ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಭಿನಂದನಾ ಭಾಷಣ […]" /> ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಭಿನಂದನಾ ಭಾಷಣ […]"> ಸೆ 24: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಎಂ. ರಾಜೇಂದ್ರ ಕುಮಾರ್ ಗೆ ಸಹಕಾರಿ ಬಂಧುಗಳಿಂದ ಮಂಗಳೂರಿನಲ್ಲಿ ಅಭಿನಂದನಾ ಸಮಾರಂಭ - Nikhara News | Kannada News Website
Connect with us

ಕಾರ್ಯಕ್ರಮಗಳು

ಸೆ 24: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಎಂ. ರಾಜೇಂದ್ರ ಕುಮಾರ್ ಗೆ ಸಹಕಾರಿ ಬಂಧುಗಳಿಂದ ಮಂಗಳೂರಿನಲ್ಲಿ ಅಭಿನಂದನಾ ಸಮಾರಂಭ

Published

on

Ad Widget

Ad Widget

Ad Widget

Ad Widget

ಮಂಗಳೂರು: ರಾಜ್ಯ ಸಹಕಾರ ಮಾರಾಟ
ಮಹಾಮಂಡಳದ ಅಧ್ಯಕ್ಷರಾಗಿ ಎರಡನೇ ಬಾರಿ ಆವಿರೋಧವಾಗಿ ಆಯ್ಕೆಯಾದ ದಕ್ಷಿಣ ಕನ್ನಡ
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.
ಎನ್.ರಾಜೇಂದ್ರ ಕುಮಾರ್‌ ಅವರಿಗೆ ಸಹಕಾರಿ
ಬಂಧುಗಳಿಂದ ಅಭಿನಂದನಾ ಸಮಾರಂಭ
ಸೆ.24ರಂದು ಮಧ್ಯಾಹ್ನ 12ಕ್ಕೆ ಬ್ಯಾಂಕಿನ
ಸಭಾಂಗಣದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ
ಹೆಗ್ಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ, ಡಾ.ಎಂ.ಎನ್.
ರಾಜೇಂದ್ರ ಕುಮಾರ್‌ ಅವರನ್ನು ಅಭಿನಂದಿಸಲಿದ್ದಾರೆ ಎಂದು
ಅಭಿನಂದನಾ ಸಮಿತಿ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಗೊಟ್ಟು
ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಶಾಸಕ
ಡಿ.ವೇದವ್ಯಾಸ ಕಾಮತ್ ಶುಭಾಶಂಸನೆ ಮಾಡಲಿದ್ದಾರೆ.

Ad Widget

Ad Widget <> Ad Widget

ಮುಖ್ಯ ಅತಿಥಿಗಳಾಗಿ ಸೌತ್ ಇಂಡಿಯಾ ಅದಾನಿ ಗ್ರೂಪ್‌ನ ಅಧ್ಯಕ್ಷ ಕಿಶೋರ್ ಆಳ್ವ ಹಾಗೂ ರಾಜ್ಯ ಸಹಕಾರ ಮಾರಾಟ
ಮಹಾಮಂಡಳದ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ
ಭಾಗವಹಿಸಲಿದ್ದಾರೆ ಎಂದರು.

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ
ಇತಿಹಾಸದಲ್ಲಿ 1945ರ ಬಳಿಕ ದ.ಕ. ಜಿಲ್ಲೆಯನ್ನು
ಪ್ರತಿನಿಧಿಸಿದ ಮೊದಲ ಅಧ್ಯಕ್ಷ ರಾಜೇಂದ್ರ ಕುಮಾರ್. ಅವರು 2017ರಲ್ಲಿ ಮೊದಲ ಬಾರಿಗೆ ಆಯ್ಕೆಗೊಂಡಿದ್ದರು. ಇದೀಗ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿ ಇತಿಹಾಸ ನಿರ್ಮಿಸಿದ್ದಾರೆ.

Ad Widget

Ad Widget

ರಾಜ್ಯದ ಧೀಮಂತ ಸಹಕಾರಿ
ನಾಯಕರಲ್ಲಿ ಒಬ್ಬರಾಗಿರುವ ರಾಜೇಂದ್ರ ಕುಮಾರ್
ಸಹಕಾರ ರಂಗದಲ್ಲಿ ಸುಮಾರು 50 ವರ್ಷ ಕಾಲ ಗುರುತಿಸಿಕೊಂಡು
ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಅನುಪಮ ಸೇವೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ
ಸುಮಾರು 28 ವರ್ಷ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ
ಸೇವೆಗೈದಿರುವ ಅವರು ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ
ರೂವಾರಿಯಾಗಿದ್ದಾರೆ. ಅವರ ಸಾಧನೆಯನ್ನು ಜಿಲ್ಲೆಯ
ಸಹಕಾರಿಗಳು ಸಂಭ್ರಮಿಸುವ ಉದ್ದೇಶದಿಂದ ಅಭಿನಂದನಾ
ಸಮಾರಂಭ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಅದ್ದೂರಿ ಸ್ವಾಗತ

ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ಬಳಿಕ ಸೆ.24ರಂದು ಮೊದಲ ಬಾರಿಗೆ ಆಗಮಿಸಲಿದ್ದಾರೆ. ಅಂದು
ಬೆಳಗ್ಗೆ 10.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರನ್ನು ,
ಜಿಲ್ಲೆಯ ಸಮಸ್ತ ಸಹಕಾರಿಗಳ ಪರವಾಗಿ ಸ್ವಾಗತಿಸಲಾಗುವುದು
ಎಂದು ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದರು.

ಸಹಕಾರಿ ಕ್ಷೇತ್ರದ ಅದ್ವಿತೀಯ ನಾಯಕ
ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ
ಮೂಲಕ ಹೊಸ ಆಯಾಮವನ್ನು ಈ ಕ್ಷೇತ್ರಕ್ಕೆ ನೀಡಿರುವ
ರಾಜೇಂದ್ರ ಕುಮಾರ್‌ ಸಹಕಾರಿಗಳೆಲ್ಲರ ಅಚ್ಚುಮೆಚ್ಚಿನ
ನಾಯಕರಾಗಿ ಗುರುತಿಸಿಕೊಂಡಿರುವುದು ಕರಾವಳಿಯ
ಜನತೆಗೆ ಅಭಿಮಾನ ತಂದಿದೆ. ಇಂತಹ ಅದ್ವಿತೀಯ
ನಾಯಕನನ್ನು ಅಭಿನಂದಿಸುವುದು ನಮ್ಮ ಕರ್ತವ್ಯ ಎಂದು
ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ
ಐಕಳಬಾವ ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ
ಎಸ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಾಜು.ಎಸ್.
ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಬಾಲ್ಯೂಟ್
ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ.ವಾದಿರಾಜ
ಶೆಟ್ಟಿ, ಎಂ.ಮಹೇಶ್‌ ಹೆಗ್ಡೆ, ಬಿ.ರಾಜೇಶ್ ರಾವ್, ಎಸ್.ಬಿ.ಜಯರಾಮ ರೈ, ಜೈರಾಜ್ ಬಿ. ರೈ, ಬಿ.ಅಶೋಕ್ ಕುಮಾರ್
ಶೆಟ್ಟಿ, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್

Published

on

Ad Widget

Ad Widget

Ad Widget

Ad Widget

ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್‌ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.

Ad Widget

Ad Widget <> Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್‌ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.

Ad Widget

Ad Widget

ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್‌ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

Wedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!

Published

on

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget

Ad Widget

Ad Widget

ಉಜಿರೆ: ಕ್ಯಾಸೆಟ್‌ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್‌ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget alt="Ad Widget"/>

Ad Widget

ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.

Ad Widget

Ad Widget <> Ad Widget

ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.

ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.

Ad Widget

Ad Widget

ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್‌ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್‌ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್‌ ಜೈನ್‌ ಮತ್ತು ರಶ್ಮಿತಾ ಜೈನ್‌ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!