Connect with us

ಪುತ್ತೂರು

Puttur | ಪುತ್ತೂರು: ಬಸ್ ನಲ್ಲಿ ಅಧಿಕಾರಿಯ ಪರ್ಸ್ ಕದ್ದ ಮಹಿಳೆ : ಸಾಕ್ಷಿಯಾಗಿದೆ ಸಿಸಿಟಿವಿ ದೃಶ್ಯ..!

Published

on



Ad Widget

Ad Widget

Ad Widget

Ad Widget

ಪುತ್ತೂರು : ಪುತ್ತೂರಿಗೆ (Puttur) ಬರುವ ಖಾಸಗಿ ಬಸ್ ನಲ್ಲಿ ಪ್ರಯಾಣಿಕ ಮಹಿಳೆಯೊಬ್ಬರು ಮತ್ತೊಂದು ಮಹಿಳೆಯ ಪರ್ಸ್ ಕದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ಪರ್ಸ್ ಕಳೆದುಕೊಂಡ ಪುತ್ತೂರು ತಾಲೂಕು ಪಂಚಾಯಿತಿಯ ಯೋಜನಾಧಿಕಾರಿ ಸುಕನ್ಯ ಪುತ್ತೂರು ಠಾಣೆಗೆ ಸಿಸಿಟಿವಿ ದೃಶ್ಯ ಆಧರಿಸಿ ದೂರು ನೀಡಿದ್ದು, ಕಳ್ಳತನಗೈದ ಮಹಿಳೆಗಾಗಿ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದರೆ. ಆದರೆ ಹುಡುಕಾಟಕ್ಕೆ ಖಾಸಗಿ ಬಸ್ ಬಸ್ಸಿನೊಳಗೆ ಅಳವಡಿಸಿದ್ದ ಸಿಸಿಟಿವಿಯ ದೃಶ್ಯವೇ ಪ್ರಮುಖ ಸಾಕ್ಷಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸುಕನ್ಯ ಅವರು ಮಂಗಳೂರಿನಿಂದ ಪ್ರತಿದಿನ ಬಸ್ ನಲ್ಲಿ ಪುತ್ತೂರು ತಾಲೂಕು ಪಂಚಾಯಿತಿಗೆ ಬರುತ್ತಿದ್ದಾರೆ. ಸೆ.20ರಂದು ಮಹೇಶ್ ಬಸ್ ನಲ್ಲಿ ಬರುತಿದ್ದಾಗ ಕಲ್ಲಡ್ಕದಲ್ಲಿ ಒಬ್ಬ ಮಹಿಳೆ ಬಸ್ ಗೆ ಹತ್ತಿ ಅವರ ಪಕ್ಕದಲ್ಲೇ ಕುಳಿತರು. ಆ ಮಹಿಳೆಯ ನಡೆಗಳಿಂದ ಅನುಮಾನಗೊಂಡ ಸುಕನ್ಯರವರು ತನ್ನ ಬ್ಯಾಗನ್ನು ಗಟ್ಟಿ ಹಿಡ್ಕೊಂಡು ಮತ್ತೊಂದು ಕೈಯಲ್ಲಿ ಟೀಫೀನ್ ಹಿಡ್ಕೊಂದು ಪುತ್ತೂರು ಪೋಸ್ಟ್ ಆಫೀಸ್ ತಂಗುದಾಣದ ಬಳಿ ಸುಕನ್ಯ ಇಳಿದರು.

Ad Widget

Ad Widget <> Ad Widget

ತಾ.ಪಂ ಗೆ ನಡೆದುಕೊಂಡು ಹೋಗುವಾಗ ಮೆಡಿಕಲ್ ನಲ್ಲಿ ಮಾತ್ರೆ ಖರೀದಿಗೆಂದು ಪರ್ಸ್ ತಡಕಾಡಿದಾಗ ಬ್ಯಾಗ್ ಝಿಪ್ ಓಪನ್ ಆಗಿ ಪರ್ಸ್ ಕಳ್ಳತನವಾಗಿರುವುದು ಗೊತ್ತಾಗಿದೆ.



Ad Widget

ತನ್ನ ಮೊಬೈಲ್ ನಲ್ಲಿ ಈ ಹಿಂದೆ ಅವರು ಬರುತ್ತಿದ್ದ ಬಸ್ ನ ಚಾಲಕನ ಪೋನ್ ನಂಬರ್ ಒಂದಿದ್ದು, ಅದಕ್ಕೆ ಕರೆ ಮಾಡಿ ಇಂತಹ ಸಮಯದ ಮಹೇಶ್ ಬಸ್ ನಲ್ಲಿ ತಾನೂ ಬಂದಿರುವುದು ಅದರಲ್ಲಿ ಎಂದು ಮಾಹಿತಿ ನೀಡಿದಾಗ ಅದರಲ್ಲಿ ಸಿಸಿಟಿವಿ ಇದೆ ಎಂಬ ಮಾಹಿತಿ ನೀಡಿದರು.

Ad Widget

Ad Widget

ನಂತರ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಸುಕನ್ಯ ಅವರು ಸಿಸಿಟಿವಿ ಇರುವ ಬಗ್ಗೆ ಮಾಹಿತಿ ನೀಡಿದರು.

ಇವರು ಬಂದ ಬಸ್ ನ ಚಾಲಕ ರೋಶನ್ ಕ್ರಾಸ್ತಾ ಎನ್ನುವವರು ಮಂಗಳೂರಿಗೆ ಹೋಗಿ ಮಾಲಕ ಪ್ರಕಾಶ್ ಶೆಟ್ಟಿಯವರಿಗೆ ಮಾಹಿತಿ ತಿಳಿಸಿ ಸಿಸಿಟಿವಿ ದೃಶ್ಯ ಠಾಣೆಗೆ ಕಳುಹಿಸಿಕೊಟ್ಟರು.

ಕಳ್ಳತನದ ಸಿಸಿಟಿವಿ ದೃಶ್ಯ

ಸಿಸಿಟಿವಿ ದೃಶ್ಯದಲ್ಲಿ ಕಳ್ಳತನ ಮಾಡುವ ಮಹಿಳೆ ಮಧ್ಯವಯಸ್ಕಳಾಗಿದ್ದು, ಅವಳೊಬ್ಬ ಪರಿಣತ ಕಳ್ಳಿಯಂತೆ ಕಳ್ಳತನ ನಡೆಸಿದ್ದಾಳೆ. ಅಷ್ಟು ಪ್ರಯಾಣಿಕರಿದ್ದರೂ ಯಾರಿಗೂ ಅನುಮಾನ ಬರದಂತೆ ಎಲ್ಲರೂ ಇಳಿಯುವ ಸಂದರ್ಭ ನೋಡಿ ಕದ್ದಿದ್ದಾಳೆ. ಕದ್ದ ಕೂಡಲೇ ತನ್ನ ಸೀರೆಯ ನಡುವೆ ಪರ್ಸ್ ಮುಚ್ಚಿಟ್ಟುಕೊಂಡಿದ್ದಾಳೆ. ಇದೆಲ್ಲ ದೃಶ್ಯ ಬಸ್ ನ ಸಿಸಿಟಿವಿಯಲ್ಲಿ ದಾಖಲಾಗಿದೆ.

ಪ್ರಯಾಣಿಕರ ಭದ್ರತೆಯ ದೃಷ್ಟಿಯಿಂದ ನಾವು ಸಿಸಿಟಿವಿ ಬಸ್ ಗೆ ಹಾಕಿದ್ದೇವೆ. ಬಸ್ ಪ್ರಯಾಣಿಕರಿಂದ ತುಂಬಿರುವಾಗ ಈ ತರಹ ಕಳ್ಳತನಗಳು ಹೆಚ್ಚಾಗಿರ್ತದೆ. ಪ್ರಯಾಣಿಕರು ಆದಷ್ಟು ತಮ್ಮ ಗಮನ ಜಾಸ್ತಿ ಕೊಡುತ್ತಿರಬೇಕು. ಹಲವು ಪ್ರಕರಣಗಳು ಸಿಸಿಟಿವಿ ಹಾಕಿದ ನಂತರ ಪತ್ತೆಯಾಗಿದೆ ಎಂದು ನಿಖರ ನ್ಯೂಸ್ ಗೆ ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಮಹೇಶ್ ಬಸ್ ಸಿಸಿಟಿವಿ ಹಾಕಿರುವ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ.

Ad Widget
Click to comment

Leave a Reply

ಶಿಕ್ಷಣ

Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget

Ad Widget

ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget alt="Ad Widget"/>

Ad Widget

ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ‌ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

Ad Widget

Ad Widget <> Ad Widget

ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ‌ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.



Ad Widget

ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು‌ ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.

Continue Reading

ಕಾರ್ಯಕ್ರಮಗಳು

Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

ಅಪರಾಧ

Puttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2026ರ ಅಕ್ಟೋಬರ್ 14ರಂದು ಸಂಜೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ವಾಸು ನಾಯ್ಕ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಅಂಗಡಿ ಮಾಲೀಕ, ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬವರು ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ತಂದು ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget <> Ad Widget

ಇದೇ ದಿನ ಪುತ್ತೂರು ಕಸಬ ಗ್ರಾಮದ ಲಿನೆಟ್ ಜಂಕ್ಷನ್ ಬಳಿಯ ಪಾನ್ ಸ್ಟಾಲ್ ಒಂದರಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಸಹಾಯಕ ಪೊಲೀಸ್ ಉಪನಿರೀಕ್ಷಕ ಗಂಗಾಧರ ಎ.ಬಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅಂಗಡಿ ಮಾಲೀಕ, ಪುತ್ತೂರು ಪಡ್ನೂರು ಗ್ರಾಮದ ನಿವಾಸಿ ಲಕ್ಷ್ಮಣ (42) ಎಂಬವರ ಬಳಿ ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳದಿಂದ ಲಾಟರಿ ಟಿಕೆಟ್‌ಗಳನ್ನು ತಂದು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



Ad Widget

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading