ಪುತ್ತೂರು
Boycott Business | ನಮ್ಮ ವ್ಯವಹಾರ ನಮ್ಮವರ ಜೊತೆ ಮಾಡಬೇಕು – ಮತಾಂಧರಿಗೆ ಎಚ್ಚರಿಕೆ ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆದರೆ ನಿಮ್ಮ ಕಾರ್ಯಕರ್ತರು ಬೀದಿ ಹೆಣವಾಗಲಿದ್ದಾರೆ – ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಮತಾಂಧರಿಗೆ ಬುದ್ದಿ ಕಳಿಸಬೇಕಾದರೆ ನಮ್ಮ ವ್ಯವಹಾರ ನಮ್ಮವರ ಜೊತೆ ಮಾಡಬೇಕು (Boycott Business ) , ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆದರೆ ಮತಾಂಧರ ಕಾರ್ಯಕರ್ತರು ಬೀದಿ ಹೆಣವಾಗಲಿದ್ದಾರೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ತಿಂಗಳಾಡಿಯಲ್ಲಿ ಮುಸ್ಲಿಂ ಯುವಕನೋರ್ವ ದಿನಸಿ ಸಾಮಾಗ್ರಿ ಖರೀದಿಸಲು ಅಂಗಡಿಗೆ ಬಂದಿದ್ದ ಹಿಂದೂ ಮಹಿಳೆಯೋರ್ವರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದು , ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ, ಈ ರೀತಿಯ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳಿಂದ ಸೆ.15 ರಂದು ಬೆಳಿಗ್ಗೆ ತಿಂಗಳಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ತಿಂಗಳಾಡಿಯ ಮುಖ್ಯರಸ್ತೆಯಲ್ಲಿ ಜಾಥ ನಡೆದು ಎಲ್ಲಾ ವರ್ತಕರು ಅರ್ಧಗಂಟೆ ಅಂಗಡಿಮುಂಗಟ್ಟು ಬಂದ್ ಮಾಡುವಂತೆ ಹಿಂದೂ ಮುಖಂಡರು ಮನವಿ ಮಾಡಿಕೊಂಡರು. ಅದರಂತೆ ಹಿಂದೂ-ಮುಸ್ಲಿಂ ವರ್ತಕರು ತಮ್ಮ ಅಂಗಡಿಮುಂಗಟ್ಟುಗಳನ್ನು ಅರ್ಧ ಗಂಟೆ ಬಂದ್ ಮಾಡಿದ್ದರು. ಆ ಬಳಿಕ ತಿಂಗಳಾಡಿ ಜಂಕ್ಷನ್ ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕೊಟ್ಟ ಗಡುವಿನೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ ಹೇಳಿದರು.
ಪ್ರವೀಣ್ ನೆಟ್ಟಾರು ನಂತಹ ಕಾರ್ಯಕರ್ತನ ಬಲಿದಾನವಾದಗ ತನಿಖೆ ನಡೆಸಿದ ಪೊಲೀಸರಿಗೆ ಸಿಕ್ಕಿದ ಉತ್ತರ, ಹಿಂದೂ ಸಮಾಜ ಹೆದರಿಕೆಯಿಂದ ಬದುಕುವಂತಹ ಭಯ ನಿರ್ಮಿಸಲು ಮತಾಂಧರು ತಯಾರಿ ನಡೆಸಿದ್ದಾರೆ . ಈ ಸಂದರ್ಭ ನಾವು ನಿಶ್ಚಯ ಮಾಡಬೇಕು , ಮತಾಂಧರ ಜೊತೆ ವ್ಯವಹಾರ ನಿಲ್ಲಿಸುವ ಮೂಲಕ ಇಂತಹ ಸಮಾಜಘಾತುಕ ಶಕ್ತಿಗಳಿಗೆ ಉತ್ತರ ಕೊಡಬೇಕು ಎಂದು ಪುತ್ತಿಲ ಹೇಳಿದರು.
ಭಜರಂಗ ಮುಖಂಡ ಮುರಳಿಕೃಷ್ಣ ಹಸಂತಡ್ಕ ಮಾತನಾಡಿ , ಇನ್ನು ಮುಂದಕ್ಕೆ ಹಿಂದೂ ಸಮಾಜದ ಮೇಲೆ ದೌರ್ಜನ್ಯ ಮಾಡುವ ಜಿಹಾದಿಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡುವ ಮುಖಾಂತರ ಹಿಂದೂ ಸಂಘಟನೆಯ ಕಾರ್ಯಕರ್ತರು ಉತ್ತರಿಸುತ್ತಾರೆ ಎಂದರು.
ಮತಾಂಧ ಜಿಹಾದಿ ಯುವಕನೋರ್ವ ಹಿಂದೂ ಯುವತಿಯ ಮೇಲೆ ಕೈಹಾಕಿ ಆಕೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯನ್ನು ಭಜರಂಗದಳ ಉಗ್ರ ಶಬ್ದಗಳಿಂದ ಖಂಡಿಸುತ್ತದೆ ಎಂದರು.
ಹಿಂದೂಗಳಿಗೆ ಹಿಂದೂ ರಾಷ್ಟ್ರದಲ್ಲೇ ದೌರ್ಭಾಗ್ಯ ಒದಗಿಬಂದಿದೆ. ನಮ್ಮ ಪರಿಸ್ಥಿತಿ ಏನೂ ನಮ್ಮ ಯೋಜನೆ ಏನೂ ಎಂದು ಯೋಚಿಸುವ ಸ್ಥಿತಿ ಇಂದು ಬಂದಿದೆ.
ಓರ್ವ ಸಹೋದರಿ ಒಂದು ಅಂಗಡಿಯಿಂದ ಸಾಮಾನು ತರಲು ಬಂದಾಗ ಆಕೆಯ ಮೇಲೆ ಮತಾಂಧ ಆಕೆಯ ಮೇಲೆ ಕೈ ಹಾಕಿ ಮಾನಭಂಗಕ್ಕೆ ಪ್ರಯತ್ನಿಸಿದ್ದಾನೆ. ಇದನ್ನು ನಾವು ಸಹಿಸೋದಿಲ್ಲ . ನಿನ್ನೆಯ ವರೆಗೆ ನಿಮ್ಮನ್ನು ಸಹಿಸಿದ್ದೇವೆ
ಇನ್ನು ಮುಂದೆ ಸಹಿಸುವುದಿಲ್ಲ.
ನಮ್ಮ ನಂಬಿಕೆಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ಕಟ್ಟಲು ಬಿಡದೆ ತೊಂದರೆ ಕೊಟ್ಟಿದ್ದೀರಿ.
ನಮ್ಮ ನಂಬಿಕೆಯ ಗೋವನ್ನು ಹತ್ಯೆ ಮಾಡಿ ನಮ್ಮ ಮೇಲೆ ಸವಾರಿ ಮಾಡಿದ್ದೀರಿ ಇನ್ನು ಸಹಿಸೋದಿಲ್ಲ ನಮ್ಮದು ನೇರ ಸರ್ಜಿಕಲ್ ಸ್ಟ್ರೈಕ್ ಎಂದರು.
ಹಿಂಜಾವೇ ಮುಖಂಡ ಚಿನ್ಮಯ್ ರೈ ಈಶ್ವರಮಂಗಲ ಮಾತನಾಡಿ ಇಲ್ಲಿ ಭಾಷಣ ಬೊಬ್ಬೆ ಹಾಕಿ ಏನೂ ಪ್ರಯೋಜನವಿಲ್ಲ , ಪುತ್ತಿಲ ಹೇಳಿದಂತೆ ವ್ಯವಹಾರ ನಿಲ್ಲಿಸಿದರೆ ಮತಾಂಧರಿಗೆ ಪಾಠ ಆಗ್ತದೆ ಎಂದರು.
ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೆದಂಬಾಡಿ ಗ್ರಾ.ಪಂ ಅಧ್ಯಕ್ಷ ರತನ್ ರೈ ಕುಂಬ್ರ, ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ, ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿಂಗಳಾಡಿ, ಜಯಲಕ್ಷ್ಮೀ ಬಲ್ಲಾಳ್, ಸುಜಾತ ಮುಳಿಗದ್ದೆ, ರೇವತಿ ಬೋಳೋಡಿ, ವಿಠಲ ರೈ ಮಿತ್ತೋಡಿ, ಬಿಜೆಪಿ ಮುಖಂಡರುಗಳಾದ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಸೀತಾರಾಮ ರೈ ಕೆದಂಬಾಡಿಗುತ್ತು, ನಿತೀಶ್ ಕುಮಾರ್ ಶಾಂತಿವನ, ರಾಜೇಶ್ ರೈ ಪರ್ಪುಂಜ, ನಾರಾಯಣ ಪೂಜಾರಿ ಕುರಿಕ್ಕಾರ ಸಹಿತಿ ಹಲವು ಮಂದಿ ಉಪಸ್ಥಿತರಿದ್ದರು.
ರವಿಕುಮಾರ್ ಕೈತಡ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಕುಮಾರ್ ಕೆದಂಬಾಡಿಮಠ ವಂದಿಸಿದರು. ಪ್ರತಿಭಟನೆಗೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ19 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ24 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಮಂಗಳೂರು20 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















