Connect with us

ನಿಧನ ವಾರ್ತೆ

‘ರಿಕ್ಷಾ ಸಂಕಪ್ಪ’ ಎಂದೇ ಚಿರಪರಿಚಿತರಾಗಿದ್ದ ಸಂಕಪ್ಪ ಮೂಲ್ಯ ನೇಣು ಬಿಗಿದು ಆತ್ಮಹತ್ಯೆ

Published

on



Ad Widget

Ad Widget

Ad Widget

Ad Widget

ಪುತ್ತೂರು,‌ ಸೆ 15 : ರಿಕ್ಷಾ‌ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೇಡಿಯಾಪು ಕಜೆ ಸಮೀಪದ ದೇವಿನಗರ‌ ಎಂಬಲ್ಲಿ ನಡೆದಿದೆ. ಕಜೆ‌ ಸಮೀಪದ ದೇವಿನಗರ‌ ನಿವಾಸಿ ಸಂಕಪ್ಪ ಮೂಲ್ಯ ಆತ್ಮಹತ್ಯೆ ಮಾಡಿಕೊಂಡ‌ ದುರ್ದೈವಿ.

Ad Widget

Ad Widget

Ad Widget

Ad Widget

ಪುತ್ತೂರಿನ ಬೊಳುವಾರು ರಿಕ್ಷಾ‌ ತಂಗುದಾಣದಿಂದ‌ ನಿತ್ಯ ರಿಕ್ಷಾ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಿಕ್ಷಾ ಸಂಕಪ್ಪ ಎಂದೇ ಚಿರಪರಿಚಿತರಾಗಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೆ‌ ತಿಳಿದು ಬರಬೇಕಾಗಿದೆ.

Ad Widget

Ad Widget <> Ad Widget

ಮೂವರು ಮಕ್ಕಳು, ಪತ್ನಿ ಇಬ್ಬರು ಸಹೋದರರು, ಕುಟುಂಬಸ್ಥರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.



Ad Widget

ಘಟನಾ‌ ಸ್ಥಳಕ್ಕೆ ಪುತ್ತೂರು ಠಾಣೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

ನಿಧನ ವಾರ್ತೆ

Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ

Published

on



Ad Widget

Ad Widget

Ad Widget

Ad Widget

ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget

Ad Widget

ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget <> Ad Widget

ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Ad Widget

ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Ad Widget

Ad Widget

ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಿಗೂಢ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ಹಿಂದಿನ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading