ಕ್ರೀಡೆ
Arshdeep Singh : ಭಾರತ – ಪಾಕ್ ಪಂದ್ಯದ ವೇಳೆ ಅರ್ಶದೀಪ್ ಸಿಂಗ್ ಕ್ಯಾಚ್ ಕೈ ಚೆಲ್ಲಿದ್ದನ್ನು ಬಳಸಿ ಭಾರತ ಒಡೆಯುವ ಯತ್ನಕ್ಕೆ ಪ್ರಯತ್ನಿಸಿದ ಪಾಕ್ ಹ್ಯಾಕರ್
ನವದೆಹಲಿ ಸೆ 5: ಏಷ್ಯಾಕಪ್ ನ ಮಹತ್ವದ ಪಂದ್ಯದಲ್ಲಿ (India Pakistan Match) ಕ್ರಿಕೆಟ್ ಅಂಗಣದ ಸಾಂಪ್ರದಾಯಿಕ ಎದುರಾಳಿಗಳಾದ ಬಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ನಿರಾಶೆ ಅನುಭವಿಸಿದೆ. ಈ ಮೂಲಕ ಏಷ್ಯಾಕಪ್ ಪೈನಲ್ ಗೇರುವ ಭಾರತದ ಕನಸಿಗೆ ದೊಡ್ಡ ಹೊಡೆತ ಬಿದ್ದಿದೆ. ಇದಕ್ಕೆ ಪ್ರಮುಖ ಕಾರಣ ಭಾರತದ ಉದಯೊನ್ಮುಖ ಎಡಗೈ ವೇಗದ ಬೌಲರ್ ಅರ್ಶದೀಪ್ ಸಿಂಗ್ (Arshdeep Singh) ಪಂದ್ಯದ ಅತ್ಯಂತ ನಿರ್ಣಾಯಕ ಹಂತದಲ್ಲಿ ಕ್ಯಾಚ್ ಕೈ ಚೆಲ್ಲಿರುವುದು ಆಗಿದೆ.
ಈ ಬಳಿಕ ಭಾರತದ ಆಕ್ರೋಶಿತ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅರ್ಶದೀಪ್ ಸಿಂಗ್ ಅವರನ್ನು ತೀವ್ರವಾಗಿ ಟ್ರೋಲ್ ಮಾಡಿದ್ದಾರೆ. ಹಲವಾರು ಮಿಮ್ಸ್ ಗಳು ವ್ಯಂಗ್ಯದ ಕೊರಂಬುಗಳಿಂದ ಸಾಮಾಜಿಕ ಜಾಲತಾಣದಲ್ಲಿ ತುಂಬಿ ತುಳುಕುತ್ತಿದೆ. ಆದರೇ ಇದೆ ಅವಕಾಶವನ್ನು ಬಳಸಿಕೊಂಡಿರುವ ಪಾಕಿಸ್ತಾನಿ ಹ್ಯಾಕರ್ ಒಬ್ಬ ಅರ್ಶದೀಪ್ ಅವರ ವಿಕಿಪೀಡಿಯಾ ಪೇಜ್ ಅನ್ನು ಎಡಿಟ್ ಮಾಡಿ ಅವರೊಬ್ಬ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದತ ಎಂದು ಬಿಂಬಿಸುವ ಯತ್ನ ಮಾಡಿದ್ದಾನೆ. ಈ ಮೂಲಕ ಭಾರತವನ್ನು ಒಡೆಯುವ ಕುಕೃತ್ಯಕ್ಕೆ ಪಾಕಿಸ್ತಾನ (Pakistan) ಮುಂದಾಗಿರುವುದು ಜಗಜ್ಜಾಹೀರುಗೊಂಡಿದೆ.
ಆದರೆ ಅನುಶ್ ಸಕ್ಸೇನಾ ಸೇರಿ ಭಾರತೀಯ ನೆಟ್ಟಿಗರು ಈ ಕುತಂತ್ರವನ್ನು ಬಯಲಿಗೆಳೆದಿದ್ದಾರೆ. ಪಾಕಿಸ್ತಾನದ ಈ ಹ್ಯಾಕರ್ ಅರ್ಶದೀಪ್ ಸಿಂಗ್ ವಿಕಿಪೀಡಿಯಾ ಪೇಜ್ನಲ್ಲಿ ಅರ್ಶದೀಪ್ ಖಲಿಸ್ತಾನ ಪರ ಎಂಬ ಫೇಕ್ ಅಂಶವನ್ನು ಸೇರಿಸಿದ್ದಾನೆ. ಪಾಕಿಸ್ತಾನದ ಈ ಅಪರಿಚಿತ ವಿಕಿಪೀಡಿಯಾ ಬಳಕೆದಾರ ಅರ್ಶದೀಪ್ ಸಿಂಗ್ ಪ್ರತ್ಯೇಕ ಖಲಿಸ್ಥಾನಿ ಕ್ರಿಕೆಟ್ ತಂಡದ ಪರ ಆಡುತ್ತಾರೆ ಎಂದು ಅವರ ವಿಕಿಪೀಡಿಯಾ ಪೇಜ್ ನಲ್ಲಿ ಎಡಿಟ್ ಮಾಡಿದ್ದಾನೆ.
ನಿರ್ಣಾಯಕ ಹಂತದಲ್ಲಿ ಅರ್ಶದೀಪ್ ಕ್ಯಾಚ್ ಬಿಟ್ಟಿರುವುದರಿಂದ ಆತನ ವಿರುದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಕೋಪ ಇರುತ್ತದೆ. ಇದೆ ಅವಕಾಶವನ್ನು ಬಳಸಿಕೊಂಡು ಅರ್ಶದೀಪ್ ಅವರನ್ನು ಖಲಿಸ್ತಾನ ಪರ ಎಂದು ಬಿಂಬಿಸಿ ಬಿಟ್ಟರೆ ಭಾರತೀಯರು ಇನ್ನಷ್ಟು ಕೋಪಗೊಳ್ಳುತ್ತಾರೆ. ಅ ಮೂಲಕ ಹಿಗ್ಗಾಮುಗ್ಗಾ ತರಾಟೆಗೆ ತೆಗದುಕೊಳ್ಳುತ್ತಾರೆ. ಅಲ್ಲದೇ ಸಿಖ್ ಸಮುದಾಯವನ್ನು ಖಲಿಸ್ಥಾನ ಪರ ಎಂದು ಬಿಂಬಿಸಬಹುದು ಎಂಬುದು ಪಾಕಿಸ್ತಾನದ ಪಿತೂರಿಯಾಗಿತ್ತು ಎನ್ನಲಾಗಿದೆ.
ನಿನ್ನೆ ರಾತ್ರಿಯೇ ಕೃತ್ಯ ಎಸಗಲಾಗಿದ್ದು ಈ ಬಗ್ಗೆ ಮಾಹಿತಿ ಪಡೆದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ವಿಕಿಪೀಡಿಯಾದ ಅಧಿಕಾರಿಗಳನ್ನು ಕಛೇರಿಗೆ ಕರೆಸಿ ತರಾಟಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ . ಕ್ರಿಕೆಟಿಗ ಅರ್ಶದೀಪ್ ಸಿಂಗ್ ಅವರ ವಿಕಿಪೀಡಿಯಾ ಪುಟದಲ್ಲಿ ಪ್ರತ್ಯೇಕತಾವಾದಿ ಖಲಿಸ್ತಾನಿ ಚಳವಳಿಗೆ ಲಿಂಕ್ ಮಾಡುವ ನಕಲಿ ಮಾಹಿತಿಯನ್ನು ಹೇಗೆ ಪ್ರಕಟಿಸಲಾಗಿದೆ ಎಂಬುದನ್ನು ವಿವರಿಸುವಂತೆ ಅಧಿಕಾರಿಗಳ ಬಳಿ ಅದು ಕೇಳಿದೆ. ಈ ತಪ್ಪು ಮಾಹಿತಿಯು ಕೋಮು ಸೌಹಾರ್ದತೆಯನ್ನು ಕದಡುವ ಅಪಾಯ ಹೊಂದಿದೆ. ಅಲ್ಲದೇ ಕ್ರಿಕೆಟಿಗನ ಕುಟುಂಬಕ್ಕೆ ಮಾರಕವಾಗಬಹುದು ಎಂದು ಕೇಂದ್ರವು ವಿಕಿಪೀಡಿಯಾಕ್ಕೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.
ಪ್ರಮುಖರ ಬೆಂಬಲ:
ಅರ್ಶದಿಪ್ ಖಲಿಸ್ಥಾನಿ ಎಂಬ ಸುಳ್ಳನ್ನು ಟ್ವೀಟ್ ಮಾಡಿದವರ ಪೈಕಿ ಪಾಕಿಸ್ತಾನದ ಪ್ರಮುಖರೂ ಸೇರಿದ್ದರು. ISPR ಸಹಾಯಕ ಮತ್ತು ನ್ಯೂಯಾರ್ಕ್ ನಿಕ್ಕಿ ಏಷ್ಯಾದ ಪ್ರಸ್ತುತ ಡಿಜಿಟಲ್ ಸಂಪಾದಕ W.S ಖಾನ್ ಖಲಿಸ್ಥಾನಿ ಎಂಬ ಪದವನ್ನು ಮೊದಲು ಬಳಸಿದ ಪ್ರಮುಖ ವ್ಯಕ್ತಿಯಾಗಿದ್ದ.
ಟ್ವಿಟರ್ʼನಲ್ಲೂ ಅರ್ಶದೀಪ್ ಖಲಿಸ್ಥಾನಿ ಪರ ಎಂದು ಬಿಂಬಿಸಲು ಟ್ವಿಟರ್ ಟ್ರೆಂಡ್ ಸೃಷ್ಟಿಸುವ ಪ್ರಯತ್ನ ಪಾಕಿಸ್ತಾನದಿಂದ ನಡೆದಿದೆ. . ಆಗಸ್ಟ್ 4ರಂದು ರಾತ್ರಿ 11:5 ರ ಸುಮಾರಿಗೆ “ನನ್ನ ಖಲಿಸ್ಥಾನಿ ಸಹೋದರ ಅರ್ಶದೀಪ್” ಎಂದು @7cking__Mad ಎಂಬ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಅಲ್ಲದೇ ಕ್ಯಾಚ್ ಬಿಟ್ಟ ವಿಷಯವನ್ನೇ ಇಟ್ಟುಕೊಂಡು “ಈಗ ಅರ್ಶದೀಪ್ ಖಲಿಸ್ಥಾನಿ ಎಂದು ಘೋಷಿಸಬಹುದು” ಎಂಬರ್ಥದ ಟ್ವೀಟ್ ಮಾಡಲಾಗಿತ್ತು.
ಭಾರತೀಯ ಕ್ರಿಕೆಟಿಗ ಅರ್ಶದೀಪ್ ಸಿಂಗ್ ಅವರ ವಿಕಿಪೀಡಿಯಾ ಪುಟವನ್ನು ಎಡಿಟ್ ಮಾಡಲು ಬಳಸಲಾದ ಐಪಿ ವಿಳಾಸವು ಈ ಹಿಂದೆ ಪಾಕಿಸ್ತಾನಿ ಮಿಲಿಟರಿ ಮತ್ತು ಪರ್ವೇಜ್ ಮುಷರಫ್ ಅವರ ಮಾಹಿತಿಗಳನ್ನು ಎಡಿಟ್ ಮಾಡಿದ ಐಪಿ ವಿಳಾಸವಾಗಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ಈ ಪಿತೂರಿಯ ಹಿಂದೆ ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ಇದೆ. ಐಎಸ್ ಪಿಆರ್ ಪಾಕಿಸ್ತಾನದ ಸಶಸ್ತ್ರ ಪಡೆಗಳ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗವಾಗಿದೆ.
2014 ರಲ್ಲಿ, ಇದೇ ಐಪಿಯನ್ನು ಪಾಕಿಸ್ತಾನಿ ಮಿಲಿಟರಿಯ ಬಗ್ಗೆ ವಿಮರ್ಶಾತ್ಮಕ ಉಲ್ಲೇಖಗಳನ್ನು ಹೊಂದಿದ್ದ ಯುಎಇ ವಿಕಿಪೀಡಿಯಾ ಪುಟವನ್ನು ಎಡಿಟ್ ಮಾಡಲು ಬಳಸಲಾಗಿತ್ತು. ಭಾರತೀಯ ಕ್ರಿಕೆಟಿಗ ಅರ್ಶದೀಪ್ ಸಿಂಗ್ ಅವರು ಖಲಿಸ್ಥಾನಿ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕಾಗಿ ಆಡುತ್ತಾರೆ ಎಂದು ವಿಕಿಪೀಡಿಯಾ ಪುಟದಲ್ಲಿ ಸೇರಿಸಲು ರವಿವಾರ (ಸೆಪ್ಟೆಂಬರ್ 4) ಈ ಐಪಿ ವಿಳಾಸವನ್ನು ಬಳಸಲಾಗಿದೆ.
ನಿನ್ನೆಯ ಪಂದ್ಯದಲ್ಲಿ ಪಾಕಿಸ್ತಾನದ ಇನ್ನಿಂಗ್ಸ್ ವೇಳೆ ರವಿ ಬಿಷ್ಣೋಯ್ ಎಸೆದ 18ನೇ ಓವರ್ʼನಲ್ಲಿ ಆಸೀಫ್ ಅಲಿ ಕ್ಯಾಚ್ ನೀಡಿದ್ದರು. ಅತ್ಯಂತ ಸುಲಭವಾಗಿ ಹಿಡಿಯಬಹುದಾಗಿದ್ದ ಈ ಕ್ಯಾಚ್ ಅನ್ನು ಅರ್ಷದೀಪ್ ಸಿಂಗ್ ಡ್ರಾಪ್ ಮಾಡಿದ್ದರು. ಈ ವೇಳೆ ಆಸೀಫ್ ಅಲಿ ಒಂದೇ ಒಂದು ರನ್ಗಳಿಸಿರಲಿಲ್ಲ. ಹಾಗೂ ಪಾಕಿಸ್ತಾನದ ಮುಂದೆ 18 ಎಸೆತಗಳಲ್ಲಿ 34 ರನ್ ಗಳಿಸುವ ಕಠಿಣ ಗುರಿಯಿತ್ತು.
. ಹೀಗೆ 18ನೇ ಓವರ್ನಲ್ಲಿ ಸಿಕ್ಕ ಜೀವದಾನವನ್ನು ಬಳಸಿಕೊಂಡ ಆಸೀಫ್ ಅಲಿ 8 ಎಸೆತಗಳಲ್ಲಿ 1 ಸಿಕ್ಸ್ ಮತ್ತು 2 ಫೋರ್ನೊಂದಿಗೆ 16 ರನ್ ಬಾರಿಸುವ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.ಪರಿಣಾಮ ಕೊನೆಯ ಓವರ್ನಲ್ಲಿ ಪಾಕ್ ತಂಡಕ್ಕೆ ಗೆಲ್ಲಲು 7 ರನ್ಗಳ ಸುಲಭ ಗುರಿ ಸಿಕ್ಕಿತು. ಅಂದರೆ ಅಂತಿಮ ಹಂತದಲ್ಲಿ ಕ್ಯಾಚ್ ಕೈಚೆಲ್ಲುವ ಮೂಲಕ ಟೀಮ್ ಇಂಡಿಯಾ ಪಂದ್ಯವನ್ನೇ ಕೈಚೆಲ್ಲಿತ್ತು.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
-
ಸ್ಥಳೀಯ15 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ8 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಬಿಗ್ ನ್ಯೂಸ್15 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಮಂಗಳೂರು9 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್10 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು10 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ9 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ17 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















