Connect with us

ಮಂಗಳೂರು

Praveen Nettar ಪ್ರವೀಣ್ ಹತ್ಯೆಯನ್ನು NIAಗೆ ವಹಿಸಿರುವುದರ ಹಿಂದೆ ದೊಡ್ಡ ಮಟ್ಟದ ಪಿತೂರಿ ಇದೆ- ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಕೆಲಸ ಬಿಜೆಪಿ ಮಾಡಿದೆ : ಪಾಪ್ಯುಲರ್‌ ಫ್ರಂಟ್‌ ಆಪ್‌ ಇಂಡಿಯಾ

Published

on

Ad Widget

Ad Widget

Ad Widget

Ad Widget

ಮಂಗಳೂರು Mangalore ಸೆ 7 : ಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆ ಬಳಿಕ ಆಕ್ರೋಶಿತಗೊಂಡಿರುವ ಬಿಜೆಪಿ ಕಾರ್ಯಕರ್ತರ ಕೋಪ ಶಮನ ಮಾಡುವ ಉದ್ದೇಶದಿಂದ ಎನ್ ಐಎ (NIA) ಮೂಲಕ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ( PFI) ಮುಖಂಡರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ. ಈ ಮೂಲಕ ಬಿಜೆಪಿ ಎನ್ ಐಎ ಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ (Popular Front Of India ) ಆರೋಪಿಸಿದೆ.‌

Ad Widget

Ad Widget

Ad Widget

Ad Widget

ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ಧೇಶಿಸಿ ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ. ಕೆ . ಅಶ್ರಫ್ ಮಾತನಾಡಿದರು. ಪ್ರವೀಣ್ ನೆಟ್ಟಾರ್ ಹತ್ಯೆಯ ತನಿಖೆ ನಡೆಸುತ್ತಿರುವ ಎಣ್ ಐಎ ಅಧಿಕಾರಿಗಳು ಸೆ 6 ರಂದು ದಕ್ಷಿಣ ಕನ್ನಡ ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಶೋಧ ಕಾರ್ಯಚರಣೆ ನಡೆಸಿದ್ದು ಒಟ್ಟು 33 ಕಡೆ ದಾಳಿ ನಡೆಸಿದ್ದರು. ಇದರಲ್ಲಿ ಹೆಚ್ಚಿನವು ಪಿಎಫ್ ಐ ಸಂಘಟನೆಯ ಮುಖಂಡರುಗಳಾದ್ದಾಗಿತ್ತು. ಈ ಹಿನ್ನಲೆಯಲ್ಲಿ ಪಿಎಫೈ ಪತ್ರಿಕಾಗೋಷ್ಟಿ ನಡೆಸಿತು.

Ad Widget

Ad Widget alt="Ad Widget"/>

Ad Widget

ನಿನ್ನೆ ದಾಳಿ ನಡೆದ ಮನೆಗಳಲ್ಲಿ ಕೆಲವು ಮಾತ್ರ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ಮನೆಗಳಾಗಿದ್ದು, ಉಳಿದ ಮುಸ್ಲಿಂ ಸಮುದಾಯದವರ ಮನೆಗಳಿಗೆ ದಾಳಿ ಮಾಡಲಾಗಿದೆ. ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾವನ್ನು ಮುಂದಿಟ್ಟುಕೊಂಡು ಇಡಿ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ . ಈ ಮೂಲಕ ಬಿಜೆಪಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯುತ್ತಿದೆ. ಪ್ರವೀಣ್ ಹತ್ಯೆಯ ಬಳಿಕ ಬಿಜೆಪಿ ಕಾರ್ಯಕರ್ತರು ಒಕ್ಷದ ರಾಜ್ಯಾಧ್ಯಕ್ಷರ ಹಾಗೂ ಇತರ ಬಿಜೆಪಿ ನಾಯಕರ ಮೇಲೆ ಆಕ್ರೋಶಿತರಾಗಿದ್ದಾರೆ. ಮುಂಬರುವ ಚುನಾವಣೆಯ ಹಿನ್ನಲೆಯಲ್ಲಿ, ಈ ಕಾರ್ಯಕರ್ತರ ಕೋಪವನ್ನು ಶಮನ ಮಾಡುವ ಉದ್ದೇಶದಿಂದ ಎನ್ ಐಎ ದಾಳಿ ನಡೆಸುತ್ತಿದೆ.

Ad Widget

Ad Widget <> Ad Widget

Redmi 11 Prime 5G ಸ್ಮಾರ್ಟ್‌ ಫೋನ್‌ ಭಾರತದಲ್ಲಿ ಬಿಡುಗಡೆ – ಇಲ್ಲಿದೆ ಬೆಲೆ ಹಾಗೂ ಇತರ ಸಂಪೂರ್ಣ ವಿವರ

ರಾಜ್ಯದಲ್ಲಿ ನಡೆದ ಸರಣಿ ಕೊಲೆ ಪ್ರಕರಣದ ತನಿಖೆಯಲ್ಲಿ ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಮಸೂದ್ ಹಾಗು ಫಾಝಿಲ್ ಹತ್ಯೆ ಪ್ರಕರಣವನ್ನು ಎನ್ ಐ ಎ ಗೆ ಯಾಕೆ ವಹಿಸಿಲ್ಲ? ಬೆಳಗಾವಿಯ ಅರ್ಬಾಝ್, ಸಮೀರ್ ಶಹಾಪೂರ, ಹತ್ಯೆ ಪ್ರಕರಣ ಯಾಕೆ ಎನ್ ಐ ಎ ಗೆ ನೀಡಿಲ್ಲ? ಈ ಪ್ರಕರಣದಲ್ಲಿ ಸಂಘಪರಿವಾರದ ಕಾರ್ಯಕರ್ತರು ನೇರವಾಗಿ ಶಾಮೀಲಾಗಿದ್ದಾರೆ. ಹೀಗಾಗಿ ಅದರ ತನಿಖೆಯನ್ನು NIAಗೆ ವಹಿಸಿಲ್ಲ ಎಂದಿರುವ ಅವರು ಬಿಜೆಪಿ ನೇತೃತ್ವದ ಸರಕಾರ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

Ad Widget

Ad Widget

Praveen Nettar : ಪ್ರವೀಣ್ ನೆಟ್ಟಾರ್ ಹತ್ಯೆ : ಆರೋಪಿಗಳೆಲ್ಲರು ಪಿಎಫೈಯ ಸಕ್ರಿಯ ಕಾರ್ಯಕರ್ತರು – ಹತ್ಯೆಯ ಕಾರಣ ಬಯಲು ಮಾಡಿದ ಎನ್ಐಎ

ಪಿ ಎಫ್ ಐ ಹೆಸರನ್ನು ಮುಂದಿಟ್ಟು ಮುಸ್ಲಿಂ ಸಮುದಾಯವನ್ನು ಗುರಿಪಡಿಸಲಾಗುತ್ತಿದೆ. ಪಿಎಫ್ ಐ ವಿರುದ್ಧ ನಿರಂತರವಾಗಿ ವ್ಯಾಪಕ ಅಪಪ್ರಚಾರ ನಡೆಸಲಾಗುತ್ತಿದೆ. ಮಂಗಳವಾರ 30ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ನಮ್ಮ ತಾಲೂಕು ಘಟಕದ ಕೆಲ ನಾಯಕರ ಮನೆಗಳಿಗೆ ದಾಳಿ ನಡೆಸಿ ಕೆಲ ಶಸ್ತ್ರಾಸ್ತ್ರಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಎನ್ಐಎ ಹೇಳಿದೆ. ಶಸ್ತ್ರಾಸ್ತ್ರಗಳನ್ನು ಬೆಂಗಳೂರಿನಿಂದ ತಂದಿದ್ದಾರಾ? ದೆಹಲಿಯಿಂದ ತಂದಿದ್ದಾರಾ ಎಂಬುದನ್ನು ಎನ್ಐಎ ಹೇಳಬೇಕು ಎಂದರು.

Tabu Bold Statement : ಮಕ್ಕಳಾಗಬೇಕಾದರೇ ಮದುವೆಯಾಗಬೇಕೆಂದಿಲ್ಲ…! ನಾನು ಮದುವೆಯಾಗದೆ ಗರ್ಭಿಣಿ ಆಗುತ್ತೇನೆ : ಖ್ಯಾತ ಬಾಲಿವುಡ್‌ ನಟಿಯ ಬೋಲ್ಡ್‌ ಸ್ಟೇಟ್‌‌ಮೆಂಟ್

ತನಿಖೆ ಎನ್ ಐ ಎ ಗೆ ವಹಿಸಿರುವುದರ ಹಿಂದೆ ದೊಡ್ಡ ಮಟ್ಟದ ಪಿತೂರಿ ಅಡಗಿದೆ. ವಿಧಾನಸಭಾ ಚುನಾವಣೆ ಮುಂದಿಟ್ಟು ಈ ಕೆಲಸ ಮಾಡಲಾಗಿದೆ. ಬಿಜೆಪಿ ಸರ್ಕಾರ ವೈಫಲ್ಯತೆ ಮುಚ್ಚಿ ಹಾಕಲು ಈ ಕೆಲಸ ಮಾಡಿದೆ. ಬಿಜೆಪಿ ತನ್ನ ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಕರಣವನ್ನು ಎನ್ಐಎಗೆ ವಹಿಸಿದೆ ಎಂದರು.

Praveen Nettar : ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ : ಬೆಳ್ಳಾರೆಯ ಎಸ್‌ಡಿಪಿಐ ಹಾಗೂ ಪಿಎಫೈ ಸಂಘಟನೆಯ ಮುಖಂಡರುಗಳ ಮನೆ ಸೇರಿದಂತೆ ಹಲವೆಡೆ NIA ದಾಳಿ

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!