ಕ್ರೀಡೆ
Asia Cup 2022 ; ರೋಚಕ ಕಾದಾಟ ದಲ್ಲಿ ಪಾಕಿಸ್ತಾನವನ್ನು ಸದೆಬಡಿದು ಏಷ್ಯಾ ಕಪ್ ಮುಡಿಗೆರಿಸಿಕೊಂಡ ಶ್ರೀಲಂಕಾ
ದುಬೈ ಸೆ 12 : ಪಾಕಿಸ್ತಾನ ತಂಡವನ್ನು 23 ರನ್‌ಗಳಿಂದ ಬಗ್ಗುಬಡಿಯುವ ಮೂಲಕ ಶ್ರೀಲಂಕಾ ತಂಡ ನೂತನ ಏಷ್ಯಾ ಕಪ್ ಚಾಂಪಿಯನ್ ಆಗಿ ಮೂಡಿ ಬಂದಿದೆ. ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಸೆ 11ರಂದು ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್ ಕಲೆ ಹಾಕಿತ್ತು. ಗುರಿ ಬೆಂಬತ್ತಿದ್ದ ಪಾಕಿಸ್ತಾನ 147 ರನ್ ಗಳಿಸಲಷ್ಟೆ ಶಕ್ತವಾಯಿತು. ಈ ಮೂಲಕ 6 ನೇ ಬಾರಿ ಶ್ರೀಲಂಕಾ ಏಷ್ಯಾ ಕಪ್ ಚಾಂಪಿಯನ್ ಆಯಿತು.
ಪಾಕಿಸ್ತಾನ ತಂಡದ ಬ್ಯಾಟಿಂಗ್
171 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡ 3.2 ಓವರ್‌ಗಳಲ್ಲಿ 22 ರನ್‌ಗಳಾಗಿದ್ದಾಗ ನಾಯಕ ಬಾಬರ್ ಅಜಂ ಮತ್ತು ಫಖರ್ ಜಮಾನ್ ಅವರ ವಿಕೆಟ್ ಕಳೆದುಕೊಂಡಿತು.
ಈ ವೇಳೆ ಮೊಹಮ್ಮದ್ ರಿಜ್ವಾನ್ ಮತ್ತು ಇಫ್ತಿಕರ್ ಅಹ್ಮದ್ ಕುಸಿದಿದ್ದ ತಂಡಕ್ಕೆ ಆಸರೆಯಾದರು. ಇವರಿಬ್ಬರು 71 ರನ್‌ಗಳ ಜೊತೆಯಾಟ ನೀಡಿ ಶ್ರೀಲಂಕಾ ಬೌಲರ್‌ಗಳಿಗೆ ಸವಾಲೊಡ್ಡಿದರು.
ಆದರೆ 32 ರನ್ ಗಳಿಸಿ ಆಡುತ್ತಿದ್ದ ಇಫ್ತಿಕರ್ ಅಹ್ಮದ್ ವಿಕೆಟ್‌ನೊಂದಿಗೆ ಮತ್ತೆ ಕುಸಿತ ಆರಂಭವಾಯಿತು. ನಂತರ ಬಂದ ಮೊಹಮ್ಮದ್ ನವಾಜ್ 6 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದರು.
ಪಾಕಿಸ್ತಾನ ಪರ ಏಕೈಕ ಅರ್ಧಶತಕ ಗಳಿಸಿದ್ದ ಮೊಹಮ್ಮದ್ ರಿಜ್ವಾನ್ (55 ರನ್) ಅವರ ವಿಕೆಟ್ ಕಳೆದುಕೊಳ್ಳುವುದರೊಂದಿಗೆ ಪಾಕಿಸ್ತಾನ ಸೋಲಿನ ಕಡೆ ಮುಖ ಮಾಡಿತು.
ಕೊನೆಯಲ್ಲಿ ಹ್ಯಾರಿಸ್ ರೌಫ್ 13 ರನ್ ಗಳಿಸಿದ್ದು ಬಿಟ್ಟರೆ ಉಳಿದವರಾರು ಎರಡಂಕಿ ದಾಟಲಿಲ್ಲ. ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಹ್ಯಾರಿಸ್ ರೌಫ್ ಕ್ಲೀನ್ ಬೌಲ್ಡ್ ಆಗುವುದರೊಂದಿಗೆ ಪಾಕಿಸ್ತಾನ 23 ರನ್‌ಗಳ ಸೊಲೊಪ್ಪಿಕೊಂಡಿತು.

ಶ್ರೀಲಂಕಾ ತಂಡದ ಬೌಲಿಂಗ್
ಶ್ರೀಲಂಕಾ ಪರ ಪ್ರಮೋದ್ ಮದುಶನ್ 4 ಓವರ್‌ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದರು. ವನಿಂದು ಹಸರಂಗಾ 4 ಓವರ್‌ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದರು. ಚಮಿಕಾ ಕರುಣಾರತ್ನೆ 4 ಓವರ್‌ಗಳಲ್ಲಿ 33 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಮಹೀಶ್ ತೀಕ್ಷಣ 4 ಓವರ್‌ಗಳಲ್ಲಿ 25 ರನ್ ನೀಡಿ 1 ವಿಕೆಟ್ ಪಡೆದರು.
ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಪಡೆಯಲು ಇ-ಕೆವೈಸಿ ಕಡ್ಡಾಯ : ಮೇ.31 ಕೊನೆಯ ದಿನಾಂಕ
ಶ್ರೀಲಂಕಾ ತಂಡದ ಬ್ಯಾಟಿಂಗ್
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಪರ ಆರಂಭಿಕರಾಗಿ ಪಾತುಮ್ ನಿಸ್ಸಾಂಕ ಮತ್ತು ಕುಸಲ್ ಮೆಂಡಿಸ್ ಕಣಕ್ಕಿಳಿದರು. ಆದರೆ ತಂಡದ ಮೊತ್ತ 2 ರನ್‌ಗಳಾಗಿದ್ದಾಗ ಕುಸಲ್ ಮೆಂಡಿಸ್ ಡಕ್‌ಗೆ ಔಟಾದರು. ಇವರ ಬೆನ್ನಲ್ಲೇ 8 ರನ್ ಗಳಿಸಿ ಆಡುತ್ತಿದ್ದ ಪಾತುಮ್ ನಿಸ್ಸಾಂಕ ವಿಕೆಟ್ ಒಪ್ಪಿಸಿದರು. ನಂತರ ಬಂದ ಧನಂಜಯ ಡಿ ಸಿಲ್ವಾ 28 ರನ್ ಗಳಿಸಿ ತಂಡದ ಮೊತ್ತ ಹೆಚ್ಚಾಗಲು ಪ್ರಯತ್ನಿಸಿದರು.
ಇನ್ನು ದನುಷ್ಕ ಗುಣತಿಲಕ 1 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದರು. ನಾಯಕ ದಸುನ್ ಶನಕ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಇರದೆ ಹೊರನಡೆದರು.

ನಂತರ ಕ್ರೀಸ್‌ಗೆ ಆಗಮಿಸಿದ ಭಾನುಕ ರಾಜಪಕ್ಸೆ ಅವರು ವನಿಂದು ಹಸರಂಗಾ ಜೊತೆ ಉತ್ತಮ ಮೊತ್ತ ಕಲೆ ಹಾಕಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
36 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ವನಿಂದು ಹಸರಂಗಾ ಕ್ಯಾಚ್ ನೀಡಿ ಪೆವಿಲಿಯನ್‌ಗೆ ಮರಳಿದರು. ಆಗ ತಂಡದ ಮೊತ್ತ 14.5 ಓವರ್‌ಗಳಲ್ಲಿ 116 ರನ್‌ಗಳು.
AAI Recruitment : ಎಎಐ ನೇಮಕಾತಿಗೆ ಅರ್ಜಿ ಆಹ್ವಾನ : sslc , Puc, Diploma Degee ವಿದ್ಯಾರ್ಹತೆ
ಭಾನುಕ ರಾಜಪಕ್ಸೆ 45 ಎಸೆತಗಳಲ್ಲಿ ಅಜೇಯ 71 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳಿದ್ದವು. ಅರ್ಹವಾಗಿಯೇ ಅವರಿಗೆ ಪಂದ್ಯ ಶ್ರೇಷ್ಟ ಪ್ರಶಸ್ತಿ ಒಲಿಯಿತು. ಕೊನೆಯಲ್ಲಿ ಚಮಿಕಾ ಕರುಣಾರತ್ನೆ 14 ರನ್ ಗಳಿಸಿ ಅಜೇಯರಾಗುಳಿದರು.

ಪಾಕಿಸ್ತಾನ ತಂಡದ ಬೌಲಿಂಗ್
ಪಾಕಿಸ್ತಾನ ಪರ ಹ್ಯಾರಿಸ್ ರೌಫ್ 4 ಓವರ್‌ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದರು. ನಸೀಮ್ ಶಾ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಪಡೆದರು. ಶಾದಾಬ್ ಖಾನ್ 4 ಓವರ್‌ಗಳಲ್ಲಿ 28 ರನ್ ನೀಡಿ 1 ವಿಕೆಟ್ ಪಡೆದರು. ಉಳಿದಂತೆ ಇಫ್ತಿಕರ್ ಅಹ್ಮದ್ ಒಂದು ವಿಕೆಟ್ ಪಡೆದರು.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ಕ್ರೀಡೆ
Asian Games-ಏಷ್ಯನ್ ಗೇಮ್ಸ್ ನಲ್ಲಿ ಮಿಂಚಿದ ಭಾರತದ ಮಹಿಳೆಯರು; 4×400 ರಿಲೇಯಲ್ಲಿ ಚಿನ್ನ, ಹೈಜಂಪ್-ಮಿಶ್ರ ರಿಲೇಯಲ್ಲಿ ಕಂಚು
ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್‌ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ ಮಿಶ್ರ 4×100 ಮೀಟರ್ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
ನಗೋಯಾ: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್‌ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ ಮಿಶ್ರ 4×100 ಮೀಟರ್ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
4×400 ಮೀಟರ್ ರಿಲೇಯಲ್ಲಿ ಬಂಗಾರದ ಓಟ
ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಕಿರಣ್ ಪಹಾಲ್, ಎಂ.ಆರ್. ಪೂವಮ್ಮ, ಪ್ರಾಚಿ ಚೌಧರಿ ಹಾಗೂ ವಿಥ್ಯಾ ರಾಮರಾಜ್ ಅವರನ್ನೊಳಗೊಂಡ ಭಾರತ ತಂಡ 3:29.69 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ತನ್ನದಾಗಿಸಿಕೊಂಡಿತು. ಬಹ್ರೇನ್ 3:30.21 ಸಮಯದೊಂದಿಗೆ ಬೆಳ್ಳಿ ಹಾಗೂ ಚೀನಾ 3:31.02 ಸಮಯದೊಂದಿಗೆ ಕಂಚಿನ ಪದಕ ಗೆದ್ದವು.
ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್ 2026ರಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತ ತನ್ನ ಮೊದಲ ಚಿನ್ನದ ಪದಕ ಗೆದ್ದಂತಾಗಿದೆ. ವಿಥ್ಯಾ ರಾಮರಾಜ್ ಅವರಿಗೆ ಇದು ಕೂಟದ ಮೂರನೇ ಪದಕವಾಗಿದೆ. ಅವರು ಈ ಹಿಂದೆ ಮಿಶ್ರ 4×400 ಮೀಟರ್ ರಿಲೇಯಲ್ಲಿ ಬೆಳ್ಳಿ ಹಾಗೂ ಮಹಿಳೆಯರ 400 ಮೀಟರ್ ಹರ್ಡಲ್ಸ್‌ನಲ್ಲಿ ಕಂಚು ಗೆದ್ದಿದ್ದರು.
ಹೈಜಂಪ್‌ನಲ್ಲಿ ಪೂಜಾಗೆ ಕಂಚು
ಮಹಿಳೆಯರ ಹೈಜಂಪ್ ಫೈನಲ್‌ನಲ್ಲಿ ಭಾರತದ ಪೂಜಾ ಸಿಂಗ್ 1.84 ಮೀಟರ್ ಎತ್ತರ ಜಿಗಿದು ಕಂಚಿನ ಪದಕ ಗೆದ್ದರು. 1.84 ಮೀಟರ್‌ವರೆಗಿನ ಎತ್ತರವನ್ನು ಅವರು ಯಶಸ್ವಿಯಾಗಿ ದಾಟಿದರೂ, 1.87 ಮೀಟರ್ ಎತ್ತರವನ್ನು ಮೂರು ಪ್ರಯತ್ನಗಳಲ್ಲೂ ದಾಟಲು ಸಾಧ್ಯವಾಗಲಿಲ್ಲ.
ಮಿಶ್ರ 4×100 ಮೀಟರ್ ರಿಲೇಯಲ್ಲಿ ಕಂಚು
ಗುರುಂದರ್‌ವೀರ್ ಸಿಂಗ್, ಸ್ನೇಹಾ ಸತ್ಯನಾರಾಯಣ, ಅನಿಮೇಶ್ ಕುಜುರ್ ಹಾಗೂ ಹರಿತಾ ಭದ್ರಾ ಅವರನ್ನೊಳಗೊಂಡ ಭಾರತ ತಂಡ ಮಿಶ್ರ 4×100 ಮೀಟರ್ ರಿಲೇಯಲ್ಲಿ 41.06 ಸೆಕೆಂಡ್‌ಗಳ ಋತುವಿನ ಅತ್ಯುತ್ತಮ ಸಮಯದೊಂದಿಗೆ ಕಂಚಿನ ಪದಕ ಗೆದ್ದಿತು.
ಚೀನಾ 40.78 ಸೆಕೆಂಡ್‌ಗಳಲ್ಲಿ ಚಿನ್ನ ಹಾಗೂ ಥೈಲ್ಯಾಂಡ್ 40.87 ಸೆಕೆಂಡ್‌ಗಳಲ್ಲಿ ಬೆಳ್ಳಿ ಪದಕ ಗೆದ್ದವು. ಭಾರತ 41.06 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆಯಿತು
ಕ್ರೀಡೆ
Fariba-ತಾಲಿಬಾನ್ ಆಡಳಿತದಲ್ಲಿ ಮಹಿಳೆಯರಿಗೆ ನಿರ್ಬಂಧ: ಪುರುಷರ ರೀತಿ ವೇಷ ಧರಿಸಿ ತರಬೇತಿ ಪಡೆದು ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಅಫ್ಘಾನಿಸ್ತಾನದ ಮೊದಲ ಮಹಿಳಾ ಕ್ರೀಡಾಪಟು ಫರೀಬಾ..!
ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಐಚಿ-ನಗೋಯಾ: ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಜಪಾನ್‌ನ ಐಚಿ ಪ್ರಾಂತ್ಯದ ಶಿನ್‌ಶಿರೋ ಸೈಕ್ಲಿಂಗ್ ರೋಡ್ ಕೋರ್ಸ್‌ನಲ್ಲಿ ಸೆ.22ರಂದು ನಡೆದ ಮಹಿಳೆಯರ 90.4 ಕಿ.ಮೀ. ವೈಯಕ್ತಿಕ ರೋಡ್ ರೇಸ್‌ನಲ್ಲಿ 23 ವರ್ಷದ ಫರೀಬಾ ಬೆಳ್ಳಿ ಪದಕ ಗೆದ್ದರು. ಇದರೊಂದಿಗೆ 2002ರ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಅಫ್ಘಾನಿಸ್ತಾನದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ರೋಚಕವಾಗಿ ನಡೆದ ಫೈನಲ್‌ನಲ್ಲಿ ಫರೀಬಾ ಹಾಗೂ ಚಿನ್ನದ ಪದಕ ಗೆದ್ದ ಚೀನಾದ ಗುವೋ ಲಿ ಇಬ್ಬರೂ 2 ಗಂಟೆ 50 ನಿಮಿಷ 05 ಸೆಕೆಂಡ್‌ಗಳಲ್ಲಿ ಗುರಿ ತಲುಪಿದರು. ಮೊದಲ ಎರಡು ಲ್ಯಾಪ್‌ಗಳಲ್ಲಿ ಫರೀಬಾ ಮುನ್ನಡೆ ಸಾಧಿಸಿದ್ದರು. ಆದರೆ ಅಂತಿಮ 300–400 ಮೀಟರ್‌ಗಳಲ್ಲಿ ಗುವೋ ಲಿ ಅತ್ಯಲ್ಪ ಅಂತರದಲ್ಲಿ ಮುನ್ನಡೆ ಪಡೆದು ಸ್ವರ್ಣ ಪದಕ ಗೆದ್ದರು. ಹಾಂಗ್‌ಕಾಂಗ್‌ನ ಲಿಯಾಂಗ್ ವಿಂಗ್ ಯೀ ಕಂಚಿನ ಪದಕ ಪಡೆದರು.
ಇದಕ್ಕೂ ಎರಡು ದಿನಗಳ ಮೊದಲು ನಡೆದ 24.2 ಕಿ.ಮೀ. ವೈಯಕ್ತಿಕ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಫರೀಬಾ ಏಳನೇ ಸ್ಥಾನ ಪಡೆದಿದ್ದರು.
ವೇಷ ಬದಲಿಸಿ ಸೈಕ್ಲಿಂಗ್ ತರಬೇತಿ
ಉತ್ತರ ಅಫ್ಘಾನಿಸ್ತಾನದ ಫರ್ಯಾಬ್ ಪ್ರಾಂತ್ಯದ ಫರೀಬಾ ತಮ್ಮ 15ನೇ ವಯಸ್ಸಿನಲ್ಲಿ ಅಕ್ಕ ಯುಲ್ದುಜ್ ಹಾಶಿಮಿ ಅವರ ಪ್ರೇರಣೆಯಿಂದ ಸೈಕ್ಲಿಂಗ್ ಆರಂಭಿಸಿದ್ದರು. ಮಹಿಳೆಯರು ಸಾರ್ವಜನಿಕವಾಗಿ ಸೈಕಲ್ ಚಲಾಯಿಸುವುದಕ್ಕೆ ವಿರೋಧವಿದ್ದ ಸಾಂಪ್ರದಾಯಿಕ ವಾತಾವರಣದಲ್ಲಿ ಗುರುತು ಪತ್ತೆಯಾಗದಂತೆ ಪುರುಷರ ವೇಷ ಧರಿಸಿ ಅವರು ತರಬೇತಿ ಪಡೆಯುತ್ತಿದ್ದರು.
ಮುಖಕ್ಕೆ ಎರಡು-ಮೂರು ಮಾಸ್ಕ್‌ಗಳು, ಹೆಡ್‌ಸ್ಕಾರ್ಫ್ ಹಾಗೂ ಸನ್‌ಗ್ಲಾಸ್ ಧರಿಸಿ ಸೈಕ್ಲಿಂಗ್ ಮಾಡುತ್ತಿದ್ದ ಫರೀಬಾ ಮತ್ತು ಅವರ ಸಹೋದರಿಗೆ ತರಬೇತಿ ವೇಳೆ ಜನರು ಕಲ್ಲು, ಬಾಟಲಿ ಎಸೆದು ನಿಂದಿಸುತ್ತಿದ್ದರು. ಇದೇ ವೇಳೆ ನಡೆದ ರಿಕ್ಷಾ ಅಪಘಾತದಲ್ಲಿ ಯುಲ್ದುಜ್ ಅವರ ಮಣಿಕಟ್ಟು ಮುರಿದ ಘಟನೆಯೂ ನಡೆದಿದೆ.
ತಾಲಿಬಾನ್ ಆಡಳಿತದ ಬಳಿಕ ದೇಶತ್ಯಾಗ
2020ರಲ್ಲಿ ಫರೀಬಾ ಮತ್ತು ಯುಲ್ದುಜ್ ಅಫ್ಘಾನಿಸ್ತಾನದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ 2021ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಕ್ರೀಡೆಗಳ ಮೇಲಿನ ನಿರ್ಬಂಧದಿಂದಾಗಿ ಅವರ ಕ್ರೀಡಾ ಬದುಕಿಗೂ ಸಂಕಷ್ಟ ಎದುರಾಯಿತು.
ಮಾಜಿ ವಿಶ್ವ ಚಾಂಪಿಯನ್ ಅಲೆಸ್ಸಾಂಡ್ರಾ ಕ್ಯಾಪೆಲ್ಲೊಟ್ಟೊ ಅವರ ನೆರವಿನಿಂದ ಸಹೋದರಿಯರು ಇಟಲಿಗೆ ವಲಸೆ ಹೋದರು. ಅಲ್ಲಿ ತರಬೇತಿ ಮುಂದುವರಿಸಿದ ಫರೀಬಾ 2022ರಲ್ಲಿ ಅಫ್ಘಾನ್ ರಾಷ್ಟ್ರೀಯ ಚಾಂಪಿಯನ್ ಆದರು. ಅಲ್ಲದೆ, UCI ರೇಸ್ ಗೆದ್ದ ಮೊದಲ ಅಫ್ಘಾನ್ ಮಹಿಳಾ ಸೈಕ್ಲಿಸ್ಟ್ ಎಂಬ ಸಾಧನೆ ಮಾಡಿದರು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲೂ ಅಫ್ಘಾನಿಸ್ತಾನವನ್ನು ಪ್ರತಿನಿಧಿಸಿದ್ದರು.
‘ಅಫ್ಘಾನ್ ಮಹಿಳೆಯರ ಶಕ್ತಿಯ ಸಂಕೇತ’
ಬೆಳ್ಳಿ ಪದಕ ಗೆದ್ದ ಬಳಿಕ ಮಾತನಾಡಿದ ಫರೀಬಾ, ಈ ಪದಕ ಅಫ್ಘಾನ್ ಮಹಿಳೆಯರ ಪ್ರತಿರೋಧ ಮತ್ತು ಶಕ್ತಿಯ ಸಂಕೇತವಾಗಿದೆ ಎಂದು ಹೇಳಿದರು.
“ನಾವು ಇಂದಿಗೂ ಬದುಕುಳಿದಿದ್ದೇವೆ ಮತ್ತು ಹೋರಾಡುತ್ತಿದ್ದೇವೆ ಎಂಬುದಕ್ಕೆ ಇದು ಸಾಕ್ಷಿ. ನನ್ನ ಮೇಲೆ ಬಿದ್ದ ಪ್ರತಿಯೊಂದು ಕಲ್ಲು ಸ್ವಾತಂತ್ರ್ಯಕ್ಕಾಗಿ ಹೋರಾಡುವ ಶಕ್ತಿಯನ್ನು ನೀಡಿತು. ಮುಂದಿನ ಪೀಳಿಗೆಯ ಅಫ್ಘಾನ್ ಹೆಣ್ಣುಮಕ್ಕಳು ಯಾವುದೇ ಭಯವಿಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವಂತಾಗಲಿ” ಎಂದು ಅವರು ಆಶಯ ವ್ಯಕ್ತಪಡಿಸಿದರು.
ತಾಲಿಬಾನ್ ಆಡಳಿತದ ಬಳಿಕ ಅಫ್ಘಾನ್ ಮಹಿಳಾ ಕ್ರೀಡಾಪಟುಗಳ ಪರಿಸ್ಥಿತಿ ಜಾಗತಿಕ ಗಮನ ಸೆಳೆದಿದೆ. ನಿರಾಶ್ರಿತರಾಗಿರುವ ಅಫ್ಘಾನಿಸ್ತಾನದ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ತರಬೇತಿ ಪಡೆಯುತ್ತಿರುವ ವರದಿಗಳೂ ಈ ಹಿಂದೆ ಪ್ರಕಟವಾಗಿದ್ದವು.
-
ಮಂಗಳೂರು5 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಸ್ಥಳೀಯ10 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ9 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್10 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಸಿನೆಮಾ9 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ10 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್9 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ5 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















