Connect with us

ಅಪರಾಧ

PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಪುತ್ತೂರು ಮೂಲದ ವ್ಯಕ್ತಿ ನವ ದೆಹಲಿಯಲ್ಲಿ NIA ಬಲೆಗೆ

Published

on

Ad Widget

Ad Widget

Ad Widget

Ad Widget

ನವದೆಹಲಿ :ಸೆ 26 :PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಪುತ್ತೂರು ಮೂಲದ ವ್ಯಕ್ತಿಯನ್ನು ದೇಶದ ರಾಜಧಾನಿ ದೆಹಲಿಯಲ್ಲಿ ದೆಹಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ರಾಷ್ಟ್ರೀಯ ತನಿಖಾ ದಳದ ಸೂಚನೆಯ ಮೇರೆಗೆ ಆಶ್ರಫ್ ಎಂಬಾತನನ್ನು ಇಂದು ಮಧ್ಯಾಹ್ನ ಬಂಧಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ತಮ್ಮ ವರದಿಯಲ್ಲಿ ತಿಳಿಸಿವೆ.

Ad Widget

Ad Widget

Ad Widget

Ad Widget

PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಅಶ್ರಫ್‌  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಜೆಕಾರು ನಿವಾಸಿ.   ಮಂಗಳೂರುನಗರದ ಕಂಕಣವಾಗಿಯಲ್ಲಿ ಆಶ್ರಫ್ ವಾಸವಿದ್ದ. ಈತನಿಗೆ  ಸ್ಥಳೀಯ ಮಟ್ಟದಲ್ಲಿ ಯಾವುದೇ ಜವಾಬ್ದಾರಿ ಇರಲಿಲ್ಲ.

Ad Widget

Ad Widget alt="Ad Widget"/>

Ad Widget

ಆದರೆ ದೆಹಲಿ ಮಟ್ಟದಲ್ಲಿ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿದ್ದ. ಜಾರ್ಖಂಡ್, ಒರಿಸ್ಸಾ ಸೇರಿ ಮೂರು ರಾಜ್ಯಗಳಿಗೆ ಮಹಮ್ಮದ್ ಅಶ್ರಫ್ ಸಂಚಾಲಕನಾಗಿದ್ದ. ಮೂರು ರಾಜ್ಯಗಳಲ್ಲಿ ಪ್ರತಿಯೊಂದು ಚಟುವಟಿಕೆಯು ಅಶ್ರಫ್ ನಿರ್ದೇಶನದಂತೆ ನಡೆಯುತ್ತಿರೋದು ಪತ್ತೆಯಾಗಿದೆ. ಇಂಟರ್ ಸ್ಟೇಟ್ ಕೋಆರ್ಡಿನೇಟ್ಸ್ ಬಗ್ಗೆ ಅಶ್ರಫ್​ಗೆ ಸಾಕಷ್ಟು ಮಾಹಿತಿ ಇರುವ ಸಾಧ್ಯತೆಯಿದೆ.

Ad Widget

Ad Widget <> Ad Widget

Gold Rate Today : ಚಿನ್ನದ ದರ ತಟಸ್ಥ : ಖರೀದಿಗೂ ಮುನ್ನ ಇಂದಿನ ಚಿನ್ನ – ಬೆಳ್ಳಿಯ ದರ ತಿಳಿಯಿರಿ

ಹೀಗಾಗಿಯೇ ಅಶ್ರಫ್ ವಿಚಾರಣೆಗೆ ಸಿಸಿಬಿ ಹಾಗೂ ಕೆಜಿ ಹಳ್ಳಿ ಪೊಲೀಸರು ಕಾಯುತ್ತಿದ್ದಾರೆ. ಅಶ್ರಪ್ ವಿಚಾರಣೆ ಬಳಿಕ ಸಾಕಷ್ಟು ಮಹತ್ತ್ವದ ವಿಚಾರಗಳು ಹೊರಬೀಳೋ‌ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Ad Widget

Ad Widget

 ಇಂದು ಮಧ್ಯಾಹ್ನದ ವೇಳೆಗೆ ಅಶ್ರಫ್‌ ನನ್ನು  ಪೊಲೀಸರು ಕಸ್ಟಡಿಗೆ ಪಡೆದರು. ಅದೇ ರೀತಿಯಾಗಿ ತಮಿಳುನಾಡಿನಲ್ಲಿ 14 ಪಿಎಫ್​ಐ ಕಾರ್ಯಕರ್ತರ ಬಂಧನ ಮಾಡಿದ್ದು, ಪೆಟ್ರೋಲ್​ ಬಾಂಬ್​ ದಾಳಿ ನಡೆಸಿದ್ದ ಕೇಸ್​ನಲ್ಲಿ ಅರೆಸ್ಟ್ ಮಾಡಲಾಗಿದೆ. ಇತ್ತೀಚೆಗೆ PFI ಕಾರ್ಯಕರ್ತರು ಪೆಟ್ರೋಲ್ ಬಾಂಬ್​ ನಡೆಸಿದ್ದರು.

Government Job: ಪಶು ವೈದ್ಯಕೀಯ ಸಹಾಯಕ ಹುದ್ದೆ – ಒಟ್ಟು 250 ಹುದ್ದೆಗಳು – ಇಲ್ಲಿದೆ ಹುದ್ದೆ ಮಾಹಿತಿ

Ad Widget
Click to comment

Leave a Reply

ಅಪರಾಧ

Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget <> Ad Widget

ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್‌ನ ಮೊಬೈಲ್ ಪಾಸ್‌ವರ್ಡ್‌ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್‌ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.

ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.

ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್‌ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.

ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget
Continue Reading

ಅಂತರ ರಾಜ್ಯ

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

Published

on

Ad Widget

Ad Widget

Ad Widget

Ad Widget

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget

Ad Widget

Ad Widget

ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget alt="Ad Widget"/>

Ad Widget

ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Ad Widget

Ad Widget <> Ad Widget

ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.

ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.

Ad Widget

Ad Widget

ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.

ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!