Connect with us

ಬಿಗ್ ನ್ಯೂಸ್

ರೈತರ ಪಾಲಿನ ಸಂಜೀವಿನಿ ಕಿಸಾನ್ ಕ್ರೆಡಿಟ್ ಕಾರ್ಡ್ : ಅರ್ಹತೆ, ವಿಶೇಷತೆ ಹಾಗೂ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ

Published

on

Ad Widget

Ad Widget

Ad Widget

Ad Widget

ರೈತನ ಬದುಕು ಸಂಕಷ್ಟಗಳ ಸರಮಾಲೆ. ವರ್ಷವಿಡಿ ಆತ ಬಹಳ ಎಚ್ಚರಿಕೆಯಿಂದ ರಕ್ಷಿಸಿದ ಬೆಳೆಗಳು ಇನ್ನೆನೊ ಆತನ ಕೈಗೆ ಬರಬೇಕು ಎನ್ನುವಷ್ಟರಲ್ಲಿ ಅದಕ್ಕೆ ನಾನಾ ಎಡರು ತೊಡರು, ಅವಘಡಗಳು ಬಂದು ಎರಗುತ್ತವೆ.

Ad Widget

Ad Widget

Ad Widget

Ad Widget

ಪ್ರಾಕೃತಿಕ ವಿಕೋಪಗಳ ಪಾಲು ಇವುಗಳಲ್ಲಿ ದೊಡ್ಡ ಪಾಲಾದರೇ, ಪ್ರಾಣಿ ಪಕ್ಷಿಗಳಿಂದ ಹಾನಿ, ಕೀಟ ಬಾಧೆ, ರೋಗ ಭಾಧೆ ಇತ್ಯಾದಿಗಳ ಕಾಟವು ರೈತನನ್ನು ಹೈರಾಣು ಮಾಡುತ್ತದೆ. ಇದರಿಂದ ಬರಬೇಕಾದಷ್ಟು ಆದಾಯ ಕೈಗೆ ಬರದೇ ರೈತ ಕಂಗಾಲಾಗುವುದು ದೇಶದಲ್ಲಿ ಕಂಡು ಬರುವ ಸರ್ವೆ ಸಾಮಾನ್ಯ ದೃಶ್ಯ .

Ad Widget

Ad Widget alt="Ad Widget"/>

Ad Widget

ಇಂಥ ಸಂದರ್ಭಗಳಲ್ಲಿ ಉಂಟಾದ ನಷ್ಟ ಭರಿಸಲು ರೈತರು ಸಾಲ ಪಡೆಯೋದು ಅನಿವಾರ್ಯ. ಬಹುತೇಕ ಸಂದರ್ಭಗಳಲ್ಲಿ ಹೆಚ್ಚಿನ ಬಡ್ಡಿದರಕ್ಕೆ ಸಾಲ ಪಡೆಯಲೇಬೇಕಾದಂತಹ ಪರಿಸ್ಥಿತಿ ರೈತರದ್ದು.
ಎಷ್ಟೋ ರೈತರು ಬಡ್ಡಿಯ ಹೊರೆಯಿಂದ ಸಾಲ ತೀರಿಸಲಾಗದಂತಹ ಪರಿಸ್ಥಿತಿಗೆ ಸಿಲುಕಿರುತ್ತಾರೆ.

Ad Widget

Ad Widget <> Ad Widget

ರೈತರ ಈ ತೊಳಲಾಟವನ್ನು ಅರ್ಥ ಮಾಡಿಕೊಂಡಿರುವ ಕೇಂದ್ರ ಸರ್ಕಾರ ಮಹತ್ವಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಅದುವೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ

ರೈತರಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ಉದ್ದೇಶದಿಂದ ಇದನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯಡಿ ರೈತರು ಗರಿಷ್ಠ 3ಲಕ್ಷ ರೂ. ತನಕ ಸಾಲ ಪಡೆಯಬಹುದು.

Ad Widget

Ad Widget

ಇದರಡಿ ಪಡೆದ ಸಾಲದ ಹಣವನ್ನು ರೈತ ಕೃಷಿಗೆ ಸಂಬಂಧಿಸಿದ ಸಾಮಗ್ರಿಗಳು ಅಂದರೆ ಬೀಜ, ಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಹಾಗೂ ಇತರ ವೆಚ್ಚಗಳಿಗೆ ಬಳಸಬಹುದು. ಈ ಕಾರ್ಡ್ ಪಡೆಯ ಬಯಸುವ ರೈತರು ಸೇರಿದಂತೆ ಗ್ರಾಮೀಣ ಪ್ರದೇಶದ ಗ್ರಾಹಕರು ತಮ್ಮ ಜಮೀನಿನ ಮಾಲೀಕತ್ವದ ದಾಖಲೆಗಳೊಂದಿಗೆ ಬ್ಯಾಂಕಿನ ಶಾಖೆಗೆ ಭೇಟಿ ನೀಡಬೇಕು. ಸಾಲಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅದರ ವಿಲೇವಾರಿಗೆ 2-4 ವಾರಗಳು ಬೇಕಾಗುತ್ತವೆ.

SBI Recruitment 2022 : ಎಸ್‌ ಬಿಐ ಬ್ಯಾಂಕ್‌ʼನಲ್ಲಿ 5,000ಕ್ಕೂ ಹೆಚ್ಚು ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ – ವಿದ್ಯಾರ್ಹತೆ ವಯೋಮಿತಿ ಹಾಗೂ ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

ಅರ್ಹತೆ :

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಸಂಬಂಧಿಸಿ ಆರ್ ಬಿಐ ಹೊರಡಿಸಿರುವ ಸುತ್ತೋಲೆ ಪ್ರಕಾರ ರೈತರು (ವೈಯಕ್ತಿಕ/ಜಂಟಿ ಸಾಲಗಾರರು), ಹಿಡುವಳಿ ರೈತರು, ಮೌಖಿಕ ಗೇಣಿದಾರರು ಹಾಗೂ ಪಾಲು ಬೆಳೆಗಾರರು, ರೈತರ ಸ್ವಸಹಾಯ ಗುಂಪುಗಳು ಕೂಡ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿದ್ದಾರೆ.

ವಿಶೇಷತೆ

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ರೈತರು 1.60ಲಕ್ಷ ರೂ.ನಿಂದ 3ಲಕ್ಷ ರೂ. ತನಕ ಸಾಲ ಪಡೆಯಬಹುದು.
*ಸಾಲ ಪಡೆದವರಿಗೆ ಅಪಘಾತ ವಿಮೆ ಹಾಗೂ ಆರೋಗ್ಯ ವಿಮೆ ಸೌಲಭ್ಯವಿದೆ. ಅಪಘಾತದಿಂದ ಅಂಗವೈಕಲ್ಯ ಅಥವಾ ಮೃತ್ಯುವಾದರೆ 50,000ರೂ. ಹಾಗೂ ಇತರ ಸಂದರ್ಭಗಳಲ್ಲಿ 25,000ರೂ. ವಿಮೆ ಸೌಲಭ್ಯವಿದೆ.
*ಬ್ಯಾಂಕಿನಿಂದ ನಗದು ವಿತ್ ಡ್ರಾಗೆ ಪಾಸ್ ಬುಕ್ ನೀಡಲಾಗುತ್ತದೆ.

25,000ರೂ. ನಗದು ಮಿತಿಯೊಂದಿಗೆ ಚೆಕ್ ಬುಕ್ ವಿತರಿಸಲಾಗುತ್ತದೆ.
*ರುಪೇ ಕ್ರೆಡಿಟ್ ಕಾರ್ಡ್ ಕೂಡ ನೀಡಲಾಗುತ್ತದೆ.
*ಸಾಲದ ಹಣದಲ್ಲಿ ರೈತರು ಬೀಜಗಳು, ರಾಸಾಯನಿಕಗಳು ಹಾಗೂ ಕೃಷಿ
ಖರೀದಿಸಬಹುದು.
*ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಕ್ರೆಡಿಟ್ ಮಿತಿ ಹೆಚ್ಚಳ ಮಾಡಲಾಗುತ್ತದೆ.
*ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಬಡ್ಡಿದರಗಳ ಮೇಲೆ ಸಬ್ಸಿಡಿ ಕೂಡ ನೀಡಲಾಗುತ್ತದೆ.
*ಸಾಲ ಮೂರು ವರ್ಷಗಳ ಅವಧಿಗೆ ಲಭ್ಯವಿದೆ.

Maruti Suzuki : ನವರಾತ್ರಿ, ದೀಪಾವಳಿ ಹಬ್ಬಕ್ಕೂ ಮುಂಚೆ ಮೆಗಾ ಡಿಸ್ಕೌಂಟ್‌ ಘೋಷಿಸಿದ ಮಾರುತಿ ಸುಜುಕಿ – ಯಾವ ಕಾರಿಗೆ ಎಷ್ಟು ಡಿಸ್ಕೌಂಟ್‌ ? ಇಲ್ಲಿದೆ ವಿವರ   

ಅಗತ್ಯ ದಾಖಲೆಗಳು :

*ಸಹಿ ಹೊಂದಿರುವ ಸಾಲದ ಮನವಿ ಪತ್ರ
*ಗುರುತು ದೃಢೀಕರಣಕ್ಕೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಚೀಟಿ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳಲ್ಲಿ ಯಾವುದಾದರೂ ಒಂದು.
*ವಿಳಾಸ ದೃಢೀಕರಣಕ್ಕೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರ ಚೀಟಿ ಇತ್ಯಾದಿ.
*ನಿಮ್ಮ ಪಾಸ್ ಪೋರ್ಟ್ ಗಾತ್ರದ ಫೋಟೋ
*ಸಾಲ ನೀಡುವಿಕೆಗೆ ಸಂಬಂಧಿಸಿ ಬ್ಯಾಂಕ್ ಕೋರಿರುವ ಇತರ ಅಗತ್ಯ ದಾಖಲೆಗಳು.

ಆನ್ ಲೈನ್ ಮೂಲಕ ಅರ್ಜಿ :

ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಆನ್ ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು. ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದರೆ ಯೋನೋ ಅಪ್ಲಿಕೇಷನ್ ಮೂಲಕ ಅಥವಾ. ಎಸ್ ಬಿಐ ಯೋನೋ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು.

Ananya Pande : ಲೈಗರ್‌ ಸೋಲಿಗೆ ತಲೆಕೆಡಿಸಕೊಳ್ಳದೆ ಇಟೆಲಿ ಪ್ರವಾಸ ಕೈಗೊಂಡು ಐಸ್ ಲ್ಯಾಂಡ್ ನಲ್ಲಿ ವಿಹಾರಿಸಿದ ನಟಿ ಅನನ್ಯಪಾಂಡೆ – ಪೋಟೊಗಳು ಸಕ್ಕತ್‌ ವೈರಲ್‌

Ad Widget
Click to comment

Leave a Reply

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!