ಜೀವನಶೈಲಿ
Whatsapp ನಲ್ಲಿ ಹಳೆ ಮೆಸೇಜ್ ಗಳನ್ನು ಹುಡುಕಲು ಹೊಸ ಫೀಚರ್ – ಏನಿದು ? ಇಲ್ಲಿದೆ ವಿವರ
ಜಗತ್ತಿನ ಅತೀ ದೊಡ್ಡ ಮೆಸೇಜಿಂಗ್ ಆಪ್ ಆಗಿರುವ whatsapp ಬಳಕೆ ಈಗ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಪ್ರಪಂಚದಾದ್ಯಂತ ಜನರು ವ್ಯಾಪಕವಾಗಿ ವಾಟ್ಸಾಪ್ ಬಳಸುತ್ತಿದ್ದಾರೆ. ಹೀಗಾಗಿ ಜನಪ್ರಿಯ ಮೆಸೇಜಿಂಗ್ ಪ್ಲಾಟ್ಫಾರ್ಮ್ Whatsapp App ಹೊಸ ವೈಶಿಷ್ಟ್ಯಗಳನ್ನು ತನ್ನ ಆಪ್ ಗೆ ಸೇರಿಸುತ್ತಿದೆ. ಆದರೆ ಹೊಸ ವೈಶಿಷ್ಟ್ಯವನ್ನು ತರುವ ಮೊದಲು WhatsApp ಅದನ್ನು ಪರೀಕ್ಷಿಸುತ್ತದೆ.
ನಿರಂತರವಾಗಿ ಹೊಸ ಹೊಸ ವೈಶಿಷ್ಟ್ಯಗಳನ್ನು ಪರೀಕ್ಷಿಸುತ್ತಿರುವ WhatsApp ಇದೀಗ ಮತ್ತೊಂದು ಭರ್ಜರಿ ಅಪ್ಡೇಟ್ ಒಂದನ್ನು ಒದಗಿಸಲು ತಯಾರಿ ನಡೆಸುತ್ತಿದೆ. WhatsApp ಬೀಟಾ ಟ್ರ್ಯಾಕರ್ WABetaInfo ಪ್ರಕಟಿಸಿರುವ ಇತ್ತೀಚಿನ ವರದಿಯಂತೆ, WhatsApp ಬಳಕೆದಾರರು ತಮ್ಮ ಹಳೆಯ ಸಂದೇಶಗಳನ್ನು ಸುಲಭವಾಗಿ ಹುಡುಕಬಹುದಾದ ಹೊಸ ವೈಶಿಷ್ಟ್ಯವೊಂದನ್ನು ತರಲು ಸಿದ್ಧತೆ ನಡೆಸುತ್ತಿದೆ.
WhatsApp ಟೆಸ್ಟಪ್ಲೈಟ್ ಬೀಟಾ ಪ್ರೋಗ್ರಾಂ ನಲ್ಲಿ ಇಂತಹದೊಂದು ನವೀಕರಣವನ್ನು ಪರೀಕ್ಷಿಸಲಾಗುತ್ತಿರುವುದಾಗಿ ತಿಳಿದು ಬಂದಿದೆ. ಈ ಪರೀಕ್ಷೆ ಯಶಸ್ವಿಯಾದರೆ ಅದರಿಂದ ಬಳಕೆದಾರರಿಗೆ ಅತೀ ದೊಡ್ಡ ಪ್ರಯೋಜನ ಸಿಗಲಿದೆ. ವರ್ಷದ ಯಾವುದೇ ದಿನಾಂಕವನ್ನು ನಮೂದಿಸುವ ಮೂಲಕ ಹಳೆಯ WhatsApp ಸಂದೇಶಗಳನ್ನು ಈ ಹೊಸ ಫೀಚರ್ ಮೂಲಕ ಸುಲಭವಾಗಿ ಹುಡುಕಬಹುದು ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಈ ಹೊಸ ವೈಶಿಷ್ಟ್ಯವು ಅಭಿವೃದ್ಧಿ ಹಂತದಲ್ಲಿದೆ ಮತ್ತು ಬೀಟಾ ಪರೀಕ್ಷಕರಿಗೂ ಸಹ ಲಭ್ಯವಾಗಿಲ್ಲ. ಆದರೆ, ಅಭಿವೃದ್ಧಿ ಹಂತದಲ್ಲಿರುವ ಈ ವೈಶಿಷ್ಟ್ಯದಿಂದ ಬಹುತೇಕ ಜನರಿಗೆ ಸಂದೇಶ ಹುಡುಕಾಡಲು ಸಹಾಯಕವಾಗಲಿದೆ ಎಂದು WABetaInfo ವರದಿಯು ತಿಳಿಸಿದೆ.
WhatsApp ಈಗಾಗಲೇ ಆ ಚಾಟ್ನಲ್ಲಿ ಬಳಸಿದ ಪದವನ್ನು ಸರ್ಚ್ ಟ್ಯಾಬ್ ನಲ್ಲಿ ಟೈಪ್ ಮಾಡುವ ಮೂಲಕ ನಿರ್ದಿಷ್ಟ ಚಾಟ್ ಅನ್ನು ಹುಡುಕಲು ಅವಕಾಶ ಕಲ್ಪಿಸುತ್ತಿದೆ. ಹೊಸ ಹೊಸ ವೈಶಿಷ್ಟ್ಯದ ಪ್ರಕಾರ ಬಳಕೆದಾರರಿಗೆ ನಿಗದಿತ ದಿನಾಂಕದ ಸಂಪೂರ್ಣ ಸಂದೇಶಗಳನ್ನು ಹುಡುಕಲು ಅನುವು ಮಾಡಿಕೊಡುತ್ತದೆ. WaBetaInfo ಪ್ರಕಾರ, ಈ ಹಿಂದೆ ಮೆಟಾ ಕಂಪನಿಯು ಈ ವೈಶಿಷ್ಟ್ಯವನ್ನು ಪ್ರಾರಂಭಿಸುವ ಯೋಜನೆಯನ್ನು ಕೈಬಿಟ್ಟಿತ್ತು. ಆದರೆ ಅದು ಇತ್ತೀಚೆಗೆ iOS ಪೋನ್ ಗಾಗಿ ಈ ವೈಶಿಷ್ಟ್ಯವನ್ನು ಪರೀಕ್ಷಿಸುತ್ತಿದೆ. ಇದರರ್ಥ ಬೀಟಾ ಪರೀಕ್ಷಕರಿಗೆ ವೈಶಿಷ್ಟ್ಯವು ಶೀಘ್ರದಲ್ಲೇ ಬರಬಹುದು.
WABetaInfo ಪ್ರಕಟಿಸಿರುವ ಪೋಸ್ಟ್ ನಲ್ಲಿ ಹಾಕಲಾಗಿರುವ ಪೋಟೊದಲ್ಲಿ Screen Shot ನೋಡುವಂತೆ, WhatsApp ಕ್ಯಾಲೆಂಡರ್ ಐಕಾನ್ ಅದರಲ್ಲಿ ಗೋಚರಿಸುತ್ತದೆ. ಇದರಲ್ಲಿ ಬಳಕೆದಾರರು ದಿನಾಂಕವನ್ನು ನಮೊದಿಸಬಹುದು ಮತ್ತು ಆ ದಿನದ ಸಂದೇಶಗಳನ್ನು ನೋಡಬಹುದು. WABetaInfo ಹಂಚಿಕೊಂಡಿರುವ ಓಪನ್ಶಾಟ್ನಲ್ಲಿ ಬಳಕೆದಾರರು ವಾಟ್ಸ್ಆಪ್ ಡೆಸ್ಕ್ ಟಾಪ್ (Whatsapp desktop ) ಬೀಟಾ ಅಪ್ಲಿಕೇಶನ್ನಲ್ಲಿ ಸಂಪರ್ಕಕ್ಕಾಗಿ ಹುಡುಕಿದಾಗ, ಅವರು ತಮ್ಮ ಸಂಖ್ಯೆಯನ್ನು ಸಹ ನೋಡುತ್ತಾರೆ ಎಂದು ತಿಳಿದುಬಂದಿದೆ.
AAI Recruitment : ಎಎಐ ನೇಮಕಾತಿಗೆ ಅರ್ಜಿ ಆಹ್ವಾನ : sslc , Puc, Diploma Degee ವಿದ್ಯಾರ್ಹತೆ
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಲೇಖನಗಳು
Rahu-Ketu-18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ; 12 ರಾಶಿಗಳ ಭವಿಷ್ಯ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.
ಈ ಸಂಚಾರವು 2028ರ ಜೂನ್ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ರಾಹುವನ್ನು ಮಹತ್ವಾಕಾಂಕ್ಷೆ, ಭೌತಿಕ ಆಸೆ ಮತ್ತು ಅನಿರೀಕ್ಷಿತ ಬೆಳವಣಿಗೆಗಳ ಸಂಕೇತವಾಗಿ ಪರಿಗಣಿಸಿದರೆ, ಕೇತುವನ್ನು ಆಧ್ಯಾತ್ಮಿಕತೆ, ವೈರಾಗ್ಯ ಮತ್ತು ಅಂತಃಪ್ರಜ್ಞೆಯ ಸಂಕೇತವೆಂದು ನಂಬಲಾಗಿದೆ. ಹಾಗಾದರೆ ಈ ಸಂಚಾರವು 12 ರಾಶಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ನೋಡೋಣ.
ಮೇಷ ರಾಶಿ
ಮೇಷ ರಾಶಿಯವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಉದ್ಯೋಗ ಬದಲಾವಣೆ, ಬಡ್ತಿ ಹಾಗೂ ವ್ಯಾಪಾರ ವಿಸ್ತರಣೆಗೆ ಅನುಕೂಲಕರ ಸಮಯವಾಗಬಹುದು. ಕೆಲಸದ ಜವಾಬ್ದಾರಿ ಹೆಚ್ಚಾದರೂ ಅದಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆಯಿದೆ. ಮನೆ, ವಾಹನ ಮತ್ತು ಆಸ್ತಿ ಖರೀದಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬಹುದು. ಹಳೆಯ ವಾಹನ ಬದಲಿಸಿ ಹೊಸ ವಾಹನ ಖರೀದಿಸುವ ಯೋಗವೂ ಇದೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಬಹುದು. ಬಹುಕಾಲದಿಂದ ಮುಂದೂಡಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಬಹುದು. ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ನೆಲೆಸುವ ನಿರೀಕ್ಷೆಯಿದೆ. ಅನಿರೀಕ್ಷಿತ ಆರ್ಥಿಕ ಲಾಭದ ಅವಕಾಶಗಳು ಎದುರಾಗಬಹುದು. ದೂರದ ಪ್ರಯಾಣ, ಧಾರ್ಮಿಕ ಕಾರ್ಯಗಳು ಹಾಗೂ ಹೊಸ ಅನುಭವಗಳಿಗೆ ಅವಕಾಶ ದೊರೆಯಬಹುದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಜೀವನದಲ್ಲಿ ಕೆಲವು ಅನಿರೀಕ್ಷಿತ ಬದಲಾವಣೆಗಳು ಸಂಭವಿಸಬಹುದು. ವಿದೇಶಿ ಸಂಪರ್ಕಗಳು ಹೆಚ್ಚಾಗುವ ಜೊತೆಗೆ ಉದ್ಯೋಗ ಅಥವಾ ವ್ಯಾಪಾರದ ನಿಮಿತ್ತ ವಿದೇಶ ಪ್ರಯಾಣ ಮಾಡುವ ಅವಕಾಶ ಸಿಗಬಹುದು. ಆರ್ಥಿಕ ಲಾಭದ ಸಾಧ್ಯತೆಯೂ ಇದೆ. ಆದರೆ ಕೆಲವು ಕೆಲಸಗಳಲ್ಲಿ ವಿಳಂಬ ಮತ್ತು ಅಡೆತಡೆಗಳು ಎದುರಾಗಬಹುದು. ಕುಟುಂಬದ ವಿಚಾರದಲ್ಲಿ ಮಾತನಾಡುವಾಗ ಸಂಯಮ ಇರಲಿ. ಆರೋಗ್ಯದ ಕಡೆಗೂ ಗಮನ ನೀಡುವುದು ಅಗತ್ಯ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ಸಮಾಜದಲ್ಲಿ ಗೌರವ ಮತ್ತು ಸ್ಥಾನಮಾನ ಹೆಚ್ಚಾಗುವ ಸಾಧ್ಯತೆಯಿದೆ. ವ್ಯಕ್ತಿತ್ವದಲ್ಲಿ ಬದಲಾವಣೆ ಕಂಡುಬರಬಹುದು. ಹೊಸ ಸ್ನೇಹಿತರು ಮತ್ತು ಪರಿಚಯಗಳು ಬೆಳೆಯಲಿವೆ. ವಿದೇಶದಲ್ಲಿ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಅವಕಾಶಗಳು ದೊರೆಯಬಹುದು. ಆದರೆ ವೈವಾಹಿಕ ಜೀವನ ಮತ್ತು ವ್ಯಾಪಾರ ಪಾಲುದಾರಿಕೆಯಲ್ಲಿ ಪರಸ್ಪರ ನಂಬಿಕೆ ಹಾಗೂ ಉತ್ತಮ ಸಂವಹನಕ್ಕೆ ಆದ್ಯತೆ ನೀಡಬೇಕು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕ್ರಮೇಣ ಕಡಿಮೆಯಾಗಬಹುದು. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆಯಿದೆ. ವಿರೋಧಿಗಳು ಹಾಗೂ ಸ್ಪರ್ಧಿಗಳ ವಿರುದ್ಧ ಮೇಲುಗೈ ಸಾಧಿಸಬಹುದು. ಬಾಕಿ ಉಳಿದಿರುವ ಕಾನೂನು ವಿವಾದಗಳು ಮತ್ತು ಆಸ್ತಿ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ನಿರೀಕ್ಷಿಸಬಹುದು. ವಿದೇಶಿ ಉದ್ಯೋಗದ ಪ್ರಯತ್ನಗಳಿಗೂ ಉತ್ತಮ ಅವಕಾಶಗಳು ಸಿಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಉದ್ಯೋಗ, ಆರ್ಥಿಕ ಸ್ಥಿತಿ ಮತ್ತು ಕುಟುಂಬದ ವಿಚಾರಗಳಲ್ಲಿ ಶುಭ ಬೆಳವಣಿಗೆಗಳು ಕಂಡುಬರಬಹುದು. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳು ದೊರೆಯಬಹುದು. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಮಕ್ಕಳಿಂದ ಸಂತೋಷದ ಸುದ್ದಿ ಸಿಗಬಹುದು. ಬಹುಕಾಲದಿಂದ ಬಾಕಿ ಉಳಿದಿರುವ ಹಣಕಾಸು ಮತ್ತು ಆಸ್ತಿ ಸಂಬಂಧಿತ ವಿಚಾರಗಳು ಬಗೆಹರಿಯುವ ನಿರೀಕ್ಷೆಯಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಮನೆ, ವಾಹನ ಮತ್ತು ವೃತ್ತಿಜೀವನದಲ್ಲಿ ಬದಲಾವಣೆಗಳು ಸಂಭವಿಸಬಹುದು. ಸ್ವಂತ ಮನೆ ಖರೀದಿಸುವ ಅಥವಾ ಹೊಸ ಆಸ್ತಿ ಪಡೆಯುವ ಯೋಜನೆಗಳು ಈಡೇರಬಹುದು. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಮತ್ತು ಹೊಸ ಜವಾಬ್ದಾರಿಗಳು ದೊರೆಯಬಹುದು. ಆದರೆ ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕುಟುಂಬದ ಅಗತ್ಯಗಳಿಗಾಗಿ ಹೆಚ್ಚುವರಿ ಖರ್ಚು ಎದುರಾಗುವ ಸಾಧ್ಯತೆಯಿದೆ.
ಧನು ರಾಶಿ
ಧನು ರಾಶಿಯವರಿಗೆ ಆರ್ಥಿಕವಾಗಿ ಪ್ರಗತಿ ಸಾಧಿಸುವ ಅವಕಾಶಗಳು ದೊರೆಯಬಹುದು. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಬಹುದು. ವಿದೇಶಿ ಸಂಪರ್ಕಗಳಿಂದ ಲಾಭವಾಗುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ನಿರೀಕ್ಷೆಯಿದೆ. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ದೊರೆಯಬಹುದು. ಕುಟುಂಬದಲ್ಲಿ ಸಂತೋಷ ಮತ್ತು ನೆಮ್ಮದಿ ಹೆಚ್ಚಾಗಲಿದ್ದು, ಶುಭಕಾರ್ಯಗಳು ನಡೆಯುವ ಸಾಧ್ಯತೆಯಿದೆ. ಮಾತಿನ ಮೇಲೆ ಹಿಡಿತವಿರಲಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಧೈರ್ಯ, ಆತ್ಮವಿಶ್ವಾಸ ಮತ್ತು ಕೆಲಸ ಮಾಡುವ ಉತ್ಸಾಹ ಹೆಚ್ಚಾಗಬಹುದು. ಉದ್ಯೋಗ ಹಾಗೂ ವ್ಯಾಪಾರದಲ್ಲಿ ಹೊಸ ಪ್ರಯತ್ನಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಬಹುದು. ಪ್ರಭಾವಿ ವ್ಯಕ್ತಿಗಳ ಪರಿಚಯದಿಂದ ವೃತ್ತಿಜೀವನದಲ್ಲಿ ಅನುಕೂಲವಾಗಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೂ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ಸಂಚಾರದಲ್ಲಿ ಮಹತ್ವದ ಬದಲಾವಣೆಗಳು ಎದುರಾಗಬಹುದು. ಉದ್ಯೋಗ ಮತ್ತು ವೃತ್ತಿಜೀವನದ ಕಾರಣದಿಂದ ಸ್ಥಳಾಂತರಗೊಳ್ಳುವ ಸಂದರ್ಭ ಬರಬಹುದು. ಹೊಸ ಕೆಲಸ ಅಥವಾ ವೃತ್ತಿ ಆರಂಭಿಸುವ ಆಲೋಚನೆಗಳು ಮೂಡಬಹುದು. ಆರಂಭದಲ್ಲಿ ಕೆಲವು ಗೊಂದಲಗಳು ಎದುರಾದರೂ ಮುಂದಿನ ದಿನಗಳಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳಬಹುದು. ವ್ಯಾಪಾರ ಪಾಲುದಾರಿಕೆ ಮತ್ತು ವೈವಾಹಿಕ ಸಂಬಂಧಗಳಲ್ಲಿ ಎಚ್ಚರಿಕೆ ಹಾಗೂ ಪರಸ್ಪರ ತಿಳುವಳಿಕೆ ಅಗತ್ಯ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕಡಿಮೆಯಾಗುವ ಸಾಧ್ಯತೆಯಿದೆ. ಜಮೀನು ಅಥವಾ ನಿವೇಶನ ಖರೀದಿಸಿ ಮನೆ ನಿರ್ಮಿಸುವ ಯೋಜನೆಗಳು ಮುಂದುವರಿಯಬಹುದು. ವಾಹನ ಖರೀದಿಸುವ ಯೋಗವೂ ಇದೆ. ಮಕ್ಕಳಿಂದ ಸಂತೋಷದ ಸುದ್ದಿ ದೊರೆಯಬಹುದು. ದಾಂಪತ್ಯ ಜೀವನದಲ್ಲಿ ಸಾಮರಸ್ಯ ಹೆಚ್ಚಾಗುವ ನಿರೀಕ್ಷೆಯಿದೆ. ವಿದೇಶಿ ಉದ್ಯೋಗದ ಪ್ರಯತ್ನಗಳು ಮತ್ತು ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹೊಸ ಅವಕಾಶಗಳು ಸಿಗಬಹುದು.
ಮೀನ ರಾಶಿ
ಮೀನ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಬೆಳವಣಿಗೆಗಳು ಕಂಡುಬರಬಹುದು. ಅನಿರೀಕ್ಷಿತ ಮೂಲಗಳಿಂದ ಹಣ ಲಭಿಸುವ ಸಾಧ್ಯತೆಯಿದೆ. ಆಸ್ತಿ-ಪಾಸ್ತಿ ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಫಲಿತಾಂಶ ದೊರೆಯಬಹುದು. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ಮತ್ತು ಸಂಪರ್ಕಗಳಿಂದ ಲಾಭವಾಗಬಹುದು. ಮಕ್ಕಳ ಸಾಧನೆಯಿಂದ ಸಂತೋಷ ಸಿಗಬಹುದು. ವಿದೇಶದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಹೊಸ ಅವಕಾಶಗಳು ಎದುರಾಗಬಹುದು.
-
ಕ್ರೈಂ20 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ14 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ20 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು19 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ18 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಬಿಗ್ ನ್ಯೂಸ್20 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ14 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ19 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















