Connect with us

ರಾಜಕೀಯ

Bharat Jodo | ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 150 ದಿನ 3570 ಕಿಮೀ ‘ಭಾರತ್ ಜೋಡೋ ಯಾತ್ರೆ’ – ರಾಜಕೀಯ ಇತಿಹಾಸದಲ್ಲೇ ಅತೀ ದೊಡ್ಡ ಪಾದಯಾತ್ರೆ ಎಂದ ಕಾಂಗ್ರೇಸ್‍ – ರಾಹುಲ್ ಸಹಿತ ನಾಯಕರೆಲ್ಲ ಕಂಟೈನರ್ ನಲ್ಲೇ ವಾಸ

Published

on

Ad Widget

Ad Widget

Ad Widget

Ad Widget

ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಂಗ್ರೇಸ್‍ ನಾಯಕ ಆರಂಭಿಸಿರುವ ‘ಭಾರತ್ ಜೋಡೋ ಯಾತ್ರೆ’ (Bharat Jodo) 4 ದಿನಕ್ಕೆ ಕಾಲಿಟ್ಟಿದ್ದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 150 ದಿನ 3570 ಕಿಮಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul gandhi) ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಬೆಲೆಏರಿಕೆ, ಕೋಮು ಗಲಾಬೆ ,ಉದ್ಯೋಗ ನಷ್ಟ, ಜಿಎಸ್ಟಿ ಸಂಕಷ್ಟ, ಧರ್ಮ ದ್ವೇಷ, ಭ್ರಷ್ಟಾಚಾರ, ಭಾಷಾವಾರು ದಾಳಿಯ ವಿರುದ್ದ ಭಾರತವನ್ನು ಒಗ್ಗೂಡಿಸಲು ಈ ಹೋರಾಟ ಹಮ್ಮಿಕೊಳ್ಳಲಾಗಿದೆ. 3,500 ಕಿಲೋಮೀಟರ್ ಉದ್ದದ ಈ ಭಾರತ್ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಕಳೆದ 1 ಶತಮಾನದಲ್ಲಿ ದೇಶದಲ್ಲಿ ನಡೆದ ಅತಿ ಉದ್ದದ ಪಾದಯಾತ್ರೆ ಎಂದು ಕರೆದಿದೆ.

Ad Widget

Ad Widget alt="Ad Widget"/>

Ad Widget

12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕವರ್ ಮಾಡಲು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಪ್ರತಿದಿನ 6-7 ಗಂಟೆಗಳ ಕಾಲ ನಡೆಯಲಿದ್ದಾರೆ. ಇದರಲ್ಲಿ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 150 ದಿನಗಳ ಕಾಲ 3,570 ಕಿ.ಮೀ ಪ್ರಯಾಣವನ್ನು ಪ್ರಾರಂಭಿಸಲಿದ್ದಾರೆ.

Ad Widget

Ad Widget <> Ad Widget

ಪಕ್ಷವು ರಾಷ್ಟ್ರವ್ಯಾಪಿ ಯಾತ್ರೆಯನ್ನು ಪ್ರಾರಂಭಿಸುತ್ತಿದ್ದಂತೆ, ರಾಹುಲ್ ಗಾಂಧಿ ಅವರ ವಸತಿ ಮತ್ತು ಪ್ರವಾಸದ ಬಗ್ಗೆ ಕೆಲವು ಸಂಬಂಧಿತ ಪ್ರಶ್ನೆಗಳು ಉದ್ಭವಿಸಿದ್ದು, ಅವರು ಯಾವುದೇ ಹೋಟೆಲ್ನಲ್ಲಿ ಉಳಿಯುವುದಿಲ್ಲ ಆದರೆ ಇಡೀ ಪ್ರಯಾಣವನ್ನು ಸರಳ ರೀತಿಯಲ್ಲಿ ಪೂರ್ಣಗೊಳಿಸುತ್ತಾರೆ ಎಂದು ಪಕ್ಷ ಸ್ಪಷ್ಟಪಡಿಸಿದೆ.

ಶಾಂತಿ ಮತ್ತು ಕೋಮು ಸೌಹಾರ್ದತೆಯ ಸಂದೇಶದೊಂದಿಗೆ ಕಾಂಗ್ರೆಸ್ ಪಡೆ ಪ್ರತಿದಿನ 25 ಕಿಲೋಮೀಟರ್ ಸಂಚರಿಸಲಿದೆ

Ad Widget

Ad Widget

ರಾಹುಲ್ ಗಾಂಧಿ ಅವರ ತಂದೆ, ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರು ಮೇ 21, 1991 ರಂದು ತಮಿಳುನಾಡಿನಲ್ಲಿ ಸಾರ್ವತ್ರಿಕ ಚುನಾವಣೆಗಾಗಿ ಪ್ರಚಾರ ಮಾಡುವಾಗ ಹತ್ಯೆಗೀಡಾದರು. ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಕಾರ್ಯಕರ್ತ ತೆನ್ಮೋಳಿ ರಾಜರತ್ನಂ ನಡೆಸಿದ ಆತ್ಮಹುತಿ ದಾಳಿಯಲ್ಲಿ ರಾಜೀವ್ ಗಾಂಧಿ ಅವರ ಸುತ್ತಲಿನ 14 ಜನರು ಸಾವನ್ನಪ್ಪಿದ್ದರು.

ಜಿ.ಕೆ.ಮೂಪನಾರ್ ಅವರೊಂದಿಗೆ ರಾಜೀವ್ ಗಾಂಧಿ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಪ್ರಚಾರ ನಡೆಸಿ ತಮಿಳುನಾಡಿನ ಶ್ರೀಪೆರಂಬದೂರು ತಲುಪಿದ್ದರು. ಮತದಾರರೊಂದಿಗೆ ಸಂವಾದ ನಡೆಸಲು ಅವರು ಮುಂದಾದಾಗ ಬಿಳಿಯ ಅಂಬಾಸಿಡರ್ ಕಾರುಗಳ ಬೆಂಗಾವಲು ಹಲವೆಡೆ ನಿಂತಿತ್ತು. ಅವರು ರ್‍ಯಾಲಿ ಸ್ಥಳವನ್ನು ತಲುಪಿದರು ಮತ್ತು ಅವರು ಭಾಷಣ ಮಾಡಲು ವೇದಿಕೆಯ ಕಡೆಗೆ ನಡೆಯಲು ಪ್ರಾರಂಭಿಸಿದರು. ಈ ವೇಳೆ ಹಂತಕ ರಾಜರತ್ನಂ ಅವರ ಪಾದಗಳನ್ನು ಮುಟ್ಟಲು ನಮಸ್ಕರಿಸಿ ನಂತರ ಆರ್‌ಡಿಎಕ್ಸ್ ಬೆಲ್ಟ್ ಅನ್ನು ಸ್ಫೋಟಿಸಿದ್ದನು. ಈ ವೇಳೆ ರಾಜೀವ್ ಗಾಂಧಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 43 ಮಂದಿಗೆ ಗಂಭೀರ ಗಾಯಗಳಾಗಿದ್ದವು. ಆತ್ಮಹತ್ಯಾ ದಾಳಿಯಲ್ಲಿ ಸ್ಥಳೀಯ ಕ್ಯಾಮರಾಪರ್ಸನ್ ಸಾವನ್ನಪ್ಪಿದರು. ಅವರ ಕ್ಯಾಮರಾ ಹತ್ಯೆಯನ್ನು ಸೆರೆಹಿಡಿಯಿತು. ರಾಜೀವ್ ಗಾಂಧಿ ಸಮಾಧಿಗೆ ಪ್ರಾರ್ಥಿಸಿ ಯಾತ್ರೆ ಆರಂಭವಾಗಿದೆ.

ರಾಹುಲ್ ಗಾಂಧಿ ಮುಂದಿನ 150 ದಿನಗಳ ಕಾಲ ಕಂಟೈನರ್‌ನಲ್ಲಿ ಉಳಿಯಲಿದ್ದಾರೆ. ಕೆಲವು ಕಂಟೈನರ್‌ಗಳಲ್ಲಿ ಮಲಗುವ ಹಾಸಿಗೆಗಳು, ಶೌಚಾಲಯಗಳು ಮತ್ತು ಹವಾನಿಯಂತ್ರಣಗಳನ್ನು ಸಹ ಸ್ಥಾಪಿಸಲಾಗಿದೆ. ಪ್ರಯಾಣದ ಸಮಯದಲ್ಲಿ, ತಾಪಮಾನ ಮತ್ತು ಪರಿಸರವು ಅನೇಕ ಪ್ರದೇಶಗಳಲ್ಲಿ ಭಿನ್ನವಾಗಿರುತ್ತದೆ.

ಭಾರತ್ ಜೋಡೋ ಯಾತ್ರೆಯ ಯಾತ್ರಿಗಳು ಯಾವುದೇ ಹೋಟೆಲ್‌ನಲ್ಲಿ ಉಳಿಯುವುದಿಲ್ಲ.ತಮ್ಮ ರಾತ್ರಿಗಳನ್ನು ಅವರು ಕಂಟೈನರ್‌ಗಳಲ್ಲಿ ಕಳೆಯುತ್ತಾರೆ.ಇಂತಹ ಒಟ್ಟು 60 ಕಂಟೈನರ್​ಗಳ ವ್ಯವಸ್ಥೆ ಮಾಡಲಾಗಿದೆ.ಕೆಲವು ಕಂಟೈನರ್‌ಗಳಲ್ಲಿ ಮಲಗುವ ಹಾಸಿಗೆಗಳು,ಶೌಚಾಲಯಗಳು ಮತ್ತು ಎಸಿಗಳನ್ನು ಸಹ ಅಳವಡಿಸಲಾಗಿದೆ.

ಯಾತ್ರೆಯು 150 ದಿನಗಳಲ್ಲಿ 3,570 ಕಿ.ಮೀ ಕ್ರಮಿಸಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಭಾರತ್ ಜೋಡೋ ಯಾತ್ರೆ ಕೊನೆಗೊಳ್ಳಲಿದೆ.

ಭದ್ರತಾ ಕಾರಣಗಳಿಂದಾಗಿ ರಾಹುಲ್ ಗಾಂಧಿ ಒಬ್ಬರೇ ಒಂದು ಕಂಟೈನರ್‌ನಲ್ಲಿ ಉಳಿದುಕೊಳ್ಳುತ್ತಾರೆ.ಇತರರು ಉಳಿದ ಕಂಟೈನರ್‌ಗಳನ್ನು ಹಂಚಿಕೊಳ್ಳುತ್ತಾರೆ.ಕಂಟೈನರ್‌ಗಳನ್ನು ಪ್ರತಿದಿನ ಹೊಸ ಸ್ಥಳದಲ್ಲಿ ನಿಲ್ಲಿಸಲಾಗುತ್ತದೆ.ಯಾತ್ರಿಗಳು ರಸ್ತೆಯಲ್ಲೇ ತಿಂಡಿ ತಿನ್ನಲಿದ್ದಾರೆ.ಅವರಿಗೆ ಲಾಂಡ್ರಿ ಸೇವೆಗಳನ್ನು ಒದಗಿಸಲಾಗುವುದು.ಭಾರತ್ ಜೋಡೋ ಯಾತ್ರೆಯ ಈ 5 ತಿಂಗಳುಗಳಲ್ಲಿ ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾತ್ರಿಗಳು ಪ್ರತಿದಿನ 6ರಿಂದ 7 ಗಂಟೆಗಳ ಕಾಲ ನಡೆಯುತ್ತಾರೆ.

ಸೆ.30 ರಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲಕ ಕರ್ನಾಟಕ ರಾಜ್ಯ ಪ್ರವೇಶಿಸಲಿದೆ. ಒಟ್ಟು 7 ಜಿಲ್ಲೆಯಲ್ಲಿ 22 ದಿವಸ ಸಂಚರಿಸಲಿದೆ. ಯಾತ್ರೆಗೆ ಮೈಸೂರು ದಸರದ 4 ದಿವಸ ವಿಶ್ರಾಂತಿ ನೀಡಲಾಗಿದೆ.

ಭಾರತ್‌ ಐಕ್ಯತಾ ಯಾತ್ರೆಯು ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಒಟ್ಟಾರೆ 511 ಕಿ.ಮೀ. ಸಂಚರಿಸಲಿದೆ. ಪ್ರತಿ ದಿನವೂ ಯಾವ ಸಮಯಕ್ಕೆ ಎಲ್ಲಿಂದ ಯಾತ್ರೆ ಪ್ರಾರಂಭವಾಗಲಿದೆ, ಯಾವ ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ. ಆಯಾ ದಿನದ ಉಸ್ತುವಾರಿಯನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬುದನ್ನು ಅಂತಿಮಗೊಳಿಸಲಾಗಿದೆ. 

ಜಿ23 ಬೆಂಬಲ: ಈ ನಡುವೆ ಪಕ್ಷ ಆಯೋಜಿಸಿರುವ ಯಾತ್ರೆಗೆ ಜಿ23 ನಾಯಕರು ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಆನಂದ್‌ ಶರ್ಮಾ, ಈ ಯಾತ್ರೆ ಪ್ರಜಾಪ್ರಭುತ್ವದ ಸಮಗ್ರ ಒಳಗೊಳ್ಳುವಿಕೆ ಮತ್ತು ಐಕ್ಯತೆಯನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಇದರ ನೇತೃತ್ವ ವಹಿಸಿರುವ ರಾಹುಲ್‌ ಗಾಂಧಿಗೆ (Rahul Gandhi) ಶುಭ ಹಾರೈಕೆಗಳು ಎಂದಿದ್ದಾರೆ.

ಯಾತ್ರೆಯಲ್ಲಿ ವಿಲೇಜ್ ಕುಕ್ಕಿಂಗ್ ಚಾನೆಲ್ ತಂಡ :
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಲ್ಲಿ ಜನಪ್ರಿಯ ಯೂಟ್ಯೂಬ್ ಚಾನೆಲ್ ‘ವಿಲೇಜ್ ಕುಕಿಂಗ್ ಚಾನೆಲ್'(Village cooking channel) ಚಾನೆಲ್ ನ ಸದಸ್ಯರು ಸೇರಿಕೊಂಡರು.

ಕಳೆದ ವರ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಯಲು ಪ್ರದೇಶದಲ್ಲಿ ಚಾನೆಲ್ ಸದಸ್ಯರು ತಯಾರಿಸಿದ್ದ ಮಶ್ರೂಮ್ ಬಿರಿಯಾನಿ ರುಚಿ ನೋಡಿದ್ದರು. ವಿಲೇಜ್ ಕುಕಿಂಗ್ ಚಾನೆಲ್ ಒಂದು ಕೋಟಿ (10 ಮಿಲಿಯನ್) ಚಂದಾದಾರರನ್ನು ತಲುಪಿದ ತಮಿಳುನಾಡಿನ ಮೊದಲ ಯೂಟ್ಯೂಬ್ ಚಾನಲ್ ಆಗಿದೆ.

ಒಟ್ಟಿನಲ್ಲಿ ಕಾಂಗ್ರೇಸ್‍ ರಸ್ತೆಗೆ ಇಳಿದು ಹೋರಾಟ ಮಾಡಬೇಕೆಂದು ಕಾರ್ಯಕರ್ತರ ಮನಸ್ಸಿನಲ್ಲೂ ಇತ್ತು ಅದೀಗ ಕಾಲ ಕೂಡಿ ಬಂದಿದೆ ಎನ್ನುತ್ತಾರೆ ಕಾಂಗ್ರೇಸಿಗರು. ಇನ್ನು 146 ದಿನ ದೇಶದ ಎಲ್ಲಾ ಭಾಗದಲ್ಲೂ ಯಾತ್ರೆ ಸಾಗಲಿದೆ.

Ad Widget
Click to comment

Leave a Reply

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಮಂಗಳೂರು

Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget alt="Ad Widget"/>

Ad Widget

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.

Ad Widget

Ad Widget <> Ad Widget

ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

Ad Widget

Ad Widget

ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.

ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.

ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ

ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.

ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.

ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು

ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.

ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.

ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.

Ad Widget
Continue Reading

ಅಂತರ ರಾಜ್ಯ

CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?

Published

on

Ad Widget

Ad Widget

Ad Widget

Ad Widget

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.

Ad Widget

Ad Widget

Ad Widget

Ad Widget

ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.

Ad Widget

Ad Widget alt="Ad Widget"/>

Ad Widget

ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

Ad Widget

Ad Widget

“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್–ಎಸ್‌ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್‌ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್‌ಪಿ ವಿರುದ್ಧ ಕಿಡಿಕಾರಿದ್ದಾರೆ.

ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್‌ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!