Connect with us

ನಿಧನ ವಾರ್ತೆ

Neginahal Madiwaleshwar Seer : ಬೆಳಗಾವಿ : ನೇಗಿನಹಾಳದ ಗುರು ಮಡಿವಾಳೇಶ್ವರ ಸ್ವಾಮೀಜಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ : ಮಠಗಳಲ್ಲಿ ಲೈಂಗಿಕ ಹಗರಣದ ಬಗ್ಗೆ ಮಹಿಳೆಯರಿಬ್ಬರ ಅಡಿಯೋ ವೈರಲ್‌ ಬಳಿಕ ನೊಂದಿದ್ದ ಶ್ರೀಗಳು

Published

on



Ad Widget

Ad Widget

Ad Widget

Ad Widget

ಬೈಲಹೊಂಗಲ:  ಬೆಳಗಾವಿ  ತಾಲ್ಲೂಕಿನ  ನೇಗಿನಹಾಳದ  ಗುರು ಮಡಿವಾಳೇಶ್ವರ ಮಠ (Neginahal guru Madiwaleshwar Mutt) ದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) (Basavasiddalinga Swamiji) ಅವರ ಪಾರ್ಥೀವ ಶರೀರ ನೇಣು ಬಿಗಿದ ಸ್ಥಿತಿಯಲ್ಲಿ  ಸೋಮವಾರ  ಪತ್ತೆಯಾಗಿದೆ. ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡರೂ ಪೂರ್ಣ ತನಿಖೆಯ ನಂತರ ಸಾವಿನ ರೀತಿ ಗೊತ್ತಾಗಲಿದೆ. ಸಾವಿಗೆ ನಿಖರ ಕಾರಣ ಏನು ಎಂಬುದು ಸದ್ಯ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳ ಮೃತದೇಹ  ನೇಣು ಬಿಗಿದ ಸ್ಥಿತಿಯಲ್ಲಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಎಂದಿನಂತೆ  ಸೋಮವಾರ ಬೆಳಿಗ್ಗೆ  ಸ್ವಾಮೀಜಿಯವರ  ಸೇವಕ ಶ್ರೀಗಳನ್ನು ನಿದ್ದೆಯಿಂದ ಎಬ್ಬಿಸಲು ಹೋದರು. ಮಲಗುವ ಕೋಣೆಯ ಬಾಗಿಲಿಗೆ ಒಳಗಡೆಯಿಂದ ಚಿಲಕ ಹಾಕಲಾಗಿತ್ತು. ಎಷ್ಟು ಹೊತ್ತು ಕೂಗಿದರೂ ಸ್ವಾಮೀಜಿ ಓಗೊಡಲಿಲ್ಲ. ಬಳಿಕ ಕಿಟಕಿಯನ್ನು ತಳ್ಳಿ ಇಣುಕಿದಾಗ ಅವರು ನೇಣು ಹಾಕಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

Murugha Seer Sex scandal : ಮುರುಘಾ ಮಠದ‌ ಡಾ. ಶಿವಮೂರ್ತಿ ಸ್ವಾಮೀಜಿಯಿಂದ ಹಾಸ್ಟೇಲ್‌ ನಲ್ಲಿರುವ SSLC ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು



Ad Widget

ಆಡಿಯೋ ವೈರಲ್‌ :

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ  ಲೈಂಗಿಕ ಹಗರಣ ಹೊರ ಬಿದ್ದ ಬಳಿಕ  ಮಹಿಳೆಯರಿಬ್ಬರು ಮಾತನಾಡಿದ ಪೋನ್‌ ಸಂಭಾಷಣೆಯ ಆಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಬೆಳಗಾವಿಯ ಸತ್ಯಕ್ಕ (ತಮಿಳನಾಡ್ ಸತ್ಯಕ್ಕ ಎಂದೇ ಹೆಸರುವಾಸಿ) ಎಂಬ ಮಹಿಳೆ ಗಂಗಾವತಿಯ ಇನ್ನೊಬ್ಬ ಮಹಿಳೆಗೆ ಫೋನ್ ಮಾಡಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಅದಾಗಿತ್ತು.

Ad Widget

Ad Widget

ರಾಜ್ಯದ ಹಲವು ಸ್ವಾಮೀಜಿಗಳು ಹುಡುಗಿಯರು- ಮಹಿಳೆಯರ ಜತೆ ಲೈಂಗಿಕ ಸಂಬಂಧ ಹೊಂದಿದ್ದಾರೆ. ಇಲ್ಲಿ ತಾರೂ ಸಾಚಾ ಅಲ್ಲ” ಎಂದು ಮಹಿಳೆಯರಿಬ್ಬರು ಮಾತನಾಡಿದ ಮೊಬೈಲ್ ಆಡಿಯೊ ಈಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದರಲ್ಲಿ ಮಹಿಳೆಯರು ನೇಗಿನಹಾಳ ಸ್ವಾಮೀಜಿ ಹೆಸರನ್ನು ಸಹ ಉಲ್ಲೇಖಿಸಿ ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದರು ಎಂದು ಹೇಳಲಾಗಿದೆ.

Murgha Seer Sex Scandal : ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ- ಕಾರಾಗೃಹದ ಬಾಗಿಲು ದಾಟುವುದನ್ನು ಕಂಡು ಕಣ್ಣೀರಾದ ಅನುಯಾಯಿಗಳು

ಇದರಿಂದ ಸ್ವಾಮೀಜಿ ಆಘಾತಗೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ನಿನ್ನೆ ತಡ ರಾತ್ರಿವರೆಗೆ ಭಕ್ತರೊಂದಿಗೆ ಸಮಾಲೋಚನೆ ನಡೆಸಿದ ಸ್ವಾಮೀಜಿ, ನೀವೆಲ್ಲರೂ ನಮ್ಮನ್ನು ಸಂಶಯದಿಂದ ನೋಡುವಂತಾಗಿದೆ ಎಂದು ಹೇಳಿಕೊಂಡಿದ್ದರು ಎಂದು ಅವರ ಶಿಷ್ಯರು ಹೇಳಿದ್ದಾರೆ. ವೈರಲ್​ ಆಡಿಯೋ ಕುರಿತು ಸೂಕ್ತ ತನಿಖೆ ನಡೆಸುವಂತೆ, ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೈಲಹೊಂಗಲ ಡಿವೈಎಸ್​ಪಿ ಅವರಿಗೆ ಮಠದ ಆಡಳಿತ ಮಂಡಳಿ ದೂರು ನೀಡಿದೆ. ಲಿಂಗಾಯತ ಧರ್ಮದ ಮಠಾಧೀಶರನ್ನ ಗುರಿಯಾಗಿಸಿಕೊಂಡು ಪಟ್ಟಭದ್ರ ಹಿತಾಸಕ್ತಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ

ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಠಾಧೀಶರ ಚಾರಿತ್ರ್ಯಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಲಿಂಗಾಯತ ಧರ್ಮದವರಿಗೆ ಮುಜುಗರ ಮಾಡಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ.

Whale Vomit : ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ ಪ್ರಕರಣ : ಬಂಧಿತರು ಮಾಲು ಖರೀದಿಸಿದ್ದು ಪುತ್ತೂರಿನ ವ್ಯಕ್ತಿಯಿಂದ

ದಿಗ್ಭ್ರಮೆ :

“2007ರಲ್ಲಿ  ಬಸವಸಿದ್ಧಲಿಂಗ ಸ್ವಾಮೀಜಿ ಮಡಿವಾಳೇಶ್ವರ ಪೀಠವನ್ನು ಅಲಂಕರಿಸಿದ್ದರು. ಅವರ ಸೇವಕರು ಹಾಗೂ ಕೆಲವು ಶಿಷ್ಯರು ಕೂಡ ಮಠದಲ್ಲೇ ಇರುತ್ತಾರೆ. ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳುವಂಥ ಸಮಸ್ಯೆ ಏನಿತ್ತು ಎಂಬುದು ನಮಗೂ ಅಂದಾಜಿಸಲು ಆಗುತ್ತಿಲ್ಲ. ಪ್ರತಿ ದಿನ ಮಠದಲ್ಲಿ ಶ್ರಾವಣದ ಭಜನೆ ಮಾಡಿದ್ದೇವು. ಶ್ರೀಗಳ ಮಕ್ಕಳಂತೆ ಅವರನ್ನು ಗೌರವದಿಂದ ಕಾಣುತ್ತಿದ್ದೇವು. ಈ ವಿಷಯ ಭಕ್ತರನ್ನು ದಿಗಿಲುಗೊಳಿಸಿದೆ” ಎಂದು ಶ್ರೀಗಳ ಆಪ್ತರೊಬ್ಬರು ಪ್ರತಿಕ್ರಿಯಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ನಿಧನ ವಾರ್ತೆ

Nana Patekar-ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ

Published

on



Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಗೋವಾದ ಡೊನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಬೆಳಗಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬಳಿಕ ಬೆಳಗ್ಗೆ ಸುಮಾರು 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

Ad Widget

Ad Widget <> Ad Widget

ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ಅವರು ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯಕೀಯ ತಂಡ ಸತತ ಪ್ರಯತ್ನ ನಡೆಸಿತ್ತು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.



Ad Widget

ನಾನಾ ಪಾಟೇಕರ್ ಅವರು ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ, ಗಂಭೀರ ಸಂಭಾಷಣೆ ಶೈಲಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

Ad Widget

Ad Widget

‘ಪರಿಂದಾ’, ‘ಕ್ರಾಂತಿವೀರ’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ವೆಲ್‌ಕಮ್’ ಚಿತ್ರದ ಉದಯ್ ಶೆಟ್ಟಿ ಪಾತ್ರದ ಮೂಲಕ ಹಾಸ್ಯಪ್ರಧಾನ ಅಭಿನಯದಲ್ಲೂ ಅವರು ಪ್ರೇಕ್ಷಕರ ಮನ ಗೆದ್ದಿದ್ದರು. ಕನ್ನಡದಲ್ಲಿಯೂ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು.

ಬಹುಮುಖ ಪ್ರತಿಭೆಯ ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading