ಪುತ್ತೂರು
Swimming camp at Puttur | ಸೆ.25 – ಅ.10 : ಪರ್ಲಡ್ಕದ ಬಾಲವನ ಈಜುಕೊಳದಲ್ಲಿ ದಸರಾ ಈಜು ಶಿಬಿರ
ಪುತ್ತೂರು, ಸೆ. 21 : ಪುತ್ತೂರು ಅಕ್ವೆಟಿಕ್ ಕ್ಲಬ್ ಆಶ್ರಯದಲ್ಲಿ ಪರ್ಲಡ್ಕ ಬಾಲವನ ಈಜುಕೊಳದಲ್ಲಿ ಸೆ.25 ರಿಂದ ಅ.10 ರ ತನಕ ದಸರಾ ಈಜು ಶಿಬಿರ-2022 (Swimming camp at Puttur) ನಡೆಯಲಿದೆ.
ಬೆಳಗ್ಗೆ 6.30 ರಿಂದ 7.15, 7.30 ರಿಂದ 8.15., 8.30 ರಿಂದ 9.15., 9.30 ರಿಂದ 10.15 ರ ತನಕ ನಾಲ್ಕು ವಿಭಾಗದಲ್ಲಿ ಹಾಗೂ ಅಪರಾಹ್ನ 3.30 ರಿಂದ 4.15., 4.30 ರಿಂದ 5.15., 6.30 ರಿಂದ 7.15., 7.30 ರಿಂದ 8.15 ರ ತನಕ ಶಿಬಿರ ನಡೆಯಲಿದೆ. 5.30 ರಿಂದ 6.15 ರ ತನಕ ಮಹಿಳೆಯರಿಗೆ ಹಾಗೂ 12 ವರ್ಷ ಕೆಳಗಿನ ಮಕ್ಕಳಿಗೆ ತರಬೇತಿ ನೀಡಲಾಗುತ್ತದೆ. ಪ್ಯಾಮಿಲಿ ಪ್ಯಾಕೇಜ್ ಮತ್ತು ಗ್ರೂಪ್ ರಿಯಾಯಿತಿ ಇದ್ದು ಕೆಲವೇ ಕೆಲ ಪ್ರವೇಶಗಳು ಮಾತ್ರ ಉಳಿದಿವೆ.
ಪಿಎಸಿ ವಿಶೇಷ : 2019ರ ಟೀಂ ಇಂಡಿಯಾ ತರಬೇತುದಾರ ಪಾರ್ಥ ವಾರಣಾಶಿಯವರು 2012ರಲ್ಲಿ ಪುತ್ತೂರಿನಲ್ಲಿ ಪ್ರಾರಂಭಿಸಿದ ಪುತ್ತೂರು ಅಕ್ವಾಟಿಕ್ ಕ್ಲಬ್ (PAC) ದಶಮಾನೋತ್ಸವ ಸಂಭ್ರಮದಲ್ಲಿದೆ. PAC ಹಲವು ಈಜು ಸ್ಪರ್ಧೆಗಳಲ್ಲಿ ದಾಖಲೆಗಳನ್ನು ಸೃಷ್ಟಿಸಿ ಈವರೆಗೆ 2440 ಪದಕಗಳನ್ನು ಬಾಚಿಕೊಂಡಿದೆ. ಇಲ್ಲಿ ತರಬೇತಿ ಪಡೆದ ಈಜುಪಟುಗಳು ಅಂತರರಾಷ್ಟ್ರೀಯ ಮಟ್ಟ, ಖೇಲೋ ಇಂಡಿಯಾ, ಭಾರತೀಯ ನೌಕಸೇನೆಯಲ್ಲಿ ಸಾಧನೆ ಮೆರೆದಿದ್ದಾರೆ.
ದೇಶದಲ್ಲೇ ಮೊದಲ ಜೀವರಕ್ಷಕ ಈಜು ತರಬೇತಿ ಇಲ್ಲಿ ನೀಡಲಾಗುತ್ತಿದ್ದು, 2018ರ ಜೀವರಕ್ಷಕ ವಿಶ್ವ ಚಾಂಪಿಯನ್ ಶಿಪ್ ಮತ್ತು 2019ರ ಕಾಮನ್ ವೆಲ್ತ್ ಜೀವರಕ್ಷಕ ಫೆಸ್ಟ್ ಇದರ ಭಾರತೀಯ ತಂಡದ ಕೋಚ್ ಆಗಿರುವ ರೋಹಿತ್ ಇಲ್ಲಿ ತರಬೇತುದಾರರಾಗಿದ್ದಾರೆ.
ಈ ವರ್ಷ ನಡೆದ ಜಿಲ್ಲಾ ಮಟ್ಟದ ಈಜುಸ್ಪರ್ಧೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ‘ಸ್ಕಿನ್ಸ್’ ಈಜು ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಕ್ರೀಡೆ ಇತ್ತಿಚಿನ ವರ್ಷಗಳಲ್ಲಿ ಒಲಂಪಕ್ಸ್ ನಲ್ಲಿ ನಡೆಯುತ್ತಿದೆ.
ಬಿಗ್ ನ್ಯೂಸ್
Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.
ಶಿಕ್ಷಣ
Vidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ
ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.

ಪುತ್ತೂರು: ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಕರಾವಳಿ ಭಾಗದಲ್ಲಿ ಪದವೀಧರರ ಮಹಾಪೂರವಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಿವಿಲ್ ಸರ್ವೀಸಸ್ ಹಾಗೂ ರಕ್ಷಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಯುವಕರ ಭಾಗವಹಿಸುವಿಕೆ ಹಿಂದಿನಿಂದಲೂ ಕಡಿಮೆಯಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಉದ್ಯೋಗಗಳು ಅಥವಾ ಗಲ್ಫ್ ದೇಶಗಳ ವಲಸೆಗೆ ಸೀಮಿತರಾಗಿದ್ದರು. ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.
ಸಾಮಾನ್ಯವಾಗಿ ದೊಡ್ಡ ಮಟ್ಟದ ಕೋಚಿಂಗ್ ಸಂಸ್ಥೆಗಳು ನೂರರಲ್ಲಿ ಒಬ್ಬರು IAS ಅಥವಾ KAS ಅಧಿಕಾರಿಯಾದರೆ ಆ ಯಶಸ್ಸನ್ನು ಮಾತ್ರ ದೊಡ್ಡದಾಗಿ ಬಿಂಬಿಸುತ್ತವೆ. ಆದರೆ, ಆ ಪ್ರಕ್ರಿಯೆಯಲ್ಲಿ ಸ್ಪರ್ಧೆಗಿಳಿದು ಸೋತ ಉಳಿದ 99 ವಿದ್ಯಾರ್ಥಿಗಳ ಭವಿಷ್ಯದ ಕಥೆಯೇನು ಎಂಬ ಆಳವಾದ ಸಾಮಾಜಿಕ ಪ್ರಶ್ನೆಯನ್ನು ವಿದ್ಯಾಮಾತಾ ಅಕಾಡೆಮಿಯ ಮ್ಯಾನೇಜಿಂಗ್ ಡೈರೆಕ್ಟರ್ ಭಾಗ್ಯೇಶ್ ರೈ ಮುಂದಿಟ್ಟಿದ್ದಾರೆ. ಒಬ್ಬ ವಿಜೇತನನ್ನು ರೂಪಿಸುವಷ್ಟೇ ಗಂಭೀರವಾಗಿ, ಅಲ್ಲಿ ಹಿನ್ನಡೆ ಅನುಭವಿಸುವ ಉಳಿದ 99 ವಿದ್ಯಾರ್ಥಿಗಳ ಬದುಕಿಗೂ ಭದ್ರತೆ ಮತ್ತು ಆತ್ಮವಿಶ್ವಾಸ ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸಂಸ್ಥೆಯ ಮೂಲ ಮಂತ್ರವಾಗಿದೆ.
ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕೇವಲ ಅಂಕಗಳ ಬೆನ್ನೇರುವ ಯುವಜನತೆಗೆ ಪ್ರಾಯೋಗಿಕ ಕೌಶಲ್ಯ, ಸಂವಹನ ಕಲೆ ಹಾಗೂ ವಾಸ್ತವ ಜಗತ್ತಿನ ಸವಾಲುಗಳನ್ನು ಎದುರಿಸುವ ತಾಕತ್ತು ಕೊರತೆಯಿದೆ. ಸ್ನಾತಕೋತ್ತರ ಪದವಿ ಪಡೆದರೂ ಕನಿಷ್ಠ ಸ್ವ-ಪರಿಚಯ ಮಾಡಿಕೊಳ್ಳಲು ಅಥವಾ ಕಂಪ್ಯೂಟರ್ ನಿರ್ವಹಿಸಲು ಬಾರದ ಇಂದಿನ ಸ್ಥಿತಿಯನ್ನು ಬದಲಾಯಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸ್ವಾವಲಂಬನೆಯನ್ನು ತುಂಬುವ ಕೆಲಸ ಇಲ್ಲಿ ನಡೆಯುತ್ತಿದೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಿರ್ಣಾಯಕ ಹಂತದಲ್ಲಿ ಸಮಯವನ್ನು ವ್ಯರ್ಥ ಮಾಡದಂತೆ ಸಂಸ್ಥೆಯು ‘ಕಲಿಕೆಯೊಂದಿಗೆ ಗಳಿಕೆ’ ಎನ್ನುವ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಪಿಯುಸಿ (PUC) ಮುಗಿದ ಕೂಡಲೇ ದೂರಶಿಕ್ಷಣದ ಮೂಲಕ ಡಿಗ್ರಿ (ಬಿ.ಎ, ಬಿ.ಕಾಮ್, ಬಿ.ಬಿ.ಎ) ವ್ಯಾಸಂಗಕ್ಕೆ ದಾಖಲಾಗಿ, ಅದೇ ಮೂರು ವರ್ಷಗಳ ಅವಧಿಯಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಪೊಲೀಸ್ ಹಾಗೂ ರರಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾನಾಂತರ ತರಬೇತಿ ಪಡೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಯು ಪದವಿ ಮುಗಿಸುವ ವೇಳೆಗೆ ಸರ್ಕಾರದ ಉದ್ಯೋಗ ಅಥವಾ ಉನ್ನತ ಖಾಸಗಿ ವಲಯದಲ್ಲಿ ನೆಲೆಗೊಳ್ಳಲು ಸಂಪೂರ್ಣ ಸಿದ್ಧನಾಗಿರುತ್ತಾನೆ.
ವಿಶೇಷವಾಗಿ ಭಾರತೀಯ ಭೂಸೇನೆ (Agniveer), ವಾಯುಸೇನೆ, ನೌಕಾಸೇನೆ, ಅರೆಮಿಲಿಟರಿ ಪಡೆಗಳು, ಕರ್ನಾಟಕ ಪೊಲೀಸ್ ಹಾಗೂ ಅರಣ್ಯ ಇಲಾಖೆಗಳ ನೇಮಕಾತಿಗಾಗಿ ಯುವಕರಿಗೆ 17ನೇ ವಯಸ್ಸಿನಿಂದಲೇ ಸುವರ್ಣ ಅವಕಾಶಗಳಿವೆ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಲಿಖಿತ ಪರೀಕ್ಷೆಯಷ್ಟೇ ಅಲ್ಲದೆ, ನುರಿತ ತರಬೇತುದಾರರಿಂದ ಮೈದಾನದಲ್ಲಿ ದೈಹಿಕ ಕ್ಷಮತೆ ಮತ್ತು ಕಠಿಣ ತರಬೇತಿಯನ್ನು ನೀಡಲಾಗುತ್ತಿದೆ. ಇದರೊಂದಿಗೆ ನವೋದಯ, ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಗಳು, KAR-TET, KSET, NET, HSTR, PSTR, GPSTR ನಂತಹ ಶೈಕ್ಷಣಿಕ ಹಾಗೂ ಬೋಧನಾ ಅರ್ಹತಾ ಪರೀಕ್ಷೆಗಳಿಗೂ ಇಲ್ಲಿ ಅತ್ಯುತ್ತಮ ತರಬೇತಿ ಲಭ್ಯವಿದೆ.
ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಅವರ ನೇತೃತ್ವದಲ್ಲಿ ಸಂಸ್ಥೆಯು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ದಿನದ 24 ಗಂಟೆಯೂ ನಿರಾಳವಾಗಿ ಓದಲು ‘ದೇವಿದ್ಯಾ’ 24×7 ಸದಾಶಿವ ಅಧ್ಯಯನ ಗ್ರಂಥಾಲಯ ಹಾಗೂ AI ಚಾಲಿತ ಡಿಜಿಟಲ್ ಇಂಟರಾಕ್ಟಿವ್ ಪ್ಯಾನಲ್‌ಗಳನ್ನು ಹೊಂದಿರುವ ‘ಸ್ತುತ್ಯ’ ಸ್ಮಾರ್ಟ್ ಕ್ಲಾಸ್‌ರೂಮ್‌ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ.
ಇದರೊಂದಿಗೆ ಟ್ಯಾಲಿ ಪ್ರೈಮ್, ಪ್ರಾಯೋಗಿಕ ಅಕೌಂಟಿಂಗ್, ಗಲ್ಫ್ ವ್ಯಾಟ್ (Gulf VAT), ಡೇಟಾ ಅನಾಲಿಟಿಕ್ಸ್, ಕೋಡ್-ಆರ್ಕಿಟೆಕ್ಟ್ ಪ್ರೋಗ್ರಾಮಿಂಗ್ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿಗಳನ್ನು ನೀಡುವುದರ ಮೂಲಕ ಕರಾವಳಿಯ ಯುವಜನತೆಯನ್ನು ಜಾಗತಿಕ ಮಟ್ಟದ ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ. ಬರಿ ಅಂಕಗಳ ಕಾರ್ಖಾನೆಯಾಗದೆ, ಬದುಕಿನ ಪ್ರತಿ ಹಂತದಲ್ಲೂ ವಿದ್ಯಾರ್ಥಿಗೆ ಭರವಸೆಯ ದಾರಿದೀಪವಾಗುವ ಮೂಲಕ ವಿದ್ಯಾಮಾತಾ ಅಕಾಡೆಮಿಯು ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ.
-
Uncategorized20 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized23 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized22 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized22 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized24 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
ಅಂತರ ರಾಜ್ಯ6 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized21 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಬಿಗ್ ನ್ಯೂಸ್6 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















