ಚಿನ್ನ-ಬೆಳ್ಳಿ ದರ
Gold Rate Today | ಚಿನ್ನ, ಬೆಳ್ಳಿ ಬೆಲೆಯಲ್ಲಿ ಸ್ಥಿರತೆ: ಇಂದಿನ ಗೋಲ್ಡ್ ದರದ ವಿವರ ಇಲ್ಲಿ ತಿಳಿಯಿರಿ.
Gold and Silver Price on September 11, 2022: ಕೆಲ ದಿನಗಳ ಹಿಂದೆ ಇಳಿಕೆ ಹಾದಿ ಹಿಡಿದು ಗ್ರಾಹಕರನ್ನು ಖುಷಿಪಡಿಸಿದ್ದ ಚಿನ್ನದ ದರ ಮತ್ತೆ ಏರಿಕೆ ಹಾದಿ ಹಿಡಿದಿದೆ. ಇದರಿಂದ ಖರೀದಿಗೆ ಸಜ್ಜಾದ ಗ್ರಾಹಕರಿಗೆ ನಿರಾಸೆ ಕಾಡಿದರೇ ಈಗಾಗಲೇ ಖರೀದಿಸಿದವರು ಖುಷಿಯಲ್ಲಿ ತೇಲಾಡುತ್ತಿದ್ದಾರೆ.
ಇಂದಿನ ಚಿನ್ನದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂಬುವುದೇ ನೆಮ್ಮದಿಯ ವಿಚಾರ. ಸಾಮಾನ್ಯವಾಗಿ ಭಾನುವಾರ ಚಿನ್ನದ ದರ ಬದಲಾವಣೆಯಾಗುವ ಪರಿಪಾಠ ಇರುವುದಿಲ್ಲ. ಶುಕ್ರವಾರ ಸಂಜೆಯ ಕಮೊಡಿಟಿ ಮಾರುಕಟ್ಟೆಯ closing Rate ಶನಿವಾರ Update ಆಗಿ ಶನಿವಾರ ಮತ್ತು ಭಾನುವಾರ ಅದೇ ದರ ಮುಂದುವರಿಯುವುದು ಪರಿಪಾಠ.
ಹೌದು ಕೊರೋನಾ ಕಾಲದಿಂದಲೂ ಆಟವಾಡುತ್ತಿರುವ ಚಿನ್ನ ಬೆಳ್ಳಿ ದರ ಗ್ರಾಹಕರನ್ನು ಕಂಗೆಡಿಸಿದೆ. ಕೊರೋನಾ ಹಾವಳಿ ನಡುವೆ ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಬಳಿಕ ಕೊಂಚ ಇಳಿಕೆಯಾಗಿತ್ತಾದರೂ ತನ್ನ ಹಾವೇಣಿ ಆಟ ಮುಂದುವರೆಸಿತ್ತು. ತದ ನಂತರ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಬೆಲೆ ಏರಿಕೆಯಾಗಿದ್ದು, ಗ್ರಾಹಕರ ನಿದ್ದೆಗೆಡಿಸಿತ್ತು. ಈ ಯುದ್ಧ ಸ್ಥಿತಿ ಕೊಂಚ ತಿಳಿಯಾದ ಬೆನ್ನಲ್ಲೇ ಹಳದಿ ಲೋಹದ ದರವೂ ಇಳಿಕೆಯಾದದ್ದು ಗ್ರಾಹಕರಿಗೆ ನಿರಾಳ ಭಾವ ನೀಡಿತ್ತು.
AAI Recruitment : ಎಎಐ ನೇಮಕಾತಿಗೆ ಅರ್ಜಿ ಆಹ್ವಾನ : sslc , Puc, Diploma Degee ವಿದ್ಯಾರ್ಹತೆ
ಇನ್ನು ಭಾರತದಲ್ಲಿ ಚಿನ್ನ ಬಹಳ ಮಹತ್ವ ಪಡೆದಿದೆ. ಬಹುತೇಕ ಎಲ್ಲಾ ಶುಭ ಕಾರ್ಯಕ್ಕೂ ಚಿನ್ನ- ಬೆಳ್ಳಿ ಖರೀದಿ ತಪ್ಪದೇ ನಡೆಯುತ್ತದೆ. ಹೀಗಾಗಿ ಜನ ಸಾಮಾನ್ಯರು ಇವುಗಳ ದರದ ಮೇಲೆ ಒಂದು ಕಣ್ಣಿಡುತ್ತಾರೆ.ಹೂಡಿಕೆ ದೃಷ್ಟಿಯಿಂದಲೂ ಚಿನ್ನ ಬಹಳ ಸೇಫ್ ಆಗಿದೆ. ಹೀಗಾಗೇ ಆರ್ಥಿಕ ಪರಿಸ್ಥಿತಿ ಕೊಂಚ ಏರುಪೇರಾದಾಗ ಉದ್ಯಮಿಗಳು ಚಿನ್ನದಲ್ಲಿ ತಮ್ಮ ಹಣವನ್ನು ಹೂಡಿಕೆ ಮಾಡುತ್ತಾರೆ. ಪರಿಣಾಮವಾಗಿ ಏಕಾಏಕಿ ಚಿನ್ನದ ದರ ಏರಿಕೆಯಾಗುತ್ತದೆ.
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,680
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,105
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 37,440
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 40,840
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 51,050
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,68,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,10,500
ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ:
ಬೆಂಗಳೂರು: ₹ 46,800 (22 ಕ್ಯಾರಟ್) – ₹ 51,050 (24 ಕ್ಯಾರಟ್)
ಚೆನ್ನೈ: ₹ 47,680 (22 ಕ್ಯಾರಟ್) – ₹ 52,010 (24 ಕ್ಯಾರಟ್)
ದಿಲ್ಲಿ: ₹ 46,900 (22 ಕ್ಯಾರಟ್) – ₹ 51,150 (24 ಕ್ಯಾರಟ್)
ಹೈದರಾಬಾದ್: ₹ 46,750 (22 ಕ್ಯಾರಟ್) – ₹ 51,000 (24 ಕ್ಯಾರಟ್)
ಕೋಲ್ಕತಾ: ₹46,750 (22 ಕ್ಯಾರಟ್) – ₹51,000 (24 ಕ್ಯಾರಟ್)
ಮಂಗಳೂರು: ₹46,800 (22 ಕ್ಯಾರಟ್) – ₹51,050 (24 ಕ್ಯಾರಟ್)
ಮುಂಬಯಿ: ₹46,750 (22 ಕ್ಯಾರಟ್) – ₹51,000 (24 ಕ್ಯಾರಟ್)
ಮೈಸೂರು: ₹46,800 (22 ಕ್ಯಾರಟ್) – ₹51,050 (24 ಕ್ಯಾರಟ್)
ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆ ಒಂದು ಕೆಜಿ ಬೆಳ್ಳಿ ಬೆಲೆ 53,220 ಇದ್ದ ಬೆಳ್ಳಿ ದರ ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 53,900 ರೂ ಆಗಿದೆ. ಅದರಂತೆ ನಿನ್ನೆ ಒಂದು ಕೆಜಿ ಬೆಳ್ಳಿಯ ದರ ಬೆಂಗಳೂರಿನಲ್ಲಿ ರೂ 60, 300 ಇದ್ದು ಇಂದು ತುಸು ಏರಿಕೆಯಾಗಿ 60 400 ಆಗಿದೆ.
ಇಂದಿನ ಬೆಳ್ಳಿಯ ದರ:
1 ಗ್ರಾಂ : ರೂ.60.40
8 ಗ್ರಾಂ : ರೂ. 483.20
10 ಗ್ರಾಂ : ರೂ. 604
100 ಗ್ರಾಂ : ರೂ.6,040
1 ಕೆಜಿ : ರೂ. 60,400
ಇಂದಿನ ಬೆಳ್ಳಿಯ ದರ:
ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ,
ಬೆಂಗಳೂರು- 60,400 ರೂ,
ಮೈಸೂರು- 60,400 ರೂ. ಮಂಗಳೂರು- 60,400
ರೂ., ಮುಂಬೈ- 60,400 ರೂ, ಚೆನ್ನೈ- 60,300 ರೂ
ಚಿನ್ನ-ಬೆಳ್ಳಿ ದರ
Gold Rate Today-ಆಭರಣಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.
ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.
ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ
- 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
- 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
- 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
- ಬೆಳ್ಳಿ (1 ಗ್ರಾಂ): 180 ರೂ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.
ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)
- ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
- ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.
ಭಾರತದ ಸ್ಪಾಟ್ ದರ
- ಚಿನ್ನ (1 ಗ್ರಾಂ): 13,353 ರೂ.
- ಬೆಳ್ಳಿ (1 ಗ್ರಾಂ): 169 ರೂ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
- ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
-
ಅಪರಾಧ17 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ24 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ರಾಜಕೀಯ17 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ22 hours agoGold Rate Today-ಆಭರಣಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್16 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ22 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ23 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ23 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















