Connect with us

ಅಪರಾಧ

NIA Raid : ಎನ್ಐಎ ದಾಳಿ : ಪಿಎಫ್ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಎ ಕೆ ಅಶ್ರಫ್ ಸೇರಿದಂತೆ ದಕ್ಷಿಣ ಕನ್ನಡದಿಂದ 5 ಜನ ವಶಕ್ಕೆ, ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್

Published

on

Ad Widget

Ad Widget

Ad Widget

Ad Widget

ಮಂಗಳೂರು, ಸೆ 23 : ದೇಶಾದ್ಯಂತ ಇಂದು ಬೆಳ್ಳಂಬೆಳಗ್ಗೆ ನೂರಾರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ವರೆಗೆ ಕರ್ನಾಟಕದಲ್ಲಿ 20 ಜನ ಸೇರಿದಂತೆ ದೇಶಾದ್ಯಂತ 100 ಕ್ಕೂ ಹೆಚ್ಚಿನ ಜನರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ದಾಳಿ ಮಾಡಿದ್ದಾರೆ. ಈ ವೇಳೆ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಕರ್ನಾಟಕ ಕಂಡ ಅತೀ ದೊಡ್ಡ ದಾಳಿಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರಿನ ಜೊಕ್ಕಟ್ಟೆ ನಿವಾಸಿ ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಕಾವೂರು ನಿವಾಸಿ ಪಿಎಫ್‌ಐ ಗ್ರಾಮಾಂತರ ಜಿಲ್ಲಾಧ್ಯಕ್ಷ ನಾವಾಝ್ ಕಾವೂರು, ಹಳೆಯಂಗಡಿ ನಿವಾಸಿ ಪಿಎಫ್‌ಐ ರಾಜ್ಯ ಸಮಿತಿ ಸದಸ್ಯ ಮೊದ್ದೀನ್ ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಲ್ಲಡ್ಕದ ಬೋಳಂತೂರು ನಿವಾಸಿ ಮಹಮ್ಮದ್ ಕುಂಟ್ಟಿ ಎಂಬುವವರ ಪುತ್ರ ಪಿಎಫ್‌ಐ ರಾಜ್ಯ ನಾಯಕರಾದ ತಪ್ಸೀರ್, ಪುತ್ತೂರು ತಾಲೂಕಿನ ಸಾಮೆತ್ತಡ್ಕ ನಿವಾಸಿ ಅಬ್ದುಲ್ ಖಾದರ್ ಸಾಮೆತ್ತಡ್ಕ ಮನೆ ಮೇಲೆ ದಾಳಿ ಮಾಡಿ ದಾಖಲೆಗಳೊಂದಿಗೆ ಇಬ್ಬರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget

Ad Widget <> Ad Widget

ದ.ಕ ಜಿಲ್ಲಾ ಪೊಲೀಸರ ಸಹಕಾರದಲ್ಲಿ ಬೆಂಗಳೂರು ಪೊಲೀಸರು ಐದು ಮಂದಿಯನ್ನೂ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಬೆಂಗಳೂರಿನ ದೊಮ್ಮಲೂರಿನಲ್ಲಿರುವ NIA ಕಚೇರಿಗೆ ಕರೆತಂದು ಹೆಚ್ಚಿನ ವಿಚಾರಣೆ ಮಾಡಲಿದ್ದಾರೆ.

ಎಸ್ ಪಿ ಋಷಿಕೇಶ್ ನೋನಾವಣೆ ಹಾಗೂ ಉಳ್ಳಾಲದ ಸಬ್ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಲಿದ್ದಾರೆ ಎನ್ನುವ ಮಾಹಿತಿಯು ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.

Ad Widget

Ad Widget

ಕೇಂದ್ರ ಗುಪ್ತಚರ ಇಲಾಖೆಯ ಎಚ್ಚರಿಕೆ ನೀಡಿದೆ.
ನೂರಾರು ಪಿಎಫ್ಐ ಕಾರ್ಯ ಕರ್ತರ ಬಂಧನದ ಹಿನ್ನಲೆಯಲ್ಲಿ ದೊಡ್ಡಮಟ್ಟದಲ್ಲಿ ಗಲಭೆ ನಡೆಯುವ ಸಾಧ್ಯತೆಯಿದೆ. ಈಗಾಗಲೇ ದಾಳಿ ನಡೆದ ಸ್ಥಳಗಳಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು. ರಾಜ್ಯದಾದ್ಯಂತ ಹೈ ಅಲರ್ಟ್ ನಲ್ಲಿರುವಂತೆ ರಾಜ್ಯ ಪೊಲೀಸ್ ಇಲಾಖೆಗೆ ಸೂಚನೆ‌ ನೀಡಿದೆ.

Ad Widget
Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಪರಾಧ

Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ

Published

on

Ad Widget

Ad Widget

Ad Widget

Ad Widget

ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.

Ad Widget

Ad Widget <> Ad Widget

ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.

ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.

Ad Widget

Ad Widget

ಇದೇ ವರ್ಷದ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.

ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.

Ad Widget
Continue Reading

ಅಪರಾಧ

Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!

Published

on

Ad Widget

Ad Widget

Ad Widget

Ad Widget

ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.

Ad Widget

Ad Widget <> Ad Widget

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.

ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:

Ad Widget

Ad Widget
  • ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್‌ಗಳು.
  • ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್‌ನ 30 ಕ್ಯಾನ್‌ಗಳು.
  • ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್‌ಗಳು.
  • ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!