ನಿಧನ ವಾರ್ತೆ
Swaroopanand Saraswati | ಸ್ವಾತಂತ್ರ್ಯ ಹೋರಾಟದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ, ರಾಮ ಮಂದಿರದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ 99 ರ ಹರೆಯದ ಸ್ವಾಮಿ ಸ್ವರೂಪಾನಂದ ಸರಸ್ವತಿ ಇನ್ನಿಲ್ಲ
ನವದೆಹಲಿ: ಗುಜರಾತ್ ನ ದ್ವಾರಕಾ ಮಠದ ಸ್ವಾಮಿ ಸ್ವರೂಪಾನಂದ ಸರಸ್ವತಿ (SwaroopanandSaraswati) ಅವರು ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ 99 ನೇ ವಯಸ್ಸಿನಲ್ಲಿ ಬ್ರಹ್ಮೀಭೂತರಾಗಿದ್ದಾರೆ. ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ನರಸಿಂಗ್‌ಪುರ ಜಿಲ್ಲೆಯ ಶ್ರೀಧಾಮದಲ್ಲಿ ಇಹಲೋಕ ತ್ಯಜಿಸಿದ್ದಾರೆ.
ವರದಿಗಳ ಪ್ರಕಾರ, ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಹೃದಯಾಘಾತದಿಂದ ಅವರು ಭಾನುವಾರ, (ಸೆ 11) ಆಶ್ರಮದಲ್ಲಿ 3:50 ಕ್ಕೆ ಕೊನೆಯುಸಿರೆಳೆದಿದ್ದಾರೆ. ಸ್ವರೂಪಾನಂದ ಸರಸ್ವತಿ ಅವರ ಅಂತಿಮ ವಿಧಿಗಳು ಸೋಮವಾರ (ಸೆ 12) ನಡೆಯಲಿದೆ.
ಸ್ವಾತಂತ್ರ್ಯ ಹೋರಾಟದಲ್ಲಿ ಜೈಲು ಶಿಕ್ಷೆ : ಸ್ವಾಮಿ ಸ್ವರೂಪಾನಂದ ಸರಸ್ವತಿಯವರು 1924ರ ಸೆಪ್ಟೆಂಬರ್ 2ರಂದು ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಜಬಲ್‌ಪುರ ಸಮೀಪದ ದಿಘೋರಿ ಗ್ರಾಮದಲ್ಲಿ ಜನಿಸಿದ್ದರು. ತಂದೆ ಧನಪತಿ ಉಪಾಧ್ಯಾಯ ಮತ್ತು ತಾಯಿ ಗಿರಿಜಾ ದೇವಿ ಅವರ ಪುತ್ರರಾಗಿದ್ದು, ಪೋತಿರಾಮ್ ಉಪಾಧ್ಯಾಯ ಎಂದು ನಾಮಕರಣ ಮಾಡಿದ್ದರು. ನಂತರ ತಮ್ಮ ಒಂಬತ್ತನೆಯ ವಯಸ್ಸಿನಲ್ಲಿ ಅವರು ಮನೆ ತೊರೆದು ಧಾರ್ಮಿಕ ತೀರ್ಥಯಾತ್ರೆಗಳನ್ನು ಪ್ರಾರಂಭಿಸಿದರು. ಈ ಸಮಯದಲ್ಲಿ ಅವರು ಕಾಶಿಯನ್ನು ತಲುಪಿ ವೇದ, ಧರ್ಮ ಗ್ರಂಥಗಳನ್ನು ಕಲಿತರು. ಅಲ್ಲದೇ, ಆಗ ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಚಳವಳಿ ನಡೆಯುತ್ತಿತ್ತು. ಇದರಿಂದ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿ 19ನೇ ವಯಸ್ಸಿನಲ್ಲಿ ಕ್ರಾಂತಿಕಾರಿ ಸಾಧು ಎಂದೇ ಖ್ಯಾತಿ ಗಳಿಸಿದ್ದರು. ಈ ಸಮಯದಲ್ಲಿ ಅವರು ವಾರಣಾಸಿ ಜೈಲಿನಲ್ಲಿ ಒಂಬತ್ತು ತಿಂಗಳು ಮತ್ತು ಮಧ್ಯಪ್ರದೇಶ ಜೈಲಿನಲ್ಲಿ ಆರು ತಿಂಗಳು ಶಿಕ್ಷೆಗೆ ಒಳಗಾಗಿದ್ದರು.
ಪಾರ್ಸಿಯನ್ನು ಮದುವೆಯಾಗಿದ್ದರೂ ಇಂದಿರಾ ಗಾಂಧಿ ಮತಾಂತರವಾಗಿಲ್ಲ :
ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾರ್ಸಿ ಸಮುದಾಯದ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಿದ್ದರೂ, ಅವರು ಪಾರ್ಸಿ ಧರ್ಮಕ್ಕೆ ಮತಾಂತರವಾಗಿರಲಿಲ್ಲ ಎಂದು ದ್ವಾರಕಾ ಶ್ರದ್ಧಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.
ಇಂದಿರಾ ಗಾಂಧಿ ದೇವರನ್ನು ಪೂಜಿಸುತ್ತಿದ್ದರು, ಅವರು ಯಾವತ್ತಿಗೂ ವಿದೇಶಿ ಸಂಸ್ಕೃತಿಯನ್ನು ಅಳವಡಿಸಿಕೊಂಡಿರಲಿಲ್ಲ ಎಂದು ಮಾಜಿ ಪ್ರಧಾನಿಯನ್ನು ಕೊಂಡಾಡಿದ್ದರು. ಇದೇ ವೇಳೆ ನೆಹರು ಕುಟುಂಬದವರು ದೇಶಸೇವೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ ಎಂದು 2017ರಲ್ಲಿ ಸ್ವರೂಪನಂದ ಸ್ವಾಮೀಜಿ ಹೇಳಿದ್ದಾರೆ.
ರಾಮಮಂದಿರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಸ್ವಾಮಿಜಿ
ಸ್ವರೂಪಾನಂದ ಸರಸ್ವತಿಗಳು ಸ್ವಾಮಿ ಕರಪಾತ್ರಿ ಮಹಾರಾಜರು ಸ್ಥಾಪಿಸಿದ್ದ ಅಖಿಲ ಭಾರತೀಯ ರಾಮ ರಾಜ್ಯ ಪರಿಷತ್ ನ ಅಧ್ಯಕ್ಷರೂ ಆಗಿದ್ದರು.
ರಾಮಮಂದಿರದ ಹೆಸರಿನಲ್ಲಿ ಬಿಜೆಪಿ ಕಚೇರಿ ತೆರೆಯುತ್ತಿದೆ: ರಾಮ ಜನ್ಮಭೂಮಿ (ram janmabhoomi) ನ್ಯಾಸ್ ಹೆಸರಿನಲ್ಲಿ ರಾಮಮಂದಿರದ ಹೆಸರಿನಲ್ಲಿ ವಿಎಚ್‌ಪಿ ಮತ್ತು ಬಿಜೆಪಿ ಕಚೇರಿ ನಿರ್ಮಿಸುತ್ತಿದೆ ಎಂದು ಶಂಕರಾಚಾರ್ಯ ಸ್ವಾಮಿ ಸ್ಪರುಪಾನಂದ ಸರಸ್ವತಿ ಆರೋಪಿಸಿದ್ದರು. ಬಿಜೆಪಿ-ವಿಎಚ್‌ಪಿ ಅಯೋಧ್ಯೆಯಲ್ಲಿ ಮಂದಿರದ ಹೆಸರಿನಲ್ಲಿ ತಮ್ಮ ಕಚೇರಿಯನ್ನು ತೆರೆಯಲು ಬಯಸಿವೆ. ಅದು ನಮಗೆ ಸ್ವೀಕಾರಾರ್ಹವಲ್ಲ. ಹಿಂದೂಗಳಲ್ಲಿ ಶಂಕರಾಚಾರ್ಯರು ಸರ್ವಶ್ರೇಷ್ಠರು. ನಾವು ಹಿಂದೂಗಳ ಸರ್ವೋಚ್ಚ ನ್ಯಾಯಾಲಯ. ದೇವಸ್ಥಾನಕ್ಕೆ ಧಾರ್ಮಿಕ ಸ್ವರೂಪ ಇರಬೇಕು, ಆದರೆ ಈ ಜನ ಅದಕ್ಕೆ ರಾಜಕೀಯ ರೂಪ ಕೊಡಲು ಬಯಸಿದ್ದು ನಮಗೆ ಒಪ್ಪಿಗೆಯಾಗುವುದಿಲ್ಲ ಎಂದು ಹೇಳಿದ್ದರು.
ಶಂಕರಾಚಾರ್ಯರ ಎರಡು ಮಠದ ಉಸ್ತುವಾರಿ:
1300 ವರ್ಷಗಳ ಹಿಂದೆ, ಆದಿ ಗುರು ಭಗವಾನ್ ಶಂಕರಾಚಾರ್ಯರು ಹಿಂದೂಗಳನ್ನು ಮತ್ತು ಶಂಕರಾಚಾರ್ಯ ಅನುಯಾಯಿಗಳನ್ನು ಸಂಘಟಿಸಲು ಮತ್ತು ಧರ್ಮದ ಉನ್ನತಿಗಾಗಿ ಇಡೀ ದೇಶದಲ್ಲಿ 4 ಧಾರ್ಮಿಕ ಮಠಗಳನ್ನು ಮಾಡಿದರು. ಈ ನಾಲ್ಕು ಮಠಗಳಲ್ಲಿ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ದ್ವಾರಕಾ ಮಠ ಮತ್ತು ಜ್ಯೋತಿರ್ ಮಠ ಎರಡನ್ನೂ ನೋಡಿಕೊಳ್ಳುತ್ತಿದ್ದರು. 2018 ರಲ್ಲಿ, ಜಗತ್ಗುರು ಶಂಕರಾಚಾರ್ಯರ 95 ನೇ ಜನ್ಮದಿನವನ್ನು ವೃಂದಾವನದಲ್ಲಿ ಆಚರಿಸಿದ್ದರು.
”ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ಅಗಲುವಿಕೆಯಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ!” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
”ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಜೀ ಮಹಾರಾಜ್ ಅವರ ಅಗಲುವಿಕೆಯ ಸುದ್ದಿ ಕೇಳಿ, ಮನಸ್ಸು ತೀವ್ರ ದುಃಖವಾಯಿತು. ಸ್ವಾಮೀಜಿ ತಮ್ಮ ಇಡೀ ಜೀವನವನ್ನು ಧರ್ಮ, ಆಧ್ಯಾತ್ಮಿಕತೆ ಮತ್ತು ದಾನಕ್ಕಾಗಿ ಮುಡಿಪಾಗಿಟ್ಟರು.2021 ರಲ್ಲಿ ಪ್ರಯಾಗರಾಜ್‌ನಲ್ಲಿ ಗಂಗಾ ಸ್ನಾನ ಮಾಡಿದ ನಂತರ, ಅವರ ಆಶೀರ್ವಾದವನ್ನು ಪಡೆದಿದ್ದೆ” ಎಂದು ಪ್ರಿಯಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.
1982 ರಲ್ಲಿ, ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಗುಜರಾತ್‌ನ ದ್ವಾರಕಾದಲ್ಲಿರುವ ದ್ವಾರಕಾ ಶಾರದಾ ಪೀಠ ಮತ್ತು ಬದರಿನಾಥದ ಜ್ಯೋತಿರ್ ಮಠದ ಪೀಠಾಧಿಪತಿಯಾಗಿದ್ದರು.
ನಿಧನ ವಾರ್ತೆ
Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.
ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಶಿಕ್ಷಣ14 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ8 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ13 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ7 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸ್ಥಳೀಯ13 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ12 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ13 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ13 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















