ಸುಳ್ಯ
Weather Forecast : ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಇನ್ನೆಡರು ದಿನ ಮಳೆ ಹೀಗಿರಲಿದೆ
Karnataka Rains: ರಾಜ್ಯದ ವಿವಿಧ ಕಡೆಗಳಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಇನ್ನೂ ಇದರ ಅಬ್ಬರ ಕಡಿಮೆಯಾಗಿಲ್ಲ. ದಕ್ಷಿಣ ಕನ್ನಡ, ಉಡುಪಿ, ಕೊಡಗು (Kodagu Rain) ಸಹಿತ ಕರಾವಳಿ (Coastal Karnataka) ಭಾಗದಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆಯ ಮುನ್ಸೂಚನೆ ಪ್ರಕಟಿಸಿದೆ.
ಕರ್ನಾಟಕದಲ್ಲಿ ಇನ್ನೂ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಸಹಿತ ಕರ್ನಾಟಕದ 10 ಜಿಲ್ಲೆಗಳ ಹಲವು ಭಾಗಗಳಲ್ಲಿ ಸೆ. 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು (Kodagu Rain), ಹಾಸನ, ಚಿಕ್ಕಮಗಳೂರು (Chikmagalur Rain) ಮತ್ತು ಶಿವಮೊಗ್ಗ (Shivamogga Rain), ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ‘ಆರೆಂಜ್ ಅಲರ್ಟ್‘ ಘೋಷಿಸಲಾಗಿದೆ.
BJP Janotsava | BIG BREAKING: ಎರಡನೇ ಭಾರಿ ಬಿಜೆಪಿ ಜನೋತ್ಸವ ಮುಂದೂಡಿಕೆ
ಕರ್ನಾಟಕದ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದರೆ ಇನ್ನು ಕೆಲವು ಜಿಲ್ಲೆಗಳಿಗೆ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 11ರವರೆಗೆ ‘ಹಳದಿ ಅಲರ್ಟ್’ ನೀಡಲಾಗಿದೆ.
ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಿದ್ದರೆ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ. ಈ ಮಳೆಯ ಆರ್ಭಟ ಇಂದಿನಿಂದ 2 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
AAI Recruitment : ಎಎಐ ನೇಮಕಾತಿಗೆ ಅರ್ಜಿ ಆಹ್ವಾನ : sslc , Puc, Diploma Degee ವಿದ್ಯಾರ್ಹತೆ
ಮಳೆ ಅವಧಿ ಬದಲಾವಣೆ:
ಕಳೆದ ನಾಲ್ಕು ವರ್ಷಗಳ ಮಳೆ ಸುರಿದ ಅಂಕಿ ಅಂಶ ಗಳನ್ನು ಅಧ್ಯಯನ ಮಾಡಿದಾಗ ರಾಜ್ಯದಲ್ಲಿ ಮಳೆ ಅವಧಿ ಬದಲಾವಣೆಯಾಗಿರುವುದು ಗೋಚರವಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ ನಲ್ಲಿ ಮುಂಗಾರು ಮಳೆ ಕ್ಷೀಣಿಸಿದರೆ ಜುಲೈ ತಿಂಗಳಾದ್ಯಂತ ಸುರಿಯಬೇಕಿದ್ದ ಮಳೆ ಪ್ರಮಾಣ ವಾರದಲ್ಲೇ ವಾಡಿಕೆಗಿಂತ ಅಧಿಕವಾಗಿ ಸುರಿದಿದೆ. ಈ ಕ್ರಮದಿಂದ ನಾಲ್ಕು ವರ್ಷಗಳಿಂದ ಮಳೆ ಬೀಳುವ ಅವಧಿಯಲ್ಲಿ ಗಣನೀಯವಾಗಿ ವ್ಯತ್ಯಾಸವಾಗಿದೆ.
ಕೃಷಿ ಚಟುವಟಿಕೆಗಳ ಮೇಲೂ ಇದರಿಂದ ಪರಿಣಾಮ ಬೀರಿದೆ. ಮಲೆನಾಡು ಜಿಲ್ಲೆಗಳಲ್ಲಿ 2018ರ ಜೂನ್ʼ ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೆ, 2019ರಿಂದ 2022ರ ಜೂನ್ ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕರಾವಳಿಯಲ್ಲಿ ಕಳೆದ 4 ವರ್ಷಗಳಿಂದ ಜೂನ್ನಲ್ಲಿ ಮಳೆ ಕುಂಠಿತವಾಗುತ್ತಿದೆ.
ಅದೇರೀತಿ, ದಕ್ಷಿಣ ಒಳನಾಡಿನಲ್ಲಿ 2017ರ ಜೂನ್ ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದರೆ, 2018ರಿಂದ 2022ರ ಜೂನ್ʼನಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಉತ್ತರ ಒಳನಾಡಿನಲ್ಲಿ 2017, 2019, 2020 ಮತ್ತು 2021ರ ಜೂನ್ʼನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದರೆ 2018 ಮತ್ತು 2022ರ ಜೂನ್ʼನಲ್ಲಿ ವಾಡಿಕೆಯಷ್ಟೇ ಮಳೆ ಬಿದ್ದಿದೆ. ಐದು ವರ್ಷಗಳಿಂದ ಜೂನ್ ಅವಧಿಯಲ್ಲೇ ರಾಜ್ಯಾದ್ಯಂತ ಮಳೆ ಕುಂಠಿತಗೊಂಡಿದೆ. ಹಾಗಾಗಿ, ಎಲ್ಲ ಅಂಕಿಅಂಶಗಳನ್ನು ಗಮನಿಸಿದರೆ ಮಳೆಗಾಲ ಅವಧಿ ಜೂನ್ ನಿಂದ ಜುಲೈಗೆ ಬದಲಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಗೋವಾ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ ಮತ್ತು ಛತ್ತೀಸ್ಗಢದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಬಿಹಾರ, ಜಾರ್ಖಂಡ್, ಸಿಕ್ಕಿಂ, ಅರುಣಾಚಲ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
Heavy Rain : ಕರ್ನಾಟಕ ರಾಜ್ಯದಲ್ಲಿ 51 ವರ್ಷದಲ್ಲೆ ಈ ಬಾರಿ ಅತ್ಯಧಿಕ ಮಳೆ – ಇಲ್ಲಿದೆ ಮಳೆ ಲೆಕ್ಕಚಾರ
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
Uncategorized24 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್18 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು22 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ22 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized22 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ23 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ22 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್23 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















