Connect with us

ಕಾರ್ಯಕ್ರಮಗಳು

ಪಿಎಲ್‌ಡಿ ಬ್ಯಾಂಕ್ ನೂತನ ವಾಣಿಜ್ಯ ಸಂಕೀರ್ಣ ಮತ್ತು ಕಚೇರಿಯಿರುವ ರೈತ ಸೌಧ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಪುತ್ತೂರು Puttur ಸೆ 25 : ಶತಮಾನದ ಇತಿಹಾಸವನ್ನು ಹೊಂದಿರುವ ಸಹಕಾರ ಕ್ಷೇತ್ರಕ್ಕೆ ಸಹಕಾರ ಚಳುವಳಿಯನ್ನು ಆರಂಭಿಸಿದ ಜಿಲ್ಲೆ ಮಹತ್ವಪೂರ್ಣ ಕೊಡುಗೆಯನ್ನು ನೀಡಿದೆ. ಅಕ್ಷರ ಅರಿಯದವರಿಗೂ ಆರ್ಥಿಕ ಶಿಕ್ಷಣ ಕಲಿಸಿದ ಹೆಗ್ಗಳಿಕೆಯನ್ನು ಸಹಕಾರಿ ಬ್ಯಾಂಕ್‌ಗಳು ಪಡೆದಿವೆ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

Ad Widget

Ad Widget

Ad Widget

Ad Widget

ಶನಿವಾರ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಎಲ್‌ಡಿ ಬ್ಯಾಂಕ್) ಪುತ್ತೂರು ಇದರ ನೂತನ ವಾಣಿಜ್ಯ ಸಂಕೀರ್ಣ ಮತ್ತು ನೂತನ ಕಚೇರಿಯಿರುವ ರೈತ ಸೌಧವನ್ನು ಉದ್ಘಾಟಿಸಿ ಬಳಿಕ ಕಿಲ್ಲೆ ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ಕೊರೋನಾದಂತಹ ಸಮಯದಲ್ಲಿ ಆರ್ಥಿಕ ದುಸ್ಥಿತಿಯನ್ನು ಜಗತ್ತೇ ಎದುರಿಸಿದರೂ ಭಾರತ ಸುಸ್ಥಿತಿಯನ್ನು ಕಾಪಾಡಿಕೊಂಡಿರುವುದಕ್ಕೆ ಸಹಕಾರಿ ಕ್ಷೇತ್ರದ ಗಟ್ಟಿ ಬುನಾದಿಯೇ ಕಾರಣ. ಬಡ ಕೃಷಿಕನನ್ನು ಬೆಳೆಸುವ ಉದ್ದೇಶದಿಂದ ಹುಟ್ಟಿಕೊಂಡ ಎಲ್‌ಡಿ ಬ್ಯಾಂಕ್‌ನಂತಹ ರಂಗ ಕೃಷಿಕನ ಜೀವನ ಬೆಳೆಸಿದೆ ಎಂದು ಅಭಿಪ್ರಾಯಿಸಿದ ನಳಿನ್, ಸಾಮಾನ್ಯರಲ್ಲೂ ವ್ಯವಹಾರ ಜಾಣ್ಮೆ ಬೆಳೆಸಲು ನರೇಂದ್ರ ಮೋದಿಯವರು ಜನ ಧನ್ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಕೋಟ್ಯಾಂತರ ಮಂದಿಗೆ ಅದರ ಪ್ರಯೋಜನ ಲಭಿಸಿದೆ ಎಂದು ಹೇಳಿದರು.

Ad Widget

Ad Widget <> Ad Widget

ದೇಶದೆಲ್ಲೆಡೆ ರೈತರು ವಿವಿಧ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ದ.ಕ. ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ವಿಚಾರಗಳು ನಡೆಯುತ್ತಿಲ್ಲ ಎಂಬುದಕ್ಕೆ ಬ್ಯಾಂಕಿಂಗ್ ಕ್ಷೇತ್ರದ ಕೊಡುಗೆ ಕಾರಣ. ಕೃಷಿಕನ ಪ್ರಯೋಗಶೀಲತೆಗೆ ನೀರೆರೆದು ಬೆಳೆಸಿದ್ದು ಸಹಕಾರ ಬ್ಯಾಂಕ್‌ಗಳು. ನಮ್ಮ ರಾಜ್ಯದಲ್ಲಿ ಹೈನುಗಾರಿಕೆಗೆ ವಿಶೇಷ ಬ್ಯಾಂಕ್ ಬೊಮ್ಮಾಯಿಯವರ ಮೂಲಕ ಆರಂಭಗೊಳ್ಳುತ್ತಿದೆ. ದೇಶದಲ್ಲೇ ಪ್ರಥಮ ಬಾರಿಗೆ ರೈತರ ಬಜೆಟ್ ಮಂಡಿಸಿದ ಹೆಗ್ಗಳಿಕೆ ಯಡಿಯೂರಪ್ಪ ಸರಕಾರಕ್ಕಿದೆ ಎಂದು ನಳಿನ್ ಹೇಳಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ಎಸ್. ಅಂಗಾರ ಮಾತನಾಡಿ, ಇತಿಹಾಸದಿಂದಲೇ ದೇಶ ಸ್ವಂತಿಕೆಯಿಂದ ಬೆಳೆದು ಬಂದಿದೆ. ಇದರ ಮುಂದಿನ ಹೆಜ್ಜೆಯಾಗಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಭಾರತದ ಚಿಂತನೆಯೊಂದಿಗೆ ಸ್ವ ಉದ್ಯೋಗಕ್ಕೆ ಬೆಂಬಲ ನೀಡುತ್ತಿದ್ದಾರೆ. ದೇಶೀಯ ಸಂಪತ್ತನ್ನು ಉಳಿಸಿಕೊಂಡು ಆರ್ಥಿಕ ಬೆಳವಣಿಗೆ ಸಾಧಿಸಲು ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

Ad Widget

Ad Widget

ಮೀನುಗಾರಿಕೆಗೆ ಪ್ರೋತ್ಸಾಹ

ಕರಾವಳಿಯಲ್ಲಿ ಹಲವು ರೀತಿಯ ಸಂಕಷ್ಟ ಅನುಭವಿಸುತ್ತಿರುವ ಅಡಿಕೆ ಬೆಳೆಗೆ ಪರ್ಯಾಯವಾಗಿ ಮೀನುಗಾರಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಮೀನು ಸಾಕುವವರಿಗೆ ಸರಕಾರವೇ ಮೀನಿನ ಮರಿ ಒದಗಿಸಲಿದೆ. ಅ.೧೬ ರಂದು ಆಹಾರ ಉತ್ಪಾದನಾ ದಿನವಾಗಿರುವುದರಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿ ರಾಜ್ಯಮಟ್ಟದ ಕಾಐಕ್ರಮ ಹಾಗೂ ಕಾರ್ಯಾಗಾರವನ್ನು ಆಯೋಜಿಸಲಾಗುವುದು ಎಂದು ಎಸ್. ಅಂಗಾರ ತಿಳಿಸಿದರು.

ಪಿಎಲ್‌ಡಿ ಬ್ಯಾಂಕ್‌ನ ನೂತನ ಕಚೇರಿ ಉದ್ಘಾಟಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಸಭಾಧ್ಯಕ್ಷತೆ ವಹಿಸಿದ್ದರು. ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು. ಅತಿಥಿಗಳನ್ನು ಬ್ಯಾಂಡ್, ಬೊಂಬೆ ಮೇಳದ ಆಕರ್ಷಣೆಯೊಂದಿಗೆ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು. ಉದ್ಘಾಟನೆಯ ಬಳಿಕ ಸಭಾ ಕಾರ್ಯಕ್ರಮಕ್ಕೆ ಕರೆತರಲಾಯಿತು.

ಬ್ಯಾಂಕ್ ಪ್ರಗತಿಯಲ್ಲಿ ಪಾಲುದಾರಾರರಾದ ಮಾಜಿ ಅಧ್ಯಕ್ಷರಾದ ಬಿ. ಆರ್. ದೇವಪ್ಪ ಗೌಡ, ಎನ್. ನಾಗಣ್ಣ ಗೌಡ, (ಕೆ. ಬಾಲಕೃಷ್ಣ ಬೋರ್ಕರ್, ಎಸ್.ಬಿ. ಜಯರಾಮ ರೈ ಅವರಿಗೆ ಅನುಪಸ್ಥಿತಿಯಲ್ಲಿ) ಕಡಮಜಲು ಸುಭಾಸ್ ರೈ, ಬಿ. ರಾಮ ಭಟ್ ಹಸಂತಡ್ಕ, ರಂಗನಾಥ ರೈ ಕೆ.ಎಸ್., ಎ.ಬಿ. ಮನೋಹರ್ ರೈ, ಮಾಜಿ ವ್ಯವಸ್ಥಾಪಕರಾದ ಕೆ. ಹೊನ್ನಪ್ಪ ಗೌಡ, ಎಂ. ಧನಕೀರ್ತಿ ಶೆಟ್ಟಿ, ಜಯಶ್ರೀ ಕೆ. ರೈ, ಆಲ್ಬರ್ಟ್ ಲೂಯಿಸ್, ಯಶೋದರ ಜೈನ್ ಬಿ., ದಯಾಮಣಿ ಕೆ.ವಿ. ಬಾಲಕೃಷ್ಣ ಪಿ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಂಪೌಂಡ್ ನಿರ್ಮಾಣಕ್ಕೆ ಅನುದಾನ ಒದಗಿಸಿದ ಶಾಸಕ ಸಂಜೀವ ಮಠಂದೂರು ಅವರನ್ನು ಗೌರವಿಸಲಾಯಿತು. ಬ್ಯಾಂಕ್‌ನ ಮನವಿಯಂತೆ ಕಂಪ್ಯೂಟರ್ ಸೌಲಭ್ಯಕ್ಕೆ ಅನುದಾನ ಒದಗಿಸುವ ಭರವಸೆಯನ್ನು ಸಂಸದ ನಳಿನ್ ಕುಮಾರ್ ನೀಡಿದರು.

ಕ.ರಾ.ಸ.ಕೃ. ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಜಂಟಿ ನಿರ್ದೇಶಕ ಮಹೇಶ್, ಕ.ರಾ.ಸ.ಕೃ. ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ದ.ಕ. ಮತ್ತು ಉಡುಪಿ ಜಿಲ್ಲಾ ನಿರ್ದೇಶಕ ರಾಜಶೇಖರ್ ಜೈನ್, ಜಿಲ್ಲ ವ್ಯವಸ್ಥಾಪಕ ಮುತ್ತುರಾಜ್, ಜಿಲ್ಲಾ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕ ಬಾಲಸುಬ್ರಹ್ಮಣ್ಯ ಕೆ.ಎಸ್., ಪಿಎಲ್‌ಡಿ ಬ್ಯಾಂಕ್‌ನ ಉಪಾಧ್ಯಕ್ಷೆ ಸುಜಾತ ರಂಜನ್ ರೈ, ಕೋಶಾಧಿಕಾರಿ ನಾರಾಯಣ ಪೂಜಾರಿ ಕುರಿಕ್ಕಾರ, ನಿರ್ದೇಶಕರಾದ ರಾಜಶೇಖರ ಜೈನ್, ಎ.ಬಿ. ಮನೋಹರ್ ರೈ, ನಾರಾಯಣ ಕನ್ಯಾನ, ಯುವರಾಜ ಪೆರಿಯತ್ತೋಡಿ, ಪ್ರವೀಣ ರೈ ಪಂಜೊಟ್ಟು, ದೇವಯ್ಯ ಗೌಡ, ಉಮೇಶ್ ನಾಕ್, ಧರ್ಣಪ್ಪ ಮೂಲ್ಯ ಪಿ., ಮೀನಾಕ್ಷಿ, ಸೋಮಪ್ಪ ನಾಯ್ಕ ಎಸ್., ಶೀನ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಾಯಕಿ ಗುರುಪ್ರಿಯಾ ನಾಯಕ್ ಪ್ರಾರ್ಥಿಸಿದರು. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್. ಗೌಡ ಇಚ್ಲಂಪಾಡಿ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ವ್ಯವಸ್ಥಾಪಕ ಶೇಖರ ಎಂ. ವರದಿ ವಾಚಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!