ಪುತ್ತೂರು
AAP protest | ಅಪಘಾತಕ್ಕೆ ಕಾರಣವಾದ ಪುತ್ತೂರಿನ ರಸ್ತೆ ಗುಂಡಿಗಳಿಗೆ ಬಾಳೆ ಗಿಡ ನೆಟ್ಟು ಪ್ರತಿಭಟನೆ ಮಾಡಿದ ಆಮ್ ಆದ್ಮಿ ಪಕ್ಷ | ನಗರಸಭೆ ನೀರಿನ ಮೇಲೆಯೇ ಹಾಕಲು ಕಳುಹಿಸಿದ ಜಲ್ಲಿ ಮಿಕ್ಸನ್ನು ಕಳಪೆ ಎಂದು ಹಿಂದಿರುಗಿಸಿದ ಆಪ್ ಪ್ರತಿಭಟನಾಕಾರರು
ಪುತ್ತೂರು ಸೆ.9 : ಹಲವು ಅಪಘಾತಕ್ಕೆ ಕಾರಣವಾದ ಪುತ್ತೂರಿನ ಎಪಿಎಂಸಿ ರಸ್ತೆ ಗುಂಡಿಗಳಿಗೆ ಬಾಳೆ ಗಿಡ ನೆಟ್ಟು ಆಮ್ ಆಧ್ಮಿ ಪಕ್ಷ (AAP protest) ಪ್ರತಿಭಟನೆ ಮಾಡಿದೆ. ಆ ಸಂದರ್ಭ ನಗರಸಭೆ ಗುಂಡಿಯ ನೀರಿನ ಮೇಲೆಯೇ ಹಾಕಲು ಕಳುಹಿಸಿಕೊಟ್ಟ ಕಳಪೆ ಜಲ್ಲಿ ಮಿಕ್ಸ್ ಎಂದು ಆಪ್ ಪ್ರತಿಭಟನಾಕಾರರು ಹಿಂದಕ್ಕೆ ಕಳುಹಿಸಿದ ಘಟನೆಯೂ ನಡೆಯಿತು.
ಪುತ್ತೂರಿನ ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ಹಲವು ವರ್ಷಗಳಿಂದ ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗುತ್ತವೆ. ಅದರಲ್ಲಿ ಹಲವು ಧ್ವಿಚಕ್ರ ವಾಹನಗಳು ಅಪಘಾತಗಳು ಆಗಿ ಗಂಭೀರ ಹಲವರು ಗಾಯಗೊಂಡಿದ್ದಾರೆ. ನಗರಸಭೆ ಆ ರಸ್ತೆ ತನ್ನದಲ್ಲ ಎಪಿಎಂಸಿ ರಸ್ತೆ ಎಂದರೆ ಎಪಿಎಂಸಿ ಇದು ನಗರಸಭೆ ರಸ್ತೆ ಎನ್ನುತ್ತಾರೆ ಎಂದು ಆಪ್ ಮುಖಂಡ ಪುರುಷೋತ್ತಮ ಗೌಡ ಕೋಲ್ಪೆ ಹೇಳಿದರು.
ಬೆಳಿಗ್ಗೆ ಮಸಿದಿಗೆ ಬರುವಾಗ ಇದೆ ಗುಂಡಿಯಲ್ಲಿ ಬಿದ್ದು ಒಬ್ಬರು ಗಂಭೀರ ಗಾಯಗೊಂಡಿದ್ದರು, ರಾತ್ರಿ ದಿನಂಪ್ರತಿ ಅಪಘಾತ ಆಗುತ್ತಲೇ ಇರುತ್ತದೆ ಎಂದು ಪ್ರತ್ಯಕ್ಷದರ್ಶಿ ಒಬ್ಬರು ಇದೇ ಸಂದರ್ಭ ಮಾತನಾಡಿದರು.
ಪುತ್ತೂರು ವಿಧಾನಸಭಾ ಕ್ಷೇತ್ರದ ಆಮ್ ಆಧ್ಮಿ ಪಕ್ಷದ ಅಧ್ಯಕ್ಷ ಡಾ. ವಿಶು ಕುಮಾರ್ ಮಾತನಾಡಿ , ರಸ್ತೆ ಗುಂಡಿಗಳಲ್ಲಿ ದಿನ ಜನಪ್ರತಿನಿಧಿಗಳು, ಅಧಿಕಾರಿಗಳು ಹೋಗುತ್ತಿದ್ದರೂ ಕಾಣದವರಾಗೆ ಮಾಡುತ್ತಾರೆ , ಆಪ್ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ನಡೆಸಲಿದೆ ಎಂದರು.
ಅದೇ ಸಂದರ್ಭದಲ್ಲಿ ನಗರಸಭೆ ವತಿಯಿಂದ ಈ ಗುಂಡಿಗಳಿಗೆ ಹಾಕಲು ಕಳುಹಿಸಿಕೊಟ್ಟ ಜಲ್ಲಿ ಮಿಕ್ಸನ್ನು ಆಪ್ ಮುಖಂಡರು ಪ್ರತಿಭಟನಾಕಾರರು ಹಿಂದಕ್ಕೆ ಕಳುಹಿಸಿದ ಘಟನೆ ನಡೆಯಿತು. ಆಪ್ ಮುಖಂಡ ಜನಾರ್ದನ ಬಂಗೇರ ಆ ಸಂದರ್ಭದಲ್ಲಿ ಮಾತನಾಡಿ , ನೀರು ಮೇಲೆಯೇ ಕಳಪೆ ಜಲ್ಲಿ ಹುಡಿ ಹಾಕಲು ಅದು ನಮ್ಮ ಟ್ಯಾಕ್ಸ್ ದುಡ್ಡಲ್ಲಿ ಹಾಕೋದು, ಇಂಜನಿಯರ್ ನಿಂತು ಶಾಶ್ವತವಾಗಿ ಗುಂಡಿ ಮುಚ್ಚಿ ಎಂದು ಜಲ್ಲಿ ಹುಡಿ ಹಾಕಲು ಬಂದ ಗುತ್ತಿಗೆದಾರನ ವಾಸಸ್ ಕಳುಹಿಸಿದ ಘಟನೆ ನಡೆಯಿತು.
ಪುತ್ತೂರು ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಸಮೀಪ ಇದ್ದ ಗುಂಡಿಗೂ ಆಮ್ ಆದ್ಮಿ ಪಕ್ಷದವರು ಬಾಳೆ ಗಿಡ ನಾಟಿ ಮಾಡಿದರು. ಆ ನಂತರ ಮಾತನಾಡಿದ ಪುರುಷೋತ್ತಮ್, ಪುತ್ತೂರು ಶಾಸಕರು ದಿನ ಅದೇ ರಸ್ತೆಯಲ್ಲಿ ಹೋಗ್ತಾರೆ. ಅವರು ಇಲ್ಲಿಗೆ ತಲುಪುವಾಗ ನಿದ್ದೆ ಮಾಡುತ್ತಾರೆ ಅವರ ಹೊಸ ಕಾರಿಗೆ ಈ ಗುಂಡಿ ಗೊತ್ತಾಗದಿರಬಹುದು, ಆದರೆ ಇಲ್ಲಿ ಹೋಗುವ ಜನಸಾಮಾನ್ಯರ, ರೋಗಿಗಳ ಪಾಡೇನು ಎಂದು ಪ್ರಶ್ನಿಸಿದರು. ಈ ಸರ್ಕಾರ ಪರ್ಸೆಂಟೇಜ್ ಸರ್ಕಾರ ಎಂದ ಪ್ರತಿಭಟನಾಕಾರರು, ಈ ರಸ್ತೆಯೂ ಪರ್ಸಂಟೇಜ್ ಕಾಮಗಾರಿ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಪುತ್ತೂರು ತಾಲೂಕಿನ ಆಪ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
SDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್‌ಡಿಪಿಐ ಅಸಮಾಧಾನ
ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.

ಪುತ್ತೂರು: ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.
ಬಾಲವನದ ಹಲವು ಆಟೋಟದ ಉಪಕರಣಗಳು ದುರಸ್ತಿಗೊಳಗಾಗದೆ ಬಳಕೆಗೆ ಅಯೋಗ್ಯವಾಗಿವೆ. ಆವರಣದ ನಿರ್ವಹಣೆಯೂ ಸಮರ್ಪಕವಾಗಿಲ್ಲ. ಹಲವು ವರ್ಷಗಳಿಂದ ಇದೇ ಸ್ಥಿತಿ ಮುಂದುವರಿದಿದ್ದರೂ, ಬಾಲವನದ ಅಭಿವೃದ್ಧಿಗೆ ಸಂಬಂಧಪಟ್ಟವರು ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ದೂರಿದೆ.

ಈ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯ ತಂಡವು ಬಾಲವನಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿತು. ಬಾಲವನದ ದುರಸ್ತಿ ಮತ್ತು ಅಭಿವೃದ್ಧಿಗೆ ಜನಪ್ರತಿನಿಧಿಗಳು ಈ ಹಿಂದೆ ಹಲವು ಬಾರಿ ಭರವಸೆ ನೀಡಿದ್ದರೂ, ನಿರೀಕ್ಷಿತ ಮಟ್ಟದ ಕಾಮಗಾರಿಗಳು ನಡೆದಿಲ್ಲ ಎಂದು ಸಮಿತಿ ತಿಳಿಸಿದೆ.
ಬಾಲವನವು ಪುತ್ತೂರಿನ ಪ್ರಮುಖ ಪ್ರವಾಸಿ ತಾಣವಾಗಿದ್ದು, ಮಕ್ಕಳಿಗೆ ಮನರಂಜನೆ ಹಾಗೂ ಪ್ರಕೃತಿಯ ನಡುವೆ ಸಮಯ ಕಳೆಯಲು ಅನುಕೂಲವಾಗುವ ಸ್ಥಳವಾಗಿದೆ. ಹೀಗಾಗಿ, ಹದಗೆಟ್ಟಿರುವ ಆಟೋಟದ ಉಪಕರಣಗಳನ್ನು ತಕ್ಷಣ ದುರಸ್ತಿಗೊಳಿಸಿ, ಬಾಲವನದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.

ಡಾ. ಶಿವರಾಮ ಕಾರಂತರ ನಿವಾಸ ಹಾಗೂ ಬಾಲವನದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಅದರ ಸಂರಕ್ಷಣೆ ಹಾಗೂ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ.
ನಿಯೋಗದಲ್ಲಿ ನಗರ ಸಮಿತಿ ಉಪಾಧ್ಯಕ್ಷ ಶಮೀರ್ ನಾಜೂಕ್, ಕಾರ್ಯದರ್ಶಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿ ಹರ್ಷದ್ ಹುಸೇನ್, ಸಮಿತಿ ಸದಸ್ಯ ಅಶ್ರಫ್ ಪರ್ಲಡ್ಕ, ಗೋಳಿಕಟ್ಟೆ ಬ್ರಾಂಚ್ ಅಧ್ಯಕ್ಷ ಇಶಾನ್, ಆರೀಫ್ ಮತ್ತಿತ್ತರರು ಇದ್ದರು
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ24 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ


















