ಚಿನ್ನ-ಬೆಳ್ಳಿ ದರ
Gold Rate Today : ಇಂದು ಹೇಗಿದೆ ಚಿನ್ನ ಬೆಳ್ಳಿಯ ರೇಟ್ ಗೊತ್ತೆ ? ಖರೀದಿಗೂ ಮುನ್ನ ಇಲ್ಲಿ ನೋಡಿ
Gold and Silver price today : ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ದೊಡ್ಡದಿದೆ. ಜತೆಗೆ ಚಿನ್ನದ ಮೇಲಿನ ವ್ಯಾಮೋಹವೂ ಹಲವರಿಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿನಿತ್ಯ ಏರುಪೇರಾಗುತ್ತದೆ. ಪ್ರತಿನಿತ್ಯದ ಬೆಲೆ ನೋಡಿಯೇ ಜನ ಹೂಡಿಕೆ ಮಾಡುತ್ತಾರೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ?
ಚಿನ್ನ ಮತ್ತು ಬೆಳ್ಳಿ ಅಂದರೆ ಬಹುತೇಕ ಮಹಿಳೆಯರಿಗೆ ಪ್ರಾಣ, ಮತ್ತು ಎಷ್ಟೋ ಕಷ್ಟದ ಸಮಯಗಳಲ್ಲಿ ಮನೆಯ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲುವುದೇ ಮನೆಯಲ್ಲಿರುವ ಚಿನ್ನ. ಇದೇ ಕಾರಣಕ್ಕಾಗಿ ಕೆಲವರು ಆಪತ್ಕಾಲಕ್ಕಾಗಿ ಎಂದು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಇನ್ನು ಕೆಲವರು ಆಭರಣದ ಮೇಲಿನ ವ್ಯಾಮೋಹಕ್ಕಾಗಿ ಚಿನ್ನ ಕೊಳ್ಳುತ್ತಾರೆ. ಒಟ್ಟಿನಲ್ಲಿ ಚಿನ್ನ ಮತ್ತು ಬೆಳ್ಳಿಗೆ ಸದಾಕಾಲ ಬೇಡಿಕೆ ಇದ್ದೇ ಇದೆ.
Gold Rate Today: ಇಂದು ಸೆಪ್ಟೆಂಬರ್ 13, ಮಂಗಳವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹ 5,098 ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ ₹ 5,103 ನಿಗದಿಯಾಗಿದೆ. ಈ ಮೂಲಕ ಚಿನ್ನದ ದರದಲ್ಲಿ ತುಸು ಇಳಿಕೆಯಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ಬೆಲೆ ₹4,678 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹ 46,780 ನಿಗದಿಯಾಗಿದೆ. 100 ಗ್ರಾಂ ಚಿನ್ನದ ಬೆಲೆ ರೂ 4,67,800 ಆಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಅಪರಂಜಿ ಚಿನ್ನದ ಬೆಲೆ ರೂ 5103 ಆಗಿದೆ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 51,030 ರೂಪಾಯಿ ದಾಖಲಾಗಿದೆ.
Petrol Disel Rate : ಕಚ್ಚಾ ತೈಲ ಬೆಲೆ 7 ತಿಂಗಳ ಕನಿಷ್ಟಕ್ಕೆ – ಕಡಿಮೆಯಾದೀತೆ ಪೆಟ್ರೋಲ್ ಡಿಸಿಲ್ ದರ
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ
ತೂಕ ಇಂದಿನ ನಿನ್ನೆಯ ಬದಲಾದ
22 ಕ್ಯಾರಟ್ ದರ ದರ ದರ
1 gm ₹4,678 ₹4,680 ₹ -2
8 gram ₹37,424 ₹37,440 ₹ -16
10 gram ₹46,780 ₹46,800 ₹ -20
100 gram ₹4,67,800 ₹4,68,000 ₹ – 200
ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ
ತೂಕ ಇಂದಿನ ನಿನ್ನೆಯ ಬದಲಾದ
24 ಕ್ಯಾರಟ್ ದರ ದರ ದರ
1 gm ₹ 5103 ₹ 5105 ₹ -2
8 gram ₹ 40,824 ₹40840 ₹ -16
10 gram ₹ 51030 ₹ 51050 ₹ -20
100 gram ₹ 510300 ₹ 510500 ₹ – 200
ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ:
ಚೆನ್ನೈ: ₹ 47,450 (22 ಕ್ಯಾರಟ್) – (24 ಕ್ಯಾರಟ್)
ದಿಲ್ಲಿ: ₹ 46,900 (22 ಕ್ಯಾರಟ್) – ₹ 51,150 (24 ಕ್ಯಾರಟ್)
ಹೈದರಾಬಾದ್: ₹ 46,750 (22 ಕ್ಯಾರಟ್) – ₹ 51,000 (24 ಕ್ಯಾರಟ್)
ಕೋಲ್ಕತಾ: ₹46,750 (22 ಕ್ಯಾರಟ್) – ₹51,000 (24 ಕ್ಯಾರಟ್)
ಮಂಗಳೂರು: ₹46,800 (22 ಕ್ಯಾರಟ್) – ₹51,050 (24 ಕ್ಯಾರಟ್)
ಮುಂಬಯಿ: ₹46,750 (22 ಕ್ಯಾರಟ್) – ₹51,000 (24 ಕ್ಯಾರಟ್)
ಮೈಸೂರು: ₹46,800 (22 ಕ್ಯಾರಟ್) – ₹51,050 (24 ಕ್ಯಾರಟ್)
ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಬೆಂಗಳೂರು : ₹ 51,760, ಚೆನ್ನೈ- ₹ 51,710 ರೂ, ಮುಂಬೈ- 51,000 ರೂ, ದೆಹಲಿ- ₹ 51,150 ರೂ, ಕೊಲ್ಕತ್ತಾ- 51,000 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,050 ರೂ, ಮೈಸೂರು- 51,050 ರೂ. ಆಗಿದೆ.
AAI Recruitment : ಎಎಐ ನೇಮಕಾತಿಗೆ ಅರ್ಜಿ ಆಹ್ವಾನ : sslc , Puc, Diploma Degee ವಿದ್ಯಾರ್ಹತೆ
ಬೆಳ್ಳಿ ದರ (Silver Rate)
ಇನ್ನು ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹ 55,2000 ರೂಪಾಯಿ ದಾಖಲಾಗಿದ್ದು, ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹61,400 ರಿಂದ ಏರಿಕೆಯಾಗಿದೆ.. ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 1000 ರೂಪಾಯಿ ಏರಿಕೆಯ ನಂತರ 62,400 ರೂಪಾಯಿ ಇದೆ. ನಿನ್ನೆ 61,400 ರೂಪಾಯಿಗೆ ಬಂದು ನಿಂತಿತ್ತು. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು (13, ಆಗಸ್ಟ್ 2022, ಮಂಗಳವಾರ) ಇದೇ ದರಗಳು ಇವೆ. ದೇಶದಲ್ಲಿ ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಏರಿಕೆಯಾಗಿದೆ. ಪ್ರಸ್ತುತ ಕೆಜಿ ಬೆಳ್ಳಿ ಬೆಲೆ 55,200 ರೂಪಾಯಿ ಇದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆಯಾಗಿಲ್ಲ.
ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ತಟಸ್ಥತೆ ಕಂಡುಬಂದಿದ್ದರೆ, ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ.
ಗ್ರಾಂ ಇಂದಿನ ಬೆಳ್ಳಿ ಬೆಲೆ
1 ಗ್ರಾಂ ₹62.40
8 ಗ್ರಾಂ ₹499.20
10 ಗ್ರಾಂ ₹624
100 ಗ್ರಾಂ ₹6,240
1 ಕೆಜಿ ₹62,400
ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳ್ಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ನಿಧನ ವಾರ್ತೆ23 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್18 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು14 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು17 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized22 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ20 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್16 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ20 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















