Connect with us

ದಕ್ಷಿಣ ಕನ್ನಡ

Dakshina kannada | ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಲ್ಕು ದಿನ ಹೆಚ್ಚುವರಿ ದಸರಾ ರಜೆ – ನಂತರ ಆದಿತ್ಯವಾರವೂ ನಡೆಯಲಿದೆ ಕ್ಲಾಸ್ : ಡಿಸಿ ಆದೇಶ

Published

on



Ad Widget

Ad Widget

Ad Widget

Ad Widget

ಮಂಗಳೂರು, ಸೆ.24: ದಸರಾ ಹಬ್ಬಕ್ಕೆ ಪೂರಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಹಿಂದೆ ಮಂಗಳೂರು ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಸೆ.28ರಿಂದ ಅಕ್ಟೋಬರ್ 1ರವರೆಗೆ ನೀಡಲಾಗಿದ್ದ ಹೆಚ್ಚುವರಿ ನಾಲ್ಕು ದಿನಗಳ ರಜೆಯನ್ನು (Dasara Holiday) ದ.ಕ.ಜಿಲ್ಲಾ (Dakshina kannada)ವ್ಯಾಪ್ತಿಗೆ ವಿಸ್ತರಿಸಿ ದ.ಕ.ಜಿಲ್ಲಾಧಿಕಾರಿ ಶನಿವಾರ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಈಗಾಗಲೆ ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ 16ರವರೆಗೆ ರಜೆಯನ್ನು ನಿಗದಿಪಡಿಸಲಾಗಿದೆ. ಈ ಮಧ್ಯೆ ಸೆ.26ರಿಂದ ಆರಂಭಗೊಳ್ಳುವ ಮಂಗಳೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಸೆ.26ರಿಂದಲೇ ರಜೆ ನೀಡುವಂತೆ ಪೋಷಕರು, ಜನಪ್ರತಿನಿಧಿಗಳು ಸರಕಾರಕ್ಕೆ ಮನವಿ ಮಾಡಿದ್ದರು. ಅದಕ್ಕೆ ಶಿಕ್ಷಣ ಸಚಿವರು ಪೂರಕವಾಗಿ ಸ್ಪಂದಿಸಿದ್ದರೂ ಕೂಡ ರಾಜ್ಯ ಸರಕಾರವು ಶುಕ್ರವಾರ ಪರಿಷ್ಕೃತ ಆದೇಶ ಹೊರಡಿಸಿ ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೆ.28ರಿಂದ ಅಕ್ಟೋಬರ್ 1ರವರೆಗೆ ರಜೆಯನ್ನು ಘೋಷಿಸಿತ್ತು. ಇದೀಗ ಅದನ್ನು ದ.ಕ.ಜಿಲ್ಲೆಗೆ ವಿಸ್ತರಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್ 2ರ ರವಿವಾರ ಕಡ್ಡಾಯವಾಗಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಸೂಚಿಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ನೀಡಲಾದ ಈ ನಾಲ್ಕು ಹೆಚ್ಚುವರಿ ರಜೆಗಳನ್ನು ನವೆಂಬರ್‌ ತಿಂಗಳಿನ ನಾಲ್ಕು ಶನಿವಾರ ಪೂರ್ಣ ದಿನದ ತರಗತಿ ಮತ್ತು ಎರಡು ರವಿವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ರಜೆಯನ್ನು ಸರಿದೂಗಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading