ರಾಜಕೀಯ
Brijesh Kalappa | ಆಪ್ ಸೇರಿದ ಮಾಜಿ ಕಾಂಗ್ರೇಸ್ ನಾಯಕ , ಖ್ಯಾತ ವಕೀಲ ಕೊಡಗಿನ ಬ್ರಿಜೇಶ್ ಕಾಳಪ್ಪ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದ ಹಿರಿಯ ವಕೀಲ, ಮಾಜಿ ಕಾಂಗ್ರೇಸ್ ನಾಯಕ ಕೊಡಗಿನ ಬ್ರಿಜೇಶ್ ಕಾಳಪ್ಪ(Brijesh Kalappa) ಅವರು ಅರವಿಂದ ಕೇಜ್ರಿವಾಲ್(Aravind Kejrival) ಸಮ್ಮುಖ ಆಮ್ ಆದ್ಮಿ (AAP) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಸುಪ್ರೀಂ ಕೋರ್ಟ್ ವಕೀಲರಾಗಿದ್ದ ಕಾಳಪ್ಪ ಅವರು ಕಾಂಗ್ರೇಸ್ ಪಕ್ಷದಲ್ಲಿ ಹಲವು ವರ್ಷಗಳಿಂದಿದ್ದು ಇತ್ತಿಚೆಗೆ ವಕ್ತಾರರಾಗಿದ್ದರು. ಜುಲೈ ತಿಂಗಳಿನಲ್ಲಿ ಸೋನಿಯಾ ಗಾಂಧಿಗೆ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದರು.
ಪಕ್ಷದಲ್ಲಿ ನನಗೆ ಹಲವು ಅವಕಾಶಗಳನ್ನು ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. 2013 ರಿಂದ ನಾನು ರಾಷ್ಟ್ರೀಯ ಹಾಗೂ ವಿವಿಧ ಮಾಧ್ಯಮಗಳಲ್ಲಿ ಕಾಂಗ್ರೆಸ್ ವಕ್ತಾರನಾಗಿ ಪಕ್ಷವನ್ನು ಸಮರ್ಥನೆ ಮಾಡಿಕೊಂಡಿದ್ದೇನೆ. ಸುಮಾರು 6497 ಮಾಧ್ಯಮ ಚರ್ಚೆಗಳಲ್ಲಿ ಭಾಗಿಯಾಗಿದ್ದೇನೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಆದರೆ ಇತ್ತೀಚಿನ ದಿನಗಳಲ್ಲಿ ನಾನು ಈ ವಿಚಾರವಾಗಿ ನಿರಾಸಕ್ತನಾಗಿದ್ದೇನೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡುತ್ತೇನೆ. ಈ ಮೂಲಕ 1997 ರಿಂದ ಆರಂಭವಾದ ನನ್ನ ಕಾಂಗ್ರೆಸ್ ಪಕ್ಷದಲ್ಲಿನ ಪಯಣವನ್ನು ಕೊನೆಗೊಳಿಸುತ್ತೇನೆ ಎಂದು ಬ್ರಿಜೇಶ್ ಕಾಳಪ್ಪ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.
ಇದೀಗ ನಾಯಕರೊಬ್ಬರ ಸೇರ್ಪಡೆಯಾಗಿರುವುದು ಕೊಡಗಿನಲ್ಲಿ ಸೇರಿದಂತೆ ರಾಜ್ಯದಲ್ಲೇ ಆಪ್ ಗೆ ದೊಡ್ಡ ಆನೆಬಲ ಬಂದಂತಾಗಿದೆ.
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
-
ಸ್ಥಳೀಯ19 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಶಿಕ್ಷಣ24 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮವರ್ಷದ ವಿದ್ಯಾರ್ಥಿಗಳ ಹೆತ್ತವರ ಮತ್ತು ಪೋಷಕರ ಸಭೆ
-
ಶಿಕ್ಷಣ24 hours agoPhilomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ
-
ಶಿಕ್ಷಣ24 hours agoSahyadri-ಸಹ್ಯಾದ್ರಿಯು ಮೂರನೇ ಅಂತರರಾಷ್ಟ್ರೀಯ ಸಮ್ಮೇಳನ, COSMIC-2026 ಉದ್ಘಾಟನೆ















