ಮಂಗಳೂರು
Mangalore Road | ಮೋದಿ ಆಗಮನದ ಸಂದರ್ಭ ಡಾಮರೀಕರಣಗೊಂಡು ಶೃಂಗಾರಗೊಂಡಿದ್ದ ಮಂಗಳೂರಿನ ರಸ್ತೆಯಲ್ಲಿ ಹತ್ತೇ ದಿನದಲ್ಲಿ ಗುಂಡಿ ಪ್ರತ್ಯಕ್ಷ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ( Modi Visit Mangalore) ಮಂಗಳೂರಿಗೆ ಭೇಟಿ ಸಂದರ್ಭದಲ್ಲಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದ (Mangalore Road) ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೂಳೂರು ಸೇತುವೆ ಮೇಲಿನ ಡಾಂಬರು ಹತ್ತೇ ದಿನಗಳಲ್ಲಿ ಕಿತ್ತುಹೋಗಿದೆ. ಬೆಂಗಳೂರಿನಲ್ಲೂ ಇದೇ ರೀತಿ ಮೋದಿ ಆಗಮನದ ಸಂದರ್ಭ ಹಾಕಿದ್ದ ಡಾಮಾರು ಕೆಲವೇ ದಿನಗಳಲ್ಲ ಎದ್ದು ಹೋಗಿರುವುದು ಭಾರಿ ಚರ್ಚೆಗ ಗ್ರಾಸವಾಗಿತ್ತು. ಇದೀಗ ಮಂಗಳೂರಿನ ರಸ್ತೆಯ ಗುಂಡಿಯೂ ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗುತ್ತಿದೆ.
ನವಮಂಗಳೂರು ಬಂದರಿನಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಸೆ.2ರಂದು ನಗರಕ್ಕೆ ಭೇಟಿ ನೀಡಿದ್ದರು. ಬಂಗ್ರಕೂಳೂರಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲು ಮೋದಿ ಅವರು ನವಮಂಗಳೂರು ಬಂದರಿನಿಂದ ರಸ್ತೆ ಮಾರ್ಗವಾಗಿ ಸಂಚರಿಸಿದ್ದರು. ಅವರು ಸಾಗುವ ರಸ್ತೆಯಲ್ಲಿದ್ದ ಗುಂಡಿಗಳನ್ನು ಕಾರ್ಯಕ್ರಮಕ್ಕೆ ಎರಡು ದಿನಗಳಿಗೆ ಮುಂಚಿತವಾಗಿ ಮುಚ್ಚಿ, ತರಾತುರಿಯಲ್ಲಿ ಡಾಂಬರೀಕರಣ ಮಾಡಲಾಗಿತ್ತು. ಹಲವು ವರ್ಷಗಳಿಂದ ಈ ಸೇತುವೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಿತ್ತು ಮೋದಿ ಬರುವಾಗ ಸುಸಜ್ಜಿತ ರಸ್ತೆ ನಿರ್ಮಾಣವಾಗಿತ್ತು. ಆದರೆ ಕೂಳೂರು ಸೇತುವೆ ಮೇಲೆ ಮತ್ತೆ ಗುಂಡಿಗಳು ಕಾಣಿಸಿಕೊಂಡಿವೆ.
ಕೂಳೂರು ಹಾಗೂ ಪಣಂಬೂರು ಪ್ರದೇಶಗಳಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಾಣವಾಗಿದ್ದ ಗುಂಡಿಗಳನ್ನು ಮುಚ್ಚಲು ನಾಲ್ಕು ತಿಂಗಳಿನಿಂದ ಜನ ಒತ್ತಾಯಿಸಿದ್ದರು. ಆದರೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಾಗೂ ಸ್ಥಳೀಯ ಆಡಳಿತಕ್ಕೆ ಗುಂಡಿ ಮುಚ್ಚಲು ಕ್ರಮ ಕೈಗೊಂಡಿರಲಿಲ್ಲ ಪ್ರಧಾನಿ ಬರುವ ಕಾರ್ಯಕ್ರಮ ನಿಗದಿಯಾದ ನಾಲ್ಕೆ ದಿನಗಳಲ್ಲಿ ಇಲ್ಲಿನ ರಸ್ತೆಗಳ ಚಿತ್ರಣವೇ ಬದಲಾಗಿತ್ತು.
ಹೋರಾಟಗಾರ ಎಂ.ಜಿ.ಹೆಗಡೆ ಈ ಬಗ್ಗೆ ಮಾತನಾಡಿ ‘ಪ್ರಧಾನಿ ಮೋದಿ ಬರುತ್ತಾರೆ ಎಂದು ರಸ್ತೆ ದುರಸ್ತಿಗೆ ಸುರಿದ ಅಷ್ಟು ದುಡ್ಡು ವ್ಯರ್ಥವಾಗಿದೆ. ಜನರ ತೆರಿಗೆ ಹಣ ಈ ರೀತಿ ಪೋಲಾದರೆ ಈ ನಷ್ಟವನ್ನು ಭರಿಸುವವರು ಯಾರು..? ಎಂದು ಪ್ರಶ್ನಿಸಿದ ಹೆಗಡೆ ನಮ್ಮ ಹಣೆಬರಹ ಎಂದು ತನ್ನ ಫೇಸ್ಬುಕಲ್ಲಿ ಬರೆದುಕೊಂಡಿದ್ದಾರೆ.
‘ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುಂಡಿ ನಿರ್ಮಾಣವಾಗುವುದು ಸಹಜ. ಸಣ್ಣ ಹೊಂಡ ಬಿದ್ದಾಗಲೇ ಅದನ್ನು ಮುಚ್ಚುವುದಕ್ಕೆಂದೇ ಗ್ಯಾಂಗ್‌ಮನ್ ವ್ಯವಸ್ಥೆ ಇದೆ. ಹೆದ್ದಾರಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದಕ್ಕೆಂದೇ ಎಂಜಿನಿಯರ್‌ಗಳು ಇರುತ್ತಾರೆ. ಇಷ್ಟೆಲ್ಲ ಇದ್ದೂ ರಸ್ತೆಗಳು ಗುಂಡಿ ಬೀಳುತ್ತವೆ ಎಂದಾದರೆ ಅಧಿಕಾರಿಗಳಿಗೆ ಸಂಬಳ ಕೊಡುವುದಾದರೂ ಏಕೆ’ ಎಂದು ಅವರು ಪ್ರಶ್ನಿಸಿದರು.
‘ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಗ್ರಹವಾಗುವ ಶುಲ್ಕವನ್ನು ಆಯಾ ಪ್ರದೇಶದ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಬಳಸಬೇಕು. ನಮ್ಮಲ್ಲಿ ಹೆದ್ದಾರಿಗಳ ನಿರ್ವಹಣೆ ಮರೀಚಿಕೆಯಾಗಿದೆ. ಟೋಲ್ ಪ್ಲಾಜಾಗಳಲ್ಲಿ ನಿತ್ಯವೂ ಸಂಗ್ರಹವಾಗುವ ಲಕ್ಷಗಟ್ಟಲೆ ರೂಪಾಯಿಯಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೂ ಪಾಲು ಸಿಗುತ್ತಿದೆ ಎಂಬುವುದರಲ್ಲಿ ಸಂಶಯವಿಲ್ಲ. ಇಂತಹ ಸಮಸ್ಯೆ ಮರುಕಳಿಸುವುದನ್ನು ತಡೆಯಬೇಕಾದರೆ ಜನರು ಚುನಾವಣೆ ಬಂದಾಗ ಜನರು ಭಾವನಾತ್ಮಕ ವಿಚಾರಗಳಿಗೆ ಮರುಳಾಗದೇ ಆಡಳಿತದ ವೈಖರಿಯನ್ನು ನೋಡಿ ಮತ ಚಲಾಯಿಸಬೇಕು’ ಎಂದರು.
‘ಕುಡಿಯುವ ನೀರಿನ ಕೊಳವೆ ಕಾಮಗಾರಿಯಿಂದಾಗಿ ಕೂಳೂರು ಪ್ರದೇಶದಲ್ಲಿ ರಸ್ತೆ ಹದಗೆಟ್ಟಿತ್ತು. ಪ್ರಧಾನಿಯವರು ನಗರಕ್ಕೆ ಭೇಟಿ ನೀಡುವಾಗ ರಸ್ತೆ ಗುಂಡಿಗಳನ್ನು ಹಾಗೆಯೇ ಬಿಡುವುದು ಸರಿಯಲ್ಲ ಎಂಬ ಕಾರಣಕ್ಕೆ ನಾವು ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಕೈಗೊಂಡಿದ್ದೆವು. ಈ ಹೆದ್ದಾರಿಯಲ್ಲಿ ಮತ್ತೆ ಗುಂಡಿ ಕಾಣಿಸಿಕೊಂಡಿದ್ದರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಎನ್‌ಎಚ್‌ಐ ಯೋಜನಾ ನಿರ್ದೇಶಕ ಲಿಂಗೇಗೌಡ ಮಾಧ್ಯಮಗಳಿಗೆ ತಿಳಿಸಿದರು.
ಶಿಕ್ಷಣ
Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.
ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.
ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಎಸ್‌ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್‌ಐಟಿಕೆ (NITK) ಸುರತ್ಕಲ್‌ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್‌ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್‌ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.
ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.
ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.
ಮಂಗಳೂರು
Girish Mattannavar-ಸೌಜನ್ಯ ಪ್ರಕರಣ: ಎಸ್‌ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಮಂಗಳೂರಿನ ಎಸ್‌ಐಟಿ ಕಚೇರಿಗೆ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು, ಮಾಹಿತಿ ಹಾಗೂ ಪತ್ರಿಕಾ ವರದಿಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ದಾಖಲೆಗಳ ಸಮೇತ ಆಗಮಿಸಿದ್ದಾರೆ.
ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಕಚೇರಿಗೆ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು, ಮಾಹಿತಿ ಹಾಗೂ ಪತ್ರಿಕಾ ವರದಿಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಇದೇ ವೇಳೆ, ಪ್ರಕರಣದ ಮತ್ತೊಬ್ಬ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೂ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣನವರ್, ನಿರಂತರ ಹೋರಾಟದ ಫಲವಾಗಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. 14 ವರ್ಷಗಳ ಬಳಿಕ ಇದೀಗ ಪ್ರಕರಣದ ತನಿಖೆಯನ್ನು ಎಳೆಎಳೆಯಾಗಿ ನಡೆಸಲಾಗುತ್ತಿದೆ. 14 ವರ್ಷಗಳ ಹಿಂದೆಯೇ ಈ ರೀತಿಯ ತನಿಖೆ ನಡೆದಿದ್ದರೆ, ಇಂದು ಇಷ್ಟು ದೊಡ್ಡ ಹೋರಾಟ ಮಾಡುವ ಅಗತ್ಯವೇ ಇರಲಿಲ್ಲ ಎಂದು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಆರ್. ಅಶೋಕ್ ಅವರು ರಾಜೀನಾಮೆ ನೀಡಬೇಕು ಹಾಗೂ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ ಮಟ್ಟಣ್ಣನವರ್, ಸಿಬಿಐ ತನಿಖೆಗೆ ಆದೇಶ ನೀಡಿದ್ದೇವೆ ಎಂದು ಹೇಳುವವರು, ತನಿಖೆಯ ಪ್ರಕ್ರಿಯೆ ವಿಳಂಬವಾಗಿರುವ ಬಗ್ಗೆ ಉತ್ತರಿಸಬೇಕು ಎಂದರು.
ಸಿಬಿಐ ತನಿಖೆಗೆ ಆದೇಶ ನೀಡಿದ್ದು 2013ರ ನವೆಂಬರ್ 6ರಂದು, ಆದರೆ ಎಫ್‌ಐಆರ್ ದಾಖಲಾಗಿದ್ದು 2014ರ ಮಾರ್ಚ್ 6ರಂದು. ಆದೇಶವಾದ ನಾಲ್ಕು ತಿಂಗಳ ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ. ರಾಜಕೀಯ ಹಸ್ತಕ್ಷೇಪದಿಂದಲೇ ಇಷ್ಟು ವರ್ಷ ತನಿಖೆ ಮುಂದುವರಿದಿದೆ ಎಂಬ ಆರೋಪಕ್ಕೆ ಆರ್. ಅಶೋಕ್ ಅವರು ಪ್ರತಿಕ್ರಿಯೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಎಸ್‌ಐಟಿ ತನಿಖೆ ಕುರಿತು ಮಾತನಾಡಿದ ಅವರು, ತನಿಖಾಧಿಕಾರಿಗಳು ಉತ್ತಮ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಹೈವಿಟ್‌ನೆಸ್ ಆಗಿರುವ ಎಂಟು ಮಂದಿಯನ್ನು ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನಮಗೆ ತಿಳಿದಿರುವ ಎಲ್ಲಾ ಮಾಹಿತಿ ಹಾಗೂ ದಾಖಲೆಗಳನ್ನು ಎಸ್‌ಐಟಿಗೆ ಒದಗಿಸಿದ್ದೇವೆ ಎಂದು ತಿಳಿಸಿದರು.
ಸೌಜನ್ಯ ಅವರ ತಾಯಿ ಕುಸುಮಾವತಿ ಸೇರಿದಂತೆ ಪ್ರಕರಣದ ಹೋರಾಟಗಾರರು ಎಸ್‌ಐಟಿ ತನಿಖೆಗೆ ಸಮಯಮಿತಿಯ ಒತ್ತಡ ಹೇರುವುದಿಲ್ಲ. ತನಿಖೆಗೆ ಅಗತ್ಯವಿರುವಷ್ಟು ಸಮಯವನ್ನು ಅಧಿಕಾರಿಗಳು ತೆಗೆದುಕೊಳ್ಳಲಿ. 14 ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇವೆ. ತನಿಖೆ ಸರಿಯಾಗಿ ನಡೆದರೆ ಸಾಕು ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.
ಅಪರಾಧ
Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.
ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್‌ನ ಮೊಬೈಲ್ ಪಾಸ್‌ವರ್ಡ್‌ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್‌ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.
ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.
ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್‌ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.
ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ಸ್ಥಳೀಯ9 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್8 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್4 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು3 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಶಿಕ್ಷಣ10 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಮಂಗಳೂರು2 hours agoGirish Mattannavar-ಸೌಜನ್ಯ ಪ್ರಕರಣ: ಎಸ್‌ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಶಿಕ್ಷಣ2 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಅಪರಾಧ2 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ















