Connect with us

ಬಂಟ್ವಾಳ

Arecanut Plantation In Govt School | ಬಂಟ್ವಾಳದ ಸರ್ಕಾರಿ ಶಾಲೆಗೆ ಬಂತು ಶಾಲಾ ಬಸ್ – ಈ ಶಾಲೆಯ ಆದಾಯದ ಮೂಲವೇ ಸುಸಜ್ಜಿತ ಅಡಿಕೆ ತೋಟ

Published

on

Ad Widget

Ad Widget

Ad Widget

Ad Widget

ಪುತ್ತೂರು : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗೆ ನಗರ ಪ್ರದೇಶದಂತೆ ಉತ್ತಮ ಸೌಲಭ್ಯಕ್ಕಾಗಿ, ಶಾಲೆಯಲ್ಲಿ ಬೆಳೆಸಿದ ಅಡಿಕೆ ತೋಟದ ಆದಾಯದಿಂದಲೇ ( Arecanut Plantation In Govt School) ವಿದ್ಯಾರ್ಥಿಗಳಿಗೆ ಸಂಚರಿಸಲು ಶಾಲಾ ಬಸ್ (School Bus to Govt School ) ಖರೀದಿಸಿದ ರಾಜ್ಯದಲ್ಲೇ ಮಾದರಿ ಕಾರ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಮಿತ್ತೂರಿನ ಸರಕಾರಿ ಶಾಲೆಯ ಅಭಿವೃದ್ಧಿ ಸಮಿತಿಯವರು ಊರವರ ಸಹಕಾರದೊಂದಿಗೆ ಶಾಲೆಯ ಕೃಷಿ ಆದಾಯದಿಂದಲೇ ಬಸ್ ಖರೀದಿಸಿ ಮಾದರಿಯಾಗಿದ್ದರೆ.

Ad Widget

Ad Widget alt="Ad Widget"/>

Ad Widget

ಮಿತ್ತೂರು ಎಂಬುದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗಡಿ ಭಾಗದ ಒಂದು ಪುಟ್ಟ ಗ್ರಾಮ. ಇಲ್ಲೊಂದು 112 ವರ್ಷಗಳ ಇತಿಹಾಸವನ್ನು ಹೊಂದಿರುವ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇದೆ. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ವ್ಯಾಸಾಂಗ ನಡೆಸುತ್ತಿದ್ದಾರೆ. ಶಾಲೆಯ ಶಾಲಾಭಿವೃದ್ಧಿ ಸಮಿತಿಯೂ ಅಧ್ಯಕ್ಷರಾದ ಆದಂ ಅವರ ನೇತೃತ್ವದಲ್ಲಿ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದೆ.

Ad Widget

Ad Widget <> Ad Widget

1910ನೇ ಇಸವಿಯಲ್ಲಿ ಆರಂಭಗೊಂಡ ಮಿತ್ತೂರು ಶಾಲೆಯಲ್ಲೀಗ 100ಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಈ ಶಾಲೆಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಬಸ್‌ಗೆ ಚಾಲನೆ ನೀಡಿ, ಶಾಲೆಗೆ ಮತ್ತಷ್ಟು ನೆರವುಗಳನ್ನು ಘೋಷಿಸಿದರು. ಇದೀಗ ಈ ಶಾಲೆಯ ವಿದ್ಯಾರ್ಥಿಗಳು ಸೋಮವಾರ ಶಾಲಾ ಬಸ್ ಹತ್ತಿ ಸಂಭ್ರಮಪಟ್ಟರು.

ಶಾಲೆ ಸುಮಾರು 4.15 ಎಕರೆಯಷ್ಟು ಜಾಗವನ್ನು ಹೊಂದಿದ್ದು, ಅದರಲ್ಲಿ ಒಂದು ಎಕರೆಯಷ್ಟು ಪೂರ್ತಿ ಅಡಕೆ ತೋಟವನ್ನೇ ಹೊಂದಿದೆ. ಅಲ್ಲದೆ ಇತರೆಡೆಗಳಲ್ಲೂ ಅಡಕೆ ಗಿಡ ನೆಡಲಾಗಿದೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಆದಂ ಮಿತ್ತೂರು ಅವರು ಇತರ ಎಸ್‌ಡಿಎಂಸಿ ಸದಸ್ಯರ ಜತೆಗೂಡಿ ಕೆಲ ವರ್ಷಗಳ ಹಿಂದೆ ಸ್ವತಃ ಖರ್ಚು ಮಾಡುವ ಮೂಲಕ ಶಾಲಾಭಿವೃದ್ಧಿ ಜತೆಗೆ ಕೈತೋಟದ ಅಭಿವೃದ್ಧಿಗೆ ಕಾರ್ಯೋನ್ಮುಖರಾದರು. 2017ರಲ್ಲಿ ನೆಟ್ಟ 628 ಗಿಡಗಳು ಈಗ ಫಸಲು ನೀಡುತ್ತಿದೆ ಎಂದು ಇಲ್ಲಿನ ಶಿಕ್ಷಕ ಸಂಜೀವ ಎನ್. ತಿಳಿಸಿದರು.

Ad Widget

Ad Widget

ಕಳೆದ ವರ್ಷ ಅಡಕೆ ತೋಟ ಫಸಲು ನೀಡಲಾರಂಭಿಸಿತು. ಶಾಲೆಯ ಮೇಲೆ ಪ್ರೀತಿಯಿಟ್ಟ ಊರ ವಿದ್ಯಾಭಿಮಾನಿಗಳು ತೋಟವನ್ನು ನೋಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಬಸ್ ಖರೀದಿಗೆ ನಿಧಿಸಂಚಯವಾಯಿತು ಎಂದು ಶಾಲೆ ಮುಖ್ಯೋಪಾಧ್ಯಾಯಿನಿ ಸರೋಜಾ ಎ. ತಿಳಿಸಿದರು.

ಸುತ್ತಮುತ್ತಲಿನ ಸುಮಾರು 118 ಮಕ್ಕಳು ಈ ಶಾಲೆಗೆ ಆಗಮಿಸುತ್ತಿದ್ದಾರೆ. ಇದುವರೆಗೆ ಆಟೊಗಳಲ್ಲಿ ಬರುತ್ತಿದ್ದರು. ಇನ್ನು ಬಸ್‌ನಲ್ಲಿ ಎರಡು ಟ್ರಿಪ್‌ಗಳನ್ನು ಮಾಡುವ ಮೂಲಕ ಬರಲು ಸಾಧ್ಯ. ಮೂರು ವರ್ಷಗಳ ಹಿಂದೆ ಎಸ್‌ಡಿಎಂಸಿಯೇ ಆಟೋ ರಿಕ್ಷಾ ಬಾಡಿಗೆ ಗೊತ್ತು ಮಾಡಿ ಮಕ್ಕಳನ್ನು ಕರೆತರುವ ವ್ಯವಸ್ಥೆ ಮಾಡಿತ್ತು. ಇದೀಗ ಸೆಕೆಂಡ್ ಹ್ಯಾಂಡ್ ಬಸ್ ಖರೀದಿಯಾಗಿದೆ. ಇದರ ಖರ್ಚು ವೆಚ್ಚವನ್ನು ಪೋಷಕರು ಸಮಾನವಾಗಿ ಭರಿಸಲಿದ್ದಾರೆ ಎಂದು ಮುಖ್ಯೋಪಾಧ್ಯಾಯಿನಿ ಸರೋಜಾ ಹೇಳಿದರು.

ಗ್ರಾಮ ಪಂಚಾಯಿತಿ ಸಹಿತ ಊರವರ ಕೊಡುಗೆ ಆದಂ ಅವರ ಅಧ್ಯಕ್ಷತೆಯಲ್ಲಿ ಸಕ್ರಿಯವಾದ ಎಸ್‌ಡಿಎಂಸಿ ಹಾಗೂ ಸಮರ್ಥ ಶಿಕ್ಷಕರ ತಂಡದಿಂದ ಶಾಲೆ ಪ್ರಗತಿಯತ್ತ ಮುನ್ನಡೆಯುತ್ತಿದೆ. ಸ್ಮಾರ್ಟ್ ಶೌಚಾಲಯ ಸಹಿತ ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಈಗಾಗಲೇ ನಡೆದಿವೆ. ಇನ್ನಷ್ಟು ನೆರವು ನೀಡುವುದಾಗಿ ಈಗಾಗಲೇ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಕೈತೋಟದ ಮೂಲಕ ನಳನಳಿಸುತ್ತಿರುವ ಹಸಿರುಲೋಕ ಆರ್ಥಿಕವಾಗಿಯೂ ಶಕ್ತಿ ನೀಡಿದೆ. ತರಗತಿ ಕೊಠಡಿ, ವೇದಿಕೆ, ಸಭಾಂಗಣ, ಸ್ಮಾರ್ಟ್‌ ಕ್ಲಾಸ್‌ಗಳ ನಿರೀಕ್ಷೆಯಲ್ಲಿ ಶಾಲಾಭಿಮಾನಿಗಳು ಇದ್ದಾರೆ.

Ad Widget
Click to comment

Leave a Reply

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಆರೋಗ್ಯ

Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

Published

on

Ad Widget

Ad Widget

Ad Widget

Ad Widget

ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.

Ad Widget

Ad Widget <> Ad Widget

ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.

ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.

Ad Widget

Ad Widget

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.

ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.

Ad Widget
Continue Reading

ಅಪರಾಧ

Bantwala-ಬಂಟ್ವಾಳ: ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಅಂದರ್, ₹2.01 ಲಕ್ಷ ವಶ

Published

on

Ad Widget

Ad Widget

Ad Widget

Ad Widget

ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಬಂಧಿತ ಆರೋಪಿಗಳು.

Ad Widget

Ad Widget <> Ad Widget

ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಮತ್ತು ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸುವ ಕೆಲಸ ನಿರ್ವಹಿಸುತ್ತಿದ್ದರು. ಅದರಂತೆ 2026ರ ಆಗಸ್ಟ್ 20ರಂದು ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಲು ಬೈಕ್‌ನಲ್ಲಿ ತೆರಳಿದ್ದರು.

ಹಲವು ಅಂಗಡಿಗಳಿಂದ ನಗದು ಸಂಗ್ರಹಿಸಿಕೊಂಡು ಬಂಟ್ವಾಳದ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಘಟನೆ ನಡೆದಿದೆ.

Ad Widget

Ad Widget

ಈ ಸಂದರ್ಭದಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಮಯ್ಯದಿ ಅವರಿಗೆ ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಅವರ ಬಳಿಯಿದ್ದ ₹8,35,000 ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 115/2026ರ ಅಡಿಯಲ್ಲಿ ಬಿಎನ್‌ಎಸ್ ಕಲಂ 309(6) ಹಾಗೂ ಆರ್ಮ್ಸ್ ಆಕ್ಟ್ ಕಲಂ 25(1)(A)ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂಬವರನ್ನು ನವೆಂಬರ್ 11ರಂದು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ವಿಚಾರಣೆಗಾಗಿ ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳಿಂದ ₹2,01,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ಕೂಡ ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!