Connect with us

ಅಪರಾಧ

ಹಿಂದೂ ಕಾರ್ಯಕರ್ತನಿಗೆ ಜೀವಬೆದರಿಕೆ ಒಡ್ಡಿದ ಪ್ರವೀಣ್‌ ನೆಟ್ಟಾರ್ ಕೊಲೆ ಆರೋಪಿಯ ತಮ್ಮ ಸಫ್ರಿದ್ ಬಂಧನ |‌ ಏನಿದು ಪ್ರಕರಣ – ಇಲ್ಲಿದೆ ವಿವರ

Published

on

Ad Widget

Ad Widget

Ad Widget

Ad Widget

ಬೆಳ್ಳಾರೆ  ಸೆ 11 : ಹಿಂದೂ ಕಾರ್ಯಕರ್ತರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರ್‌ (Praveen Nettar ) ಕೊಲೆ ಪ್ರಕರಣದ ಆರೋಪಿಯ ಸಹೋದರನನ್ನು ಬೆಳ್ಳಾರೆ ಠಾಣೆ ಪೊಲೀಸರು ಸೆ. 11 ರಂದು ಬೆಳ್ಳಂಬೆಳಗ್ಗೆ ಬಂಧಿಸಿರುವುದಾಗಿ ವರದಿಯಾಗಿದೆ. ಆದರೇ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಇಲಾಖೆ (Dakshina kannada ) ಇವರೆಗೆ ಈ ಬಗ್ಗೆ  ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದರೇ ಪೊಲೀಸ್‌ ಮೂಲಗಳು ಬಂಧನವನ್ನು ಖಚಿತಪಡಿಸಿವೆ.

Ad Widget

Ad Widget

Ad Widget

Ad Widget

ಬೆಳ್ಳಾರೆ ನಿವಾಸಿ, ಇಬ್ರಾಹಿಂ ‌ಎಂಬವರ ಪುತ್ರ ಸಫ್ರಿದ್ ಬಂಧಿತ ಆರೋಪಿ .ಈತ ಪ್ರವೀಣ್‌ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಶಫೀಕ್‌ ಸಹೋದರ. ಈತನ ತಂದೆ ದಿ. ಪ್ರವೀಣ್‌ ಅಂಗಡಿಯಲ್ಲಿ ಕೋಳಿ ಕ್ಲಿನಿಂಗ್‌ ಕೆಲಸ ಮಾಡುತ್ತಿದ್ದು, ಹತ್ಯೆಗಿಂತ 3 ತಿಂಗಳು ಮೊದಲಷ್ಟೇ  ಕೆಲಸ ಬಿಟ್ಟಿದ್ದರು.  ಆರೋಪಿ ಸಫ್ರಿದ್ ಎಸ್ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತ ಎಂದು ಸ್ಥಳೀಯರು ನಿಖರ ನ್ಯೂಸಿಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತ, ಬೆಳ್ಳಾರೆಯ “ದೇವಿ ಲೈಟ್ಸ್‌ ಲಾಡ್ಜಿಂಗ್‌ ” ನ ಮ್ಯಾನೇಜರ್‌ ಪ್ರಶಾಂತ್‌ ರೈ ನಿನ್ನೆ ಸಂಜೆ ಸಫ್ರಿದ್ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಒಡ್ಡಿರುವ ಬಗ್ಗೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದರು. ಪ್ರಕರಣದ ಮಾಹಿತಿ ಬಹಿರಂಗವಾಗುತ್ತಲೇ ಸ್ವತ: ಗೃಹ ಸಚಿವರೇ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿ ಆರೋಪಿಯನ್ನು ಶೀಘ್ರ ಬಂದಿಸುವಂತೆ ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

AAI Recruitment : ಎಎಐ ನೇಮಕಾತಿಗೆ ಅರ್ಜಿ ಆಹ್ವಾನ : sslc , Puc, Diploma Degee ವಿದ್ಯಾರ್ಹತೆ

ನಿನ್ನೆ ರಾತ್ರಿ ಆರೋಪಿ ಬಂಟ್ವಾಳ ತಾಲೂಕಿನ ಬಿಸಿ ರೋಡ್‌ ಎಂಬಲ್ಲಿ ಬಚ್ಚಿಟ್ಟು ಕೊಂಡಿದ್ದಾನೆ ಎಂಬ ಮಾಹಿತಿ ಹರಡಿತ್ತು. ಇಂದು ಮುಂಜಾನೆ ಮಿಂಚಿನ ಕಾರ್ಯಚರಣೆ ನಡೆಸಿದ ಜಿಲ್ಲಾ ಪೊಲೀಸರು ಆರೋಪಿಯನ್ನು ಆತ ಬಚ್ಚಿಟ್ಟುಕೊಂಡಲ್ಲಿಂದ ದಸ್ತಗಿರಿ ಮಾಡಿದ್ದಾರೆ.

Ad Widget

Ad Widget

ಏನಿದು ಪ್ರಕರಣ :

ಶನಿವಾರ ಬೆಳಿಗ್ಗೆ ಪ್ರಶಾಂತ್‌ ರೈವರ ಮೊಬೈಲ್‌ʼಗೆ ಆರೋಪಿ ಕರೆ ಮಾಡಿದ್ದಾನೆ. ಕರೆ ಸ್ವೀಕರಿಸಿದ  ಪ್ರಶಾಂತ್‌ ಅವರ ಬಳಿ ಅಪರಿಚಿತನಂತೆ ಮಾತನಾಡಿ, ಆ ನಂಬರ್‌ ಯಾರದ್ದು ಅನ್ನುವ ರೀತಿ ವಿಚಾರಿಸಿದ್ದಾನೆ.  ಈ ವೇಳೆ ಪ್ರಶಾಂತ್‌ ಆರೋಪಿಯ ಗುರುತು ಹಿಡಿದು, ತಾನು ಆತನಿಗೆ ಬಾಡಿಗೆ ಮನೆ ಮಾಡಿ ಕೊಟ್ಟಿರುವ ವಿಚಾರ ತಿಳಿಸಿದ್ದಾರೆ. ಈ ವೇಳೆ ಆರೊಪಿಯು ಪ್ರಶಾಂತರ ಬಳಿ ನೀವು ನನ್ನ ಆತ್ಮೀಯರಲ್ಲಿ ನನ್ನ ಬಗ್ಗೆ ಇಲ್ಲ ಸಲ್ಲದ್ದು ಹೇಳಿದ್ದೀರಿ ಎಂದು ಆರೋಪಿಸಿದ್ದು, ಇದನ್ನು ನಿರಾಕರಿಸಿದ ಪ್ರಶಾಂತ್‌ ಹಾಗೇ ಹೇಳಿದ ವ್ಯಕ್ತಿಯನ್ನು ತೋರಿಸುವಂತೆ ಹೇಳಿದ್ದಾರೆ. ಈ ವೇಳೆ ಅವರಿಬ್ಬರ ಮಾತಿನ ಚಕಮಕಿಯಾಗಿದೆ ಎಂದು ಮೂಲಗಳು ಇವರಿಬ್ಬರು ಆಡಿದ್ದಾರೆ ಎನ್ನಲಾದ ಪೋನ್‌ ಸಂಭಾಷನೆಯ ಆಡಿಯೋವನ್ನು ಉಲ್ಲೇಖಿಸಿ ನಿಖರ ನ್ಯೂಸಿಗೆ ತಿಳಿಸಿದ್ದಾರೆ.

Whatsapp ನಲ್ಲಿ ಹಳೆ ಮೆಸೇಜ್ ಗಳನ್ನು ಹುಡುಕಲು ಹೊಸ ಫೀಚರ್ – ಏನಿದು ? ಇಲ್ಲಿದೆ ವಿವರ

ಪ್ರಶಾಂತ್‌ ರೈ ಗೆ ಕೊಲೆ ಬೆದರಿಕೆ ಹಾಕಿರುವ ಮಾಹಿತಿ ಬಹಿರಂಗವಾಗುತ್ತಲೇ ನಿನ್ನೆ ಇಳಿಸಂಜೆ  ಬೆಳ್ಳಾರೆ ಪೋಲಿಸ್ ಠಾಣೆ ಮುಂಭಾಗ ದೊಡ್ಡ ಸಂಖ್ಯೆಯಲ್ಲಿ  ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಹಿಂದೂ ಸಂಘಟನೆಯ ಮುಖಂಡರು ಕೊಲೆ ಬೆದರಿಕೆ ಹಾಕಿರುವ ಸಫ್ರಿದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಆತನನ್ನು 24 ಗಂಟೆಯೊಳಗೆ ಬಂಧಿಸಬೇಕು.‌ ಇಲ್ಲದಿದ್ದರೆ‌ ಬೆಳ್ಳಾರೆ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

TVS Apache RTR : ಟಿವಿಎಸ್‌ ಅಪಾಚೆ ಆರ್‌ಟಿಆರ್‌ ಎರಡು ಬೈಕ್‌ ಗಳ ಬಿಡುಗಡೆ – ಬೆಲೆ, ಬಣ್ಣ, ವೈಶಿಷ್ಟ್ಯಗಳ ವಿವರ ಇಲ್ಲಿದೆ

Ad Widget
Click to comment

Leave a Reply

ಅಪರಾಧ

Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget <> Ad Widget

ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್‌ನ ಮೊಬೈಲ್ ಪಾಸ್‌ವರ್ಡ್‌ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್‌ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.

ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.

ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್‌ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.

ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget
Continue Reading

ಅಂತರ ರಾಜ್ಯ

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

Published

on

Ad Widget

Ad Widget

Ad Widget

Ad Widget

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget

Ad Widget

Ad Widget

ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget alt="Ad Widget"/>

Ad Widget

ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Ad Widget

Ad Widget <> Ad Widget

ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.

ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.

Ad Widget

Ad Widget

ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.

ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!