ಆರೋಗ್ಯ
All About Diapers : ಮಕ್ಕಳಿಗೆ ಡೈಪರ್ ಬಳಸುವುದು ಸುರಕ್ಷಿತವೇ? ಅದರ ಬಳಕೆಯ ವೇಳೆ ವಹಿಸಬೇಕಾದ ಮುಂಜಾಗರೂಕತೆಗಳ ವಿವರ
ಮನೆಯಿಂದ ಆಚೆ ಹೋಗುವ ಸಂದರ್ಭದಲ್ಲಿ ಡೈಪರ್ ತೊಡಿಸಿದರೆ ಅದು ಮಗು ಮತ್ತು ಪಾಲಕರಿಗೂ ಒಂದು ಬಗೆಯ ಭದ್ರತೆಯ ಭಾವನೆ ಮೂಡುವುದು ಸಹಜ. ಆದರೇ
ಕೆಲ ವರ್ಷಗಳ ಹಿಂದೆ ಮಕ್ಕಳಿಗೆ ಮನೆಯಲ್ಲಿ ಮಾಡಿದ ಹತ್ತಿ ಬಟ್ಟೆಯ ಪ್ಯಾಡ್ ಹಾಕ್ತಿದ್ದರು. ಅದನ್ನು ಆಗಾಗ ಬದಲಾಯಿಸಬೇಕಾಗಿತ್ತು. ಈಗ ಮಾರುಕಟ್ಟೆಗೆ ತರ ತರಹದ ಡೈಪರ್ ಲಗ್ಗೆ ಇಟ್ಟಿದೆ. ಇದು ಪಾಲಕರಿಗೆ ನೆಮ್ಮದಿ ನೀಡ್ತಾ ಇದೆ ನಿಜ. ಆದ್ರೆ ಮಕ್ಕಳು ಇದರಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ.
ಪ್ರತಿ ದಿನ ಮಗುವಿಗೆ ಡೈಪರ್ ತೊಡಿಸಿಯೇ ಇಡುವುದು ಒಂದು ಬಗೆಯ ಶಿಕ್ಷೆ ಎಂದೇ ಹೇಳಬಹುದು. ಡೈಪರ್ ಸಾಮಾನ್ಯ ಹತ್ತಿ ಬಟ್ಟೆಯ ಹಾಗೆ ಗಾಳಿ ಆಡುವುದಿಲ್ಲ. ದೀರ್ಘ ಸಮಯಗಳ ಕಾಲ ಡೈಪರ್ ತೊಡಿಸಿಯೇ ಇಡುವಂತಹ ಹವ್ಯಾಸವು ಮಗುವಿಗೆ ಹಾನಿಯನ್ನುಂಟುಮಾಡುತ್ತದೆ.
ಯುರೋಪಿನಾದ್ಯಂತ ಮಾರಾಟವಾಗುವ ಯೂಸ್ ಅಂಡ್ ಥ್ರೋ ಡೈಪರ್‌ಗಳಲ್ಲಿ 38 ರಾಸಾಯನಿಕಗಳನ್ನ ಸಂಶೋಧಕರು ಗುರುತಿಸಿದ್ದಾರೆ. ಇವುಗಳಲ್ಲಿರುವ ರಾಸಾಯನಿಕಗಳು ಹಾರ್ಮೋನ್ʼಗಳೊಂದಿಗೆ ಸೇರಿಕೊಳ್ಳುತ್ತವೆ ಎಂದು ಹೇಳಿದರು.
ವಿಶೇಷವಾಗಿ ಡಯಾಕ್ಸಿನ್‌ಗಳು, ಸುಗಂಧ ರಾಸಾಯನಿಕಗಳು, ಟ್ರಿಬ್ಯುಟೈಲ್-ಟಿನ್ (TBT), ಸೋಡಿಯಂ ಪಾಲಿಅಕ್ರಿಲೇಟ್‌ಗಳು ಡೈಪರ್‌ಗಳಲ್ಲಿ ಬಳಸುವ ಹಾನಿಕಾರಕ ರಾಸಾಯನಿಕಗಳಾಗಿವೆ.

ಈ ರಾಸಾಯನಿಕಗಳು ಮಕ್ಕಳ ಆರೋಗ್ಯವನ್ನ ಕೆಡಿಸುತ್ತವೆ. ಅವರು ಚರ್ಮವನ್ನು ಕೆಂಪಾಗಿಸಬಹುದು ಮತ್ತು ಸೋಂಕುಗಳಿಗೆ ಕಾರಣವಾಗಬಹುದು ಎಂದಿದೆ ಅಧ್ಯಯನ.
Tata Tiago EV | ಟಾಟಾ ಟಿಯಾಗೊ ಇವಿ ಶೀಘ್ರ ಮಾರುಕಟ್ಟೆಗೆ – ಇದರ ಬೆಲೆ ಎಷ್ಟು ಗೊತ್ತೇ..?
ಹೀಗಾಗಿ ಡೈಪರ್ ಧರಿಸಿದಾಗ ಮಗುವಿಗೆ ಅನಾನುಕೂಲತೆ ಅಥವಾ ಅಳುವುದು ಕಂಡುಬಂದ್ರೆ, ಡೈಪರ್ ಸುತ್ತಲಿನ ಚರ್ಮವನ್ನ ತಕ್ಷಣವೇ ಪರೀಕ್ಷಿಸಬೇಕು.
ಆಗಾಗ ಬಟ್ಟೆ ಬದಲಿಸುವುದು ಪಾಲಕರಿಗೆ ಹಿಂಸೆ. ಸಮಯ ಕೂಡ ಇರುವುದಿಲ್ಲ. ಹಾಗಾಗಿ ಬಹಳ ಸಮಯ ಒಂದೆ ಡೈಪರ್ ಬಳಸುತ್ತಾರೆ. ಇದರಿಂದ ಮಕ್ಕಳಿಗೆ ಯೂರಿನ್ ಇನ್ ಫೆಕ್ಷನ್ ಆಗುವ ಸಾಧ್ಯತೆ ಇದೆ. ನವಜಾತ ಶಿಶುಗಳು ಇದರಿಂದ ಬಹಳಷ್ಟು ಕಿರಿಕಿರಿ ಅನುಭವಿಸುತ್ತಾರೆ.

ವಯಸ್ಕರ ಚರ್ಮಕ್ಕಿಂತ ಮಕ್ಕಳ ಚರ್ಮ ಸಾಕಷ್ಟು ಸೂಕ್ಷ್ಮವಾಗಿರುತ್ತದೆ. ಡೈಪರ್ ಬಳಕೆಯಿಂದ ಸೋಂಕು ತಗಲುವ ಸಾಧ್ಯತೆ ಹೆಚ್ಚಿರುತ್ತದೆ. ಡೈಪರ್ ಗೆ ರಾಸಾಯನಿಕ ವಸ್ತುಗಳನ್ನು ಬಳಸಿರುತ್ತಾರೆ. ತೇವವನ್ನು ಹೀರಿಕೊಳ್ಳಲು ಪ್ಲಾಸ್ಟಿಕ್ ಕೂಡ ಬಳಸಿರುತ್ತಾರೆ. ಇದರಿಂದಾಗಿ ಗಾಳಿ ಆಡುವುದಿಲ್ಲ. ಹಾಗಾಗಿ ಬಹಳ ಬೇಗ ಇನ್ ಫೆಕ್ಷನ್ ಆಗುತ್ತೆ.
ಅನೇಕ ಸಂದರ್ಭಗಳಲ್ಲಿ ಡೈಪರ್ ಬಳಸುವುದು ಅನಿವಾರ್ಯವಾಗುತ್ತದೆ. ಆಗ ಮಕ್ಕಳ ಸುರಕ್ಷತೆ ಬಗ್ಗೆ ಪಾಲಕರು ಗಮನ ನೀಡಬೇಕಾಗುತ್ತದೆ.
ಮರೆತೂ ನವಜಾತ ಶಿಶುಗಳಿಗೆ ಡೈಪರ್ ಹಾಕಬೇಡಿ. ಅವರಿಗೆ ಸೋಂಕು ಅತಿ ಬೇಗ ತಗಲುತ್ತದೆ.
ಒಂದೇ ಡೈಪರನ್ನು ಬಹಳ ಸಮಯ ಹಾಕಬೇಡಿ. 3-4 ಗಂಟೆಗೊಮ್ಮೆ ಬದಲಾಯಿಸಿ.
ಮಲ-ಮೂತ್ರ ಮಾಡಿಕೊಂಡಿದ್ದರೆ ಆ ಕ್ಷಣವೇ ಬದಲಿಸಬೇಕು. ಇಲ್ಲವಾದರೆ ಮಗುವಿಗೆ ಕಿರಿಕಿರಿ ಉಂಟಾಗುವುದು.
Whatsapp ನಲ್ಲಿ ಹಳೆ ಮೆಸೇಜ್ ಗಳನ್ನು ಹುಡುಕಲು ಹೊಸ ಫೀಚರ್ – ಏನಿದು ? ಇಲ್ಲಿದೆ ವಿವರ
ಡೈಪರ್ ತೆಗೆದ ನಂತರ ಚರ್ಮವನ್ನು ಸ್ವಚ್ಛಗೊಳಿಸಿ. ಡೈಪರ್ ಕ್ರೀಂ ಬಳಸಿ. ಒಣ ಬಟ್ಟೆಯಲ್ಲಿ ಕ್ಲೀನ್ ಮಾಡಿ ಮತ್ತೊಂದು ಬಟ್ಟೆ ಹಾಕಿ.
ಒಂದೇ ಡೈಪರನ್ನು ಬಹಳ ಸಮಯ ಹಾಕಬೇಡಿ. 3-4 ಗಂಟೆಗೊಮ್ಮೆ ಬದಲಾಯಿಸಿ.
ಎಲ್ಲಾ ಸಮಯದಲ್ಲೂ ಒಂದೇ ಬಗೆಯ ಡೈಪರ್ ಬಳಸದಿರಿ. ರಾತ್ರಿ ವೇಳೆಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ರಾತ್ರಿ ಡೈಪರ್‍ಗಳನ್ನು ಬಳಸಿ. ಅದು ಮಗುವಿಗೆ ರಾತ್ರಿ ಉತ್ತಮ ನಿದ್ರೆ ಮಾಡಲು ಸಹಾಯ ಮಾಡುವುದು.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized23 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized12 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು9 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized10 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ11 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ10 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಬಿಗ್ ನ್ಯೂಸ್6 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ನಿಧನ ವಾರ್ತೆ9 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















