ್ಯ ಕೊಂಬಕೋಡಿ ಅವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.
ಕೋಡಿಂಬಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಎ. ಮುರಳೀಧರ ರೈ ಮಠಂತಬೆಟ್ಟು, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ. ಬಿ., ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಎಂ.ನಿರಂಜನ ರೈ ಮಠಂತಬೆಟ್ಟು ಮತ್ತು ಉದ್ಯಮಿ ಮಾಧವ ಗೌಡ ಬೆಳ್ಳಾರೆ, ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್, ಮಾಜಿ ಅಧ್ಯಕ್ಷ ಅಶೋಕ್ ಪ್ರಭು, ಮಾಜಿ ಕಾರ್ಯದರ್ಶಿ ರಫೀಕ್ ಅನಿಲಕೋಡಿ, ಸದಸ್ಯರಾದ ಹರೀಶ್ ಪ್ರಭು, ಸಂತೋಷ್, ಹೇಮಂತ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ
ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಜಯ ಬ್ಯಾಂಕ್ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.
ಕಾರ್ಯಕ್ರಮಗಳು
Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.
ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.
ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.

ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.
ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.
ಸ್ಥಳೀಯ
Wedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಉಜಿರೆ: ಕ್ಯಾಸೆಟ್ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.
ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.
ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.
ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮತ್ತು ರಶ್ಮಿತಾ ಜೈನ್ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.
-
ಅಪರಾಧ22 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್19 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ19 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು20 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ15 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ20 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು21 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
Uncategorized10 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್















