ಮಂಗಳೂರು
Mangalore PU College Girls | ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ ಕಿಟಕಿ ಮೂಲಕ ಮೂವರು ವಿದ್ಯಾರ್ಥಿನಿಯರು ಪರಾರಿ – ಪರಾರಿಗೂ ಮುಂಚೆ ನೋಟ್ ಬರೆದಿಟ್ಟ ವಿದ್ಯಾರ್ಥಿನಿಯರು
ಮಂಗಳೂರು, ಸೆ. 21: ಮಂಗಳೂರಿನ(Mangalore ) ಪ್ರತಿಷ್ಠಿತ ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ನಿಂದ ಮೂವರು ವಿದ್ಯಾರ್ಥಿನಿಯರು (3 girls escape from girls hostel) ಕಿಟಕಿ ಮುರಿದು ಪರಾರಿಯಾಗಿರುವ ಘಟನೆ ನಡೆದಿದೆ.
ನಗರದ ಮೇರಿಹಿಲ್ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಸಮೀಪ ಇರುವ ಮಾಜಿ ಸಚಿವರೊಬ್ಬರಿಗೆ ಸೇರಿದ ಪ್ರತಿಷ್ಠಿತ ವಿಕಾಸ್ ಕಾಲೇಜಿನ ಹಾಸ್ಟೇಲ್ ನಲ್ಲಿ ಈ ಘಟನೆ ನಡೆದಿದೆ.

ನಾವು ಹೋಗುತ್ತಿದ್ದೇವೆ,ಕ್ಷಮಿಸಿ ಅಂತಾ ನೋಟ್ ಬರೆದಿಟ್ಟು ಯಶಸ್ವಿನಿ,ದಕ್ಷತಾ,ಸಿಂಚನಾ ಪರಾರಿಯಾಗಿರುವ ವಿದ್ಯಾರ್ಥಿನಿಯರು. ಯಶಸ್ವಿನಿ ,ದಕ್ಷತಾ ಬೆಂಗಳೂರು ನಿವಾಸಿಗಳಾದರೆ ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ.
ಮುಂಜಾನೆ 3 ಗಂಟೆ ವೇಳೆಗೆ ಕೃತ್ಯ ನಡೆದಿದ್ದು, ವಿದ್ಯಾರ್ಥಿಗಳು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮೂವರು ಪಿಯು ಕಾಲೇಜಿನ ವಿದ್ಯಾರ್ಥಿನಿಯರಾಗಿದ್ದು, ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಅಂತಾ ನೋಟ್ ಬರೆದಿಟ್ಟು ತಮ್ಮ ಲಗೇಜ್ ಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ದಕ್ಷಿಣ ಕನ್ನಡ13 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ11 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ12 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
ಕಾರ್ಯಕ್ರಮಗಳು5 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
Uncategorized11 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ನಿಧನ ವಾರ್ತೆ11 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಬಿಗ್ ನ್ಯೂಸ್12 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ಮಂಗಳೂರು11 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ


















