ಅಪರಾಧ
Road Accident ಸುಳ್ಯ : ಬೈಕ್ ಹಾಗೂ ಆಟೋ ರಿಕ್ಷಾ ಮಧ್ಯೆ ಅಪಘಾತ – ಐಟಿಐ ವಿದ್ಯಾರ್ಥಿ ಮೃತ್ಯು
ಸುಳ್ಯ: ಸೆ 26 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರು ಬಳಿ ಸಂಭವಿಸಿದ ವಾಹನ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂಬೂರು ಬಳಿ ಬೈಕ್ ಮತ್ತು ರಿಕ್ಷಾ ಮಧ್ಯೆ ಅಪಘಾತ ನಡೆದಿತ್ತು. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಐಟಿಐ ವಿದ್ಯಾರ್ಥಿ, ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಪುತ್ರ ಪ್ರತೀಕ್ (19) ಮೃತಪಟ್ಟ ವಿದ್ಯಾರ್ಥಿ.
ಪ್ರತೀಕ್ ರವರು ಸೋಮವಾರ ಬೆಳಿಗ್ಗೆ ರಾಘವೇಂದ್ರ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ತೇಜಸ್ ಎಂಬ ಯುವಕನ ಜೊತೆ ಕಲ್ಲುಗುಂಡಿಯಿಂದ ಬೈಕ್‌ನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ವೇಳೆ ಅವರು ಸವಾರಿ ಮಾಡುತ್ತಿದ್ದ ಪಲ್ಸರ್ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ರಿಕ್ಷಾದ ಮಧ್ಯೆ ಪರಿವಾರಕಾನದ ತಿರುವೊಂದರಲ್ಲಿ ಢಿಕ್ಕಿ ಸಂಭವಿಸಿದೆ.


ತೀವ್ರ ಜಖಂಗೊಂಡ ಬೈಕ್ ಸವಾರರಿಬ್ಬರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸಪತ್ರೆಗೆ ತಂದು ದಾಖಲಿಸಿದ್ದು, ಪ್ರತೀಕ್ ಕೊನೆಯುಸಿರೆಳೆದಿದ್ದಾರೆ. ತೀವ್ರ ಜಖಂ ಗೊಂಡಿರುವ ತೇಜಸ್‌ರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆಮಾಹಿತಿ ತಿಳಿದು ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಥಳೀಯ
Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
ಅಪರಾಧ
Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು
ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
-
ಸ್ಥಳೀಯ7 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್7 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ7 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ5 hours agoRaid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸಿನೆಮಾ6 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್5 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಮಂಗಳೂರು23 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
-
ರಾಜಕೀಯ23 hours agoSanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು


















