Connect with us

ಬಿಗ್ ನ್ಯೂಸ್

ಪತ್ರಕರ್ತರ ಸಂಘದಲ್ಲಿ ಅವ್ಯವಹಾರ ಆರೋಪದ ಹಿಂದೆ ʼಲೋಕಲ್ ಪತ್ರಿಕೆಯʼ ಕುತಂತ್ರ ʼಬುದ್ದಿʼ – ಕೋತಿ ಬೆಣ್ಣೆಯನ್ನು ತಿಂದು ಮೇಕೆ ಮೂತಿಗೆ ಒರಸಿದಂತೆ ಈ ಆರೋಪ : ಅವಹೇಳನಕಾರಿ ಬರಹಕ್ಕೆ ಕಟು ಶಬ್ಧಗಳಿಂದ ಪತ್ರಕರ್ತರ ಸಂಘದ ಖಂಡನೆ

Published

on

Ad Widget

Ad Widget

Ad Widget

Ad Widget

ಪುತ್ತೂರು Puttur ಆ 6 :  ಅತ್ಯಂತ ಶಿಸ್ತಿನ ಹಾಗು ಕಳಂಕ ರಹಿತ ಪತ್ರಕರ್ತರ ಸಂಘ (Press Club) ಎಂದು ರಾಜ್ಯದಲ್ಲೆ ಪ್ರಖ್ಯಾತಿಯನ್ನು ಪಡೆದಿರುವ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಪ್ರತಿಷ್ಠೆಗೆ ಮಸಿ ಬಳಿಯುವ ಕಾರ್ಯವನ್ನು ಪುತ್ತೂರಿನ ಲೋಕಲ್‌ ಪತ್ರಿಕೆ ಕೆಲವೊಂದು ಪತ್ರಕರ್ತರ ನೆರವಿನಿಂದ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ದಿನ ಬೆಳಗಾದರೆ ಪೀತ ಪತ್ರಿಕೆಗಳಿಗಿಂತಲೂ ಕಳಪೆ ಭಾಷೆಯಲ್ಲಿ ನಂಜು ಕಾರುವ ವರದಿಯನ್ನು ಈ ಪತ್ರಿಕೆ ಪ್ರಕಟಿಸುತ್ತಿರುವುದರ ವಿರುದ್ದ ಪುತ್ತೂರು ಪತ್ರಕರ್ತರ ಸಂಘ ಸಿಡಿದೆದ್ದಿದೆ. ಇಂದು (ಸೆ 6) ಪತ್ರಿಕಾಭವನದಲ್ಲಿ (Puttur Press Club) ಸಭೆ ಸೇರಿದ ಸಂಘದ ಸದಸ್ಯರು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಹಿಂಬಾಗಿಲಿನ ಮೂಲಕ ಕುತಂತ್ರ ನಡೆಸುತ್ತಿರುವ ಸ್ಥಳೀಯ ಪತ್ರಿಕೆಯು ಇಂದು ಕೂಡ ತನ್ನ ಮುಖಪುಟದಲ್ಲಿ ಗೌರವನ್ವಿತ ಪತ್ರಕರ್ತರ ಭಾವಚಿತ್ರ ಪ್ರಕಟಿಸಿ  ಸಂಘದ ಹಣ ಗುಳುಂ ಮಾಡಲಾಗಿದೆ ಎಂಬ ಯಾವುದೇ ಅಧಾರಗಳಿಲ್ಲದೆ, ಸಂಘದ ಸಭೆಯಲ್ಲಿ ಮಂಡನೆಯಾಗದ ಕಪೋಲ ಕಲ್ಪಿತ ವರದಿಯೊಂದನ್ನು ಉಲ್ಲೇಖಿಸಿ, ʼಸುದ್ದಿ ಬಿಡುಗಡೆʼ ಮಾಡಲಾಗಿದೆ.   ಇದನ್ನು ಅತ್ಯಂತ ಕಠಿಣ ಶಬ್ಧಗಳಿಂದ ಸಭೆಯಲ್ಲಿದ್ದ ಸಂಘದ ಸದಸ್ಯರು ಖಂಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಪ್ರಕಟನೆಯಲ್ಲಿ ಏನಿದೆ ?

ಪುತ್ತೂರು ಪತ್ರಕರ್ತರ ಸಂಘವು ಸ್ಥಳೀಯ ಪತ್ರಕರ್ತರ ಶ್ರೆಯೋಭಿವೃದ್ದಿಗೆ ನಿರಂತರವಾಗಿ ಶ್ರಮಿಸುತ, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಜಿಲ್ಲೆಯಲ್ಲಿ ಉತ್ತಮ ಸಂಘವಾಗಿ ರೂಪುಗೊಂಡಿದೆ. ಇದನ್ನು ಸಹಿಸದ ಕೆಲ ಮಂದಿ ಸಂಘವನ್ನು ಮುಗಿಸುವ ಹುನ್ನಾರ ನಡೆಸಿದ್ದಾರೆ. ಸಂಘವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಯಸಿರುವ ಈ ಷಡ್ಯಂತ್ರಿಗಳು, ಉಪ್ಪಿನಂಗಡಿ ಭಾಗದ ವರದಿಗಾರರನ್ನು ಪ್ರಚೋಧಿಸಿ ಅವರಿಂದ ಇಲ್ಲಸಲ್ಲದ ಆರೋಪಗಳನ್ನು ಇಲ್ಲಿನ ಪತ್ರಕರ್ತರ ಮೇಲೆ ಮಾಡಿಸಿ ತೇಜೋವಧೆ ಮಾಡಿಸುತ್ತಿದೆ. ಪರಿಶೀಲನೆಗೆಂದು ನೀಡಲಾಗಿದ್ದ ಲೆಕ್ಕಪತ್ರವನ್ನು ಸಂಘದ ಸದಸ್ಯರಲ್ಲದ ಸ್ಥಳೀಯ ಪತ್ರಿಕೆಗೆ ಸೋರಿಕೆ ಮಾಡಿರುವುದೇ ದುರುದ್ದೇಶ ಹೊಂದಿರುವುದಕ್ಕೆ ಸಾಕ್ಷಿ.

Ad Widget

Ad Widget <> Ad Widget

ಪುತ್ತೂರು ಪತ್ರಕರ್ತರ ಸಂಘದ ಪದಾಧಿಕಾರಿಗಳ, ಸದಸ್ಯರ ಮೇಲೆ ಇನ್ನಿಲ್ಲದ, ಸಾಕ್ಷ್ಯಾಧಾರಗಳಿಲ್ಲದ ಆರೋಪಗಳನ್ನು ಮಾಡಲಾಗುತ್ತಿದ್ದು, ಇದು ಕೋತಿ ಬೆಣ್ಣೆಯನ್ನು ತಿಂದು ಮೇಕೆ ಮೂತಿಗೆ ಒರಸಿದಂತೆ ಎಂದು ಪುತ್ತೂರು ಪತ್ರಕರ್ತರ ಸಂಘ ಆರೋಪಿಸಿದೆ.

ಇದನ್ನು ಓದಿ : Big Shocking : ಪುತ್ತೂರು : ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ. ಯು.ಪಿ ಶಿವಾನಂದರಿಂದ ಮಹಿಳೆಯ ಮಾನಹಾನಿ

Ad Widget

Ad Widget

ಸಂಶಯವಿದ್ದರೆ ಸಂಪರ್ಕಿಸಿ

ಈ ಸಂಬಂಧ ಪ್ರಕಟನೆ ಹೊರಡಿಸಿರುವ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಹಿರಿಯ ಪತ್ರಕರ್ತ ಐ.ಬಿ.ಸಂದೀಪ್ ಕುಮಾರ್, “ಸಂಘದಲ್ಲಿ ಪಾರದರ್ಶಕ ರೀತಿ ಆಡಳಿತ ನಡೆಸಲಾಗುತ್ತಿದೆ. ಸಂಶಯವಿದ್ದವರು ಖಂಡಿತವಾಗಿ ಪ್ರೆಸ್ ಕ್ಲಬ್ ಅನ್ನು ಸಂಪರ್ಕಿಸಬಹುದು. ಸಂಘದ ಚುನಾವಣೆಯನ್ನು ಮುಂದೂಡುವ ಹಿಂದೆಯೂ ಸ್ಥಳೀಯ ಪತ್ರಿಕೆಯ ಕೈವಾಡವಿದೆ. ಆಗಸ್ಟ್ 6 ರಂದು ಸಂಘದ ಚುನಾವಣೆಗೆ ದಿನ ನಿಗದಿಗೊಳಿಸಲಾಗಿತ್ತು. ಜುಲೈ 15 ರಂದು ನಾಮಪತ್ರ ಸಲ್ಲಿಸುವುದೆಂದು ತಿರ್ಮಾನಿಸಿ ನಿರ್ಣಯಿಸಲಾಗಿತ್ತು ಎಂದು ವಿವರಿಸಿದ್ದಾರೆ.

ಆದರೆ ಚುನಾವಣಾಧಿಕಾರಿಯಾಗಿ ಆಯ್ಕೆಯಾಗಿದ್ದ ಪತ್ರಕರ್ತ ದಿ.ಗೋಪಾಲ ನಾಯ್ಕ್ ಅವರ ಪುತ್ರ ಸುಧಾಕರ್ ಪಡೀಲ್ (53) ಎಂಬವರು ಚುನಾವಣೆಯನ್ನು ಮುಂದೂಡಿದ್ದಾರೆ. ಸದಸ್ಯರೋರ್ವರು ಮೌಕಿಕವಾಗಿ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಸ್ಥಳೀಯ ಪತ್ರಿಕೆಗೆ ಅವರು ಮಾಹಿತಿ ನೀಡಿರುವುದಾಗಿ ಆ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ಸುದ್ದಿ ಬಿಡುಗಡೆಯ ಶಿವಾನಂದ ಹಾಗೂ ಸಹಚರರು ಕ್ರಿಮಿನಲ್‌ ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಸಲ್ಲಿಸಿದ ಅರ್ಜಿ ವಜಾ – ತೀವ್ರ ಮುಖಭಂಗ

ವರದಿಯಲ್ಲಿರುವ ದಿನ ಹಾಗೂ ಅಂಟಿಸಿದ ದಿನ ಬೇರೆ ಬೇರೆ

ಆದರೆ ಚುನಾವಣೆ ಮುಂದೂಡಿದ ಬಗ್ಗೆ ಪುತ್ತೂರು ಪತ್ರಕರ್ತರ ಸಂಘದ ಸದಸ್ಯರ ಗಮನಕ್ಕೆ ತಂದಿರಲಿಲ್ಲ ಹಾಗೂ ಸಂಘದ ಕಛೇರಿಯಲ್ಲಿ ಚುನಾವಣೆ ಮುಂದೂಡಿರುವುದರ ಬಗ್ಗೆ ಕನಿಷ್ಟ ನೋಟೀಸ್ ಕೂಡಾ ಹಾಕಿಲ್ಲ. ಅಲ್ಲದೇ ಅದೇ ಲೋಕಲ್ ಪತ್ರಿಕೆಯಲ್ಲಿ ಚುನಾವಣೆ ಮುಂದೂಡಿದ ಬಗ್ಗೆ ಚುನಾವಣಾಧಿಕಾರಿ ಸುಧಾಕರ್ ಪಡೀಲ್ ಪತ್ರಿಕಾಭವನದ ಕಛೇರಿಯಲ್ಲಿ ಜುಲೈ 16 ರಂದು ನೋಟೀಸ್ ಅಂಟಿಸುತ್ತಿರುವುದು ಎನ್ನುವ ಪೋಟೋವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಆದರೆ ವಾಸ್ತವವಾಗಿ ಈ ನೋಟೀಸ್ ಅನ್ನು ಜುಲೈ 22 ರಂದು ಪತ್ರಿಕಾಭವನದ ಕಛೇರಿಯಲ್ಲಿ ಚುನಾವಣಾ ಅಧಿಕಾರಿ ಸುಧಾಕರ್ ಪಡೀಲ್ ಅಂಟಿಸುತ್ತಿರುವ ವಿಡಿಯೋ ಸಹಿತ ಎಲ್ಲಾ ದಾಖಲೆಗಳು ಲಭ್ಯವಿದೆ. ಹೀಗಾಗಿ ಪತ್ರಕರ್ತರ ಸಂಘದಲ್ಲಿ ಅವ್ಯವಹಾರ ಎನ್ನುವ ಕಪೋಲಕಲ್ಪಿತ ವರದಿಯ ಹಿಂದಿರುವ ಶಕ್ತಿ ಯಾವುದು ಎನ್ನುವುದು ಸಾಮಾನ್ಯ ಜ್ಞಾನವಿಲ್ಲದವರಿಗೂ ತಿಳಿಯುವ ಮಾಹಿತಿಯಾಗಿದೆ.

ಸಾಕ್ಷಿ ಹೇಳಿದಕ್ಕೆ ತೇಜೋವಧೆ

ಈ ಹಿಂದೆ ಪುತ್ತೂರಿನಲ್ಲಿ ಯುವ ಭಾರತ್ ತಂಡ ಮತ್ತು ಇದೇ ಪತ್ರಿಕೆಯ ಸಿಬಂದಿಗಳ ನಡುವೆ ನಡೆದ ಸಂಘರ್ಷ ಕ್ಕೆ ಸಂಬಂಧಿಸಿದ ಕೇಸು ನ್ಯಾಯಾಲಯ ವಿಚಾರಣಾ ಹಂತದಲ್ಲಿದೆ. ಪತ್ರಿಕಾಗೋಷ್ಠಿಗೆ ಆಗಮಿಸಿದವರ ವಿರುದ್ಧ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯ ಸಾಕ್ಷಿ ನುಡಿದ ಸಾಕ್ಷಿದಾರ ಪತ್ರಕರ್ತರನ್ನು ಗುರಿಯಾಗಿಸಿಕೊಂಡು ಸಂಘದ ತೇಜೋವಧೆ ಮಾಡುವ ಪ್ರಯತ್ನಗಳಾಗುತ್ತಿದೆ. ಸಂಘದ ಅಧ್ಯಕ್ಷರೇ ಇದರಲ್ಲಿ ಸೇರಿಕೊಂಡಿರುವುದು ವಿಶೇಷವಾಗಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!