Connect with us

ಪುತ್ತೂರು

ಸವಣೂರು ವಿದ್ಯಾರಶ್ಮಿಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನಾ – ಟಿಂಕರಿಂಗ್ ಲ್ಯಾಬ್ ದೇಶದಲ್ಲೇ ಇರೋದು ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ – ಡ್ರೋನ್ ಮಾರುಕಟ್ಟೆಯಲ್ಲಿ ಭಾರತ ನಂ.1 ಆಗಲಿದೆ : ‘ಅಮೃತರಶ್ಮಿ’ ಓದಿ ಹತ್ತಾರು ಸೀತಾರಾಮ ರೈ ಗಳು ಸೃಷ್ಟಿಯಾಗಲಿ – ನಳಿನ್ ಕುಮಾರ್ ಕಟೀಲ್

Published

on

Ad Widget

Ad Widget

Ad Widget

Ad Widget

ಸವಣೂರು : ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲೂ ಭಾರತೀಯ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕೆನ್ನುವ ವಿಶಿಷ್ಠ ಪರಿಕಲ್ಪನೆಯೊಂದಿಗೆ ಪ್ರಾರಂಭಿಸಿದ ಅಟಲ್ ಟಿಂಕರಿಂಗ್ ಯೋಜನೆಯನ್ನು ದೇಶದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿರುವುದು ದ.ಕ , ಉಡುಪಿ ಜಿಲ್ಲೆಯಲ್ಲಿ ಆದ್ದರಿಂದ ನಮ್ಮ ಜಿಲ್ಲೆ ಅಟಲ್ ಟಿಂಕರಿಂಗ್‌ನ ಪ್ರಯೋಗಶಾಲೆಯಾಗಿದೆ ಎಂದು ಸಂಸದ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

Ad Widget

Ad Widget

Ad Widget

Ad Widget

ಸೆ.17ರಂದು ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಕೇಂದ್ರ ಸರಕಾರದ ಸಹಯೋಗದಲ್ಲಿ ಅನುಷ್ಠಾನ ಮಾಡಲಾದ ಅಟಲ್ ಟಿಂಕರಿಂಗ್ ಲ್ಯಾಬ್‌ನ ಉದ್ಘಾಟನಾ ಹಾಗೂ ‘ಅಮೃತ ರಶ್ಮಿ’ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತೆಗೆದುಕೊಂಡ ಗಟ್ಟಿ ನಿರ್ಧಾರಗಳಿಂದ ದೇಶ ಇಂದು ಸದೃಢವಾಗಿ ವಿಶ್ವವಂದ್ಯವಾಗುತ್ತಿದೆ. ಇಂತಹ ಕಾಲಘಟ್ಟದಲ್ಲಿ ದೇಶ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಾ ಬಂದಿದೆ. ವಿಜ್ಞಾನ ಕ್ಷೇತ್ರದಲ್ಲೂ ವಿಶೇಷ ಪರಿವರ್ತನೆಗೆ ಅಟಲ್ ಟಿಂಕರಿಂಗ್ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ದೇಶದಲ್ಲಿ ಅನುಷ್ಠಾನ ಮಾಡುತ್ತಿದೆ. ಸವಣೂರು ವಿದ್ಯರಶ್ಮಿಯಲ್ಲಿ ಈ ಯೋಜನೆ ಅನುಷ್ಠಾನವಾಗುವ ಮೂಲಕ ಪ್ರಧಾನಮಂತ್ರಿಯವರ ಕನಸನ್ನು ಸಕಾರಗೊಳಿಸಲು ಸವಣೂರು ಸೀತರಾಮ ರೈ ಕೈ ಜೋಡಿಸಿದ್ದಾರೆ ಎಂದು ಹೇಳಿದ ನಳಿನ್ ಕುಮಾರ್ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲ್ಯಾಬ್ ಅತೀ ಹೆಚ್ಚು ಪ್ರಯೋಜನವಾಗಲಿದೆ ಎಂದರು.

Ad Widget

Ad Widget alt="Ad Widget"/>

Ad Widget

ಹೆಲಿಕಾಪ್ಟರ್ ಹಾಗೂ ಡ್ರೋನ್ ತಯಾರಿಕೆಯಲ್ಲಿ ದೇಶ ಎತ್ತರಕ್ಕೆ ಹೋಗುತ್ತಿದೆ. ರಾಫೆಲ್ ಮೊದಲು ವಿದೇಶದಿಂದ ತರಲಾಗುತ್ತಿತ್ತು ಇನ್ನು ದೇಶದಲ್ಲೇ ತಯಾರಾಗುವಂತೆ ಮೋದಿ ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿದ್ದಾರೆ ಎಂದರು.

Ad Widget

Ad Widget <> Ad Widget

ಪತ್ರಕರ್ತ ಪಿ.ಬಿ ಹರೀಶ್ ರೈ ಬರೆದ ಸೀತಾರಾಮ ರೈ ಜೀವನಾಧಾರಿತ ‘ಅಮೃತ ರಶ್ಮಿ’ ಪುಸ್ತಕ ಓದಿ ನೂರಾರು ಸೀತಾರಾಮ ರೈಗಳು ಸೃಷ್ಟಿಯಾಗಲಿ ಎಂದು ಕಟೀಲ್ ಶುಭಹಾರೈಸಿದರು.

ಕೋವಿಡ್ ಸಂದರ್ಭ ಮಿಕ್ಕೆಲ್ಲ ಶಾಲೆಗಳು ಶಿಕ್ಷಕರನ್ನು ಕೆಲಸದಿಂದ ತೆಗೆದದ್ದಾರೆ ಆದರೆ ಸೀತಾರಾಮ ರೈ ಗಳ ವಿದ್ಯಾಸಂಸ್ಥೆಯಲ್ಲಿ ಯಾವಾ ಶಿಕ್ಷಕನನ್ನು ತೆಗೆಯಲಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Ad Widget

Ad Widget

ಅಟಲ್ ಟಿಂಕರಿಂಗ್ ಲ್ಯಾಬನ್ನು ಉದ್ಘಾಟಿಸಿದ ಬಂದರು ಮೀನುಗಾರಿಗೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ ಕೇಂದ್ರ ಸರಕಾರದ ವಿಶಿಷ್ಠ ಯೋಜನೆಗಳಲ್ಲಿ ಒಂದಾದ ಅಟಲ್ ಟಿಂಕರಿಂಗ್ ಯೋಜನೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ಪೂರಕ ವಾತಾವರಣ ನಿರ್ಮಾಣವಾಗಿದೆ, ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ ಅಳವಡಿಕೆಯಾಗಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರಕಾರ ಇಂತಹ ಜನಪರ ಯೋಜನೆಗಳನ್ನು ನೀಡುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಅವರು ಸೀತಾರಾಮ ರೈ ಅವರ ಹುಟ್ಟು ಹಬ್ಬದ ಅಮೃತಮಹೋತ್ಸವ ಕಾರ್ಯಕ್ರಮದ ‘ಅಮೃತ ರಶ್ಮಿ’ ಸ್ಮರಣಸಂಚಿಕೆಯ ಸಂಪಾದಕನ ನೆಲೆಯಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅಮೃತ ರಶ್ಮಿ ಸ್ಮರಣ ಸಂಚಿಕೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಬಿಡುಗಡೆಗೊಳಿಸಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೆಶಕ ಶಶಿಕುಮಾರ್ ರೈ ಬಾಲ್ಯೊಟ್ಟು , ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜೀವಿ ಶೆಟ್ಟಿ ಶುಭ ಹಾರೈಸಿದರು.

ಪುತ್ತೂರು ರಾಮಕೃಷ್ಣ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ರೈ, ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಟ್ರಸ್ಟಿ ರಶ್ಮಿ ಅಶ್ವಿನ್ ಶೆಟ್ಟಿ, ಸವಣೂರಿನ ಉದ್ಯಮಿ ಎನ್.ಸುಂದರ್ ರೈ , ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಾ|ನಾರಾಯಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಸ್ವಾಗತಿಸಿದರು. ವಿದ್ಯಾರಶ್ಮಿ ವಿದ್ಯಾಲಯದ ಪ್ರಿನ್ಸಿಪಾಲ್ ಸೀತಾರಾಮ ಕೇವಳ ವಂದಿಸಿದರು. ಉಪನ್ಯಾಸಕಿ ರಾಜಿ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!