Connect with us

ಕ್ರೀಡೆ

India Pakistan Match : ಪತ್ರಿಕಾಗೋಷ್ಟಿಯಲ್ಲಿ ಶಬ್ಧವೊಂದನ್ನು ಉಚ್ಚರಿಸಲು ಭಾರೀ ಸಂಕೋಚ ಪಟ್ಟ ಕೋಚ್ ರಾಹುಲ್ ದ್ರಾವಿಡ್ – ವಿಡಿಯೋ ವೈರಲ್

Published

on

Ad Widget

Ad Widget

Ad Widget

Ad Widget

ಪ್ರಸ್ತುತ ಏಷ್ಯಾ ಕಪ್ 2022 (Asia Cup 2022) ಟೂರ್ನಿ ನಡೆಯುತ್ತಿದ್ದು ಅದರಲ್ಲಿ ಬಲು  ಮಹತ್ವದ ಪಂದ್ಯ ಇಂದು ಸಂಜೆ ನಡೆಯಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ (IND vs PAK) ತಂಡಗಳು ಇಂದು ಟೂರ್ನಿಯಲ್ಲಿ ಎರಡನೇ ಬಾರಿ ಮುಖಾಮುಖಿಯಾಗಲಿದೆ. ಎರಡು ತಂಡಗಳು ಸೂಪರ್ 4 ಹಂತ ತಲುಪಿವೆ.

Ad Widget

Ad Widget

Ad Widget

Ad Widget

ಲೀಗ್ ಹಂತದಲ್ಲಿ ಈ  ಎರಡೂ ತಂಡಗಳ ನಡುವೆ ಈಗಾಗಲೇ ಪಂದ್ಯ ನಡೆದಿದ್ದು, ಅದರಲ್ಲಿ ಭಾರತ ಗೆದ್ದಿದೆ.  ಇಂದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ (Team India) ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಪತ್ರಿಕಾಗೋಷ್ಠಿ ನಡೆಸಿದರು. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಹಾಗಿದ್ರೆ ವಿಡಿಯೋದಲ್ಲಿ ಅಂತಹದೇನಿದೆ ಎಂದು ನೀವೇ ನೋಡಿ.

Ad Widget

Ad Widget alt="Ad Widget"/>

Ad Widget

ರಾಹುಲ್ ದ್ರಾವಿಡ್ ಶಿಸ್ತಿನ ಸಿಪಾಯಿ. ಅವರು ಕ್ರಿಕೆಟಿನ ಆದರ್ಶ ರಾಯಭಾರಿ. ಮೈದಾನದ ಒಳಗೆ ಹಾಗೂ ಹೊರಗೆ ಸಭ್ಯ ನಡವಳಿಕೆಗೆ ಅವರು ಹೆಸರುವಾಸಿ. ಅವರ ನಡೆ ನುಡಿ ಸಜ್ಜನಿಕೆಯಿಂದ ಕೂಡಿರುತ್ತದೆ. ಹೀಗಾಗಿಯೇ  ಪತ್ರಿಕಾಗೋಷ್ಟಿಯಲ್ಲೂ ಪದವೊಂದನ್ನು ಬಳಸಲು ಅವರು ಹಿಂಜರಿಕೆ ತೋರಿಸಿದ್ದು. ಹೀಗಾಗಿಯೇ   ಪತ್ರಿಕಾಗೋಷ್ಟಿಯ ವಿಡಿಯೋ ವೈರಲ್  ಆಗಿರುವುದು.

Ad Widget

Ad Widget <> Ad Widget

ಣ. ಆ ವಿಡಿಯೋದಲ್ಲಿ ಈಗಿನ ಜನರೇಷನ್ ತುಂಬಾ ಕಾಮನ್ ಆಗಿ ಬಳಸುವ ಪದವೊಂದನ್ನು ಬಳಸಲು ಅವರು ಭಾರೀ ನಾಚಿಕೆ ಪಟ್ಟುಕೊಂಡಿದ್ದಾರೆ.  ಆ ಒಂದು ಪದವನ್ನು ನಾನು ಬಳಕೆ ಮಾಡುವುದಿಲ್ಲವೆಂದು ಹೇಳಿ  ಪತ್ರಕರ್ತರ ಕುತೂಹಲವನ್ನು ಹೆಚ್ಚಿಸಿದರು  ಮೂಡಿಸಿದ್ದಾರೆ.

Cyrus Mistry : ಟಾಟಾ ಗ್ರೂಪ್‌ ನ ಮಾಜಿ ಅಧ್ಯಕ್ಷ ಭೀಕರ ರಸ್ತೆ ಅಪಘಾತದಲ್ಲಿ ಮೃತ್ಯು

Ad Widget

Ad Widget

ನನಗೊಂದು ಪದ ನೆನಪಿಗೆ ಬರುತ್ತಿದೆ:

 ದ್ರಾವಿಡ್ ಜೊತೆ ಭಾರತ ಹಾಗೂ ಪಾಕಿಸ್ತಾನ ತಂಡಗಳ ಬೌಲಿಂಗ್ ಕುರಿತಾಗಿ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ದ್ರಾವಿಡ್ ಪಾಕಿಸ್ತಾನ ತಂಡದ ಬೌಲಿಂಗ್ ಉತ್ತಮವಾಗಿದೆ. ಭಾರತ ತಂಡ ಕೂಡ ಕಮ್ಮಿ ಏನಿಲ್ಲ. ಎರಡು ತಂಡಗಳು ಕೂಡ ಬಲಿಷ್ಠ ಬೌಲಿಂಗ್ ಶಕ್ತಿಯನ್ನು ಹೊಂದಿದೆ. ಇದನ್ನು ಗಮನಿಸಿದಾಗ ನನಗೆ ಒಂದು ಪದ ನೆನಪಿಗೆ ಬರುತ್ತದೆ ಎಂದು ಆ ಪದ  ಇಲ್ಲಿ ಬಳಕೆ ಮಾಡಲಾಗದು ಎಂದು ನಗಲು  ನಗಲಾರಂಭಿಸಿದರು.

ಪಟ್ಟು ಬಿಡದ ಪತ್ರಕರ್ತರು

ಇದನ್ನು ಗಮನಿಸಿದ ಪತ್ರಕರ್ತರು ಯಾವ ಪದ ಎಂದು ಮರು ಪ್ರಶ್ನೆ ಹಾಕಿದರು. ಈ ವೇಳೆ ದ್ರಾವಿಡ್ ಆ ಪದ ನನ್ನ ಬಾಯಲ್ಲಿ ಬರುತ್ತಿದೆ. ಆದರೆ ಇಲ್ಲಿ ಅದನ್ನು ಉಚ್ಚರಿಸಲು ನಾನು ಬಯಸುತ್ತಿಲ್ಲವೆಂದರು. ಆದರೂ ಬಿಡದ ಪರ್ತಕರ್ತರು ಏನದು ಎಂದರು ಈ ವೇಳೆ ಆ ಪದ ಎಸ್ ಆಕ್ಷರದಿಂದ ಆರಂಭವಾಗುತ್ತದೆ ಎಂದರು. ಇದನ್ನು ಅರ್ಥಮಾಡಿಕೊಂಡ ಪರ್ತಕರ್ತರು ಒಂದು ಕ್ಷಣ ನಗಲಾರಂಭಿಸಿದರು. ಬಳಿಕ ಸೆಕ್ಸಿ ಪದ ಬಳಕೆ ಮಾಡಲು ರಾಹುಲ್‌ ದ್ರಾವಿಡ್‌ ಅಷ್ಟೊಂದು ಸಂಕೋಚ ಪಟ್ಟುಕೊಂಡರು ಎಂಬ ವಿಷಯ ಗೊತ್ತಾಗಿದೆ. ಆದರೇ ಕೊನೆಗೂ ಆ ಶಬ್ಧವನ್ನು ಉಚ್ಚರಿಸದೇ ತಾವು ಹೇಳಬೇಕೆಂದಿದ್ದ ಮಾತನ್ನು ಅವರು ಮುಂದುವರಿಸಿದರು.

ಇದೇ ವೇಳೆ ಭಾರತದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿಯನ್ನು ರಾಹುಲ್ ದ್ರಾವಿಡ್ ಸಮರ್ಥಿಸಿಕೊಂಡಿದ್ದಾರೆ. ಕೊಹ್ಲಿ ಎಷ್ಟು ರನ್ ಗಳಿಸುತ್ತಾರೆ ಎಂಬುದು ಮುಖ್ಯವಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದರು. ಅವರ ಪ್ರಕಾರ ಟಿ20 ಕ್ರಿಕೆಟ್ನಲ್ಲಿ ಒಂದು ಸಣ್ಣ ಇನ್ನಿಂಗ್ಸ್ ಕೂಡ ಪಂದ್ಯದ ದಿಕ್ಕನ್ನೇ ಬದಲಿಸುತ್ತದೆ. ಅದೇ ಸಮಯದಲ್ಲಿ, ರಿಷಭ್ ಪಂತ್ ಬಗ್ಗೆ, ದ್ರಾವಿಡ್ ಅವರು ಟೀಂ ಇಂಡಿಯಾದ ವಿಕೆಟ್ ಕೀಪರ್ ಆಗಿ ಮೊದಲ ಆಯ್ಕೆಯಲ್ಲ ಎಂದು ಹೇಳಿದರು. ಪಿಚ್ ಮತ್ತು ಪರಿಸ್ಥಿತಿಗಳ ಆಧಾರದ ಮೇಲೆ ಆಟಗಾರನನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

KTM Duke : ಹೊಸ ಬಣ್ಣಗಳಲ್ಲಿ ಕೆಟಿಎಂ ಡ್ಯೂಕ್ ಸರಣಿಯ ಬೈಕ್ – ಇಲ್ಲಿದೆ ಫೋಟೊ, ವಿಡಿಯೋ ಹಾಗೂ ವಿವರ

ಇಂದಿನ ಪಂದ್ಯದ ಸಂಭಾವ್ಯ ತಂಡಗಳು

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್.

ಪಾಕಿಸ್ತಾನ ಸಂಭಾವ್ಯ ತಂಡ: ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ನಸೀಮ್ ಶಾ, ಶಾನವಾಜ್ ದಹಾನಿ.

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಕ್ರೀಡೆ

IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..

Published

on

Ad Widget

Ad Widget

Ad Widget

Ad Widget

ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.

Ad Widget

Ad Widget <> Ad Widget

ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.

ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.

Ad Widget

Ad Widget

ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.

10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2

ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.

2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.

ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

Ad Widget
Continue Reading

ಅಂತರ ರಾಜ್ಯ

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

Published

on

Ad Widget

Ad Widget

Ad Widget

Ad Widget

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Ad Widget

Ad Widget <> Ad Widget

ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!