Connect with us

ಅಪರಾಧ

Praveen Nettar ಪ್ರವೀಣ್‌ ನೆಟ್ಟಾರ್‌ ಹತ್ಯೆಗೆ ಪುತ್ತೂರಿನ ಹಾಲ್‌ ನಲ್ಲಿ ತರಬೇತಿ ಶಂಕೆ – ಇಷ್ಟು ಸಮಯ ಯಾಕೇ ಹಾಕಿಲ್ಲ ಇದಕ್ಕೆ ಅಂಕೆ…!

Published

on



Ad Widget

Ad Widget

Ad Widget

Ad Widget

ಪುತ್ತೂರು : ಸೆ 7 :  ಸಂಚಲನ ಮೂಡಿಸಿದ್ದ ಪ್ರವೀಣ್‌ ನೆಟ್ಟಾರ್‌ (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಂಗಳ ಹಿಂದೆ  10 ಮಂದಿ ಆರೋಪಿಗಳನ್ನು ರಾಜ್ಯ  ಪೊಲೀಸರು (Karnataka Police) ಬಂಧಿಸಿದ್ದರು.  ಆದರೇ ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬ ಅನುಮಾನ ಮೊದಲಿನಿಂದಲೂ ಇದ್ದು ಅದು ಇನ್ನಷ್ಟು ಬಲಗೊಂಡಿದೆ.  ಸೆ 6 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ 3 ಜಿಲ್ಲೆಗಳ 33 ಕಡೆ ಎನ್‌ ಐಎ (NIA) ಶೋಧ ನಡೆಸಿತ್ತು. ಈ ವೇಳೆ ಬಂಧಿತ ಆರೋಪಿಗಳ ಮನೆಯೂ ಸೇರಿದಂತೆ ಇತರ ಕೆಲವು ಶಂಕಿತರ ಮನೆಗಳ ಮೇಲೂ ದಾಳಿ (NIA Raid) ನಡೆಸಲಾಗಿದೆ. ಹೀಗಾಗಿ ಈ ಹತ್ಯಾ ಪಿತೂರಿಯಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಬಲಗೊಂಡಿದೆ.

Ad Widget

Ad Widget

Ad Widget

Ad Widget

ಹಂತಕರಿಗೆ ಪುತ್ತೂರಿನ ಹೊರವಲಯದ ಹಾಲ್‌ ವೊಂದರಲ್ಲಿ ತರಭೇತಿ ನೀಡಲಾಗಿತ್ತು ಎಂಬ ಸಂಶಯವು ಮೂಡಿದೆ. ಪ್ರವೀಣ್‌ ಹತ್ಯೆ ಬಳಿಕದಿಂದಲೇ ಈ ಹಾಲ್‌  ಪೊಲೀಸರ ರಾಡಾರ್‌ ನಲ್ಲಿತ್ತು. ನಿನ್ನೆ ಎನ್‌ ಐಎ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿ  ಶೋಧ ನಡೆಸಿರುವುದು ಪುಸ್ತಕ ಕರಪತ್ರ ಗ್ರಂಥ ಸಹಿತ ಹಲವು ದಾಖಲೆಗಳನ್ನು ವಶಪಡಿಸಿರುವುದು ಈ ಅನುಮಾನಗಳಿಗೆ ಇನ್ನಷ್ಟು ಪುಷ್ಟಿ ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget
ಯುವಕರ ಬ್ರೈನ್‌ ವಾಶ್‌

ಈ ಹಾಲ್‌ ನಲ್ಲಿ ಯುವಕರ ಬ್ರೈನ್‌ ವಾಶ್‌ ಮಾಡಲಾಗುತಿತ್ತು ಎಂಬ ಆರೋಪಗಳಿವೆ. ಯುವಕರನ್ನು ಇಲ್ಲಿಗೆ ಕರೆ ತರುವ ಮೊದಲು ಅವರನ್ನು ಮಾನಸಿಕವಾಗಿ ಕೆರಳಿಸುವ ಕೆಲಸವನ್ನು ಸಾಮಾಜಿಕ ಜಾಲತಾಣದ ಮೂಲಕ ಮಾಡಲಾಗುತ್ತದೆ ಎನ್ನಲಾಗಿದೆ ಮೂಲಗಳ ಪ್ರಕಾರ  ಇವರ ಕಾರ್ಯ ಶೈಲಿಯು (Mode Of Operendi) ಬಹಳ ವಿಭಿನ್ನವಾಗಿದ್ದು ಗೌಪ್ಯವಾಗಿ ಬಹಳಷ್ಟು  ಜಾಗರೂಕತೆಯಿಂದ ಈ ತಂಡ  ಕಾರ್ಯ ನಿರ್ವಹಿಸುತ್ತದೆ. ಕೆಲ ವಿದ್ಯಮಾನಗಳಿಂದ ಕೆರಳಿರುವ ಯುವಕರನ್ನು ತಂಡವೊಂದು ಮೊದಲು ಗುರುತಿಸುತ್ತದೆ. ಬಳಿಕ ಅವರನ್ನು ಇಂತಹುದೇ ಯುವಕರಿರುವ ವಾಟ್ಸಾಪ್‌ ಹಾಗೂ ಟೆಲಿಗ್ರಾಮ್‌ ಗ್ರೂಪ್‌ ಗೆ ಸೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

Praveen Nettar : ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ : ಬೆಳ್ಳಾರೆಯ ಎಸ್‌ಡಿಪಿಐ ಹಾಗೂ ಪಿಎಫೈ ಸಂಘಟನೆಯ ಮುಖಂಡರುಗಳ ಮನೆ ಸೇರಿದಂತೆ ಹಲವೆಡೆ NIA ದಾಳಿ



Ad Widget

 ಅಲ್ಲಿ ನಿರಂತರವಾಗಿ ಕೊಮು ದ್ವೇಷ ಕೆರಳಿಸುವ ಹಾಗೂ  ಪ್ರಚೋಧನಕಾರಿ  ಸಂದೇಶಗಳನ್ನು ಹಾಕಿ ಅವರನ್ನು ಇನ್ನಷ್ಟು ಪ್ರಚೋಧಿಸಲಾಗುತ್ತದೆ ಈ ಮೂಲಕ ಸಮುದಾಯವೊಂದರ ವಿರುದ್ದ ತೀವ್ರವಾಗಿ ದ್ವೇಷ ಕೆರಳುವಂತೆ ಮಾಡಲಾಗುತ್ತದೆ . ಇದು  ಅವರ ಕಾರ್ಯ ಶೈಲಿ  ಎನ್ನುತ್ತಾರೆ ನಿವೃತ್ತ ಪೊಲೀಸ್‌ ಅಧಿಕಾರಿಗಳು.

Ad Widget

Ad Widget

 ಅದರಲ್ಲಿ ಆಯ್ದ ಕೆಲವರನ್ನು ಈ ಹಾಲ್‌ ಗೆ ಕರೆಸಿ ಇನ್ನಷ್ಟು ಬ್ರೈನ್‌ ವಾಶ್‌ ಮಾಡಲಾಗುತ್ತದೆ.  ಸಮುದಾಯದ ಏಳಿಗೆಗೆ ಇಳಿದು ಬಂದಿರುವ ಕ್ರೂಸೆಡರ್‌ ಗಳು ನೀವು ಎಂಬ ಭಾವ ಯುವಕರಲ್ಲಿ ಮೂಡುವಂತೆ ಮಾಡಿ ಅವರನ್ನು ಯಾವುದೇ ಕೃತ್ಯ ಎಸಗಲು ಸಿದ್ದರಿರುವಂತೆ ತಯಾರು ಮಾಡಲಾಗುತ್ತದೆ.  ಹೀಗೆ ಬೇರೆ ಬೇರೆ ಸಮಯದಲ್ಲಿ ಬೇರೆ ಬೇರೆ ಯುವಕರನ್ನು ತರಿಸಿ ತರಭೇತಿ ನೀಡುತ್ತಾರೆ ಎನ್ನಲಾಗುತ್ತಿದೆ. ಬಳಿಕ ಸಂದರ್ಭ ಬಂದಾಗ ಇವರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿತ್ತು ಎಂದು ಹೇಳಲಾಗುತ್ತಿದೆ.

ಪ್ರವೀಣ್‌ ಹತ್ಯೆಯಲ್ಲೂ ಇಲ್ಲಿ ತರಭೇತಿ ಪಡೆದ ಕೆಲ ಯುವಕರಿದ್ದರು ಎನ್ನುವ ಅಸ್ಪಷ್ಟ ಮಾಹಿತಿ ಇಲಾಖೆಯ ಬಳಿ ಇದೆ ಎನ್ನಲಾಗುತ್ತಿದೆ. ಒಬ್ಬರಿಗೊಬ್ಬರು ಪರಿಚಿತರಲ್ಲದ್ದ ಈ ಯುವಕರು ಮೇಲಿನವರ ಇಷಾರೆಯಂತೆ  ಬಂದು ಕೃತ್ಯ ಎಸಗಿ ಹೋಗಿದ್ದರು ಎನ್ನಲಾಗುತ್ತಿದ್ದು ಹೀಗಾಗಿಯೇ ಪ್ರಕರಣದ ತನಿಖೆ ಲಂಭಿಸಲು ಹಾಗೂ ಜಟಿಲಗೊಳ್ಳಲು ಕಾರಣ ಎಂದು ಮೂಲಗಳಿಂದ ತಿಳಿದು ಬಂದಿದೆ. ಆದರೇ ಹತ್ಯೆಯ ಪ್ರಮುಖ ಎಲ್ಲ  ಆರೋಪಿಗಳಿಗೂ ಈ ಹಾಲ್‌ ಗೂ ಲಿಂಕ್‌ ಇರುವುದು ತನಿಖೆಯ ವೇಳೆ ಬೆಳಕಿಗೆ ಬಂದ ಹಿನ್ನಲೆಯಲ್ಲಿ NIA ಅಲ್ಲಿಗೆ ದಾಳಿ ನಡೆಸಿದೆ ಎನ್ನುವ ಮಾಹಿತಿಗಳು ಹರಿದಾಡುತ್ತಿದೆ.

  Praveen Nettar : ಪ್ರವೀಣ್ ನೆಟ್ಟಾರ್ ಹತ್ಯೆ : ಆರೋಪಿಗಳೆಲ್ಲರು ಪಿಎಫೈಯ ಸಕ್ರಿಯ ಕಾರ್ಯಕರ್ತರು – ಹತ್ಯೆಯ ಕಾರಣ ಬಯಲು ಮಾಡಿದ ಎನ್ಐಎ

ಗ್ರಾಮಸ್ಥರಿಗೆ ಅನುಮಾನ

ಈ ಹಾಲ್‌ ನ ಬಗ್ಗೆ ಗ್ರಾಮಸ್ಥರಿಗೆ ಮೊದಲಿನಿಂದಲೂ ಅನುಮಾನಗಳಿದ್ದವು. ಈ ಬಗ್ಗೆ ಹಲವು ಬಾರಿ ಗ್ರಾಮಸ್ಥರು ಸಂಬಂಧಪಟ್ಟವರಿಗೆ ತಿಳಿಸುವ ಕಾರ್ಯ ಮಾಡುತ್ತಿದ್ದರು. ಹಾಗಾಗಿಯೂ  ಪ್ರತಿ ವರ್ಷ ಈ ಹಾಲ್‌ ನ ರಿನಿವಲ್‌ ಆ ಹಾಲ್‌ ಇರುವ  ಗ್ರಾ. ಪಂ ನಲ್ಲಿ ಆಗುತಿತ್ತು. ಇದು ಹೇಗೆ ಎನ್ನುವ ಅನುಮಾನ ಹಿಂದೂ ಕಾರ್ಯಕರ್ತರನ್ನು ಈಗ ಕಾಡುತ್ತಿದೆ.

ಹಿಂದೂ ಮುಖಂಡರದು ಅದೇ ಅಭಿಪ್ರಾಯ

 ನಿನ್ನೆ ಮಾಧ್ಯಮವೊಂದರ ಜತೆ ಮಾತನಾಡಿದ ಜಿಲ್ಲೆಯ ಹಿರಿಯ ಹಿಂದೂ ಮುಖಂಡರೊಬ್ಬರು “ ಇದರಲ್ಲಿ ಅಕ್ರಮ ವ್ಯವಹಾರ ನಡೆಯುತ್ತಿರುವ ಬಗ್ಗೆ ಮೊದಲಿನಿಂದಲೂ ನಮ್ಮ ಗಮನಕ್ಕೆ ಬಂದಿತ್ತು. ಇದರೊಳಗಡೆ ಹೋಗಲು ಪೊಲೀಸರಿಗೂ ಅಷ್ಟು ಸುಲಭವಿರಲಿಲ್ಲ. ಐದು ವರ್ಷಗಳ ಹಿಂದೆ ಜಿಲ್ಲೆಯ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಈ ಹಾಲ್‌ ನೊಳಗೆ ನುಗ್ಗಿ ಮೂವರನ್ನು ಬಂಧಿಸಿದ್ದರು ಎಂದು ಹೇಳಿದ್ದರು.

ಹಾಗಾದರೇ ಇಷ್ಟೆಲ್ಲಾ ಅನುಮಾನಕ್ಕೆ ಕಾರಣವಾಗಿದ್ದ ಈ ಹಾಲ್‌ ಅನ್ನು ಗ್ರಾ. ಪಂ ಯಾಕೇ ಬಂದ್‌ ಮಾಡಿಸಿಲ್ಲ. ಬಂದ್‌ ಮಾಡಿಸುತ್ತಿದ್ದರೇ ಪ್ರವೀಣ್‌ ಪ್ರಾಣವಾದರೂ ಉಳಿಯುತಿತ್ತು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.   

Ad Widget
Click to comment

Leave a Reply

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.



Ad Widget

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.

ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget
Continue Reading

ಅಪರಾಧ

Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ

Published

on



Ad Widget

Ad Widget

Ad Widget

Ad Widget

ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.

Ad Widget

Ad Widget <> Ad Widget

ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.



Ad Widget

ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್‌ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.

Ad Widget

Ad Widget

ತೋಟದ ಕೆಲಸಗಾರರ ಕೊರತೆಯನ್ನು ಬಳಸಿಕೊಂಡು ಇಂತಹ ರೀತಿಯಲ್ಲಿ ಕೃಷಿಕರನ್ನು ವಂಚಿಸುವ ಸಾಧ್ಯತೆಯಿದ್ದು, ಇದೇ ವ್ಯಕ್ತಿ ಇತರ ಕೃಷಿಕರನ್ನೂ ಸಂಪರ್ಕಿಸಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಅಪರಿಚಿತ ವ್ಯಕ್ತಿಗಳ ಮಾತನ್ನು ನಂಬಿ ಹಣ ನೀಡುವ ಮುನ್ನ ಕೃಷಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading