ಕಾರ್ಯಕ್ರಮಗಳು
ಪುತ್ತೂರು : ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ ರೈತ ಸೌಧ ಉದ್ಘಾಟನೆಯ ಅಮಂತ್ರಣ ಬಿಡುಗಡೆ
ಪುತ್ತೂರು Puttur ಸೆ 19: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಪುತ್ತೂರು ಇದರ ನೂತನ ವಾಣಿಜ್ಯ ಸಂಕೀರ್ಣ ಮತ್ತು ನೂತನ ಕಚೇರಿಯಿರುವ ರೈತ ಸೌಧ ಉದ್ಘಾಟನಾ ಸಮಾರಂಭವು ಸೆ. 24 ರಂದು ಉದ್ಘಾಟನೆಗೊಳ್ಳಲಿದ್ದು, ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಲಾಯಿತು.
ಆಮಂತ್ರಣ ಬಿಡುಗಡೆಗೊಳಿಸಿದ ಸಂಘದ ಅಧ್ಯಕ್ಷ ಭಾಸ್ಕರ ಎಸ್. ಗೌಡ ಇಚ್ಲಂಪಾಡಿ ಮಾತನಾಡಿ, ಸಹಕಾರ ಪಿತಾಮಯ ಮೊಳಹಳ್ಳಿ ಶಿವರಾಯರಿಂದ ಸ್ಥಾಪನೆಗೊಂಡ ಪಿಎಲ್ಡಿ ಬ್ಯಾಂಕ್ ಇಂದು ಬಹಳಷ್ಟು ಸಾಧನೆ ಮಾಡಿದೆ. ನೂತನ ಕಟ್ಟಡಕ್ಕೆ 2013 ರಲ್ಲಿ ಶಿಲಾನ್ಯಾಸ ನಡೆದು ಕೊರೋನಾ ಸಂದರ್ಭದಲ್ಲಿ ಸ್ವಲ್ಪ ವಿಳಂಬವಾಗಿತ್ತು. ಇದೀಗ ಅತ್ಯಂತ ಸುಸಜ್ಜಿತವಾಗಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ ಎಂದರು.
ಬ್ಯಾಂಕ್ನ ಹಿಂದಿನ ಅವಧಿಯ ಅಧ್ಯಕ್ಷರಾಗಿದ್ದ ರಂಗನಾಥ ರೈ ಗುತ್ತು, ಮನೋಹರ್ ರೈ ಅವರು ಹೊಸ ಕಟ್ಟಡಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ರೂ. 5 ಲಕ್ಷ ಕಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡಿದ್ದಾರೆ. ಹಾಲಿ ಸುಮಾರು 7500 ಮಂದಿ ಸದಸ್ಯರನ್ನು ಹೊಂದಿರುವ ಸಂಘದ ಮಹಾಸಭೆಯೂ ಉದ್ಘಾಟನೆಯ ದಿನ ಪುರಭವನದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಒಟ್ಟು ರೂ. 2.20 ಕೋಟಿ ವೆಚ್ಚದಲ್ಲಿ ನೂತನ ರೈತ ಸೌಧ ನಿರ್ಮಾಣಗೊಂಡಿದ್ದು, ಕೆಳ ಭಾಗದಲ್ಲಿ ಪಾರ್ಕಿಂಗ್ ಸೌಲಭ್ಯ ಬಿಟ್ಟು ಅನಂತರ ಮೇಲ್ಬಾಗದಲ್ಲಿ ೫ ವಾಣಿಜ್ಯ ವ್ಯವಹಾರದ ಕೊಠಡಿ, 1 ನೇ ಅಂತಸ್ತಿನಲ್ಲಿ ಬ್ಯಾಂಕ್ನ ಕಚೇರಿ, ೨ ನೇ ಅಂತಸ್ತಿನಲ್ಲಿ ೪ ವಾಣಿಜ್ಯ ಕೊಠಡಿ, ಅನಂತರದ ಅಂತಸ್ತಿನಲ್ಲಿ ಸಭಾಂಗಣ, ಅತಿಥಿ ಗೃಹ ನಿರ್ಮಾಣ ಮಾಡಲಾಗಿದೆ. ಬ್ಯಾಂಕ್ಗೆ ರೂ. ೮ ಲಕ್ಷ ವೆಚ್ಚದಲ್ಲಿ ಸೋಲಾರ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಕಟ್ಟಡಕ್ಕೆ ಲಿಫ್ಟ್, ಸಿಸಿ ಕ್ಯಾಮರಾ ಸಹಿತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಭಾಸ್ಕರ ಇಚ್ಲಂಪಾಡಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ನ ಕೋಶಾಧಿಕಾರಿ ನಾರಾಯಣ ಪೂಜಾರಿ ಕುರಿಕ್ಕಾರ, ನಿರ್ದೇಶಕರಾದ ರಾಜಶೇಖರ ಜೈನ್, ಎ.ಬಿ. ಮನೋಹರ್ ರೈ, ನಾರಾಯಣ ಕನ್ಯಾನ, ಯುವರಾಜ ಪೆರಿಯತ್ತೋಡಿ, ಪ್ರವೀಣ ರೈ ಪಂಜೊಟ್ಟು, ದೇವಯ್ಯ ಗೌಡ, ಉಮೇಶ್ ನಾಕ್, ಧರ್ಣಪ್ಪ ಮೂಲ್ಯ ಪಿ., ಮೀನಾಕ್ಷಿ, ಸೋಮಪ್ಪ ನಾಯ್ಕ ಎಸ್., ಶೀನ ನಾಯ್ಕ, ವ್ಯವಸ್ಥಾಪಕ ಶೇಖರ ಎಂ. ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ಬಿಗ್ ನ್ಯೂಸ್24 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ22 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ24 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ23 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್8 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ನಿಧನ ವಾರ್ತೆ7 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ7 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ6 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!















