ಅಪರಾಧ
Thieves Gang Arrested : ಮಂಗಳೂರು : ಮಹಿಳೆಯರ ಚಿನ್ನಾಭರಣ ದೋಚುತ್ತಿದ್ದ ಗ್ಯಾಂಗ್ ಸಿಸಿಬಿ ಬಲೆಗೆ – ಪುತ್ತೂರಿನ ವ್ಯಕ್ತಿಯ ಸಹಿತ ಮೂವರ ಬಂಧನ
ಮಂಗಳೂರು Mangalore ಆ 6 : ನಗರದ ವಿವಿದೆಡೆ ಮಹಿಳೆಯರ ಕತ್ತಿನಿಂದ ಸರ ದೋಚುತ್ತಿದ್ದ ಗ್ಯಾಂಗ್ ವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಬಲೆಗೆ ಕೆಡವಿದ್ದಾರೆ. ಒಟ್ಟು ಮೂವರನ್ನು ಪೊಲೀಸರು ಬಂಧಿಸಿದ್ದು ಕದ್ದ ಮಾಲು ಸಹಿತ ಒಟ್ಟು 5 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶ ಪಡೆದಿದ್ದಾರೆ. ಈ ಮೂವರು ಖತರ್ನಾಕ್ ಕಳ್ಳರು ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಮಂಗಳೂರಿನಲ್ಲಿ (mangalore) ಕೃತ್ಯ ಎಸಗಿರುವುದು ಪತ್ತೆಯಾಗಿದೆ
ಮಂಗಳೂರಿನ ಮೂಡುಶೆಡ್ಡೆ ಬಳಿಯ ಪಿಳಿಕುಲ ನಿಸರ್ಗಧಾಮ ನಗರದ ಬಳಿ ನಿವಾಸಿ ಜಗದೀಶ್ ಶೆಟ್ಟಿ (39 ವರ್ಷ) ಮಂಗಳೂರು ಉರ್ವ ಸ್ಟೋರ್ ನ ಪಿ ಡಬ್ಲ್ಯೂಡಿ ಕ್ವಾರ್ಟರ್ಸ್ ಬಳಿಯ ಸುಜಿತ್ ಶೆಟ್ಟಿ (40 ವರ್ಷ) ಹಾಗೂ ಪುತ್ತೂರು ತಾಲೂಕು ಪಾಲ್ತಾಡಿ ಗ್ರಾಮದ ಅಂಕತಡ್ಕ ಮನೆ ನಿವಾಸಿ ಪ್ರಸ್ತುತ ಮಂಗಳೂರಿನ ಕೊಂಚಾಡಿ, ಪದವಿನಂಗಡಿ ಬಳಿ ನಿವಾಸಿ ಸುರೇಶ್ ರೈ (39 ವರ್ಷ) ಬಂಧಿತರು.
ಆರೋಪಿಗಳ ಪೈಕಿ ಜಗದೀಶ್ ನು ರಿಕ್ಷಾ ಚಾಲಕನಾಗಿದ್ದು, ಸುಜಿತ್ ಶೆಟ್ಟಿ ಪೈನಾನ್ಸ್ ವ್ಯವಹಾರ ನಡೆಸುತ್ತಿದ್ದು, ಸುರೇಶ್ ರೈ ಟೆಂಪೋ ಚಾಲಕನಾಗಿರುತ್ತಾನೆ. ಸುಜಿತ್ ಶೆಟ್ಟಿ ಎಂಬಾತ ಮಂಗಳೂರಿನಲ್ಲಿ 2002 ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯಾಗಿರುತ್ತಾನೆ.
ಬಂಧಿತರಿಂದ ಸುಲಿಗೆ ಮಾಡಿದ ಸುಮಾರು 90 ಗ್ರಾಂ ತೂಕದ ಚಿನ್ನಾಭರಣಗಳನ್ನು, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಗಳನ್ನು ಒಟ್ಟು 5 ಲಕ್ಷ ಮೌಲ್ಯ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆಗಸ್ಟ್ ತಿಂಗಳಿನಲ್ಲಿ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಸರ ಸುಲಿಗೆ ಪ್ರಕರಣ ಮತ್ತು ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು.

ಆ 14 ರಂದು ಮಂಗಳೂರು ಕದ್ರಿ ಆಳ್ವಾರಿಸ್ ರಸ್ತೆಯಲ್ಲಿ ಪುಣೆ ಮೂಲದ ಮಹಿಳೆಯ ಸರ ಕಳ್ಳತನವಾಗಿತ್ತು . ಕುಲಶೇಖರ ಎವರೆಸ್ಟ್ ಪ್ಲಾಸ್ಟಿಕ್ ಪ್ಯಾಕ್ಟರಿಯ ರಸ್ತೆಯಲ್ಲಿ ಆ 24 ರಂದು ಮಹಿಳೆಯ ಸರ ಸುಲಿಗೆ ನಡೆದ ಬಗ್ಗೆ ಕದ್ರಿ ಠಾಣೆ ಪ್ರಕರಣ ದಾಖಲಾಗಿತ್ತು. ಅದರ ಮರು ದಿನ ಶಕ್ತಿನಗರದ ರಾಜೀವ ನಗರದ ದಲ್ಲಿ ಮಹಿಳೆ ಸರ ದೋಚಿದ ಬಗ್ಗೆ ಮಂಗಳೂರು ನಗರ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಮತ್ತು ಸಿಸಿಬಿ ಅಧಿಕಾರಿ ಹಾಗೂ ಸಿಬ್ಬಂದಿಯವರು ಆರೋಪಿಗಳನ್ನು ಬಂಧಿಸಿದ್ದಾರೆ. 3 ಜನ ಆರೋಪಿಗಳು ಮಂಗಳೂರಿನ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಿಧ್ದ ವೇಳೆ ಖಚಿತ ಮಾಹಿತಿಯ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
-
Uncategorized14 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು11 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ಬಿಗ್ ನ್ಯೂಸ್8 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ನಿಧನ ವಾರ್ತೆ12 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ13 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
Uncategorized12 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ12 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್13 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















